Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:21 - ಕನ್ನಡ ಸಮಕಾಲಿಕ ಅನುವಾದ

21 ಆಗ ಯೋತಾಮನು ತಪ್ಪಿಸಿಕೊಂಡು ಓಡಿ ಬೇರಕ್ಕೆ ಹೋಗಿ, ತನ್ನ ಸಹೋದರನಾದ ಅಬೀಮೆಲೆಕನ ಭಯದ ನಿಮಿತ್ತವಾಗಿ ಅಲ್ಲಿ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೋತಾಮನು ಇಷ್ಟು ಹೇಳಿ ತನ್ನ ಸಹೋದರನಾದ ಅಬೀಮೆಲೆಕನಿಂದ ತಪ್ಪಿಸಿಕೊಂಡು ಬೇರಕ್ಕೆ ಓಡಿಹೋಗಿ ಅಲ್ಲೇ ವಾಸಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಯೋತಾಮನು ಇಷ್ಟು ಹೇಳಿ ತನ್ನ ಸಹೋದರನಾದ ಅಬೀಮೆಲೆಕನಿಂದ ತಪ್ಪಿಸಿಕೊಂಡು ಬೇರಕ್ಕೆ ಓಡಿಹೋಗಿ ಅಲ್ಲೇ ವಾಸಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೋತಾಮನು ಇಷ್ಟು ಹೇಳಿ ತನ್ನ ಸಹೋದರನಾದ ಅಬೀಮೆಲೆಕನಿಗೆ ತಪ್ಪಿಸಿಕೊಂಡು ಬೇರಕ್ಕೆ ಓಡಿಹೋಗಿ ಅಲ್ಲೇ ವಾಸಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಇದನ್ನೆಲ್ಲಾ ಹೇಳಿ ಯೋತಾಮನು ಬೇರ ಎಂಬ ನಗರಕ್ಕೆ ಓಡಿಹೋದನು. ಯೋತಾಮನು ತನ್ನ ಸಹೋದರನಾದ ಅಬೀಮೆಲೆಕನಿಗೆ ಹೆದರಿ ಅದೇ ನಗರದಲ್ಲಿ ಉಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:21
5 ತಿಳಿವುಗಳ ಹೋಲಿಕೆ  

ಅವರು ಅಲ್ಲಿಂದ ಬೇರ್ ಎಂಬಲ್ಲಿಗೆ ಬಂದರು. ಯೆಹೋವ ದೇವರು ಮೋಶೆಗೆ, “ಜನರನ್ನು ಸೇರಿಸು. ನಾನು ಅವರಿಗೆ ನೀರನ್ನು ಕೊಡುವೆನು,” ಎಂದು ಯೆಹೋವ ದೇವರು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯನ್ನು ಕುರಿತೇ.


ಶೆಬನು ಇಸ್ರಾಯೇಲಿನ ಎಲ್ಲಾ ಗೋತ್ರಗಳಲ್ಲಿ ಹಾದು ಬೇತ್ ಮಾಕದ ಆಬೇಲಿಗೆ ಬಂದು, ಬೇರ‍್ಯರ ಪ್ರದೇಶದ ಮಾರ್ಗವಾಗಿ ಹೋದನು. ಆಗ ಬೇರ‍್ಯರು ಕೂಡಿಕೊಂಡು ಅವನ ಸಂಗಡ ಹೋದರು.


ಇದರೊಂದಿಗೆ ಬಾಲಾತ್ ಬೇರಿನವರೆಗೂ ಇರುವ ಎಲ್ಲಾ ಪಟ್ಟಣ ಮತ್ತು ಅದರ ಗ್ರಾಮಗಳೂ ಬಾಲತ್ ಬೇರ್ ಎಂಬುದು ದಕ್ಷಿಣದಲ್ಲಿರುವ ನೆಗೇವಿನ ರಾಮದಲ್ಲಿ ಇರುತ್ತದೆ. ಇದೇ ಸಿಮೆಯೋನನ ಗೋತ್ರದವರ ಕುಟುಂಬಗಳ ಪ್ರಕಾರ ದೊರೆತ ಸೊತ್ತು.


ಇಲ್ಲದಿದ್ದರೆ ಅಬೀಮೆಲೆಕನಿಂದ ಬೆಂಕಿ ಹೊರಟು ಶೆಕೆಮಿನ ಹಿರಿಯರನ್ನೂ, ಮಿಲ್ಲೋನಿನ ಮನೆಯವರನ್ನೂ ದಹಿಸಿಬಿಡಲಿ. ಶೆಕೆಮಿನ ಜನರಿಂದಲೂ, ಮಿಲ್ಲೋನಿನ ಮನೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ,” ಎಂದನು.


ಅಬೀಮೆಲೆಕನು ಇಸ್ರಾಯೇಲನ್ನು ಮೂರು ವರ್ಷ ಆಳಿದ ತರುವಾಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು