ನ್ಯಾಯಸ್ಥಾಪಕರು 9:23 - ಕನ್ನಡ ಸಮಕಾಲಿಕ ಅನುವಾದ23 ದೇವರು ಅಬೀಮೆಲೆಕ ಮತ್ತು ಶೆಕೆಮಿನ ಹಿರಿಯರ ನಡುವೆ ಒಂದು ದುರಾತ್ಮನನ್ನು ಕಳುಹಿಸಿದರು. ಆಗ ಶೆಕೆಮಿನವರು ಅಬೀಮೆಲೆಕನಿಗೆ ದ್ರೋಹಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯೆಹೋವನು ಅವನಿಗೂ ಶೆಕೆಮಿನ ಹಿರಿಯರಿಗೂ ವೈಮನಸ್ಸು ಹುಟ್ಟುವಂತೆ ಮಾಡಿದನು. ಅವರು ಅವನಿಗೆ ದ್ರೋಹಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಸರ್ವೇಶ್ವರಸ್ವಾಮಿ ಅವನಿಗೂ ಶೆಕೆಮಿನ ಹಿರಿಯರಿಗೂ ವೈಮನಸ್ಸು ಹುಟ್ಟುವಂತೆ ದುಷ್ಟ ಆತ್ಮವನ್ನು ಕಳುಹಿಸಿದರು. ಈ ಶೆಕೆಮಿನವರು ಅಬೀಮೆಲೆಕನಿಗೆ ದ್ರೋಹ ಎಸಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಯೆಹೋವನು ಅವನಿಗೂ ಶೆಕೆವಿುನ ಹಿರಿಯರಿಗೂ ವೈಮನಸ್ಯ ಹುಟ್ಟುವಂತೆ ಮಾಡಿದನು. ಅವರು ಅವನಿಗೆ ದ್ರೋಹಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23-24 ಅಬೀಮೆಲೆಕನು ಯೆರುಬ್ಬಾಳನ ಎಪ್ಪತ್ತು ಮಕ್ಕಳನ್ನು ಕೊಂದಿದ್ದನು. ಅವರು ಅವನ ಸ್ವಂತ ಸಹೋದರರಾಗಿದ್ದರು. ಶೆಕೆಮಿನ ಹಿರಿಯರು ಈ ದುಷ್ಕೃತ್ಯದಲ್ಲಿ ಅವನಿಗೆ ಬೆಂಬಲ ಕೊಟ್ಟಿದ್ದರು. ಆದ್ದರಿಂದ ಯೆಹೋವನು ಅಬೀಮೆಲೆಕನ ಮತ್ತು ಶೆಕೆಮಿನ ಹಿರಿಯರ ಮಧ್ಯೆ ಮನಸ್ತಾಪ ಹುಟ್ಟುವಂತೆ ಮಾಡಿದನು. ಶೆಕೆಮಿನ ಹಿರಿಯರು ಅಬೀಮೆಲೆಕನಿಗೆ ಕಷ್ಟ ಕೊಡಲು ಯೋಚಿಸುತ್ತಿದ್ದರು. ಅಧ್ಯಾಯವನ್ನು ನೋಡಿ |