Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:24 - ಕನ್ನಡ ಸಮಕಾಲಿಕ ಅನುವಾದ

24 ಇದರಿಂದ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳಿಗೆ ಮಾಡಿದ್ದ ಕ್ರೂರತ್ವವು ಬಂದು ಪ್ರಾಪ್ತಿಸುವ ಹಾಗೆಯೂ, ಅವರ ರಕ್ತವು ಅವರನ್ನು ಕೊಂದ ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ, ಅವನ ಸಹೋದರರನ್ನು ಕೊಲ್ಲುವುದಕ್ಕೆ ಅವನ ಕೈಗಳನ್ನು ಬಲಪಡಿಸಿದ ಶೆಕೆಮಿನ ಮನುಷ್ಯರ ಮೇಲೆಯೂ ಬರುವ ಹಾಗೆ, ಶೆಕೆಮಿನ ಜನರು ಅಬೀಮೆಲೆಕನಿಗೆ ದ್ರೋಹಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇದರಿಂದ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ, ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆಮಿನವರ ಮೇಲೆಯೂ ಬರುವುದಕ್ಕೆ ಕಾರಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಹೀಗೆ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೂ ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆಮಿನವರ ಮೇಲೂ ಬರುವುದಕ್ಕೆ ಮಾರ್ಗವಾಯಿತು .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇದರಿಂದ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆವಿುನವರ ಮೇಲೆಯೂ ಬರುವದಕ್ಕೆ ಮಾರ್ಗವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:24
12 ತಿಳಿವುಗಳ ಹೋಲಿಕೆ  

ಆಗ ಯೆಹೋವ ದೇವರು ಅವನ ತಲೆಯ ಮೇಲೆ ಅವನ ರಕ್ತಾಪರಾಧವನ್ನು ಬರಮಾಡುವರು. ಏಕೆಂದರೆ ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಖಡ್ಗದಿಂದ ಕೊಂದನು. ಅವರು ಯಾರೆಂದರೆ, ಇಸ್ರಾಯೇಲಿನ ಸೈನ್ಯಕ್ಕೆ ಅಧಿಪತಿಯೂ ನೇರನ ಮಗನೂ ಆದ ಅಬ್ನೇರನು, ಯೆಹೂದ ಸೈನ್ಯಕ್ಕೆ ಅಧಿಪತಿಯೂ ಯೆತೆರನ ಮಗನೂ ಆದ ಅಮಾಸನು.


ಅಂಥವರ ಕೇಡು ಅವರ ಮೇಲೆಯೇ ತಿರುಗುವುದು; ಅವರ ತಲೆಯ ಮೇಲೆ ಅವರ ಬಲಾತ್ಕಾರವೇ ಇಳಿಯುವುದು.


ಆದರೆ ಈ ಒಳಸಂಚು ಅರಸನಿಗೆ ತಿಳಿದುಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವಂತೆ ಅರಸನು ಆಜ್ಞೆಯನ್ನು ಹೊರಡಿಸಿದನು. ಅದರೊಂದಿಗೆ ಅವನ ಮಕ್ಕಳನ್ನೂ ಗಲ್ಲಿಗೇರಿಸಲು ಅರಸನು ಆಜ್ಞಾಪಿಸಿದ್ದನು;


ಆದರೆ ಸಮುಯೇಲನು ಅವನಿಗೆ, “ನಿನ್ನ ಖಡ್ಗವು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗಿ ಮಾಡಿತೋ, ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು,” ಎಂದು ಹೇಳಿ, ಸಮುಯೇಲನು ಗಿಲ್ಗಾಲಿನಲ್ಲಿ ಯೆಹೋವ ದೇವರ ಮುಂದೆ ಅಗಾಗನಿಗೆ ಮರಣದಂಡನೆ ವಿಧಿಸಿದನು.


ಅವರು, “ನಿರಪರಾಧಿಯನ್ನು ಕೊಲ್ಲಲು ಲಂಚ ತೆಗೆದುಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


“ ‘ಹೀಗೆ ನೀವು ವಾಸಿಸುವ ದೇಶವನ್ನು ನೀವು ಅಪವಿತ್ರ ಮಾಡಬೇಡಿರಿ. ಏಕೆಂದರೆ ದೇಶವನ್ನು ಅಪವಿತ್ರ ಮಾಡುವಂಥಾದ್ದು ರಕ್ತವೇ. ಹತರಾದವರ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.


ಶೆಕೆಮಿನ ಹಿರಿಯರು ಪರ್ವತ ಶಿಖರಗಳ ಮೇಲೆ ಅವನಿಗೋಸ್ಕರ ಹೊಂಚುಗಾರರನ್ನು ಇಟ್ಟು, ತಮ್ಮ ಸಮೀಪವಾಗಿ ಮಾರ್ಗದಲ್ಲಿ ಹಾದುಹೋಗುವ ಎಲ್ಲರನ್ನು ಸುಲಿದುಕೊಂಡರು. ಈ ವರ್ತಮಾನವು ಅಬೀಮೆಲೆಕನಿಗೆ ಮುಟ್ಟಿತು.


ಆಗ ಅದೋನೀಬೆಜೆಕನು, “ನಾನು ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು, ನನ್ನ ಮೇಜಿನ ಕೆಳಗೆ ಬೀಳುವ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ, ದೇವರು ನನಗೆ ಮಾಡಿದ್ದಾರೆ,” ಎಂದನು. ಅವರು ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಲ್ಲಿ ಅವನು ಮರಣಹೊಂದಿದನು.


ಆದ್ದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆಯೂ, ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವುದು. ಆದರೆ ದಾವೀದನ ಮೇಲೆಯೂ, ಅವನ ಸಂತಾನದವರ ಮೇಲೆಯೂ, ಅವನ ಮನೆಯ ಮೇಲೆಯೂ, ಅವನ ಸಿಂಹಾಸನದ ಮೇಲೆಯೂ ಯೆಹೋವ ದೇವರಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವುದು,” ಎಂದನು.


ನಾನು ಯೆಹೋವ ದೇವರನ್ನು ಕೊಂಡಾಡುವೆನು; ಏಕೆಂದರೆ, ಅವರು ನೀತಿಯುಳ್ಳವರು. ಮಹೋನ್ನತರಾದ ಯೆಹೋವ ದೇವರ ಹೆಸರನ್ನು ಕೀರ್ತನೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು