ನ್ಯಾಯಸ್ಥಾಪಕರು 9:4 - ಕನ್ನಡ ಸಮಕಾಲಿಕ ಅನುವಾದ4 ಅವರು ಬಾಳ್ ಬೆರೀತಿನ ಮನೆಯೊಳಗಿಂದ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅವನಿಗೆ ಕೊಟ್ಟರು. ಅವುಗಳಿಂದ ಅಬೀಮೆಲೆಕನು ಪುಂಡಪೋಕರಿಗಳನ್ನು ಸಂಬಳಕ್ಕೆ ಇಟ್ಟುಕೊಂಡನು. ಅವರು ಅವನ ಹಿಂದೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಮತ್ತು ಅವರು ಬಾಳ್‍ಬೆರೀತಿನ ದೇವಸ್ಥಾನದಿಂದ ಎಪ್ಪತ್ತು ರೂಪಾಯಿಗಳನ್ನು ಅವನಿಗೆ ಕೊಟ್ಟರು. ಅವನು ಈ ಹಣದಿಂದ ಕೆಲವು ಕಾಕಪೋಕರನ್ನು ಕೂಡಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅದು ಮಾತ್ರವಲ್ಲ, ಬಾಳ್ ಬೆರೀತಿನ ದೇವಸ್ಥಾನದಿಂದ ಎಪ್ಪತ್ತು ಬೆಳ್ಳಿನಾಣ್ಯಗಳನ್ನು ಅವನಿಗೆ ಕೊಟ್ಟರು. ಅವನು ಈ ಹಣದಿಂದ ಕೆಲವು ಮಂದಿ ಪುಂಡಪೋಕರಿಗಳನ್ನು ಕೂಡಿಸಿ, ಅವರ ನಾಯಕನಾಗಿ ಹೊರಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಮತ್ತು ಅವರು ಬಾಳ್‍ಬೆರೀತಿನ ದೇವಸ್ಥಾನದಿಂದ ಎಪ್ಪತ್ತು ರೂಪಾಯಿಗಳನ್ನು ಅವನಿಗೆ ಕೊಟ್ಟರು. ಅವನು ಈ ಹಣದಿಂದ ಕೆಲವು ಮಂದಿ ಕಾಕಪೋಕರನ್ನು ಕೂಡಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಶೆಕೆಮಿನ ಹಿರಿಯರು ಅಬೀಮೆಲೆಕನಿಗೆ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ಕೊಟ್ಟರು. ಆ ಬೆಳ್ಳಿಯು ಬಾಳ್‌ಬೆರೀತನ ಗುಡಿಗೆ ಸೇರಿತ್ತು. ಕೆಲವು ಗಂಡಸರನ್ನು ಕೂಲಿಗೆ ತೆಗೆದುಕೊಳ್ಳಲು ಅವನು ಈ ಬೆಳ್ಳಿಯನ್ನು ಬಳಸಿಕೊಂಡನು. ಈ ಗಂಡಸರು ಅಯೋಗ್ಯರೂ ದುಷ್ಟರೂ ಆಗಿದ್ದರು. ಅವರು ಅಬೀಮೆಲೆಕನ ಹಿಂಬಾಲಕರಾಗಿದ್ದರು. ಅಧ್ಯಾಯವನ್ನು ನೋಡಿ |
ಆಗ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ತಿರುಗಿದಾಗ, ಸೌಲನ ಮಗಳಾದ ಮೀಕಲಳು ದಾವೀದನಿಗೆ ಎದುರಾಗಿ ಬಂದು, “ನಿಷ್ಪ್ರಯೋಜಕ ಮನುಷ್ಯರಲ್ಲಿ ಒಬ್ಬನು ನಾಚಿಕೆ ಇಲ್ಲದೆ ತನ್ನ ವಸ್ತ್ರಗಳನ್ನು ಬಿಚ್ಚಿ ಹಾಕಿದ ಹಾಗೆಯೇ, ಈ ಹೊತ್ತು ತನ್ನ ಸೇವಕರ ದಾಸಿಯರ ಕಣ್ಣು ಮುಂದೆ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿದ್ದ ಇಸ್ರಾಯೇಲಿನ ಅರಸನು ಈ ಹೊತ್ತು ಎಷ್ಟು ಘನಹೊಂದಿದನು?” ಎಂದಳು.