Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:44 - ಕನ್ನಡ ಸಮಕಾಲಿಕ ಅನುವಾದ

44 ಅಬೀಮೆಲೆಕನೂ, ಅವನ ಸಂಗಡ ಇದ್ದ ಸೈನಿಕರ ಗುಂಪೂ ಮುಂದಕ್ಕೆ ಓಡಿ, ಪಟ್ಟಣದ ಬಾಗಿಲಿನ ಬಳಿ ನಿಂತರು. ಮಿಕ್ಕಾದ ಎರಡು ಗುಂಪಿನ ಜನರು, ಹೊಲದಲ್ಲಿರುವವರೆಲ್ಲರ ಮೇಲೆ ಬಿದ್ದು ಅವರನ್ನು ಹತಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಅಬೀಮೆಲೆಕನೂ ಅವನ ಸಂಗಡ ಇದ್ದ ಗುಂಪಿನವರೂ ಓಡಿ ಬಂದು ಊರು ಬಾಗಿಲಲ್ಲಿ ನಿಂತರು; ಉಳಿದ ಎರಡು ಗುಂಪಿನವರು ಬೈಲಿನಲ್ಲಿದ್ದ ಶೆಕೆಮಿನವರ ಮೇಲೆ ಬಿದ್ದು ಅವರನ್ನು ಹತಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಅಬೀಮೆಲೆಕನೂ ಅವನ ಸಂಗಡ ಇದ್ದ ಗುಂಪಿನವರೂ ಓಡಿಬಂದು ಊರಬಾಗಿಲಲ್ಲಿ ನಿಂತರು; ಉಳಿದ ಎರಡು ಗುಂಪಿನವರು ಬೈಲಿನಲ್ಲಿದ್ದ ಶೆಕೆಮಿನವರ ಮೇಲೆ ಬಿದ್ದು ಅವರನ್ನು ಹತಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಅಬೀಮೆಲೆಕನೂ ಅವನ ಸಂಗಡ ಇದ್ದ ಗುಂಪಿನವರೂ ಓಡಿ ಬಂದು ಊರು ಬಾಗಲಲ್ಲಿ ನಿಂತರು; ಉಳಿದ ಎರಡು ಗುಂಪಿನವರು ಬೈಲಿನಲ್ಲಿದ್ದ ಶೆಕೆವಿುನವರ ಮೇಲೆ ಬಿದ್ದು ಅವರನ್ನು ಹತಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಅಬೀಮೆಲೆಕ ಮತ್ತು ಅವನ ಗುಂಪಿನವರು ಓಡಿಕೊಂಡು ಶೆಕೆಮ್ ನಗರದ ಬಾಗಿಲಿನ ಹತ್ತಿರ ಒಂದು ಸ್ಥಳಕ್ಕೆ ಬಂದರು. ಉಳಿದ ಎರಡು ಗುಂಪಿನವರು ಹೊಲಗಳಲ್ಲಿದ್ದ ಜನರ ಕಡೆಗೆ ಓಡಿಹೋಗಿ ಅವರನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:44
5 ತಿಳಿವುಗಳ ಹೋಲಿಕೆ  

ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರಿಕೆ.


ಇಲ್ಲದಿದ್ದರೆ ಅಬೀಮೆಲೆಕನಿಂದ ಬೆಂಕಿ ಹೊರಟು ಶೆಕೆಮಿನ ಹಿರಿಯರನ್ನೂ, ಮಿಲ್ಲೋನಿನ ಮನೆಯವರನ್ನೂ ದಹಿಸಿಬಿಡಲಿ. ಶೆಕೆಮಿನ ಜನರಿಂದಲೂ, ಮಿಲ್ಲೋನಿನ ಮನೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ,” ಎಂದನು.


“ಮುಳ್ಳಿನ ಗಿಡವು ಮರಗಳಿಗೆ, ‘ನೀವು ನನ್ನನ್ನು ಅರಸನನ್ನಾಗಿ ಅಭಿಷೇಕ ಮಾಡುವುದು ಸತ್ಯವಾದರೆ, ನನ್ನ ನೆರಳಲ್ಲಿ ಬಂದು ಆಶ್ರಯಿಸಿಕೊಳ್ಳಿರಿ; ಇಲ್ಲದಿದ್ದರೆ ಮುಳ್ಳಿನ ಗಿಡದಿಂದ ಬೆಂಕಿ ಹೊರಟು, ಲೆಬನೋನಿನ ದೇವದಾರುಗಳು ದಹಿಸಿಬಿಡಲಿ,’ ಎಂದಿತು.


ಅವನು ಸೈನಿಕರನ್ನು ತೆಗೆದುಕೊಂಡು, ಅವರನ್ನು ಮೂರು ಗುಂಪುಗಳಾಗಿ ಮಾಡಿ, ಹೊಲದಲ್ಲಿ ಹೊಂಚಿಹಾಕಿಕೊಂಡನು. ಆಗ ಜನರು ಪಟ್ಟಣದಿಂದ ಹೊರಗೆ ಬಂದರು. ಅವನು ಅವರ ಮೇಲೆ ಎದ್ದು ಬಂದು, ಅವರನ್ನು ಹೊಡೆದನು.


ಅಬೀಮೆಲೆಕನು ಆ ದಿನವೆಲ್ಲಾ ಪಟ್ಟಣದ ಮೇಲೆ ಯುದ್ಧಮಾಡಿ, ಪಟ್ಟಣವನ್ನು ಹಿಡಿದು, ಅದರಲ್ಲಿದ್ದ ಜನರನ್ನು ಕೊಂದು, ಪಟ್ಟಣವನ್ನು ಕೆಡವಿಬಿಟ್ಟು, ಅದರಲ್ಲಿ ಉಪ್ಪು ಎರಚಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು