Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:52 - ಕನ್ನಡ ಸಮಕಾಲಿಕ ಅನುವಾದ

52 ಆಗ ಅಬೀಮೆಲೆಕನು ಆ ಗೋಪುರಕ್ಕೆ ಬಂದು, ಅದರ ವಿರುದ್ಧ ಯುದ್ಧಮಾಡಿ, ಗೋಪುರದ ಬಾಗಿಲನ್ನು ಸುಟ್ಟು ಬಿಡುವುದಕ್ಕೆ ಅದರ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಅಬೀಮೆಲೆಕನು ಅಲ್ಲಿಗೆ ಬಂದು ಯುದ್ಧಮಾಡುತ್ತಾ ಬುರುಜಿನ ಬಾಗಿಲಿಗೆ ಬೆಂಕಿ ಹೊತ್ತಿಸಬೇಕೆಂದು ಅದರ ಸಮೀಪಕ್ಕೆ ಹೋಗಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 ಅಬೀಮೆಲೆಕನು ಅಲ್ಲಿಗೆ ಬಂದು ಯುದ್ಧಮಾಡುತ್ತಾ ಗೋಪುರದ ಬಾಗಿಲಿಗೆ ಬೆಂಕಿ ಹೊತ್ತಿಸಬೇಕೆಂದು ಅದರ ಸಮೀಪಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ಅಬೀಮೆಲೆಕನು ಅಲ್ಲಿಗೆ ಬಂದು ಯುದ್ಧಮಾಡುತ್ತಾ ಬುರುಜಿನ ಬಾಗಲಿಗೆ ಬೆಂಕಿ ಹೊತ್ತಿಸಬೇಕೆಂದು ಅದರ ಸಮೀಪಕ್ಕೆ ಹೋಗಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 ಅಬೀಮೆಲೆಕನು ಮತ್ತು ಅವನ ಜನರು ಅದರ ಮೇಲೆ ಧಾಳಿಮಾಡಲು ಗೋಪುರದ ಬಳಿ ಬಂದರು. ಅಬೀಮೆಲೆಕನು ಆ ಗೋಪುರದ ಬಾಗಿಲಿನವರೆಗೆ ಹೋದನು. ಅವನು ಆ ಗೋಪುರವನ್ನು ಸುಡಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:52
5 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ ಮೆನಹೇಮನು ತಿರ್ಚದಿಂದ ತಿಪ್ಸಹು ಪಟ್ಟಣಕ್ಕೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲುಗಳನ್ನು ತನಗೆ ತೆರೆಯದೆ ಇದ್ದುದರಿಂದ ಎಲ್ಲರನ್ನೂ, ಅದರ ಮೇರೆಗಳಲ್ಲಿದ್ದವರೆಲ್ಲರನ್ನೂ ಸಂಹರಿಸಿದನು. ತಿಪ್ಸಹವನ್ನು ಹಾಳು ಮಾಡಿ, ಎಲ್ಲಾ ಗರ್ಭಿಣಿಯರ ಹೊಟ್ಟೆಗಳನ್ನು ಸೀಳಿಸಿದನು.


ನೀನು ಎದೋಮ್ಯರನ್ನು ಸೋಲಿಸಿದ್ದರಿಂದ ಗರ್ವಪಡುತ್ತಿರುವೆ, ನಿನ್ನ ಜಯದಲ್ಲಿ ಘನಪಡುತ್ತಾ, ಮನೆಯಲ್ಲಿ ಸುಮ್ಮನೆ ಕೂತಿರು. ನೀನೂ, ನಿನ್ನ ಸಂಗಡ ಯೆಹೂದವೂ ಬಿದ್ದುಹೋಗುವಂತೆ ನಿನ್ನ ಕೇಡಿಗೆ ನೀನೇ ಕೈ ಹಾಕುವುದೇಕೆ?” ಎಂದು ಹೇಳಿ ಕಳುಹಿಸಿದನು.


ಆದರೆ ಪಟ್ಟಣದ ಒಳಗೆ ಬಲವಾದ ಗೋಪುರ ಇತ್ತು. ಆ ಪಟ್ಟಣದಲ್ಲಿರುವ ಸಮಸ್ತ ಸ್ತ್ರೀ ಪುರುಷರು ಅಲ್ಲಿಗೆ ಓಡಿಹೋಗಿ, ಅದರಲ್ಲಿ ಹೊಕ್ಕು, ತಮ್ಮ ಹಿಂದಿನಿಂದ ಬಾಗಿಲನ್ನು ಮುಚ್ಚಿ ಗೋಪುರದ ಮೇಲೆ ಏರಿದರು.


ಆದರೆ ಒಬ್ಬ ಸ್ತ್ರೀಯು ಒಂದು ಬೀಸುವ ಕಲ್ಲಿನ ತುಂಡನ್ನು ಅಬೀಮೆಲೆಕನ ತಲೆಯ ಮೇಲೆ ಹಾಕಿದಳು. ಅದರಿಂದ ಅವನ ತಲೆಯನ್ನು ಒಡೆದು ಹಾಕಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು