Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:9 - ಕನ್ನಡ ಸಮಕಾಲಿಕ ಅನುವಾದ

9 “ಹಿಪ್ಪೆಯ ಮರ ಅವುಗಳಿಗೆ, ‘ಯಾವುದರಿಂದ ದೇವರನ್ನೂ, ಮನುಷ್ಯನನ್ನೂ ಘನಪಡಿಸುತ್ತಾರೋ, ಈ ನನ್ನ ಎಣ್ಣೆಯನ್ನು ಬಿಟ್ಟು, ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ?’ ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಅದು ಅವುಗಳಿಗೆ, ‘ನನ್ನಲ್ಲಿರುವ ಎಣ್ಣೆಗೋಸ್ಕರ ದೇವತೆಗಳೂ, ಮನುಷ್ಯರು ನನ್ನನ್ನು ಘನಪಡಿಸುತ್ತಾರೆ; ಇದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?’ ಅಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅದು ಅವುಗಳಿಗೆ, ‘ನನ್ನಲ್ಲಿರುವ ಎಣ್ಣೆಯಿಂದ ದೇವತೆಗಳೂ ಮಾನವರೂ ಘನತೆ ಗೌರವಗಳನ್ನು ಪಡೆಯುತ್ತಾರೆ. ಇದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೊ?’ ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಅದು ಅವುಗಳಿಗೆ - ನನ್ನಲ್ಲಿರುವ ಎಣ್ಣೆಗೋಸ್ಕರ ದೇವತೆಗಳೂ ಮನುಷ್ಯರೂ ನನ್ನನ್ನು ಘನಪಡಿಸುತ್ತಾರೆ; ಇದನ್ನು ಬಿಟ್ಟು ಮರಗಳ ಮೇಲೆ ಓಲಾಡುವದಕ್ಕೆ ಬರಬೇಕೋ ಅಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಆದರೆ ಆಲಿವ್ ಮರವು, ‘ಜನರು ಮತ್ತು ದೇವತೆಗಳು ನನ್ನ ಎಣ್ಣೆಗಾಗಿ ನನ್ನನ್ನು ತುಂಬ ಹೊಗಳುತ್ತಾರೆ; ಬೇರೆ ಮರಗಳ ಮೇಲೆ ಆಳುವುದಕ್ಕಾಗಿ ನಾನು ಎಣ್ಣೆ ಮಾಡುವುದನ್ನು ಬಿಡಬೇಕೇ?’ ಎಂದು ಕೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:9
14 ತಿಳಿವುಗಳ ಹೋಲಿಕೆ  

ಆದರೆ ನೀವು ಪವಿತ್ರವಾದವರಿಂದ ಅಭಿಷೇಕವನ್ನು ಹೊಂದಿದವರಾಗಿದ್ದು ನೀವೆಲ್ಲರೂ ಸತ್ಯವನ್ನು ತಿಳಿದವರಾಗಿದ್ದೀರಿ.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮರಿಂದಲೂ ಶಕ್ತಿಯಿಂದಲೂ ಅಭಿಷೇಕಿಸಿದ್ದರು. ಮಾತ್ರವಲ್ಲದೆ, ದೇವರು ಯೇಸುವಿನೊಡನೆ ಇದ್ದುದರಿಂದ, ಅವರು ಬೇರೆ ಬೇರೆ ಕಡೆಗಳಿಗೆ ಹೋಗಿ ಒಳಿತನ್ನು ಮಾಡಿ, ಪಿಶಾಚನಿಂದ ಪೀಡಿತರಾದವರನ್ನು ಗುಣಪಡಿಸುತ್ತಾ ಸಂಚರಿಸಿದ್ದನ್ನು ನೀವು ಬಲ್ಲಿರಿ.


ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕ ಯೇಸುವಿನ ವಿರೋಧವಾಗಿ ದುರಾಲೋಚನೆ ಮಾಡಲು ಹೆರೋದನು ಮತ್ತು ಪೊಂತ್ಯ ಪಿಲಾತನು, ಯೆಹೂದ್ಯರಲ್ಲದವರೊಂದಿಗೂ ಇಸ್ರಾಯೇಲರೊಂದಿಗೂ ಈ ಪಟ್ಟಣದಲ್ಲೇ ಸೇರಿ ಬಂದಿದ್ದರು.


ದ್ರಾಕ್ಷಾರಸವು ಮನುಷ್ಯ ಹೃದಯವನ್ನು ಸಂತೋಷಪಡಿಸುತ್ತದೆ; ಎಣ್ಣೆಯು ಮಾನವನ ಮುಖವನ್ನು ಪ್ರಕಾಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಪ್ರಾಣಕ್ಕೆ ಆಧಾರವಾಗುತ್ತದೆ.


ನನ್ನ ಸೇವಕನಾದ ದಾವೀದನನ್ನು ಕಂಡು, ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ.


ಆಗ ಯೆಹೋವ ದೇವರು ಸೈತಾನನಿಗೆ, “ನೀನು ಎಲ್ಲಿಂದ ಬಂದೆ?” ಎಂದರು. ಸೈತಾನನು ಯೆಹೋವ ದೇವರಿಗೆ, “ಭೂಲೋಕದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ತಿರುಗಾಡುತ್ತಾ ಇದ್ದು ಬಂದೆನು,” ಎಂದನು.


ಯೆಹೋವ ದೇವರು ಸೈತಾನನಿಗೆ, “ನೀನು ಎಲ್ಲಿಂದ ಬಂದೆ?” ಎಂದು ಕೇಳಿದರು. ಸೈತಾನನು ಯೆಹೋವ ದೇವರಿಗೆ, “ಭೂಲೋಕದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ತಿರುಗಾಡುತ್ತಾ ಇದ್ದು ಬಂದೆನು,” ಎಂದನು.


“ ‘ಯಾರಾದರೂ ಯೆಹೋವ ದೇವರಿಗೆ ಧಾನ್ಯ ಸಮರ್ಪಣೆಯನ್ನು ಸಮರ್ಪಿಸುವುದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಸಬೇಕು, ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.


ಬೆಳಕಿಗಾಗಿ ದೀಪಸ್ತಂಭವನ್ನು, ಅದರ ಉಪಕರಣಗಳನ್ನು, ಅದರ ದೀಪಗಳನ್ನು, ದೀಪಸ್ತಂಭಕ್ಕಾಗಿ ಎಣ್ಣೆಯನ್ನು,


ಅಭಿಷೇಕಿಸುವ ಎಣ್ಣೆಯನ್ನು ತೆಗೆದುಕೊಂಡು, ಅವನ ತಲೆಯ ಮೇಲೆ ಹೊಯ್ದು, ಅವನನ್ನು ಅಭಿಷೇಕಿಸಬೇಕು.


ಅತ್ಯುತ್ತಮ ಗೋಧಿಯ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನೂ ಎಣ್ಣೆ ಹೊಯ್ದ ಹುಳಿಯಿಲ್ಲದ ಹೋಳಿಗೆಗಳನ್ನೂ ಎಣ್ಣೆ ಹಚ್ಚಿದ ಹುಳಿಯಿಲ್ಲದ ಪೂರಿಗಳನ್ನೂ ತೆಗೆದುಕೊಳ್ಳಬೇಕು.


ಮರಗಳು ತಮ್ಮ ಮೇಲೆ ಒಬ್ಬ ಅರಸನನ್ನು ಅಭಿಷೇಕಿಸಿಕೊಳ್ಳುವುದಕ್ಕಾಗಿ ಹೊರಟುಹೋಗಿ, ಹಿಪ್ಪೆಯ ಮರಕ್ಕೆ, ‘ನೀನು ನಮ್ಮನ್ನು ಆಳು,’ ಎಂದವು.


“ಮರಗಳು ಅಂಜೂರದ ಗಿಡಕ್ಕೆ, ‘ನೀನು ಬಂದು ನಮ್ಮ ಮೇಲೆ ಆಳಬೇಕು,’ ಎಂದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು