ಪರಮಗೀತೆ 1:7 - ಕನ್ನಡ ಸಮಕಾಲಿಕ ಅನುವಾದ7 ನನ್ನ ಪ್ರಾಣ ಪ್ರಿಯನೇ, ನೀನು ನಿನ್ನ ಮಂದೆಯನ್ನು ಮೇಯಿಸುವುದು ಎಲ್ಲಿ? ಮಧ್ಯಾಹ್ನದಲ್ಲಿ ನೀನು ವಿಶ್ರಮಿಸಿಕೊಳ್ಳುವ ಸ್ಥಳ ಎಲ್ಲಿ? ನನಗೆ ತಿಳಿಸು. ನಾನು ನಿನ್ನ ಜೊತೆಗಾರರ ಮಂದೆಗಳ ಬಳಿಯಲ್ಲಿ ಮುಸುಕು ಹಾಕಿದವಳಂತೆ ಏಕೆ ಅಲೆಯಬೇಕು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನನ್ನ ಪ್ರಾಣಪ್ರಿಯನೇ, ನಿನ್ನ ಮಂದೆಯನ್ನು ಎಲ್ಲಿ ಮೇಯಿಸುವೆ? ನಡುಹಗಲಲ್ಲಿ ನಿನ್ನ ಮಂದೆಯು ಎಲ್ಲಿ ವಿಶ್ರಮಿಸುತ್ತಾರೆ? ಹೇಳು. ನಾನೇಕೆ ಅಲೆಮಾರಿಗಳಂತೆ ನಿನ್ನ ಗೆಳೆಯರ ಮಂದೆಗಳ ಹತ್ತಿರ ಅಲೆಯಬೇಕು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನನ್ನ ಪ್ರಾಣಪ್ರಿಯನೇ ಹೇಳು: ನಿನ್ನ ಮಂದೆಯನ್ನು ನೀನು ಮೇಯಿಸುವುದೆಲ್ಲಿ? ನಡುಹಗಲಲ್ಲಿ ಅದು ವಿಶ್ರಮಿಸುವುದೆಲ್ಲಿ? ನಾನೇಕೆ ಅಲೆಯಬೇಕು ಮುಸುಕು ಹಾಕಿದವಳಂತೆ ನಿನ್ನ ಗೆಳೆಯರ ಮಂದೆಗಳ ಹಿಂದೆ? ನಲ್ಲ : ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನನ್ನ ಪ್ರಾಣಪ್ರಿಯನೇ, [ಮಂದೆಯನ್ನು] ಎಲ್ಲಿ ಮೇಯಿಸುತ್ತೀ, ಮಧ್ಯಾಹ್ನಕ್ಕೆ ಎಲ್ಲಿ ಮಲಗಿಸುತ್ತೀ? ನನಗೆ ತಿಳಿಸು. ನಾನು ಏಕೆ ನಿನ್ನ ಒಡನಾಡಿಗಳ ಮಂದೆಗಳ ಹತ್ತಿರ ಮುಸುಕಿನವಳಂತಿರಬೇಕು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನನ್ನ ಪ್ರಾಣಪ್ರಿಯನೇ, ನಿನ್ನ ಕುರಿಗಳನ್ನು ಎಲ್ಲಿ ಮೇಯಿಸುವೆ? ಮಧ್ಯಾಹ್ನದಲ್ಲಿ ಅವುಗಳನ್ನು ಎಲ್ಲಿ ಮಲಗಿಸುವೆ? ಮುಸುಕುಹಾಕಿಕೊಂಡು ನಿನ್ನ ಸ್ನೇಹಿತರ ಮಂದೆಗಳ ಹತ್ತಿರ ಅಲೆದಾಡುವ ಹುಡುಗಿಯಂತೆ ನಾನೇಕಿರಬೇಕು? ಅಧ್ಯಾಯವನ್ನು ನೋಡಿ |
ಯೇಸು ಮೂರನೆಯ ಸಾರಿ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದರು. ಯೇಸು ಮೂರನೆಯ ಸಾರಿ, “ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿಮಗೆ ಎಲ್ಲವೂ ತಿಳಿದಿದೆ. ನಾನು ನಿಮ್ಮ ಮೇಲೆ ಎಷ್ಟು ಮಮತೆ ಇಟ್ಟಿದ್ದೇನೆಂದು ನಿಮಗೆ ತಿಳಿದಿದೆ,” ಎಂದನು. ಆಗ ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು,” ಎಂದರು.