Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 2:10 - ಕನ್ನಡ ಸಮಕಾಲಿಕ ಅನುವಾದ

10 ನನ್ನ ಪ್ರಿಯನು ನನ್ನೊಡನೆ ಮಾತನಾಡಿ ಹೀಗೆಂದನು: “ನನ್ನ ಪ್ರಿಯಳೇ ಎದ್ದು ಬಾ, ನನ್ನ ಸುಂದರಿಯೇ, ಹೊರಟು ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ನಲ್ಲನು ನನಗೆ ಹೀಗೆಂದನು, “ನನ್ನ ಪ್ರಿಯತಮೇ, ಎನ್ನ ಸುಂದರಿಯೇ, ಎದ್ದು ನನ್ನೊಂದಿಗೆ ಬಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನನ್ನ ನಲ್ಲನು ನನ್ನೊಡನೆ ಮಾತಾಡಿ ಹೀಗೆಂದನು : ನಲ್ಲ : ‘ಎದ್ದು ಬಾ, ಪ್ರಿಯತಮೆ, ಬಾ ನನ್ನೊಂದಿಗೆ, ಸುಂದರಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನ ನಲ್ಲನು ಎನಗೆ ಹೀಗೆಂದನು - ನನ್ನ ಪ್ರಿಯಳೇ, ಎನ್ನ ಸುಂದರಿಯೇ, ಎದ್ದು ಬಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನನ್ನ ಪ್ರಿಯನು ನನಗೆ ಹೀಗೆಂದನು: “ನನ್ನ ಪ್ರಿಯಳೇ, ನನ್ನ ಸುಂದರಿಯೇ, ಎದ್ದೇಳು, ನಾವು ದೂರ ಹೋಗೋಣ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 2:10
18 ತಿಳಿವುಗಳ ಹೋಲಿಕೆ  

ಅಂಜೂರದ ಕಾಯಿಗಳು ಹಣ್ಣಾಗಿವೆ. ದ್ರಾಕ್ಷಿಬಳ್ಳಿಗಳು ಹೂಬಿಟ್ಟಿವೆ. ಅದರ ಪರಿಮಳ ಹರಡುತ್ತಿದೆ. ಎದ್ದು ಬಾ, ನನ್ನ ಪ್ರಿಯಳೇ, ನನ್ನ ಸುಂದರಿಯೇ, ನನ್ನೊಂದಿಗೆ ಬಾ.”


ದೇವರಾತ್ಮ ಹಾಗು ವಧುವೂ “ಬಾ” ಎನ್ನುತ್ತಾರೆ, ಕೇಳುವವರು, “ಬಾ” ಎನ್ನಲಿ. ಬಾಯಾರಿದವರು ಬರಲಿ, ಇಷ್ಟವುಳ್ಳವರು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.


ದೇವರು ನಿಮ್ಮ ವಿಷಯದಲ್ಲಿ ಅಸೂಯೆಪಡುವಂತೆ, ನಾನು ನಿಮ್ಮ ವಿಷಯದಲ್ಲಿ ಅಸೂಯೆಪಡುತ್ತಿದ್ದೇನೆ. ಹೇಗೆಂದರೆ, ನಿಮ್ಮನ್ನು ಶುದ್ಧ ಕನ್ನಿಕೆಯಾಗಿ ಕ್ರಿಸ್ತ ಯೇಸು ಎಂಬ ಒಬ್ಬರೇ ಪುರುಷನಿಗೆ ಒಪ್ಪಿಸಬೇಕೆಂದು ಆತನೊಂದಿಗೆ ನಾನು ನಿಶ್ಚಯ ಮಾಡಿದ್ದೆನಲ್ಲಾ.


ನನ್ನ ಪ್ರಿಯನ ಸ್ವರವು! ಇಗೋ! ಅವನು ಪರ್ವತಗಳ ಮೇಲೆ ಹಾರುತ್ತಾ, ಗುಡ್ಡಗಳ ಮೇಲೆ ಜಿಗಿಯುತ್ತಾ ಬರುತ್ತಿದ್ದಾನೆ.


ಯೆಹೋವ ದೇವರು ಪೂರ್ವದಲ್ಲಿ ನನಗೆ ಕಾಣಿಸಿಕೊಂಡು, “ಹೌದು, ಶಾಶ್ವತ ಪ್ರೀತಿಯಿಂದ ನಿನ್ನನ್ನು ಪ್ರೀತಿಸಿದ್ದೇನೆ. ಕುಂದದ ದಯೆಯಿಂದಲೇ ನಿನ್ನನ್ನು ಸೆಳೆದುಕೊಂಡಿದ್ದೇನೆ.


ನಾನು ನಿದ್ರಿಸುತ್ತಿದ್ದರೂ, ನನ್ನ ಹೃದಯವು ಎಚ್ಚರವಾಗಿತ್ತು. ಇಗೋ! ಬಾಗಿಲು ತಟ್ಟುವ ನನ್ನ ಪ್ರಿಯನ ಶಬ್ದವಿದು: “ನನ್ನ ಪ್ರಿಯಳೇ, ನನ್ನ ವಧುವೇ, ನನ್ನ ಪಾರಿವಾಳವೇ, ಪರಿಪೂರ್ಣಳೇ, ಬಾಗಿಲು ತೆಗೆ! ನನ್ನ ತಲೆ ಮಂಜಿನಿಂದ ನೆನೆದಿದೆ. ನನ್ನ ಕೂದಲು ರಾತ್ರಿಯ ಹನಿಗಳಿಂದ ತೋಯ್ದಿದೆ.”


ಯೆಹೋವ ದೇವರು ಏನು ಹೇಳುತ್ತಾರೋ ಅದನ್ನು ನಾನು ಕೇಳುವೆನು. ದೇವರು ತಮ್ಮ ಜನರಿಗೂ ತಮ್ಮ ಭಕ್ತರಿಗೂ ಸಮಾಧಾನವನ್ನು ವಾಗ್ದಾನಮಾಡುವರು. ಆದರೆ ಅವರ ಜನರು ಇನ್ನು ಬುದ್ಧಿಹೀನತೆಗೆ ತಿರುಗಿಕೊಳ್ಳದೆ ಇರಲಿ.


ಇಸ್ರಾಯೇಲಿನ ದೇವರೂ, ಇಸ್ರಾಯೇಲಿನ ಬಂಡೆಯಾದವರೂ ನನಗೆ ಮಾತನಾಡಿದ್ದು: ‘ಮನುಷ್ಯರ ಮೇಲೆ ನೀತಿಯಿಂದ ಆಳುವವನು, ದೇವರ ಭಯದಿಂದ ಆಳುವವನು.


ಯೇಸು ಅಲ್ಲಿಂದ ಹಾದುಹೋಗುತ್ತಿದ್ದಾಗ, ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವುದನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು,” ಎಂದು ಹೇಳಿದರು. ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.


ನನ್ನ ಪ್ರಿಯಳೇ, ಫರೋಹನ ರಥಕ್ಕೆ ಕಟ್ಟಿದ ಕುದುರೆಗೆ ನಿನ್ನನ್ನು ಹೋಲಿಸಿದ್ದೇನೆ.


ನನ್ನ ಪ್ರಿಯಳೇ, ನೀನು ಎಷ್ಟು ಸೌಂದರ್ಯವಂತೆ! ಆಹಾ, ನೀನು ಸೌಂದರ್ಯವಂತಳೇ! ನಿನ್ನ ಕಣ್ಣುಗಳು ಪಾರಿವಾಳಗಳಂತಿವೆ.


ಇಗೋ! ಚಳಿಗಾಲ ಕಳೆಯಿತು, ಮಳೆ ನಿಂತುಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು