Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 2:13 - ಕನ್ನಡ ಸಮಕಾಲಿಕ ಅನುವಾದ

13 ಅಂಜೂರದ ಕಾಯಿಗಳು ಹಣ್ಣಾಗಿವೆ. ದ್ರಾಕ್ಷಿಬಳ್ಳಿಗಳು ಹೂಬಿಟ್ಟಿವೆ. ಅದರ ಪರಿಮಳ ಹರಡುತ್ತಿದೆ. ಎದ್ದು ಬಾ, ನನ್ನ ಪ್ರಿಯಳೇ, ನನ್ನ ಸುಂದರಿಯೇ, ನನ್ನೊಂದಿಗೆ ಬಾ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಂಜೂರದ ಕಾಯಿಗಳು ಹಣ್ಣಾಗಿವೆ, ದ್ರಾಕ್ಷಿಯ ಬಳ್ಳಿಗಳು ಹೂಬಿಟ್ಟಿವೆ, ಅದರ ಪರಿಮಳವನ್ನು ಬೀರುತ್ತಿದೆ. ನನ್ನ ಪ್ರಿಯಳೇ, ಎನ್ನ ಸುಂದರಿಯೇ, ಎದ್ದು ನನ್ನೊಂದಿಗೆ ಬಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಂಜೂರದ ಕಾಯಿಗಳು ಹಣ್ಣಾಗಿವೆ ದ್ರಾಕ್ಷಾಬಳ್ಳಿಗಳು ಹೂಬಿಟ್ಟಿವೆ. ಅದರ ಪರಿಮಳ ಹರಡುತ್ತಿದೆ.’ ನಲ್ಲ : ಎದ್ದು ಬಾ, ನನ್ನ ಪ್ರೇಯಸಿಯೇ ಬಾ ನನ್ನೊಂದಿಗೆ, ಸುಂದರಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅಂಜೂರದ ಮರವು ಕಾಯಿಗಳನ್ನು ಪಕ್ವಕ್ಕೆ ತರುತ್ತದೆ, ದ್ರಾಕ್ಷೆಯ ಬಳ್ಳಿಗಳು ಹೂಬಿಟ್ಟು ಪರಿಮಳವನ್ನು ಬೀರುತ್ತವೆ. ನನ್ನ ಪ್ರಿಯಳೇ, ಎನ್ನ ಸುಂದರಿಯೇ, ಎದ್ದು ಬಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅಂಜೂರದ ಮರ ಕಾಯಿಗಳನ್ನು ಬಿಡುತ್ತಿದೆ; ದ್ರಾಕ್ಷಿಬಳ್ಳಿಯ ಹೂವುಗಳಿಂದ ಸುವಾಸನೆಯು ಬರುತ್ತಿದೆ. ನನ್ನ ಪ್ರಿಯಳೇ, ನನ್ನ ಸುಂದರಿಯೇ, ಎದ್ದೇಳು, ನಾವು ದೂರ ಹೋಗೋಣ!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 2:13
16 ತಿಳಿವುಗಳ ಹೋಲಿಕೆ  

ನನ್ನ ಪ್ರಿಯನು ನನ್ನೊಡನೆ ಮಾತನಾಡಿ ಹೀಗೆಂದನು: “ನನ್ನ ಪ್ರಿಯಳೇ ಎದ್ದು ಬಾ, ನನ್ನ ಸುಂದರಿಯೇ, ಹೊರಟು ಬಾ.


ಏಕೆಂದರೆ ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವುದೋ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳೆಯಿಸುವುದೋ, ಹಾಗೆಯೇ ಸಾರ್ವಭೌಮ ಯೆಹೋವ ದೇವರು ನೀತಿಯನ್ನೂ, ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವರು.


ಆದ್ದರಿಂದ ನಾವು ಕ್ರಿಸ್ತ ಯೇಸುವಿನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ನಿಮಗೆ ಕರೆ ನೀಡುತ್ತಾರೆ. ಆದ್ದರಿಂದ ಕ್ರಿಸ್ತ ಯೇಸುವಿನ ಪರವಾಗಿ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ: ದೇವರೊಡನೆ ಸಮಾಧಾನ ಮಾಡಿಕೊಳ್ಳಿರಿ.


“ನೀನು ಇಂದಾದರೂ ನಿನ್ನ ಸಮಾಧಾನದ ವಿಷಯಗಳನ್ನು ಅರಿತುಕೊಂಡಿದ್ದರೆ, ಚೆನ್ನಾಗಿತ್ತು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.


“ಅಂಜೂರ ಮರದ ದೃಷ್ಟಾಂತದಿಂದ ಈ ಪಾಠವನ್ನು ಕಲಿತುಕೊಳ್ಳಿರಿ: ಅದರ ರೆಂಬೆ ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ.


ಬೀಜವು ಇನ್ನು ಕಣಜದಲ್ಲಿ ಉಂಟೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಎಣ್ಣೆಮರಗಳು ಇನ್ನೂ ಫಲಿಸಲಿಲ್ಲವಲ್ಲಾ. “ಈ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು,” ಎಂದರು.


ಅವನ ಕೊಂಬೆಗಳು ಹರಡಿಕೊಂಡು, ಅವನ ಸೌಂದರ್ಯವು ಎಣ್ಣೆಮರಗಳ ಹಾಗೆಯೂ ಅವನ ಪರಿಮಳವು ಲೆಬನೋನಿನ ದೇವದಾರಿನ ಹಾಗೆಯೂ ಇರುವುದು.


ಏಕೆಂದರೆ ಸುಗ್ಗಿಗೆ ಮುಂಚೆ ಮೊಗ್ಗು ಬಿಟ್ಟಾದ ಮೇಲೆ ಹೂವಿನಲ್ಲಿ ದ್ರಾಕ್ಷಿ ಕಾಯಿಯಾಗುವಾಗ ಅವರು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ, ಚಿಗುರುಗಳನ್ನು ಕಡಿದುಹಾಕುವರು.


ನಾನು, “ಆ ಖರ್ಜೂರದ ಮರವನ್ನು ಹತ್ತಿ ಅದರ ಗರಿಗಳನ್ನು ಹಿಡಿಯುವೆ,” ಎಂದುಕೊಂಡೆನು. ನಿನ್ನ ಸ್ತನಗಳು ದ್ರಾಕ್ಷಿ ಗೊಂಚಲುಗಳಂತಿರಲಿ, ನಿನ್ನ ಉಸಿರು ಸೇಬು ಹಣ್ಣಿನ ಪರಿಮಳದಂತೆಯೂ ಇರಲಿ.


ದ್ರಾಕ್ಷಿಬಳ್ಳಿಯು ಚಿಗುರಿದೆಯೋ, ದಾಳಿಂಬೆ ಗಿಡ ಹೂಬಿಟ್ಟಿದೆಯೋ ಎಂದು ಕಣಿವೆಯಲ್ಲಿನ ಫಲಗಳನ್ನು ನೋಡಲು ನಾನು ಬಾದಾಮಿಯ ತೋಟಕ್ಕೆ ಹೋದೆನು.


ನನ್ನ ಪ್ರಿಯಳೇ, ನೀನು ಎಷ್ಟು ಸೌಂದರ್ಯವಂತೆ! ಆಹಾ, ನೀನು ಸೌಂದರ್ಯವಂತಳೇ! ನಿನ್ನ ಕಣ್ಣುಗಳು ಪಾರಿವಾಳಗಳಂತಿವೆ.


ದ್ರಾಕ್ಷಿತೋಟಗಳನ್ನು ಹಾಳುಮಾಡುವ ನರಿಗಳನ್ನೂ ನರಿಮರಿಗಳನ್ನೂ ಹಿಡಿಯಿರಿ. ನಮ್ಮ ದ್ರಾಕ್ಷಿತೋಟಗಳಲ್ಲಿ ಹೂಗಳು ಅರಳಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು