ಪರಮಗೀತೆ 4:1 - ಕನ್ನಡ ಸಮಕಾಲಿಕ ಅನುವಾದ1 ಇಗೋ, ನನ್ನ ಪ್ರಿಯಳೇ, ನೀನು ಎಷ್ಟು ಸುಂದರಿ! ಆಹಾ, ನೀನು ಎಷ್ಟು ಸುಂದರಿಯು. ನಿನ್ನ ಮುಸುಕಿನೊಳಗಿನ ನಿನ್ನ ಕಣ್ಣುಗಳು ಪಾರಿವಾಳಗಳೇ. ನಿನ್ನ ತಲೆಕೂದಲು ಗಿಲ್ಯಾದಿನ ಪರ್ವತದಿಂದ ಇಳಿದು ಬರುವ ಮೇಕೆ ಮಂದೆಯ ಹಾಗೆ ಇದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಹಾ, ನನ್ನ ಪ್ರಿಯಳೇ, ನೀನು ಎಷ್ಟು ಚೆಲುವೆ! ಆಹಾ, ನೀನು ಎಷ್ಟು ಸುಂದರಿ! ಮುಸುಕಿನೊಳಗಿನ ನಿನ್ನ ನೇತ್ರಗಳು ಪಾರಿವಾಳಗಳು, ನಿನ್ನ ಕೂದಲು ಗಿಲ್ಯಾದ್ ಬೆಟ್ಟದಿಂದ ಇಳಿದು ಹೋಗುವ ಆಡಿನ ಮಂದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನಲ್ಲ : ಆಹಾ! ನನ್ನ ಪ್ರಿಯಳೇ, ನೀನೆಷ್ಟು ರೂಪವತಿ! ಆಹಾ! ಎಷ್ಟು ಸುಂದರಿ! ಮುಸುಕಿನೊಳಗಿನ ಕಣ್ಣುಗಳು ಪಾರಿವಾಳಗಳು ನಿನ್ನ ತಲೆಗೂದಲಿನ ನರ್ತನವು ಗಿಲ್ಯಾದ್ ಗುಡ್ಡದಿಂದ ಇಳಿದುಬರುವ ಆಡುಮಂದೆಗೆ ಸಮಾನವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆಹಾ, ನನ್ನ ಪ್ರಿಯಳೇ, ನೀನು ಎಷ್ಟು ಚೆಲುವೆ! ಆಹಾ, ನೀನು ಎಷ್ಟು ಸುಂದರಿ! ಮುಸುಕಿನೊಳಗಿನ ನಿನ್ನ ನೇತ್ರಗಳು ಪಾರಿವಾಳಗಳು, ನಿನ್ನ ಕೂದಲು ಗಿಲ್ಯಾದ್ ಬೆಟ್ಟದ ಪಾರ್ಶ್ವದಲ್ಲಿ ಮಲಗಿರುವ ಆಡುಮಂದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನನ್ನ ಪ್ರಿಯಳೇ, ನೀನು ಬಹಳ ಸುಂದರಿ! ನೀನು ರೂಪವತಿ! ಮುಸುಕಿನೊಳಗಿರುವ ನಿನ್ನ ಕಣ್ಣುಗಳು ಕೋಮಲವಾದ ಪಾರಿವಾಳಗಳಂತಿವೆ. ನಿನ್ನ ಕೂದಲು ಗಿಲ್ಯಾದ್ ಬೆಟ್ಟದ ಇಳಿಜಾರುಗಳಲ್ಲಿ ನೃತ್ಯವಾಡುತ್ತಿರುವ ಆಡುಮಂದೆಯಂತೆ ಬಳಕುತ್ತಿದೆ. ಅಧ್ಯಾಯವನ್ನು ನೋಡಿ |