Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 4:10 - ಕನ್ನಡ ಸಮಕಾಲಿಕ ಅನುವಾದ

10 ನನ್ನ ಪ್ರಿಯಳೇ, ವಧುವೇ! ನಿನ್ನ ಪ್ರೀತಿಯು ಎಷ್ಟೋ ಚೆಂದ. ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ಎಲ್ಲಾ ಸುಗಂಧಗಳಿಗಿಂತ ನಿನ್ನ ತೈಲದ ಸುವಾಸನೆಯು ಎಷ್ಟೋ ಉತ್ತಮ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಪ್ರಿಯಳೇ, ವಧುವೇ, ನಿನ್ನ ಪ್ರೀತಿ ಅದೆಷ್ಟೋ ರಮ್ಯ! ನಿನ್ನ ಪ್ರೇಮ ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ನಿನ್ನ ತೈಲದ ಪರಿಮಳ ಸಕಲಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನನ್ನ ಪ್ರಿಯಳೇ, ನನ್ನ ವಧುವೇ, ನಿನ್ನ ಪ್ರೀತಿ ಎಷ್ಟೋ ರಮ್ಯ ! ನಿನ್ನ ಪ್ರೇಮ ಮಧುಪಾನಕ್ಕಿಂತ ಎಷ್ಟೋ ಮಧುರ ! ನಿನ್ನ ತೈಲದ ಪರಿಮಳ ಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಪ್ರಿಯಳೇ, ವಧುವೇ, ನಿನ್ನ ಪ್ರೀತಿಯು ಎಷ್ಟೋ ರಮ್ಯ! ನಿನ್ನ ಪ್ರೇಮವು ದ್ರಾಕ್ಷಾರಸಕ್ಕಿಂತ ಎಷ್ಟೋ ಮೇಲು! ನಿನ್ನ ತೈಲದ ಪರಿಮಳವು ಸಕಲಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನನ್ನ ಪ್ರಿಯಳೇ, ನನ್ನ ವಧುವೇ, ನಿನ್ನ ಪ್ರೀತಿಯು ಎಷ್ಟೋ ರಮ್ಯ! ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಎಷ್ಟೋ ಉತ್ತಮ! ನಿನ್ನ ತೈಲದ ಪರಿಮಳವು ಸಕಲ ಬಗೆಯ ಸುಗಂಧ ದ್ರವ್ಯಗಳಿಗಿಂತಲೂ ಉತ್ತಮ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 4:10
10 ತಿಳಿವುಗಳ ಹೋಲಿಕೆ  

ಪವಿತ್ರಾತ್ಮರ ಫಲವೇನೆಂದರೆ: ಪ್ರೀತಿ, ಆನಂದ, ಸಮಾಧಾನ, ಸಹನೆ, ದಯೆ, ಸದ್ಗುಣ, ನಂಬಿಗಸ್ತಿಕೆ,


ನನ್ನ ಪ್ರೇಮವೇ, ನೀನು ನಿನ್ನ ಹರ್ಷದಿಂದ ಎಷ್ಟೋ ಸುಂದರಿಯೂ ಎಷ್ಟೋ ಮನೋಹರಳೂ ಆಗಿರುವೆ.


ನಾನು ಎಲ್ಲವನ್ನೂ ಪರಿಪೂರ್ಣವಾಗಿ ಹೊಂದಿದ್ದೇನೆ. ನನಗೆ ಅಗತ್ಯಕ್ಕಿಂತಲೂ ಹೆಚ್ಚು ದೊರೆತಿದೆ. ನೀವು ಎಪಫ್ರೊದೀತನಿಂದ ಕಳುಹಿಸುವವುಗಳು ಈಗ ನನಗೆ ತಲುಪಿದೆ; ನಿಮ್ಮ ಕೊಡುಗೆ ದೇವರನ್ನು ಮೆಚ್ಚಿಸುವ ಸುಗಂಧ ಕಾಣಿಕೆಯೂ ಸ್ವೀಕೃತವಾದ ಯಜ್ಞವೂ ಆಗಿರುತ್ತವೆ.


ನಾನು ನನ್ನ ಪ್ರಿಯನಿಗೆ ಬಾಗಿಲು ತೆರೆಯಲು ಎದ್ದಾಗ, ಬೀಗದ ಹಿಡಿಗಳ ಮೇಲೆ ನನ್ನ ಕೈಗಳಿಂದ ರಕ್ತಬೋಳವು ತೊಟ್ಟಿಕ್ಕಿತು. ನನ್ನ ಬೆರಳುಗಳಿಂದಲೂ ರಕ್ತಬೋಳವು ಸುರಿಯಿತು.


ರಕ್ತಬೋಳ, ಸಾಂಬ್ರಾಣಿಗಳಿಂದಲೂ ವರ್ತಕರು ಮಾರುವ ಸಕಲ ಸುಗಂಧ ದ್ರವ್ಯಗಳಿಂದಲೂ ಧೂಮಸ್ತಂಭಗಳಂತೆ ಅಡವಿಯಿಂದ ಬರುವ ಈ ಮೆರವಣೆಗೆ ಯಾರದು?


ಅರಸನು ಮೇಜಿನ ಬಳಿಯಲ್ಲಿ ಕೂತಿದ್ದಾಗ, ನನ್ನ ಪರಿಮಳ ತೈಲವು ಸುವಾಸನೆಯನ್ನು ಬೀರುತ್ತಿತ್ತು.


ಸುರುಳಿಯನ್ನು ತೆಗೆದುಕೊಂಡಾಗ, ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿ ಆಗಿರುವವರ ಮುಂದೆ ಅಡ್ಡಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.


ನನ್ನ ಹೃದಯವನ್ನು ನೀನು ಸೆಳಕೊಂಡಿರುವೆ. ನನ್ನ ಪ್ರಿಯಳೇ, ನನ್ನ ವಧುವೇ, ನೀನು ನಿನ್ನ ಒಂದೇ ಕಿರುನೋಟದಿಂದಲೂ, ನಿನ್ನ ಕೊರಳಿನ ಒಂದೇ ಕಂಠ ಹಾರದಿಂದಲೂ, ನನ್ನ ಹೃದಯವನ್ನು ಸೆಳಕೊಂಡಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು