Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 4:9 - ಕನ್ನಡ ಸಮಕಾಲಿಕ ಅನುವಾದ

9 ನನ್ನ ಹೃದಯವನ್ನು ನೀನು ಸೆಳಕೊಂಡಿರುವೆ. ನನ್ನ ಪ್ರಿಯಳೇ, ನನ್ನ ವಧುವೇ, ನೀನು ನಿನ್ನ ಒಂದೇ ಕಿರುನೋಟದಿಂದಲೂ, ನಿನ್ನ ಕೊರಳಿನ ಒಂದೇ ಕಂಠ ಹಾರದಿಂದಲೂ, ನನ್ನ ಹೃದಯವನ್ನು ಸೆಳಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಪ್ರಿಯಳೇ, ವಧುವೇ, ನನ್ನ ಹೃದಯವನ್ನು ಅಪಹರಿಸಿರುವೆ ನಿನ್ನ ಒಂದು ಕುಡಿನೋಟದಿಂದ; ನನ್ನ ಹೃದಯವನ್ನು ವಶಮಾಡಿಕೊಂಡಿರುವೆ ನಿನ್ನ ಕಂಠಹಾರದ ಒಂದು ರತ್ನದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನನ್ನ ಪ್ರಿಯಳೇ, ನನ್ನ ವಧುವೇ, ನನ್ನ ಹೃದಯವನ್ನು ನೀನು ಅಪಹರಿಸಿರುವೆ ಒಂದೇ ಕಿರುನೋಟದಿಂದ, ನನ್ನ ಹೃದಯವನ್ನು ವಶಪಡಿಸಿಕೊಂಡಿರುವೆ ನಿನ್ನ ಕಂಠಹಾರದ ಒಂದೇ ರತ್ನದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಪ್ರಿಯಳೇ, ವಧುವೇ, ನನ್ನ ಹೃದಯವನ್ನು ಅಪಹರಿಸಿದ್ದೀ, ನಿನ್ನ ಒಂದು ಕಡೆಗಣ್ಣಿನಿಂದ, ನಿನ್ನ ಕಂಠಹಾರದ ಒಂದು ಸರದಿಂದ, ನನ್ನ ಹೃದಯವನ್ನು ವಶಮಾಡಿಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನನ್ನ ಪ್ರಿಯಳೇ, ನನ್ನ ವಧುವೇ, ನೀನು ನನ್ನ ಹೃದಯವನ್ನು ಅಪಹರಿಸಿರುವೆ. ನಿನ್ನ ನೋಟದಿಂದಲೂ ನಿನ್ನ ಮುತ್ತಿನಹಾರದಿಂದಲೂ ನನ್ನ ಹೃದಯವನ್ನು ವಶಪಡಿಸಿಕೊಂಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 4:9
31 ತಿಳಿವುಗಳ ಹೋಲಿಕೆ  

ನನ್ನ ಪ್ರಿಯಳೇ, ನನ್ನ ವಧುವೇ, ನೀನು ಭದ್ರ ತೋಟವೂ ಬೇಲಿಯೊಳಗಿನ ಬುಗ್ಗೆಯೂ ಮುದ್ರಿಸಿದ ಬಾವಿಯೂ ಆಗಿರುವೆ.


ದೇವರು ನಿಮ್ಮ ವಿಷಯದಲ್ಲಿ ಅಸೂಯೆಪಡುವಂತೆ, ನಾನು ನಿಮ್ಮ ವಿಷಯದಲ್ಲಿ ಅಸೂಯೆಪಡುತ್ತಿದ್ದೇನೆ. ಹೇಗೆಂದರೆ, ನಿಮ್ಮನ್ನು ಶುದ್ಧ ಕನ್ನಿಕೆಯಾಗಿ ಕ್ರಿಸ್ತ ಯೇಸು ಎಂಬ ಒಬ್ಬರೇ ಪುರುಷನಿಗೆ ಒಪ್ಪಿಸಬೇಕೆಂದು ಆತನೊಂದಿಗೆ ನಾನು ನಿಶ್ಚಯ ಮಾಡಿದ್ದೆನಲ್ಲಾ.


ನಾನು ನನ್ನ ಪ್ರಿಯನವಳು. ಅವನ ಆಸೆಯು ನನ್ನ ಕಡೆಗಿರುವುದು.


ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ನೂತನ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾದ ವಧುವಿನಂತೆ ಶೃಂಗರಿಸಲಾಗಿತ್ತು.


ಮದುಮಗಳು ಮದುಮಗನಿಗೆ ಸೇರಿದವಳು. ಆದರೂ ಮದುಮಗನ ಸ್ನೇಹಿತನು ನಿಂತುಕೊಂಡು ಆತನ ಮಾತಿಗೆ ಕಿವಿಗೊಟ್ಟು, ಮದುಮಗನ ಸ್ವರ ಕೇಳಿ ಸಂತೋಷಪಡುತ್ತಾನೆ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.


ನಿನ್ನ ದೇವರಾದ ಯೆಹೋವ ದೇವರು ನಿನ್ನೊಂದಿಗಿದ್ದಾರೆ. ನಿನ್ನನ್ನು ರಕ್ಷಿಸಲು ಶಕ್ತರಾಗಿದ್ದಾರೆ. ನಿನ್ನಲ್ಲಿ ಬಹಳವಾಗಿ ಹರ್ಷಾನಂದಗೊಳ್ಳುವರು. ತಮ್ಮ ಪ್ರೀತಿಯ ನಿಮಿತ್ತ ಅವರು ಇನ್ನು ಮುಂದೆ ನಿನ್ನನ್ನು ಖಂಡಿಸುವುದಿಲ್ಲ, ಆದರೆ ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವರು.”


“ ‘ಈಗ ನಾನು ನಿನ್ನ ಬಳಿ ಹಾದುಹೋಗುವಾಗ ನಿನ್ನನ್ನು ನೋಡಲು, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು. ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡಿದ್ದರಿಂದ ನೀನು ನನ್ನವಳಾದೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಯುವಕನು ಕನ್ಯೆ ಯುವತಿಯನ್ನು ವರಿಸುವಂತೆ, ನಿನ್ನ ಜನರು ದೇಶವನ್ನು ಸ್ವಾಧೀನಪಡಿಸಿಕೊಳ್ಳುವರು. ವರನು ವಧುವಿನ ಮೇಲೆ ಆನಂದ ಪಡುವ ಪ್ರಕಾರ, ನಿನ್ನ ದೇವರು ನಿನ್ನ ಮೇಲೆ ಆನಂದಿಸುವರು.


ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ. ಸೇನಾಧೀಶ್ವರ ಯೆಹೋವ ದೇವರು ಎಂಬುದು ಆತನ ಹೆಸರು. ನಿನ್ನ ವಿಮೋಚಕನು ಇಸ್ರಾಯೇಲಿನ ಪರಿಶುದ್ಧನೇ. ಸಮಸ್ತ ಭೂಮಿಯ ದೇವರು ಎಂದು ಆತನನ್ನು ಕರೆಯಲಾಗುತ್ತದೆ.


ನಾನು ಅದನ್ನು ಅರಿತುಕೊಳ್ಳುವ ಮೊದಲು, ನನ್ನ ಆಸೆ ನನ್ನ ಜನ ಪ್ರಧಾನರ ನಡುವೆ ರಥದ ಮೇಲೆ ಕೂತಿರುವಂತೆ ನನ್ನನ್ನು ನಡೆಸಿತು.


ನಿನ್ನ ಕಣ್ಣುಗಳನ್ನು ನನ್ನ ಕಡೆಯಿಂದ ತಿರುಗಿಸು, ಏಕೆಂದರೆ ಅವು ನನ್ನನ್ನು ಜಯಿಸಿವೆ. ನಿನ್ನ ತಲೆಗೂದಲು ಗಿಲ್ಯಾದ್ ಪರ್ವತದಿಂದ ಇಳಿಯುವ ಮೇಕೆಯ ಮಂದೆಯಂತಿದೆ.


ನನ್ನ ಪ್ರಿಯಳೇ, ವಧುವೇ! ನಿನ್ನ ಪ್ರೀತಿಯು ಎಷ್ಟೋ ಚೆಂದ. ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ಎಲ್ಲಾ ಸುಗಂಧಗಳಿಗಿಂತ ನಿನ್ನ ತೈಲದ ಸುವಾಸನೆಯು ಎಷ್ಟೋ ಉತ್ತಮ!


ಚೀಯೋನಿನ ಪುತ್ರಿಯರೇ, ನೀವು ಹೊರಗೆ ಬನ್ನಿರಿ. ಅರಸನಾದ ಸೊಲೊಮೋನನನ್ನು ನೋಡಿರಿ. ಅವನ ಮದುವೆಯ ದಿನದಂದು, ಅವನ ಹೃದಯ ಸಂತೋಷಗೊಂಡ ದಿನದಲ್ಲಿ, ಅವನ ತಾಯಿ ಅವನಿಗೆ ತೊಡಿಸಿದ ಕಿರೀಟವನ್ನು ಅವನು ಧರಿಸಿರುವುದನ್ನು ಬಂದು ನೋಡಿರಿ.


ನನ್ನ ಪ್ರಿಯಳೇ, ನೀನು ಎಷ್ಟು ಸೌಂದರ್ಯವಂತೆ! ಆಹಾ, ನೀನು ಸೌಂದರ್ಯವಂತಳೇ! ನಿನ್ನ ಕಣ್ಣುಗಳು ಪಾರಿವಾಳಗಳಂತಿವೆ.


ನಿನ್ನ ಕೆನ್ನೆಗಳು ಆಭರಣಗಳ ಸಾಲಿನಿಂದಲೂ, ನಿನ್ನ ಕೊರಳು ಕಂಠ ಮಾಲೆಗಳಿಂದಲೂ ರಮ್ಯವಾಗಿವೆ.


ರಾಜ ಪುತ್ರಿಯರು ನಿಮ್ಮ ಗೌರವ ಸ್ತ್ರೀಯರಲ್ಲಿ ಇದ್ದಾರೆ. ನಿಮ್ಮ ಬಲಗಡೆ ರಾಣಿಯು ಓಫೀರ್ ಬಂಗಾರವನ್ನು ಧರಿಸಿದ್ದಾಳೆ.


ಮಿಕ್ಕ ಅಪೊಸ್ತಲರಂತೆಯೂ ಕರ್ತದೇವರ ತಮ್ಮಂದಿರಂತೆಯೂ ಕೇಫನಂತೆಯೂ ವಿಶ್ವಾಸಿಯಾದ ಒಬ್ಬಳನ್ನು ಮದುವೆಮಾಡಿಕೊಳ್ಳಲು ನಮಗೆ ಹಕ್ಕಿಲ್ಲವೇ?


ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರ, ಸಹೋದರಿ ಮತ್ತು ತಾಯಿ,” ಎಂದು ಹೇಳಿದರು.


ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು, ನಾರುಮಡಿಯ ವಸ್ತ್ರವನ್ನು ತೊಡಿಸಿ, ಚಿನ್ನದ ಸರಪಣಿಯನ್ನು ಅವನ ಕೊರಳಿಗೆ ಹಾಕಿದನು.


ಇದಲ್ಲದೆ ನಿಜವಾಗಿಯೂ ಅವಳು ನನ್ನ ತಂಗಿ, ಆದರೆ ನನ್ನ ತಾಯಿಯ ಮಗಳಲ್ಲ, ನನ್ನ ತಂದೆಯ ಮಗಳೇ, ನನಗೆ ಹೆಂಡತಿಯಾದಳು.


ಅವು ನಿನ್ನ ತಲೆಗೆ ಸುಂದರ ಕಿರೀಟ ನಿನ್ನ ಕೊರಳನ್ನು ಅಲಂಕರಿಸುವ ಹಾರ.


ಆಭರಣಗಳಿಂದ ನಿನ್ನನ್ನು ಅಲಂಕರಿಸಿದೆನು: ನಾನು ನಿನ್ನ ಕೈಗಳಿಗೆ ಕಡಗಗಳನ್ನು ನಿನ್ನ ಕೊರಳಿಗೆ ಸರವನ್ನು ಹಾಕಿದೆನು.


ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ, ಪಂಡಿತರನ್ನೂ, ಶಕುನ ಹೇಳುವವರನ್ನೂ ಕರೆಸಿ, ಬಾಬಿಲೋನಿನ ಜ್ಞಾನಿಗಳಿಗೆ, “ಯಾರು ಈ ಬರಹವನ್ನು ಓದಿ, ಅದರ ಅರ್ಥವನ್ನು ನನಗೆ ತಿಳಿಸುವರೋ, ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ರಾಜ್ಯದ ಮೂರನೆಯ ಅಧಿಕಾರಿಯಾಗಿ ಮಾಡುವೆನು,” ಎಂದು ಹೇಳಿದನು.


ನಿನ್ನ ಹೃದಯ ಅವಳ ಸೌಂದರ್ಯವನ್ನು ಮೋಹಿಸದಿರಲಿ. ಅವಳ ಕಣ್ಣುರೆಪ್ಪೆಗಳಿಂದ ಅವಳು ನಿನ್ನನ್ನು ವಶಮಾಡಿಕೊಳ್ಳದೆ ಇರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು