Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 5:14 - ಕನ್ನಡ ಸಮಕಾಲಿಕ ಅನುವಾದ

14 ಅವನ ಕೈಗಳು ಗೋಮೇಧಿಕ ರತ್ನದ ಬಂಗಾರದ ಸಲಾಕೆಗಳಂತಿವೆ. ಅವನ ದೇಹ ಇಂದ್ರನೀಲಗಳಿಂದ ಹೊಳೆಯುವ ದಂತದ ಹಾಗೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನ ಕೈಗಳು ಪೀತರತ್ನ ಖಚಿತವಾದ ಬಂಗಾರದ ಸಲಾಕಿಗಳೋಪಾದಿಯಲ್ಲಿವೆ, ಅವನ ಮೈ ಇಂದ್ರನೀಲಮಯವಾದ ದಂತಫಲಕದ ಹಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವನ ಕೈಗಳು ಪೀತರತ್ನಖಚಿತ ಚಿನ್ನದ ಸಲಾಕೆಗಳು ಅವನ ದೇಹ ಇಂದ್ರನೀಲಮಯವಾದ ದಂತಫಲಕವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವನ ಕೈಗಳು ಪೀತರತ್ನಖಚಿತವಾದ ಬಂಗಾರದ ಸಲಾಕಿಗಳೋಪಾದಿಯಲ್ಲಿವೆ, ಅವನ ಮೈ ಇಂದ್ರನೀಲಮಯವಾದ ದಂತಫಲಕದ ಹಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವನ ಕೈಗಳು ಪೀತರತ್ನದಿಂದ ಕೂಡಿದ ಬಂಗಾರದ ಸಲಾಕೆಯಂತಿವೆ; ಅವನ ದೇಹವು ನೀಲಿಬಣ್ಣದ ಕಲ್ಲುಗಳಿಂದ ಕೂಡಿದ ನಯವಾದ ದಂತದಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 5:14
15 ತಿಳಿವುಗಳ ಹೋಲಿಕೆ  

ಅವರು ಇಸ್ರಾಯೇಲಿನ ದೇವರನ್ನು ನೋಡಿದರು. ಆತನ ಪಾದಗಳ ಕೆಳಗೆ ನೀಲ ವರ್ಣದ ಕಲ್ಲಿನ ಕೆಲಸಕ್ಕೆ ಸಮಾನವಾದದ್ದೂ, ಆಕಾಶದ ಹಾಗೆ ನಿರ್ಮಲವಾದದ್ದೂ ಇತ್ತು.


ಸಂಕಟಕ್ಕೊಳಗಾದವಳೇ! ಬಿರುಗಾಳಿಯಿಂದ ಬಡಿಯಲಾಗಿ ಆದರಣೆ ಹೊಂದದವಳೇ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು, ನಿನ್ನ ಅಸ್ತಿವಾರವನ್ನು ನೀಲಮಣಿಗಳಿಂದ ಹಾಕಿ ಗಾರೆಯಿಂದ ಕಟ್ಟುವೆನು.


ಆ ಚಕ್ರಗಳ ಆಕಾರವೂ, ಅವುಗಳ ಕೆಲಸವೂ ಪೀತರತ್ನದ ವರ್ಣದ ಹಾಗಿದೆ. ಆ ನಾಲ್ಕಕ್ಕೆ ಒಂದೇ ಮಾದರಿಯಾಗಿದ್ದವು. ಅವುಗಳ ಆಕಾರವೂ, ಅವುಗಳ ಕೆಲಸವೂ ಚಕ್ರದ ಮಧ್ಯದೊಳಗೆ ಚಕ್ರವು ಇದ್ದ ಹಾಗಿತ್ತು.


ನನ್ನ ಸೇವಕನು ವಿವೇಕಿಯಾಗಿ ಕಾರ್ಯವನ್ನು ಸಾಧಿಸಿ, ಅವನು ಉನ್ನತನಾಗಿ ಮೇಲೆಕ್ಕೇರಿ ಮಹೋನ್ನತನಾಗಿರುವನು.


ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು, ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು, ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು ಇದನ್ನು ನೆರವೇರಿಸುವುದು.


ನಿನ್ನ ಹೊಕ್ಕಳು ಮಿಶ್ರಪಾನಕ ತುಂಬಿದ ದುಂಡು ಬಟ್ಟಲಿನ ಹಾಗಿದೆ. ನಿನ್ನ ಹೊಟ್ಟೆ ನೆಲದಾವರೆಗಳಿಂದ ಸುತ್ತಿಕೊಂಡಿರುವ ಹೂವುಗಳು ಸುತ್ತಿಕೊಂಡಿರುವ ಗೋಧಿಯ ರಾಶಿಯಾಗಿದೆ.


ನ್ಯಾಯ ಪ್ರಿಯ ರಾಜರೇ, ನೀವು ನೀತಿಯನ್ನು ಸ್ಥಿರಪಡಿಸುತ್ತೀರಿ. ನ್ಯಾಯವನ್ನೂ ನೀತಿಯನ್ನೂ ಯಾಕೋಬ್ಯರಲ್ಲಿ ನೀವು ಮನದಟ್ಟಾಗಿಸಿರುವಿರಿ.


ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಗೋಮೇಧಿಕ, ಸೂರ್ಯಕಾಂತ ಶಿಲೆ ಇವುಗಳನ್ನು ಬಂಗಾರದ ಜವೆಯ ಕಲ್ಲುಗಳಲ್ಲಿ ಸೇರಿಸಲಾಗಿದ್ದವು.


ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಗೋಮೇಧಿಕ, ಸೂರ್ಯಕಾಂತ ಶಿಲೆ ಇವುಗಳನ್ನು ಬಂಗಾರದ ಜವೆಯ ಕಲ್ಲುಗಳಲ್ಲಿ ಸೇರಿಸಬೇಕು.


ಯೆಹೋವ ದೇವರೇ, ನಿಮ್ಮ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳದ್ದಾಗಿದೆ; ಯೆಹೋವ ದೇವರೇ, ನಿಮ್ಮ ಬಲಗೈ ಶತ್ರುವನ್ನು ಜಜ್ಜಿ ಪುಡಿ ಮಾಡಿತು.


ಎರಡನೆಯ ಸಾಲಿನಲ್ಲಿ ಕೆಂಪರಲು, ನೀಲ ಮತ್ತು ಪಚ್ಚೆಗಳಿರಬೇಕು.


ಜ್ಞಾನವನ್ನು ಓಫಿರಿನ ಬಂಗಾರಕ್ಕೂ, ಅಮೂಲ್ಯವಾದ ಗೋಮೇಧಿಕಕ್ಕೂ, ಇಂದ್ರನೀಲಕ್ಕೂ ಬೆಲೆ ಕಟ್ಟಲಾಗದು.


ಆತನ ದೇಹವು ಪೀತರತ್ನದ ಹಾಗೆಯೂ, ಆತನ ಮುಖವು ಮಿಂಚಿನಂತೆಯೂ ಹೊಳೆಯುತ್ತಿತ್ತು. ಅವನ ಕಣ್ಣುಗಳು ಉರಿಯುವ ಬೆಂಕಿಯ ದೀಪದಂತೆ ಇದ್ದವು. ಅವನ ತೋಳುಗಳೂ, ಕಾಲುಗಳೂ ಬೆಳಗಿನ ಕಂಚಿನ ಕಾಂತಿಯಾಗಿಯೂ; ಆತನ ಮಾತುಗಳ ಶಬ್ದವು, ಜನಸಮೂಹದ ಸಪ್ಪಳದ ಹಾಗೆಯೂ ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು