Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 5:6 - ಕನ್ನಡ ಸಮಕಾಲಿಕ ಅನುವಾದ

6 ನಾನು ನನ್ನ ಪ್ರಿಯನಿಗೆ ಬಾಗಿಲು ತೆರೆದೆನು. ಆದರೆ ಅಷ್ಟರಲ್ಲಿ ನನ್ನ ಪ್ರಿಯನು ಹಿಂದಿರುಗಿ ಹೋಗಿಬಿಟ್ಟಿದ್ದನು. ಅವನು ಹೋಗಿದ್ದರಿಂದ ನನ್ನ ಹೃದಯ ಕುಗ್ಗಿಹೋಯಿತು. ಅವನನ್ನು ಹುಡುಕಿದೆನು, ಆದರೆ ಸಿಕ್ಕಲಿಲ್ಲ. ಅವನನ್ನು ಕರೆದೆನು, ಉತ್ತರವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನನ್ನ ಇನಿಯನಿಗೆ ಕದ ತೆಗೆದೆನು, ಅಷ್ಟರಲ್ಲಿ ಅವನು ಹಿಂದಿರುಗಿ ಹೋಗಿದ್ದನು. ನನ್ನೆದೆಯ ಬಡಿತವೇ ನಿಂತಂತಾಯಿತು ಅವನ ದನಿಗೆ. ಎಷ್ಟು ಹುಡುಕಿದರೂ ಸಿಕ್ಕಲಿಲ್ಲ ಅವನು, ಎಷ್ಟು ಕೂಗಿದರೂ ಉತ್ತರವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಬಾಗಿಲ ತೆರೆದು ನೋಡಿದೆ ನನ್ನಿನಿಯನಿಗಾಗಿ ಅಷ್ಟರೊಳಗೆ ಹೋಗಿಬಿಟ್ಟಿದ್ದನವನು ಹಿಂದಿರುಗಿ. ನಿಂತಂತಾಯಿತು ಅವನ ದನಿಗೆ ನನ್ನೆದೆಯ ತುಡಿತ ಎಷ್ಟೋ ಹುಡುಕಿದೆ, ಆದರೆ ಸಿಗಲಿಲ್ಲ ಎಷ್ಟೋ ಕೂಗಿದೆ, ಆದರೆ ಉತ್ತರವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನನ್ನ ಇನಿಯನಿಗೆ ಕದತೆಗೆದೆನು; ಅಷ್ಟರಲ್ಲಿ ಅವನು ಹಿಂದಿರುಗಿ ಹೋಗಿದ್ದನು. ಆಹಾ, ಅವನು ಮಾತಾಡಿದಾಗ ನಾನು ಮೂರ್ಛೆ ಹೋಗಿದ್ದೆನಲ್ಲಾ. ಎಷ್ಟು ಹುಡುಕಿದರೂ ಸಿಕ್ಕಲಿಲ್ಲ, ಎಷ್ಟು ಕೂಗಿದರೂ ಉತ್ತರವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ನನ್ನ ಪ್ರಿಯನಿಗಾಗಿ ಬಾಗಿಲನ್ನು ತೆರೆಯುವಷ್ಟರಲ್ಲಿ ನನ್ನ ಪ್ರಿಯನು ಹೊರಟುಹೋಗಿದ್ದನು! ಅವನು ಇಲ್ಲದಿರುವುದನ್ನು ಕಂಡು ನನ್ನ ಹೃದಯವು ಕುಸಿದುಹೋಯಿತು. ನಾನು ಅವನಿಗಾಗಿ ಹುಡುಕಿದರೂ ಅವನು ಸಿಕ್ಕಲಿಲ್ಲ. ನಾನು ಅವನಿಗಾಗಿ ಕೂಗಿದರೂ ಅವನು ಉತ್ತರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 5:6
30 ತಿಳಿವುಗಳ ಹೋಲಿಕೆ  

ನಾನು ನಿದ್ರಿಸುತ್ತಿದ್ದರೂ, ನನ್ನ ಹೃದಯವು ಎಚ್ಚರವಾಗಿತ್ತು. ಇಗೋ! ಬಾಗಿಲು ತಟ್ಟುವ ನನ್ನ ಪ್ರಿಯನ ಶಬ್ದವಿದು: “ನನ್ನ ಪ್ರಿಯಳೇ, ನನ್ನ ವಧುವೇ, ನನ್ನ ಪಾರಿವಾಳವೇ, ಪರಿಪೂರ್ಣಳೇ, ಬಾಗಿಲು ತೆಗೆ! ನನ್ನ ತಲೆ ಮಂಜಿನಿಂದ ನೆನೆದಿದೆ. ನನ್ನ ಕೂದಲು ರಾತ್ರಿಯ ಹನಿಗಳಿಂದ ತೋಯ್ದಿದೆ.”


ನಾನು ಯಾರನ್ನು ಪ್ರೀತಿಸುತ್ತೇನೋ, ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಆಸಕ್ತನಾಗಿರು, ಪಶ್ಚಾತ್ತಾಪಪಡು.


ಕೂಡಲೇ ಎರಡನೆಯ ಸಾರಿ ಹುಂಜ ಕೂಗಿತು. ಹೀಗೆ, “ಎರಡು ಸಾರಿ ಹುಂಜ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ನಿರಾಕರಿಸುವೆ,” ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ವ್ಯಥೆಪಟ್ಟು ಅತ್ತನು.


ಆಗ ಪೇತ್ರನು, “ಹುಂಜ ಕೂಗುವುದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ನಿರಾಕರಿಸುವೆ,” ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು.


“ಆಗ, ‘ನಾನು ಕೂಗಲು, ಅವರು ಕೇಳದೆ ಇದ್ದ ಪ್ರಕಾರ, ಅವರು ಕೂಗಲು ನಾನು ಕೇಳದೆ ಇದ್ದೇನೆಂದು,’ ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ಅಪರಾಧಗಳನ್ನು ಅರಿಕೆಮಾಡಿ, ನನ್ನ ಮುಖವನ್ನು ಹುಡುಕುವವರೆಗೂ, ನಾನು ತಿರುಗಿಕೊಂಡು ನನ್ನ ಗುಹೆಗೆ ಹೋಗುವೆನು. ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.”


ಅವರು ಯೆಹೋವ ದೇವರನ್ನು ಹುಡುಕುವುದಕ್ಕೆ ತಮ್ಮ ದನಕುರಿಗಳೊಂದಿಗೂ ಹೋಗುವರು. ಆದರೆ ಆತನು ಅವರಿಂದ ತನ್ನನ್ನು ಹಿಂದೆಗೆದುಕೊಂಡಿದ್ದರಿಂದ, ಅವರು ಆತನನ್ನು ಕಾಣುವುದೇ ಇಲ್ಲ.


ನಾನು ಕರೆದು ಕೂಗಿದರೂ ಅವರು ನನ್ನ ಪ್ರಾರ್ಥನೆಯನ್ನು ಲಾಲಿಸುವುದಿಲ್ಲ.


ಆದರೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕುತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವುದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ಆಜ್ಞೆಗಳನ್ನು ಬಿಡದೆ, ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ, ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸಮೀಪಿಸುವುದರಲ್ಲಿ ಸಂತೋಷಿಸುತ್ತಾರೆ.


ನಾನು ಎಂದೆಂದಿಗೂ ವ್ಯಾಜ್ಯವಾಡುವುದಿಲ್ಲ. ಯಾವಾಗಲೂ ಕೋಪಿಸಿಕೊಳ್ಳೆನು. ಏಕೆಂದರೆ ಆತ್ಮವೂ, ನಾನು ಉಂಟುಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.


ನಾನು ಬಂದಾಗ ಏಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಕೈ ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೆ ನನಗೆ ಬಿಡಿಸುವುದಕ್ಕೆ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಮರುಭೂಮಿಯನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ಮೀನುಗಳು ಬಾಯಾರಿ, ಸತ್ತು ನಾರುವುವು.


ಆ ದಿನದಲ್ಲಿ ನೀನು ಹೇಳುವುದೇನೆಂದರೆ: “ಯೆಹೋವ ದೇವರೇ, ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀವು ನನ್ನ ಮೇಲೆ ಕೋಪಗೊಂಡಿದ್ದರೂ, ಆ ನಿಮ್ಮ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತೀರಲ್ಲವೆ?


ಯಾಕೋಬಿನ ವಂಶದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವ ದೇವರಿಗಾಗಿ ನಾನು ಕಾದುಕೊಂಡು ಎದುರು ನೋಡುತ್ತಿರುವೆನು. ನಾನು ದೇವರ ಮೇಲೆ ಭರವಸೆ ಇಡುವೆನು.


ನಿನ್ನ ಪ್ರಿಯನು ಎಲ್ಲಿಗೆ ಹೋದನು? ಸ್ತ್ರೀಯರಲ್ಲಿ ಅತಿ ಸುಂದರಿಯೇ, ನಾವು ಅವನನ್ನು ನಿನ್ನ ಸಂಗಡ ಹುಡುಕುವಂತೆ ನಿನ್ನ ಪ್ರಿಯನು ಯಾವ ಕಡೆಗೆ ಹೋಗಿದ್ದಾನೆ?


ಅನಂತರ ನನ್ನ ಪ್ರಿಯನು ಬಾಗಿಲ ಸಂದಿನಲ್ಲಿ ತನ್ನ ಕೈ ಹಾಕಿದನು. ನನ್ನ ಹೃದಯವು ಅವನಿಗಾಗಿ ಮಿಡಿಯಿತು.


“ಆಗ ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರ ಕೊಡೆನು. ಅವರು ನನ್ನನ್ನು ಆತುರದಿಂದ ಹುಡುಕುವರು, ಆದರೆ ಅವರು ನನ್ನನ್ನು ಕಂಡುಕೊಳ್ಳುವುದಿಲ್ಲ.


ಸರ್ವಶಕ್ತ ದೇವರಾಗಿರುವ ಯೆಹೋವ ದೇವರೇ, ಎಷ್ಟರವರೆಗೆ ನಿಮ್ಮ ಜನರ ಪ್ರಾರ್ಥನೆಗೆ ವಿರೋಧವಾಗಿ ಬೇಸರಗೊಳ್ಳುವಿರಿ?


ನಾನು ವ್ಯಥೆಪಡುತ್ತಿರುವಾಗ, ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿಸುವುದರಿಂದ ನನ್ನ ಆತ್ಮವು ಬಳಲಿ ಹೋಯಿತು.


ನಾನು ಮೊರೆಯಿಟ್ಟು ದಣಿದಿದ್ದೇನೆ. ನನ್ನ ಗಂಟಲು ಒಣಗಿದೆ. ನಾನು ದೇವರನ್ನು ಎದುರು ನೋಡುವುದರಿಂದ ನನ್ನ ಕಣ್ಣು ಕ್ಷೀಣವಾಗಿವೆ.


ಯೆಹೋವ ದೇವರೇ, ನಿಮ್ಮ ದಯೆಯಿಂದ ನನ್ನ ರಾಜ ಬೆಟ್ಟವು ಸ್ಥಿರವಾಗಿ ನಿಲ್ಲುವಂತೆ ಮಾಡಿದ್ದೀರಿ ಆದರೆ ನೀವು ನಿಮ್ಮ ಮುಖವನ್ನು ಮರೆಮಾಡಲು ನಾನು ಕಳವಳಗೊಂಡೆನು.


ಯೆಹೋವ ದೇವರೇ, ನೀವು ನನಗೆ ಸಂರಕ್ಷಿಸುವ ಬಂಡೆಯಾಗಿದ್ದೀರಿ. ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ, ಮೌನವಾಗಿರಬೇಡಿರಿ; ನೀವು ಸುಮ್ಮನಿದ್ದರೆ ನಾನು ಸಮಾಧಿಯಲ್ಲಿದ್ದವನಿಗೆ ಸಮಾನನಾಗುವೆನು.


ಆದರೆ ಅರಸನು, “ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ. ಏಕೆಂದರೆ, ‘ದಾವೀದನನ್ನು ದೂಷಿಸು,’ ಎಂದು ಯೆಹೋವ ದೇವರು ಅವನಿಗೆ ಹೇಳಿದ್ದಾರೆ. ಹಾಗಾದರೆ, ‘ಏಕೆ ಹೀಗೆ ಮಾಡುತ್ತೀ?’ ಎಂದು ಹೇಳುವವನ್ಯಾರು?” ಎಂದನು.


ಸೌಲನು ಯೆಹೋವ ದೇವರನ್ನು ಕೇಳಿಕೊಂಡಾಗ, ಯೆಹೋವ ದೇವರು ಅವನಿಗೆ ಸ್ವಪ್ನಗಳಿಂದಲಾದರೂ, ಊರೀಮಿನಿಂದಲಾದರೂ, ಪ್ರವಾದಿಗಳಿಂದಲಾದರೂ ಉತ್ತರ ಕೊಡಲಿಲ್ಲ.


ಅವನು ತನ್ನ ಸಹೋದರರಿಗೆ, “ನನ್ನ ಹಣವನ್ನು ಹಿಂದಕ್ಕೆ ಕೊಟ್ಟಿದ್ದಾರೆ, ಅದು ನನ್ನ ಚೀಲದಲ್ಲಿದೆ,” ಎಂದು ಹೇಳಿದ. ಅವರಿಗೆ ಹೃದಯ ಕಂಪನವಾದಂತಾಗಿ ಹೆದರಿ ಒಬ್ಬರಿಗೊಬ್ಬರು, “ದೇವರು ನಮಗೆ ಮಾಡಿದ್ದೇನು?” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು