Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 6:10 - ಕನ್ನಡ ಸಮಕಾಲಿಕ ಅನುವಾದ

10 ಮೆರವಣೆಗೆಯಲ್ಲಿ ನಕ್ಷತ್ರಗಳ ಹಾಗೆ ಗಂಭೀರಳೂ, ಚಂದ್ರನ ಹಾಗೆ ಸುಂದರಿಯೂ, ಸೂರ್ಯನ ಹಾಗೆ ಪ್ರಕಾಶಿಸುವವಳೂ ಆಗಿರುವ ಈ ಉದಯವಂತೆ ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅರುಣೋದಯದಂತೆ ಉದಯಿಸುವಂತಿರುವಳು, ಚಂದ್ರನಂತೆ ಸೌಮ್ಯ ಸುಂದರಿಯಿವಳು, ಸೂರ್ಯನಂತೆ ಶುಭ್ರಳು, ಧ್ವಜಗಳುಳ್ಳ ಸೈನ್ಯದ ಹಾಗೆ ಭಯಂಕರಳು ಆಗಿರುವ ಇವಳಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಉದಯಿಸುತ್ತಿರುವಳಿವಳು ಅರುಣೋದಯದಂತೆ ಸುಂದರಿಯಾಗಿಹಳು ಚಂದ್ರನಂತೆ ಶುಭ್ರಳಾಗಿಹಳು ಸೂರ್ಯನಂತೆ ಭಯಂಕರಳು ಪತಾಕಿನಿಯಂತೆ ಎಂಥವಳಿರಬಹುದು ಇವಳು ಪೇಳೈ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅರುಣೋದಯವು ದೃಷ್ಟಿಸುವಂತಿರುವ ಇವಳಾರು? ಚಂದ್ರನಂತೆ ಸೌಮ್ಯಳು, ಸೂರ್ಯನಂತೆ ಶುಭ್ರಳು, ಪತಾಕಿನಿಯಂತೆ ಭಯಂಕರಳು ಆಗಿರುವ ಇವಳಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸೂರ್ಯೋದಯದಂತೆ ಪ್ರಕಾಶಿಸುತ್ತಿರುವ ಈ ಯುವತಿ ಯಾರು? ಚಂದ್ರನಂತೆ ಸೌಮ್ಯಳೂ ಸೂರ್ಯನಂತೆ ಶುಭ್ರಳೂ ಜಯಧ್ವಜವೆತ್ತಿರುವ ಸೈನ್ಯದಂತೆ ಪ್ರಭಾವವುಳ್ಳವಳೂ ಆಗಿರುವ ಇವಳಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 6:10
24 ತಿಳಿವುಗಳ ಹೋಲಿಕೆ  

ನನ್ನ ಪ್ರಿಯಳೇ, ನೀನು ತಿರ್ಚ ನಗರದಂತೆ ಸುಂದರಿ, ಯೆರೂಸಲೇಮಿನ ಹಾಗೆ ರಮ್ಯಳು, ಧ್ವಜಗಳಿರುವ ದಂಡಿನ ಹಾಗೆ ಗಂಭೀರಳೂ ಆಗಿರುವೆ.


ಪರಲೋಕದಲ್ಲಿ ಒಂದು ಮಹಾ ಸೂಚನೆಯು ಕಾಣಿಸಿತು: ಒಬ್ಬ ಸ್ತ್ರೀಯು ಸೂರ್ಯನನ್ನು ಧರಿಸಿಕೊಂಡಿದ್ದಳು, ಆಕೆಯ ಪಾದಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು.


ನಾನು ಸೂರ್ಯನು ಹೊಳೆಯುವುದನ್ನು ಗಮನಿಸಿ, ಚಂದ್ರನು ಪ್ರಭೆಯಲ್ಲಿ ಚಲಿಸುವುದನ್ನು ನೋಡಿ,


ಇನ್ನು ರಾತ್ರಿ ಇರುವುದಿಲ್ಲ. ದೀಪದ ಬೆಳಕೂ ಸೂರ್ಯನ ಬೆಳಕೂ ಅವಶ್ಯವಿಲ್ಲ. ಕರ್ತದೇವರೇ ಅವರಿಗೆ ಬೆಳಕನ್ನು ಕೊಡುವರು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.


ಆಗ ನಾನು ಮತ್ತೊಬ್ಬ ಬಲಿಷ್ಠನಾದ ದೇವದೂತನು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಮೇಲೆ ಮುಗಿಲ ಬಿಲ್ಲು ಇತ್ತು. ಅವನ ಮುಖವು ಸೂರ್ಯನಂತಿದ್ದು, ಅವನ ಕಾಲುಗಳು ಅಗ್ನಿಸ್ತಂಭಗಳಂತಿದ್ದವು.


ಅದನ್ನು ಕಳಂಕ, ಸುಕ್ಕು ಇಂಥದ್ದು ಯಾವುದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯನ್ನಾಗಿ ತಮ್ಮ ಮುಂದೆ ನಿಲ್ಲಿಸಿಕೊಳ್ಳಬೇಕೆಂದು ತಮ್ಮನ್ನೇ ಒಪ್ಪಿಸಿಕೊಟ್ಟರು.


ಅಲ್ಲಿ ಯೇಸು ಅವರ ಮುಂದೆ ರೂಪಾಂತರಗೊಂಡರು. ಅವರ ಮುಖವು ಸೂರ್ಯನಂತೆ ಪ್ರಕಾಶಿಸಿತು. ಅವರ ಉಡುಪು ಬೆಳಕಿನಂತೆ ಬೆಳಗಿತು.


ಆಗ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವುದು. ನಿನ್ನ ಆರೋಗ್ಯ ತ್ವರಿತವಾಗಿ ಕಾಣಿಸಿಕೊಳ್ಳುತ್ತದೆ. ನಿನ್ನ ನೀತಿ ನಿನಗೆ ಮುಂಬಲವಾಗಿರುವುದು. ಯೆಹೋವ ದೇವರ ಮಹಿಮೆಯು ನಿನಗೆ ಹಿಂಬಲವಾಗಿರುವುದು.


ರಕ್ತಬೋಳ, ಸಾಂಬ್ರಾಣಿಗಳಿಂದಲೂ ವರ್ತಕರು ಮಾರುವ ಸಕಲ ಸುಗಂಧ ದ್ರವ್ಯಗಳಿಂದಲೂ ಧೂಮಸ್ತಂಭಗಳಂತೆ ಅಡವಿಯಿಂದ ಬರುವ ಈ ಮೆರವಣೆಗೆ ಯಾರದು?


ಮೋಡವಿಲ್ಲದ ಮುಂಜಾನೆ ಸೂರ್ಯೋದಯದ ಸಮಯದಲ್ಲಿಯ ಉದಯದ ಬೆಳಕಿನಂತಿರುವನು. ಭೂಮಿಯಿಂದ ಹುಲ್ಲು ಮೊಳೆಯಿಸುವ ಮಳೆಯ ನಂತರದ ಪ್ರಕಾಶದಂತಿರುವನು.’


“ಯೇಸುವೆಂಬ ನಾನು ನಮ್ಮ ಸಭೆಗಳಲ್ಲಿ ಈ ಸಂಗತಿಗಳ ವಿಷಯವಾಗಿ ನಿಮಗೆ ಸಾಕ್ಷಿ ನೀಡುವಂತೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶದ ಕುಡಿ, ಅವನ ಸಂತತಿಯೂ ಉದಯದ ಪ್ರಕಾಶಮಾನ ತಾರೆಯೂ ಆಗಿದ್ದೇನೆ!” ಎಂದರು.


ಪಟ್ಟಣವನ್ನು ಬೆಳಗಿಸಲು ಸೂರ್ಯನಾಗಲಿ, ಚಂದ್ರನಾಗಲಿ ಅವಶ್ಯವಿಲ್ಲ. ಏಕೆಂದರೆ ದೇವರ ಮಹಿಮೆಯೇ ಅದಕ್ಕೆ ಬೆಳಕಾಗಿತ್ತು. ಕುರಿಮರಿಯಾದಾತನೇ ಅದರ ದೀಪವು.


ಇವೆಲ್ಲವುಗಳಲ್ಲಿಯೂ ನಾವು ನಮ್ಮನ್ನು ಪ್ರೀತಿಸಿದಾತನ ಮೂಲಕ ಜಯ ಹೊಂದಿದವರಿಗಿಂತಲೂ ಹೆಚ್ಚಿನವರಾಗಿದ್ದೇವೆ.


ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವುದಕ್ಕೆ ಕಿವಿಯುಳ್ಳವರು ಕೇಳಲಿ.


ಆದರೆ ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೆ, ನೀತಿ ಸೂರ್ಯನು ತಮ್ಮ ಕಿರಣಗಳಿಂದ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು. ನೀವು ಹೊರಟು ಕೊಟ್ಟಿಗೆಯಿಂದ ಹೊರಬಂದ ಕರುಗಳ ಹಾಗೆ ಕುಣಿದಾಡುವಿರಿ.


ಆದ್ದರಿಂದ ನಾನು ನಿಮ್ಮ ಜನರನ್ನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು, ನನ್ನ ಬಾಯಿಮಾತುಗಳಿಂದ ಅವರನ್ನು ಸಂಹರಿಸಿದ್ದೇನೆ. ನನ್ನ ನ್ಯಾಯತೀರ್ಪುಗಳು ಸೂರ್ಯನ ಹಾಗೆ ಹೊರಟವು.


ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರವನ್ನು ತೊಟ್ಟುಕೊಂಡವನಾಗಿ, ತನ್ನ ಮಹಾ ಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? “ನೀತಿಯನ್ನು ಘೋಷಿಸುವವನೂ, ರಕ್ಷಿಸಲು ಬಲಿಷ್ಠನೂ ನಾನೇ.”


ತನ್ನ ಪ್ರಿಯನನ್ನು ಒರಗಿಕೊಂಡು ಅಡವಿಯಿಂದ ಬರುವ ಇವಳು ಯಾರು? ಸೇಬುಗಿಡದ ಕೆಳಗೆ ನಿನ್ನನ್ನು ಪ್ರೇರಿಸಿದೆನು. ಅದು ನಿನ್ನ ತಾಯಿ ನಿನ್ನನ್ನು ಗರ್ಭಧರಿಸಿದ ಸ್ಥಳ. ಅಲ್ಲಿ ನಿನ್ನ ತಾಯಿ ಪ್ರಸವವೇದನೆಯಿಂದ ನಿನ್ನನ್ನು ಹಡೆದಳು.


ನೀತಿವಂತರ ಮಾರ್ಗವು ಮುಂಜಾನೆಯ ಸೂರ್ಯನ ಬೆಳಕಿನಂತೆ ಇದ್ದು, ದಿನದ ಪೂರ್ಣ ಬೆಳಕಿನವರೆಗೂ ಪ್ರಕಾಶಿಸಿ ಹೊಳೆಯುತ್ತಾ ಇರುವುದು.


ದೇವರು ನೀತಿವಂತರ ಸಹವಾಸದಲ್ಲಿ ಇರುವುದರಿಂದ, ದುಷ್ಟತ್ವವನ್ನು ನಡೆಸುವವರು ಅತ್ಯಂತ ಭಯಭ್ರಾಂತರಾಗುವರು.


ನಿನ್ನ ಜೀವಮಾನವು ಮಧ್ಯಾಹ್ನಕ್ಕಿಂತ ಪ್ರಜ್ವಲಿಸುವುದು; ನಿನ್ನ ಕತ್ತಲೆಯು ಬೆಳಗಿನಂತೆ ಇರುವುದು.


ಅವರು ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದಿದ್ದರು. ಅವರ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಅವರ ಮುಖವು ಸೂರ್ಯನ ತೇಜಸ್ಸಿನಂತೆ ಪ್ರಕಾಶಿಸುವಂತಿತ್ತು.


ನನ್ನ ಪ್ರಿಯಳೇ, ನೀನು ಎಷ್ಟು ಸೌಂದರ್ಯವಂತೆ! ಆಹಾ, ನೀನು ಸೌಂದರ್ಯವಂತಳೇ! ನಿನ್ನ ಕಣ್ಣುಗಳು ಪಾರಿವಾಳಗಳಂತಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು