ಪರಮಗೀತೆ 6:13 - ಕನ್ನಡ ಸಮಕಾಲಿಕ ಅನುವಾದ13 ತಿರುಗಿ ಬಾ, ತಿರುಗಿ ಬಾ, ಶೂಲಮ್ ಊರಿನವಳೇ, ನಾವು ನಿನ್ನನ್ನು ನೋಡುವಂತೆ ತಿರುಗಿ ಬಾ, ತಿರುಗಿ ಬಾ! ಎರಡು ಗುಂಪಿನ ನರ್ತಕಿಯರ ನಡುವೆ ಕುಣಿಯುತ್ತಿರುವ, ಶೂಲಮ್ ಊರಿನವಳನ್ನು ನೀವು ನೋಡುವುದೇಕೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಶೂಲಮ್ ಊರಿನವಳೇ, ತಿರುಗು, ಹಿಂತಿರುಗು, ನಾನು ನಿನ್ನನ್ನು ನೋಡಬೇಕು; ತಿರುಗು, ಇತ್ತ ತಿರುಗು. ಎರಡು ಸಾಲಿನಲ್ಲಿ ನರ್ತಿಸುವ ನರ್ತಕಿಯರ ನಡುವೆ ನರ್ತಿಸುವವಳನ್ನು ನೋಡುವಂತೆ ಶೂಲಮ್ ಊರಿನವಳಾದ ನನ್ನನ್ನು ನೀನು ನೋಡುವುದೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಶೂಲಮ್ ಊರಿನ ನಾರಿಯೇ ತಿರುಗು ಇತ್ತ, ತಿರುಗು ಅತ್ತ ನಾವು ನಿನ್ನನ್ನು ನೋಡುವಂತೆ ತಿರುಗು ಇತ್ತ, ತಿರುಗು ಅತ್ತ ! ನಲ್ಲೆ : ಎರಡು ಸಾಲಿನ ನರ್ತಕಿಯರ ನಡುವೆ ಕುಣಿಯುವವಳನ್ನು ನೋಡುವಂತೆ ಶೂಲಮ್ ಊರಿನವಳಾದ ನನ್ನನು ನೀನು ನೋಡುವುದೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಶೂಲಮ್ ಊರಿನವಳೇ, ತಿರುಗು, ತಿರುಗು; ನಾನು ನಿನ್ನನ್ನು ನೋಡಬೇಕು; ತಿರುಗು, ಇತ್ತ ತಿರುಗು; ಎದುರುಬದುರಿನ ನಾಟ್ಯವನ್ನು ನೋಡುವಷ್ಟು ಆಶೆಯಿಂದ ಶೂಲಮ್ ಊರಿನವಳಾದ ನನ್ನನ್ನು ಏಕೆ ನೋಡಬೇಕು! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಶೂಲಾಮಿತಳೇ, ಹಿಂತಿರುಗಿ ಬಾ, ಹಿಂತಿರುಗಿ ಬಾ! ಹಿಂತಿರುಗಿ ಬಾ, ಹಿಂತಿರುಗಿ ಬಾ, ನಾವು ನಿನ್ನನ್ನು ನೋಡಬೇಕು! ಮಹನಯಿಮ್ ನೃತ್ಯವನ್ನು ನೋಡುವಂತೆ ಶೂಲಾಮಿತಳನ್ನೇಕೆ ನೀವು ದೃಷ್ಟಿಸಿ ನೋಡುತ್ತಿರುವಿರಿ? ಅಧ್ಯಾಯವನ್ನು ನೋಡಿ |