Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 1:9 - ಕನ್ನಡ ಸಮಕಾಲಿಕ ಅನುವಾದ

9 ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಆಗುವ ಬಾಧೆಯಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸುವಿನ ವಿಷಯವಾದ ಸಾಕ್ಷಿಗೋಸ್ಕರವೂ ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಹಿಂಸೆಯಲ್ಲಿ, ರಾಜ್ಯದಲ್ಲಿ, ತಾಳ್ಮೆಯಲ್ಲಿ, ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರ ಯೇಸುವಿನ ವಿಷಯವಾಗಿ ಸಾಕ್ಷಿ ನೀಡಲು ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾನು ಯೊವಾನ್ನ, ನಿಮ್ಮ ಸಹೋದರ; ಕ್ರಿಸ್ತೇಸುವಿನಲ್ಲಿ ದೇವರ ಸಾಮ್ರಾಜ್ಯಕ್ಕೆ ಸೇರಿರುವವರಿಗೆ ಬಂದೊದಗುವ ಕಷ್ಟಸಂಕಟಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವುದರಲ್ಲಿ ನಿಮ್ಮ ಪಾಲುಗಾರ. ದೇವರ ವಾಕ್ಯವನ್ನು ಸಾರಿದುದರಿಂದಲೂ ಕ್ರಿಸ್ತೇಸುವಿಗೆ ಸಾಕ್ಷಿ ನೀಡಿದುದರಿಂದಲೂ ನಾನು ಪತ್ಮೋಸ್ ದ್ವೀಪವಾಸವನ್ನು ಅನುಭವಿಸಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿಮ್ಮ ಸಹೋದರನೂ ಯೇಸುವಿನ ನಿವಿುತ್ತ ಹಿಂಸೆಯಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸುವಿನ ವಿಷಯವಾದ ಸಾಕ್ಷಿಗೋಸ್ಕರವೂ ಪತ್ಮೊಸ್ ದ್ವೀಪದಲ್ಲಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೋಹಾನನೆಂಬ ನಾನು ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿದ್ದೇನೆ. ನಾವೆಲ್ಲರೂ ಒಟ್ಟಾಗಿ ಯೇಸುವಿನ ನಿಮಿತ್ತ ಸಂಕಟಗಳಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ಪಾಲುಗಾರರಾಗಿದ್ದೇವೆ. ನಾನು ದೇವರ ಸಂದೇಶಕ್ಕೂ ಯೇಸುವಿನ ಸತ್ಯಕ್ಕೂ ನಂಬಿಗಸ್ತನಾಗಿದ್ದುದರಿಂದ ಪತ್ಮೊಸ್ ದ್ವೀಪದಲ್ಲಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಮಿಯಾ ಜುವಾಂವ್ ತುಮ್ಚೊಚ್ ಭಾವ್, ಕ್ರಿಸ್ತಾಚ್ಯಾ ರಾಜ್ವಾಡ್ಯಾಸಾಟಿ ಘಟ್ ಮನಾನಿ ತರಾಸ್ ಸೊಸ್ತಲ್ಯಾ ಜೆಜುಜ್ಯಾ ವಾಟೆನ್ ಚಲ್ತಲ್ಯಾನಿತ್ಲೊ ಎಕ್ಲೊ ತುಮ್ಚೊ ವಾಂಗ್ಡಿ. ದೆವಾಚ್ಯಾ ಗೊಸ್ಟಿಯಾ ಅನಿ ಜೆಜುನ್ ಮಾಕಾ ದಾಕ್ವುನ್ ದಿಲ್ಲೆ ಖರೆ ಮಿಯಾ ಲೊಕಾಕ್ನಿ ಪ್ರಚಾರ್ ಕರುಕ್ ಲಾಗಲ್ಲೊ, ತೆಚೆಸಾಟ್ನಿ ಮಾಕಾ ಸಮುಂದರಾಚ್ಯಾ ಮದ್ದಿ ಅಸಲ್ಲ್ಯಾ ಪಾತ್ಮೊಸ್ ಮನ್ತಲ್ಯಾ ಜಾಗ್ಯಾರ್ ಥವಲ್ಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 1:9
35 ತಿಳಿವುಗಳ ಹೋಲಿಕೆ  

ನೀನು ನನ್ನ ವಾಕ್ಯವನ್ನು ಸಹನೆಯಿಂದ ಕಾಪಾಡಿಕೊಂಡಿದ್ದರಿಂದ, ಭೂನಿವಾಸಿಗಳನ್ನು ಪರೀಕ್ಷಿಸಲು ಇಡೀ ಲೋಕದಲ್ಲೆಲ್ಲಾ ಬರಲಿರುವ ಶೋಧನೆಯ ಸಮಯದಲ್ಲಿ ನಾನು ಸಹ ನಿನ್ನನ್ನು ಸುರಕ್ಷಿತವಾಗಿಡುವೆನು.


ಅಲ್ಲಿದ್ದ ಶಿಷ್ಯರು ವಿಶ್ವಾಸದಲ್ಲಿ ಮುಂದುವರಿಯಲು, “ನಾವು ಅನೇಕ ಸಂಕಟಗಳಿಂದ ದೇವರ ರಾಜ್ಯದೊಳಗೆ ಸೇರಬೇಕು,” ಎಂದು ಹೇಳಿ ದೃಢಪಡಿಸಿದರು.


“ನನ್ನಲ್ಲಿ ನಿಮಗೆ ಸಮಾಧಾನ ಇರುವಂತೆ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟವಿರುವದು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ,” ಎಂದರು.


ಯೋಹಾನನು ತಾನು ಕಂಡ ಎಲ್ಲಾ ಸಂಗತಿಗಳನ್ನು ಅಂದರೆ ದೇವರ ವಾಕ್ಯದ ವಿಷಯವಾಗಿಯೂ ಕ್ರಿಸ್ತ ಯೇಸುವಿನ ವಿಷಯವಾಗಿಯೂ ತಿಳಿಸಿ ಸಾಕ್ಷಿಕೊಟ್ಟನು.


“ಸೆರೆಹಿಡಿಯುವವನು ತಾನೇ ಸೆರೆಯಾಗಿ ಹೋಗುವನು. ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗುವನು.” ಇದರಲ್ಲಿ ದೇವಜನರ ಸೈರಣೆಯೂ ನಂಬಿಕೆಯೂ ಇವೆ.


ಹೀಗಿದ್ದರೂ, ನನ್ನ ತೊಂದರೆಗಳಲ್ಲಿ ನೀವು ಭಾಗವಹಿಸಿದ್ದು ಒಳ್ಳೆಯದಾಯಿತು.


ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಕುರಿಮರಿಯಾಗಿರುವವರ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.


ಅದಕ್ಕೆ ನಾನು, “ನನ್ನ ಒಡೆಯನೆ ನೀನೇ ಬಲ್ಲೆ!” ಎಂದು ಉತ್ತರಿಸಿದೆನು. ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು. ಇವರು ತಮ್ಮ ನಿಲುವಂಗಿಗಳನ್ನು ಕುರಿಮರಿ ಆಗಿರುವವರ ರಕ್ತದಲ್ಲಿ ಅವುಗಳನ್ನು ಬೆಳ್ಳಗೆ ಮಾಡಿಕೊಂಡಿದ್ದಾರೆ!”


ಹೀಗಿರುವುದರಿಂದ ನಮ್ಮ ಕರ್ತ ಯೇಸುವಿನ ಸಾಕ್ಷಿಯ ವಿಷಯವಾಗಿಯೂ ಅವರ ಸೆರೆಯವನಾದ ನನ್ನ ವಿಷಯವಾಗಿಯೂ ನೀನು ನಾಚಿಕೆಪಡಬೇಡ. ಅದರ ಬದಲಾಗಿ, ದೇವರ ಶಕ್ತಿಗೆ ಅನುಸಾರವಾಗಿ, ಸುವಾರ್ತೆಗೋಸ್ಕರ ನನ್ನೊಂದಿಗೆ ಶ್ರಮೆಯನ್ನು ಅನುಭವಿಸು.


ಆದರೆ ನಾವು ಇನ್ನು ಕಾಣದಿರುವಂಥದ್ದಕ್ಕಾಗಿ ನಿರೀಕ್ಷಿಸುವುದಾದರೆ ಅದಕ್ಕಾಗಿ ತಾಳ್ಮೆಯಿಂದ ಕಾದುಕೊಂಡಿರುತ್ತೇವೆ.


ಇದಕ್ಕಾಗಿಯೇ ದೇವರ ಆಜ್ಞೆಗಳನ್ನೂ ಯೇಸುವಿನಲ್ಲಿ ನಂಬಿಕೆಯನ್ನೂ ಕಾಪಾಡುವ ದೇವಜನರ ತಾಳ್ಮೆಯ ಸಹಿಷ್ಣುತೆ ಇದರಲ್ಲಿದೆ.


ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ಅವರು ಮಾಡಿದ ವಾಗ್ದಾನವನ್ನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ:


ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸುವುದು ನನಗೆ ಸೂಕ್ತವಾಗಿದೆ. ಏಕೆಂದರೆ ನಾನು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ. ನಾನು ಬೇಡಿಗಳಿಂದ ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಸಮರ್ಥಿಸಿ ದೃಢಪಡಿಸುವಾಗಲೂ ನೀವೆಲ್ಲರು ನನ್ನೊಂದಿಗಿರುವ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.


ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ, ಪಾತಾಳದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ, ಇವರನ್ನು ಜಯಿಸಿ ಕೊಲ್ಲುವುದು.


ನಾವು ಈಗ ಮಕ್ಕಳಾಗಿರುವುದಾದರೆ, ಬಾಧ್ಯರಾಗಿರುತ್ತೇವೆ; ದೇವರಿಗೆ ಬಾಧ್ಯರು ಮತ್ತು ಕ್ರಿಸ್ತ ಯೇಸುವಿನೊಂದಿಗೆ ಸಹಬಾಧ್ಯರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನ ಶ್ರಮೆಗಳಲ್ಲಿ ನಿಜವಾಗಿಯೂ ಪಾಲುಗಾರರಾಗಿದ್ದರೆ, ಅವರ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.


ಆಗ ನಾನು ಅವನನ್ನು ಆರಾಧಿಸಬೇಕೆಂದು ಅವನ ಪಾದಗಳಿಗೆ ಬೀಳಲು ಅವನು, “ಹಾಗೆ ಮಾಡಬೇಡ, ನಾನು ನಿನಗೂ ಯೇಸುವಿನ ಸಾಕ್ಷಿಯುಳ್ಳ ನಿನ್ನ ಸಹೋದರರಿಗೂ ಜೊತೆಯ ದಾಸನಾಗಿದ್ದೇನೆ. ದೇವರನ್ನೇ ಆರಾಧಿಸು. ಏಕೆಂದರೆ ಯೇಸುವಿನ ಸಾಕ್ಷಿಯೇ ಪ್ರವಾದನೆಯ ಆತ್ಮವಾಗಿದೆ!” ಎಂದನು.


ಆಗ ಘಟಸರ್ಪನು ಸ್ತ್ರೀಯ ಮೇಲೆ ಬಹುಕೋಪಗೊಂಡು, ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಎಂದರೆ, ದೇವರ ಆಜ್ಞೆಗಳನ್ನು ಕೈಗೊಂಡು ನಡೆದು, ಯೇಸುವಿನ ಸಾಕ್ಷಿಯನ್ನು ಹೊಂದಿದವರ ಮೇಲೆ ಯುದ್ಧಮಾಡುವುದಕ್ಕೆ ಹೊರಟನು.


ಕುರಿಮರಿ ಆಗಿರುವವರು ಐದನೆಯ ಮುದ್ರೆಯನ್ನು ಒಡೆದಾಗ, ದೇವರ ವಾಕ್ಯದ ನಿಮಿತ್ತವಾಗಿಯೂ ತಮಗಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತರಾದವರ ಆತ್ಮಗಳು ಬಲಿಪೀಠದ ಕೆಳಗಿರುವುದನ್ನು ಕಂಡೆನು.


ಯೋಹಾನನು, ಅಂದಿನ ಏಷ್ಯಾ ಪ್ರಾಂತದಲ್ಲಿರುವ ಏಳು ಸಭೆಗಳಿಗೆ ಬರೆಯುವುದೇನೆಂದರೆ, ಗತಕಾಲ, ವರ್ತಮಾನ, ಭವಿಷ್ಯತ್ ಕಾಲಗಳಲ್ಲಿರುವ ದೇವರಿಂದ ಮತ್ತು ತಮ್ಮ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ,


ಕರ್ತ ಯೇಸು ದೇವರ ಪ್ರೀತಿಯಲ್ಲಿಯೂ ತಮ್ಮ ತಾಳ್ಮೆಯಲ್ಲಿಯೂ ನಿಮ್ಮ ಹೃದಯಗಳನ್ನು ನಡೆಸಲಿ.


ಅದಕ್ಕೆ ಯೇಸು, “ನನ್ನ ಪಾತ್ರೆಯಿಂದ ನೀವು ಕುಡಿಯುವಿರಿ, ಆದರೆ ನನ್ನ ಬಲಗಡೆಯಲ್ಲಾಗಲಿ ಎಡಗಡೆಯಲ್ಲಾಗಲಿ ಕುಳಿತುಕೊಳ್ಳುವಂತೆ ಅನುಗ್ರಹಿಸುವುದು ನನ್ನದಲ್ಲ, ನನ್ನ ತಂದೆಯಿಂದ ಅದು ಯಾರಿಗೋಸ್ಕರ ಸಿದ್ಧವಾಗಿದೆಯೋ ಅವರಿಗೇ ಕೊಡಲಾಗುವುದು,” ಎಂದು ಹೇಳಿದರು.


ಅದಕ್ಕೆ ಅವರು, “ಹೌದು, ನಮ್ಮಿಂದಾಗುವುದು,” ಎಂದು ಹೇಳಿದರು. ಆಗ ಯೇಸು ಅವರಿಗೆ, “ನಾನು ಕುಡಿಯುವ ಪಾತ್ರೆಯಿಂದ ನೀವು ಕುಡಿಯುವಿರಿ. ನಾನು ಹೊಂದುವ ದೀಕ್ಷಾಸ್ನಾನವನ್ನು ನೀವೂ ಹೊಂದುವಿರಿ.


ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಸೇರಿದ್ದರು. ಅವರ ನಡುವೆ ಪೇತ್ರನು ಎದ್ದು ನಿಂತು, ಹೀಗೆಂದನು:


ನಿಮಗಾಗಿರುವ ನಮ್ಮ ನಿರೀಕ್ಷೆಯು ಸ್ಥಿರವಾಗಿದೆ. ಏಕೆಂದರೆ, ನಮ್ಮ ಕಷ್ಟಸಂಕಟಗಳಲ್ಲಿ ನೀವು ಪಾಲುಗಾರರಾಗಿದ್ದಂತೆಯೇ, ನಮ್ಮ ಸಂತೈಸುವಿಕೆಗಳಲ್ಲಿಯೂ ನೀವು ನಮ್ಮೊಂದಿಗೆ ಪಾಲುಗಾರರಾಗಿದ್ದೀರಿ ಎಂದು ನಮಗೆ ಗೊತ್ತಿದೆ.


ಜೊತೆ ಹಿರಿಯನೂ ಕ್ರಿಸ್ತ ಯೇಸುವಿನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಮಹಿಮೆಯಲ್ಲಿ ಪಾಲುಗಾರನೂ ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಬೇಡಿಕೊಳ್ಳುವುದು.


ಇದು ಕ್ರಿಸ್ತ ಯೇಸುವಿನ ಪ್ರಕಟನೆ. ಶೀಘ್ರವೇ ಸಂಭವಿಸಲಿಕ್ಕಿರುವ ಸಂಗತಿಗಳನ್ನು ತಮ್ಮ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟನೆಯನ್ನು ಹೊಂದಿದರು. ಇದಲ್ಲದೆ ದೇವರು ತಮ್ಮ ದೇವದೂತನನ್ನು ಕಳುಹಿಸಿ, ಅವನ ಮುಖಾಂತರ ಆ ಸಂಗತಿಗಳನ್ನು ತಮ್ಮ ದಾಸನಾದ ಯೋಹಾನನಿಗೆ ತಿಳಿಸಿದರು.


ನಮ್ಮನ್ನು ಒಂದು ರಾಜ್ಯವನ್ನಾಗಿಯೂ ತಮ್ಮ ತಂದೆಯಾದ ದೇವರಿಗೆ ಸೇವೆ ಸಲ್ಲಿಸುವ ಯಾಜಕರನ್ನಾಗಿಯೂ ಮಾಡಿರುವ ಕ್ರಿಸ್ತ ಯೇಸುವಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು, ಬಲವು ಇರಲಿ ಆಮೆನ್.


ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲಾಯಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನ ಗೊಂಡವರ ಆತ್ಮಗಳನ್ನೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸದೆ ತಮ್ಮ ಹಣೆಯ ಮೇಲೆ ಇಲ್ಲವೆ ಕೈಯ ಮೇಲೆ ಅದರ ಗುರುತುಹಾಕಿಸಿಕೊಳ್ಳದವರನ್ನೂ ನೋಡಿದೆನು. ಅವರು ಪುನಃ ಜೀವಿತರಾಗಿ ಎದ್ದು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷ ಆಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು