ಯೆಹೋವ ದೇವರು ನನಗೆ ಹೀಗೆ ಹೇಳಿದ್ದಾನೆ: ಸಿಂಹವು, ಪ್ರಾಯದ ಸಿಂಹವು ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ, ಕಾವಲುಗಾರನ ಕೂಗನ್ನು ಕೇಳಿ, ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ, ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ ಅವರ ಗದ್ದಲಕ್ಕೆ ಕುಂದಿಹೋಗದೆ ಇರುವುದೋ, ಹಾಗೆಯೇ ಸೇನಾಧೀಶ್ವರ ಯೆಹೋವ ದೇವರು ಚೀಯೋನ್ ಪರ್ವತಕ್ಕೋಸ್ಕರವೂ, ಅದರ ಗುಡ್ಡಕ್ಕೋಸ್ಕರವೂ ಯುದ್ಧಮಾಡಲು ಇಳಿದು ಬರುವರು.
ಆಮೋಸನು ಹೇಳಿದ್ದೇನೆಂದರೆ: “ಯೆಹೋವ ದೇವರು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ತಮ್ಮ ಧ್ವನಿ ಗೈಯುವರು. ಕುರುಬರ ಹುಲ್ಲುಗಾವಲುಗಳು ಬಾಡಿ ಹೋಗುತ್ತಿವೆ, ಕರ್ಮೆಲಿನ ತುದಿಯ ಗಿಡಗಳು ಒಣಗಿ ಹೋಗುತ್ತವೆ.”
ಯೆಹೋವ ದೇವರು ಚೀಯೋನಿನೊಳಗಿಂದ ಗರ್ಜಿಸಿ, ಯೆರೂಸಲೇಮಿನೊಳಗಿಂದ ಗುಡುಗುವರು. ಆಕಾಶಗಳೂ ಭೂಮಿಯೂ ನಡುಗುವುವು. ಆದರೆ ಯೆಹೋವ ದೇವರು ತಮ್ಮ ಜನರಿಗೆ ಆಶ್ರಯವೂ, ಇಸ್ರಾಯೇಲರಿಗೆ ರಕ್ಷಣೆಯ ದುರ್ಗವೂ ಆಗಿರುವರು.
ಇದಲ್ಲದೆ ಪರಲೋಕದಿಂದ ಜಲ ಪ್ರವಾಹದಂತೆಯೂ ಮಹಾ ಗುಡುಗಿನ ಶಬ್ದದಂತೆಯೂ ಇದ್ದ ಶಬ್ದವನ್ನು ಕೇಳಿದೆನು. ನಾನು ಕೇಳಿದ ಆ ಶಬ್ದವು ಕಿನ್ನರಿಗಳನ್ನು ನುಡಿಸುತ್ತಿರುವ ಕಿನ್ನರರ ಶಬ್ದದಂತಿತ್ತು.
“ಆದ್ದರಿಂದ ನೀನು ಅವರಿಗೆ ವಿರೋಧವಾಗಿ ಈ ವಾಕ್ಯಗಳನ್ನೆಲ್ಲಾ ಪ್ರವಾದಿಸಿ, ಅವರಿಗೆ ಹೇಳತಕ್ಕದ್ದೇನೆಂದರೆ, “ ‘ಯೆಹೋವ ದೇವರು ಉನ್ನತದಿಂದ ಗರ್ಜಿಸಿ, ತಮ್ಮ ಪರಿಶುದ್ಧ ನಿವಾಸದೊಳಗಿಂದ ತಮ್ಮ ಶಬ್ದವನ್ನು ಕೊಡುವರು. ತಮ್ಮ ನಿವಾಸದ ಮೇಲೆ ಗಟ್ಟಿಯಾಗಿ ಗರ್ಜಿಸಿ, ದ್ರಾಕ್ಷಿ ತುಳಿಯುವವರ ಹಾಗೆ ಆರ್ಭಟವನ್ನು ಭೂನಿವಾಸಿಗಳೆಲ್ಲರಿಗೆ ವಿರೋಧವಾಗಿ ಎತ್ತುವರು.