Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 10:4 - ಕನ್ನಡ ಸಮಕಾಲಿಕ ಅನುವಾದ

4 ಏಳು ಗುಡುಗುಗಳು ಮಾತನಾಡಿದಾಗ, ನಾನು ಬರೆಯಬೇಕೆಂದಿದ್ದೆನು. ಆದರೆ ಪರಲೋಕದಿಂದ ಬಂದ ಶಬ್ದವು, “ನೀನು ಆ ಏಳು ಗುಡುಗುಗಳು ಹೇಳಿರುವುದನ್ನು ಮುದ್ರೆಹಾಕಿ ಮುಚ್ಚಿಡು. ಅದನ್ನು ಬರೆಯಬೇಡ,” ಎಂದು ಹೇಳುವುದನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ, “ಆ ಏಳು ಗುಡುಗುಗಳು ನುಡಿದಿದ್ದನ್ನು ನೀನು ಬರೆಯದೆ ಗುಪ್ತವಾಗಿಡು” ಎಂದು ಹೇಳುವ ದೈವವಾಣಿಯನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಏಳು ಗುಡುಗುಗಳು ನುಡಿದುದನ್ನು ಕೂಡಲೇ ನಾನು ಬರೆಯಬೇಕೆಂದಿದ್ದೆ. ಆಗ ಸ್ವರ್ಗದಿಂದ ಬಂದ ಒಂದು ಧ್ವನಿ, “ಆ ಏಳು ಗುಡುಗುಗಳು ನುಡಿದುದನ್ನು ರಹಸ್ಯವಾಗಿ ಇಡು. ಅವುಗಳನ್ನು ಬರೆಯಬೇಡ,” ಎಂದು ನನಗೆ ಆಜ್ಞಾಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಕೂಗಿದಾಗ ಏಳು ಗುಡುಗುಗಳು ಒಂದೊಂದಾಗಿ ಧ್ವನಿಕೊಟ್ಟವು. ಆ ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ - ಆ ಏಳು ಗುಡುಗುಗಳು ನುಡಿದದ್ದನ್ನು ನೀನು ಬರೆಯದೆ ಗುಪ್ತವಾಗಿಡು ಎಂದು ಹೇಳುವ ಆಕಾಶವಾಣಿಯನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅದನ್ನು ನಾನು ಬರೆಯಬೇಕೆಂದಿದ್ದಾಗ ಪರಲೋಕದಿಂದ ಬಂದ ಒಂದು ಧ್ವನಿಯು ನನಗೆ, “ಏಳು ಗುಡುಗುಗಳು ಹೇಳಿದ್ದನ್ನು ನೀನು ಬರೆಯಬೇಡ. ಅವುಗಳನ್ನು ರಹಸ್ಯವಾಗಿಟ್ಟಿರು” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೆನಿ ಬೊಲಲ್ಲ್ಯಾ ತನ್ನಾ ತಾಬೊಡ್ತೊಬ್ ಮಿಯಾ ಲಿವ್ನಾರ್ ಹೊತ್ತೊ. ಖರೆ ಸರ್‍ಗಾ ವೈನಾ ಬೊಲ್ತಲೊ ಎಕ್ ಧನ್ ಮಾಕಾ ಆಯ್ಕೊ ಯೆಲೊ,“ಸಾತ್ ಗುಡ್ಗುಡ್ಯಾನಿ ಸಾಂಗಲ್ಲೆ ಘುಟಾನ್ ಥವ್; ತೆ ಲಿವ್ನ್ ಘೆವ್‍ನಕೊ!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 10:4
13 ತಿಳಿವುಗಳ ಹೋಲಿಕೆ  

ಆದರೆ ದಾನಿಯೇಲನೇ ನೀನು, ಅಂತ್ಯಕಾಲದವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆದಿರುವ ಆ ಗ್ರಂಥಕ್ಕೆ ಮುದ್ರೆ ಹಾಕು. ಅನೇಕರು ಅತ್ತಿತ್ತ ಓಡಾಡುವರು, ಜ್ಞಾನವು ಹೆಚ್ಚಾಗುವುದು,” ಎಂದು ಹೇಳಿದನು.


“ನಿಮಗೆ ನೀಡಲಾದ ಸಂಜೆ ಮತ್ತು ಮುಂಜಾನೆಗಳ ದರ್ಶನವು ಸತ್ಯವಾದದ್ದು. ಆದರೆ ಆ ದರ್ಶನವು ಗುಟ್ಟಾಗಿರಲಿ. ಏಕೆಂದರೆ ಅದು ಬಹು ದೂರದ ಭವಿಷ್ಯಕ್ಕೆ ಸಂಬಂಧಿಸಿದ್ದು.”


ಆಗ ಅವನು, “ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು, ಏಕೆಂದರೆ ಈ ಮಾತುಗಳು ಅಂತ್ಯಕಾಲದವರೆಗೂ ಮುಚ್ಚಿ, ಮುದ್ರಿತವಾಗಿವೆ.


ಇದಲ್ಲದೆ ಅವನು, “ನನಗೆ ಈ ಪುಸ್ತಕದಲ್ಲಿರುವ ಪ್ರವಾದನಾ ವಾಕ್ಯಗಳಿಗೆ ಮುದ್ರೆ ಹಾಕಬೇಡ. ಏಕೆಂದರೆ ಸಮಯವು ಸಮೀಪವಾಗಿದೆ.


ರಹಸ್ಯಗಳು ನಮ್ಮ ದೇವರಾದ ಯೆಹೋವ ದೇವರಿಗೆ ಸೇರಿದ್ದು, ಆದರೆ ಪ್ರಕಟವಾದ ಈ ನಿಯಮದ ಮಾತುಗಳನ್ನೆಲ್ಲಾ ನಾವು ಕೈಕೊಳ್ಳುವ ಹಾಗೆ ನಮಗೂ, ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.


ಅದು, “ಕಾಣುತ್ತಿರುವುದನ್ನು ಸುರುಳಿಯಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯದಲ್ಲಿರುವ ಏಳು ಸಭೆಗಳಿಗೆ ಕಳುಹಿಸಬೇಕು,” ಎಂದು ನುಡಿಯಿತು.


ದರ್ಶನವೆಲ್ಲಾ ನಿಮಗೆ ಮುದ್ರೆ ಹಾಕಿದ ಗ್ರಂಥದ ವಾಕ್ಯಗಳ ಹಾಗಾಯಿತು. ಅದನ್ನು ಅಕ್ಷರ ಬಲ್ಲವನಿಗೆ ಕೊಟ್ಟು, “ಇದನ್ನು ಓದು,” ಎಂದು ವಿನಂತಿಸಿದರೆ ಅವನು, “ಮುದ್ರೆ ಹಾಕಿದೆಯೆಲ್ಲಾ, ಆಗುವುದಿಲ್ಲ,” ಅನ್ನುವನು.


ಸಾಕ್ಷಿಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ದೇವರ ಶಿಕ್ಷಣವನ್ನು ಮುದ್ರಿಸು.


ಯೆಹೋವ ದೇವರು, “ಒಂದು ದೊಡ್ಡ ಸುರುಳಿಯನ್ನು ತೆಗೆದುಕೊಂಡು ಸಾಮಾನ್ಯ ಲೇಖನಿಯಿಂದಲೇ ಮಹೇರ್ ಶಾಲಾಲ್ ಹಾಷ್ ಬಜ್, ಎಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ ಎಂದು ಬರೆ,” ಎಂಬುದಾಗಿ ನನಗೆ ಹೇಳಿದರು.


“ಆದ್ದರಿಂದ ನೀನು ಕಂಡದ್ದವುಗಳನ್ನೂ ಈಗ ನಡೆಯುತ್ತಿರುವವುಗಳನ್ನೂ ಮುಂದೆ ಸಂಭವಿಸುವವುಗಳನ್ನೂ ಬರೆ.


ಆಗ ಪರಲೋಕದಿಂದ ನಾನು ಕೇಳಿದ್ದ ಧ್ವನಿಯು ಮತ್ತೊಮ್ಮೆ ನನ್ನೊಂದಿಗೆ ಮಾತನಾಡಿ, “ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತಿರುವ ದೇವದೂತನ ಕೈಯಲ್ಲಿರುವ ತೆರೆದ ಸುರುಳಿಯನ್ನು ತೆಗೆದುಕೋ,” ಎಂದು ಹೇಳಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು