Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 10:7 - ಕನ್ನಡ ಸಮಕಾಲಿಕ ಅನುವಾದ

7 ಆದರೆ ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಬೇಕೆಂದಿರುವ ದಿನಗಳಲ್ಲಿ ದೇವರು ತನ್ನ ಸೇವಕರಾದ ಪ್ರವಾದಿಗಳಿಗೆ ಪ್ರಕಟಿಸಿದಂತೆಯೇ, ದೇವರ ರಹಸ್ಯವು ನೆರವೇರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಏಳನೆಯ ದೇವದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತ್ತೂರಿಯನ್ನು ಊದುವುದಕ್ಕಿರುವ ಸಮಯದಲ್ಲಿ ದೇವರು ಇದುವರೆಗೆ ಗುಪ್ತವಾಗಿಟ್ಟಿದ್ದ ದೇವರ ಮರ್ಮವನ್ನು ತನ್ನ ದಾಸರಾದ ಪ್ರವಾದಿಗಳಿಗೆ ತಿಳಿಸಿದ್ದ ಪ್ರಕಾರ ನೆರವೇರುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಏಳನೆಯ ದೇವದೂತನು ತುತೂರಿಯನ್ನು ಊದುವನು. ಆಗ ದೇವರು ಇದುವರೆಗೆ ನಿಗೂಢವಾಗಿಟ್ಟಿದ್ದ ತಮ್ಮ ಯೋಜನೆಯನ್ನು ತಮ್ಮ ದಾಸರಾದ ಪ್ರವಾದಿಗಳಿಗೆ ಮುಂತಿಳಿಸಿದ್ದ ಪ್ರಕಾರ ಈಡೇರಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯುಗಯುಗಾಂತರಗಳಲ್ಲಿಯೂ ಜೀವಿಸುವಾತನ ಮೇಲೆ ಆಣೆಯಿಟ್ಟು - ಇನ್ನು ಸಾವಕಾಶವಿರುವದಿಲ್ಲ; ಏಳನೆಯ ದೇವದೂತನು ಶಬ್ದ ಮಾಡುವ ದಿನಗಳಲ್ಲಿ ಅಂದರೆ ಅವನು ತುತೂರಿಯನ್ನು ಊದುವದಕ್ಕಿರುವ ಸಮಯದಲ್ಲಿ ದೇವರು ಇದುವರೆಗೆ ಗುಪ್ತವಾಗಿಟ್ಟಿದ್ದ ಸಂಕಲ್ಪವನ್ನು ತನ್ನ ದಾಸರಾದ ಪ್ರವಾದಿಗಳಿಗೆ ಶುಭವರ್ತಮಾನವಾಗಿ ತಿಳಿಸಿದ್ದ ಪ್ರಕಾರ ನೆರವೇರಿಸುವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಲು ಸಿದ್ಧನಾಗುವ ದಿನಗಳಲ್ಲಿ ದೇವರ ರಹಸ್ಯವಾದ ಯೋಜನೆಯು ನೆರವೇರುವುದು. ದೇವರು ತನ್ನ ಸೇವಕರಾದ ಪ್ರವಾದಿಗಳಿಗೆ ತಿಳಿಸಿದ ಸುವಾರ್ತೆಯೇ ಈ ಯೋಜನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಖರೆ ಸತ್ತ್ವೆಚ್ಯಾ ದೆವಾಚ್ಯಾ ದುತಾನ್ ಅಪ್ನಾಚೊ ಪಂವೊ ವಾಜ್ವುತಾನಾ, ದೆವ್ ಅಪ್ನಾಚ್ಯಾ ಸೆವಕಾಕ್ನಿ ಪ್ರವಾದ್ಯಾಕ್ನಿ ದಾಕ್ವುನ್ ದಿಲ್ಲ್ಯಾ ಸರ್ಕೆ ಅಪ್ನಾಚ್ಯಾ ಘುಟಾಚ್ಯಾ ಯವ್ಜನ್ಯಾ ಪುರಾ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 10:7
9 ತಿಳಿವುಗಳ ಹೋಲಿಕೆ  

ನನ್ನ ಸುವಾರ್ತೆಯು ಹೇಳುವಂತೆಯೇ ನಿಮ್ಮನ್ನು ಬಲಪಡಿಸುವ ದೇವರಿಗೆ ಈಗ ಎಲ್ಲಾ ಮಹಿಮೆಯಾಗಲಿ. ಕ್ರಿಸ್ತ ಯೇಸುವಿನ ಕುರಿತಾಗಿರುವ ಈ ಸಂದೇಶವು ಆದಿಯಿಂದಲೂ ಗುಪ್ತವಾಗಿರುವ ರಹಸ್ಯದ ದೇವರ ಯೋಜನೆಯು ಯೆಹೂದ್ಯರಲ್ಲದವರಾದ ನಿಮಗಾಗಿ ಈಗ ಪ್ರಕಟವಾಗಿದೆ.


ದೇವರು ತಮ್ಮ ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲದ ಹಿಂದೆಯೇ ವಾಗ್ದಾನಮಾಡಿದ ಪ್ರಕಾರ, ಅವರು ಸಮಸ್ತವನ್ನು ಪುನಃಸ್ಥಾಪಿಸಿದರು. ಆ ಕಾಲ ಬರುವವರೆಗೆ ಕ್ರಿಸ್ತ ಯೇಸು ಪರಲೋಕದಲ್ಲಿಯೇ ಇರುವರು.


ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಗಳನ್ನು ತಿಳಿಸದೆ, ಸಾರ್ವಭೌಮ ಯೆಹೋವ ದೇವರು ಏನನ್ನೂ ಮಾಡುವುದಿಲ್ಲ.


ಪ್ರಿಯರೇ, ನೀವು ಈ ಮರ್ಮದ ಬಗ್ಗೆ ಅಜ್ಞಾನಿಗಳಾಗಿರಬೇಕೆಂದು ನಾನು ಬಯಸುವುದಿಲ್ಲ. ಅದೇನೆಂದರೆ, ಯೆಹೂದ್ಯರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವವರೆಗೆ ಮಾತ್ರ ಇಸ್ರಾಯೇಲರು ತಮ್ಮ ಹೃದಯದ ಕಾಠಿಣ್ಯಕ್ಕೆ ತಾತ್ಕಾಲಿಕವಾಗಿ ಒಳಗಾಗಿರುವರು.


ಮತ್ತೊಬ್ಬ ದೇವದೂತನು ಆಕಾಶದ ಮಧ್ಯದಲ್ಲಿ ಹಾರುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ರಾಷ್ಟ್ರ, ಹಿನ್ನಲೆ, ಭಾಷೆ ಹಾಗೂ ಪ್ರಜೆಗಳವರಿಗೂ ಸಾರಿ ಹೇಳುವುದಕ್ಕೆ ನಿತ್ಯ ಸುವಾರ್ತೆಯು ಅವನಲ್ಲಿತ್ತು.


ಏಕೆಂದರೆ, ದೇವರು ತಮ್ಮ ಮನಸ್ಸಿನಲ್ಲಿರುವುದನ್ನು ನಡೆಸುವಂತೆಯೂ ಅವುಗಳ ರಾಜ್ಯವನ್ನು ಮೃಗಕ್ಕೆ ಕೊಡಲು ಒಮ್ಮನಸ್ಸಾಗಿರುವಂತೆಯೂ ಮಾಡಿ, ದೇವರು ತಮ್ಮ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಇದನ್ನು ಅವುಗಳ ಹೃದಯದಲ್ಲಿಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು