Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 11:18 - ಕನ್ನಡ ಸಮಕಾಲಿಕ ಅನುವಾದ

18 ರಾಷ್ಟ್ರಗಳು ಕೋಪಗೊಂಡವು, ನಿಮ್ಮ ರೋಷವು ಈಗ ಬಂದಿದೆ. ಸತ್ತವರು ತೀರ್ಪು ಹೊಂದುವ ಸಮಯ ಬಂದಿದೆ. ನೀವು ನಿಮ್ಮ ಸೇವಕರಾದ ಪ್ರವಾದಿಗಳಿಗೂ ದೇವಜನರಿಗೂ ನಿಮ್ಮ ನಾಮಕ್ಕೆ ಭಯಪಡುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲವನ್ನು ಕೊಟ್ಟು, ಲೋಕ ನಾಶಕರನ್ನು ದಂಡಿಸುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಜನಾಂಗಗಳು ಕೋಪಿಸಿಕೊಂಡವು. ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯವು ಬಂದಿದೆ. ನೀನು ನಿನ್ನ ದಾಸರಾದ ಪ್ರವಾದಿಗಳಿಗೂ, ದೇವಜನರಿಗೂ, ನಿನ್ನ ನಾಮಕ್ಕೆ ಭಯಪಡುವ ಹಿರಿಯರೂ ಕಿರಿಯರೂ ಆಗಿರುವ ನಿನ್ನ ಭಕ್ತರಿಗೆ ಪ್ರತಿಫಲವನ್ನು ಕೊಡುವುದಕ್ಕೂ ಲೋಕನಾಶಕರನ್ನು ವಿನಾಶಗೊಳಿಸುವ ಕಾಲವು ಬಂದಿದೆ” ಎಂದು ಆತನನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಕೆರಳಿದವು ವಿಶ್ವ ರಾಷ್ಟ್ರಗಳು ಎರಗಿತು ನಿನ್ನ ಪ್ರಕೋಪವು ಸಮೀಪಿಸಿತು ಮೃತರ ನ್ಯಾಯತೀರ್ಪಿನ ದಿನವು ಬಂದಿದೆ ಸಮಯ ಸನ್ಮಾನಿಸಲು ನಿನ್ನ ದಾಸರನು, ಪ್ರವಾದಿಗಳನು, ದೇವಪ್ರಜೆಗಳನು ನಿನ್ನಲ್ಲಿ ಭಯಭಕುತಿಯುಳ್ಳ ಹಿರಿಯ ಕಿರಿಯರನು. ಇದಿಗೋ ಬಂದಿದೆ ಗಳಿಗೆಯು ಲೋಕನಾಶಕರನ್ನು ವಿನಾಶಗೊಳಿಸಲು", ಎಂದು ಹಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಜನಾಂಗಗಳು ಕೋಪಿಸಿಕೊಂಡವು, ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯ ಬಂದದೆ; ನೀನು ನಿನ್ನ ದಾಸರಾದ ಪ್ರವಾದಿಗಳಿಗೂ ದೇವಜನರಿಗೂ ನಿನ್ನ ನಾಮಕ್ಕೆ ಭಯಪಡುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲವನ್ನು ಕೊಟ್ಟು ಲೋಕನಾಶಕರನ್ನು ನಾಶಮಾಡುವಿ ಎಂದು ಆತನನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಲೋಕದ ಜನರು ಕೋಪಗೊಂಡಿದ್ದರು. ಆದರೆ ಇದು ನಿನ್ನ ಕೋಪದ ಸಮಯ. ಸತ್ತವರಿಗೆ ತೀರ್ಪು ನೀಡುವ ಸಮಯವಿದು. ನಿನ್ನ ಸೇವಕರಾದ ಪ್ರವಾದಿಗಳಿಗೂ ನಿನ್ನ ಪರಿಶುದ್ಧ ಜನರಿಗೂ ನಿನ್ನನ್ನು ಗೌರವಿಸುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲ ನೀಡುವ ಸಮಯವಿದು. ಲೋಕನಾಶಕರನ್ನು ನಾಶಪಡಿಸುವ ಸಮಯವಿದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಸಗ್ಳ್ಯಾ ಬಾಶಾಂಚಿ ಲೊಕಾ ರಾಗಾನ್ ಪೆಟ್ಲಿ, ತವ್ಡ್ಯಾಕ್ ಮಟ್ಲ್ಯಾರ್ ತುಜೊ ರಾಗಾಚೊ ಎಳ್ ಯೆಲ್ಲೊ ಅನಿ ದಿಸ್ ಉಜ್ವಾಡ್ಲೊ, ಅನಿ ಮರಲ್ಲ್ಯಾಂಚಿ ಝಡ್ತಿ ಕರ್ತಲೊ ಎಳ್ ಯೆಲೊ, ತುಜ್ಯಾ ಸೆವಕಾನಿ, ಪ್ರವಾದಿ‍ಯಾನಿ, ಅನಿ ತುಜಿ ಭಕ್ತಿ ಕರ್ತಲ್ಯಾ ಸಗ್ಳ್ಯಾ ಲೊಕಾನಿ, ಮೊಟ್ಯಾನಿ ಅನಿ ಬಾರಿಕ್ಲ್ಯಾನಿ ತುಜೆಕ್ನಾ ಭೊಮಾನ್ ಘೆತಲೊ ಎಳ್ ಜಗ್ಗೊಳ್ ಯೆಲೊ, ಜಗಾಕ್ ನಾಸ್ ಕರ್ತಲ್ಯಾಕ್ ಹಾರ್ವುನ್ ಘಾಲ್ತಲೊ ಎಳ್‍ಬಿ ಜಗ್ಗೊಳ್ ಯೆಲೊ!.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 11:18
48 ತಿಳಿವುಗಳ ಹೋಲಿಕೆ  

ಇದಲ್ಲದೆ ಸತ್ತವರಾದ ಹಿರಿಯರೂ ಕಿರಿಯರೂ ಸಿಂಹಾಸನದ ಎದುರಿಗೆ ನಿಂತಿರುವುದನ್ನೂ ಕಂಡೆನು. ಆಗ ಪುಸ್ತಕಗಳನ್ನು ತೆರೆಯಲಾಯಿತು. ನಿತ್ಯಜೀವ ಪುಸ್ತಕವೆಂಬ ಇನ್ನೊಂದು ಪುಸ್ತಕವನ್ನು ತೆರೆಯಲಾಯಿತು. ಆ ಪುಸ್ತಕಗಳಲ್ಲಿ ಬರೆದಿದ್ದರ ಪ್ರಕಾರ, ಅವರವರ ಕ್ರಿಯೆಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.


ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಸ್ವರವು: “ದೇವರ ಎಲ್ಲಾ ದಾಸರೇ, ದೇವರಿಗೆ ಭಯಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಸ್ತುತಿಸಿರಿ!” ಎಂದು ಹೇಳಿತು.


“ಸೆರೆಹಿಡಿಯುವವನು ತಾನೇ ಸೆರೆಯಾಗಿ ಹೋಗುವನು. ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗುವನು.” ಇದರಲ್ಲಿ ದೇವಜನರ ಸೈರಣೆಯೂ ನಂಬಿಕೆಯೂ ಇವೆ.


ಆಗ ಕರ್ತ ಯೇಸು, “ಇಗೋ, ನಾನು ಬೇಗ ಬರುತ್ತೇನೆ. ಪ್ರತಿಯೊಬ್ಬರಿಗೂ ಅವರವರ ಕೆಲಸಕ್ಕೆ ತಕ್ಕಂತೆ ಕೊಡುವ ಪ್ರತಿಫಲವು ನನ್ನಲ್ಲಿದೆ.


ಏಕೆಂದರೆ, ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ದೇವರ ಪ್ರೀತಿಯು ತಮಗೆ ಭಯಪಡುವವರ ಮೇಲೆ ಅಷ್ಟು ಮಹೋನ್ನತವಾಗಿದೆ;


ನಾಲ್ಕು ಜೀವಿಗಳಲ್ಲಿ ಒಂದು, ಆ ಏಳು ದೂತರಿಗೆ, ಯುಗಯುಗಾಂತರಗಳಲ್ಲಿಯೂ ಜೀವಿಸುವವರಾದ ದೇವರ ಕೋಪದಿಂದ ತುಂಬಿದ್ದ ಏಳು ಚಿನ್ನದ ಬೋಗುಣಿಗಳನ್ನು ಕೊಟ್ಟಿತು.


ನಾನು ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ಕಂಡೆನು. ಏಳುಮಂದಿ ದೂತರಲ್ಲಿ ಕಡೆಯ ಏಳು ಉಪದ್ರವಗಳಿದ್ದವು. ಏಕೆಂದರೆ, ಅವುಗಳಲ್ಲಿ ದೇವರ ಕೋಪವು ಸಂಪೂರ್ಣವಾಗುವುದು.


ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರೆಸದೆ ಹಾಕಿದ ಅವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಕುರಿಮರಿಯಾಗಿರುವವರ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.


ಒಂದೇ ಸಾರಿ ಸಾಯುವುದೂ ತರುವಾಯ ನ್ಯಾಯತೀರ್ಪು ಪಡೆಯುವುದೂ ಮನುಷ್ಯರಿಗಾಗಿ ನೇಮಕವಾಗಿದೆ.


ದೇವರಲ್ಲಿ ಭಯಭಕ್ತಿಯುಳ್ಳವರ ಮೇಲೆ, ಅವರ ಕರುಣೆಯು ತಲತಲಾಂತರಗಳಿಗೂ ಇರುವುದು.


ಸಂತೋಷಪಟ್ಟು ಆನಂದಿಸಿರಿ. ಏಕೆಂದರೆ ಪರಲೋಕದಲ್ಲಿ ನಿಮಗೆ ಮಹಾ ಪ್ರತಿಫಲ ಸಿಕ್ಕುವುದು. ಅವರು ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನು ಸಹ ಇದೇ ರೀತಿಯಲ್ಲಿ ಹಿಂಸೆಪಡಿಸಿದರು.


ಯೆಹೋವ ದೇವರು ನಿಮ್ಮ ಬಲಗಡೆಯಲ್ಲಿದ್ದಾರೆ; ಅವರು ತಮ್ಮ ತೀರ್ಪಿನ ದಿನದಲ್ಲಿ ಅರಸರನ್ನು ದಂಡಿಸುವರು.


ನಿಶ್ಚಯವಾಗಿ ಮಹಿಮೆಯು ನಮ್ಮ ದೇಶದಲ್ಲಿ ವಾಸವಾಗಿರುವ ಹಾಗೆ, ದೇವರಿಗೆ ಭಯಪಡುವವರಿಗೆ ದೇವರ ರಕ್ಷಣೆಯು ಸಮೀಪವಾಗಿದೆ.


ಕರ್ತದೇವರು ತಮ್ಮ ಕೋಪದಿಂದ ಅವರನ್ನು ಗದರಿಸುತ್ತಾ, ತಮ್ಮ ಬೇಸರದಿಂದ ಅವರನ್ನು ಕಳವಳಪಡಿಸಿ ಹೀಗೆ ಹೇಳುವರು,


ಯಾರ ಹೆಸರು ಜೀವ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವರನ್ನು ಬೆಂಕಿಯ ಕೆರೆಗೆ ದೊಬ್ಬಲಾಯಿತು.


ಆಕೆಯು ನಿಮಗೆ ಕೊಟ್ಟಿದ್ದಕ್ಕೆ ಸರಿಯಾಗಿ ಹಿಂದಕ್ಕೆ ಕೊಡಿರಿ. ಕೃತ್ಯಗಳಿಗೆ ಸರಿಯಾಗಿ ಎರಡರಷ್ಟು ಅವಳಿಗೆ ಕೊಡಿರಿ. ಆಕೆಯ ಬಟ್ಟಲಿನಿಂದಲೇ ಎರಡರಷ್ಟು ಆಕೆಗೆ ಕಲಸಿ ಕೊಡಿರಿ.


ಆಲಯಕ್ಕೆ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು. ಏಕೆಂದರೆ ಅದು ಯೆಹೂದ್ಯರಲ್ಲದವರಿಗಾಗಿ ಬಿಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಲವತ್ತೆರಡು ತಿಂಗಳು ತುಳಿದಾಡುವರು.


ಅವನು ತನ್ನ ಶಕ್ತಿಯಿಂದಲೇ ತನ್ನ ಕಪಟತನವನ್ನು ಸಿದ್ಧಿಗೆ ತರುವನು. ಅವನು ಹೃದಯದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಸುರಕ್ಷಿತರಾಗಿದ್ದೇವೆಂದು ಹೇಳುವಾಗಲೇ ಅನೇಕರನ್ನು ನಾಶಮಾಡುವನು. ಅಲ್ಲದೆ ಅವನು ರಾಜಕುಮಾರರ ರಾಜಕುಮಾರನಿಗೆ ವಿರುದ್ಧವಾಗಿ ನಿಲ್ಲುವನು. ಆದರೂ ಮಾನವ ಶಕ್ತಿಯ ಬಳಕೆ ಇಲ್ಲದೆಯೂ ನಾಶವಾಗುವನು.


“ ‘ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯವರೆಗೂ ಅದನ್ನು ಸಂಹರಿಸಿ ನಾಶಪಡಿಸುವುದು.


ಈಗ ನಾವು ಎಲ್ಲಾ ವಿಷಯವನ್ನೂ ಕೇಳಿ ಮುಗಿಯಿತು. ದೇವರಿಗೆ ಭಯಪಡು ಮತ್ತು ದೇವರ ಆಜ್ಞೆಗಳನ್ನು ಪಾಲಿಸು. ಇದೇ ಮನುಷ್ಯನ ಪ್ರಮುಖ ಕರ್ತವ್ಯ.


ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ, ಬಹುಕಾಲ ಬದುಕಿದರೂ ದೇವರಿಗೆ ಹೆದರಿ ದೈವಭಕ್ತಿಯುಳ್ಳವರಿಗೆ ಒಳ್ಳೆಯದಾಗುವುದೆಂದು ನಾನು ಬಲ್ಲೆನು.


ಯೆಹೋವ ದೇವರು ತಮಗೆ ಭಯಪಡುವವರಲ್ಲಿ ಆನಂದಿಸುತ್ತಾರೆ, ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಎದುರು ನೋಡುವವರಲ್ಲಿ ಹರ್ಷಿಸುತ್ತಾರೆ.


ರಾಷ್ಟ್ರಗಳನ್ನು ಹೊಡೆಯಲು ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. “ಆತನು ಕಬ್ಬಿಣದ ದಂಡದಿಂದ ಅವರನ್ನು ಪಾಲಿಸುವನು.” ಆತನು ಸರ್ವಶಕ್ತ ಆಗಿರುವ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ತೊಟ್ಟಿಯಲ್ಲಿರುವುದನ್ನು ತುಳಿಯುತ್ತಾನೆ.


ಆದರೆ ಪೂರ್ವದಿಂದಲೂ, ಉತ್ತರದಿಂದಲೂ ಬರುವ ಸುದ್ದಿಗಳು ಅವನನ್ನು ಹೆದರಿಸುವುವು. ಆದ್ದರಿಂದ ಅವನು ಮಹಾ ಉಗ್ರವಾಗಿ ಅನೇಕರನ್ನು ಸಂಹರಿಸುವುದಕ್ಕೂ, ನಿರ್ಮೂಲ ಮಾಡುವುದಕ್ಕೂ ಹೊರಡುವನು.


ಆದರೆ ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಬೇಕೆಂದಿರುವ ದಿನಗಳಲ್ಲಿ ದೇವರು ತನ್ನ ಸೇವಕರಾದ ಪ್ರವಾದಿಗಳಿಗೆ ಪ್ರಕಟಿಸಿದಂತೆಯೇ, ದೇವರ ರಹಸ್ಯವು ನೆರವೇರುವುದು.”


ಅದು ಚಿಕ್ಕವರು, ದೊಡ್ಡವರು, ಐಶ್ವರ್ಯವಂತರು, ಬಡವರು, ಸ್ವತಂತ್ರರು, ಗುಲಾಮರು, ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ, ಹಣೆಯ ಮೇಲಾಗಲಿ ಗುರುತು ಹೊಂದಬೇಕೆಂದೂ


ರಾಜರು, ಸಹಸ್ರಾಧಿಪತಿಗಳು, ಪರಾಕ್ರಮಶಾಲಿಗಳು, ಅಶ್ವಗಳು, ಅಶ್ವಾರೂಢರು, ಸ್ವತಂತ್ರರು, ದಾಸರು, ದೊಡ್ಡವರು, ಚಿಕ್ಕವರು, ಇವರೆಲ್ಲರ ಮಾಂಸವನ್ನು ತಿನ್ನುವುದಕ್ಕೆ ಬನ್ನಿರಿ!” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು