Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 11:7 - ಕನ್ನಡ ಸಮಕಾಲಿಕ ಅನುವಾದ

7 ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ, ಪಾತಾಳದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ, ಇವರನ್ನು ಜಯಿಸಿ ಕೊಲ್ಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ತಮ್ಮ ಸಾಕ್ಷಿಗಳನ್ನು ಹೇಳಿ ಮುಗಿಸಿದ ನಂತರ, ಅಧೋಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇವರ ಸಾಕ್ಷ್ಯನೀಡಿಕೆ ಮುಗಿದ ನಂತರ ಪಾತಾಳಕೂಪದಿಂದ ಮೃಗವೊಂದು ಮೇಲೇರಿಬರುತ್ತದೆ; ಅದು ಇವರೊಡನೆ ಯುದ್ಧಮಾಡಿ, ಜಯಗಳಿಸಿ ಇವರನ್ನು ಕೊಂದುಹಾಕುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದನಂತರ ಅಧೋಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈ ಇಬ್ಬರು ಸಾಕ್ಷಿಗಳು ತಮ್ಮ ಸಂದೇಶವನ್ನು ಹೇಳಿ ಮುಗಿಸಿದ ನಂತರ, ತಳವಿಲ್ಲದ ಕೂಪದಿಂದ ಮೇಲಕ್ಕೆ ಬರುವ ಮೃಗವು ಅವರ ವಿರುದ್ಧ ಹೋರಾಟ ಮಾಡುತ್ತದೆ. ಈ ಮೃಗವು ಅವರನ್ನು ಸೋಲಿಸಿ, ಕೊಂದು ಹಾಕುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆನಿ ಬಾತ್ಮಿ ಸಾಂಗ್ತಲೆ ಸರಲ್ಲ್ಯಾ ತನ್ನಾ ಪಾತಾಳಾತ್ಲೆ ಎಕ್ ಭಯಾನಕ್ ಜನಾವಾರ್ ಯೆತಾ ಅನಿ ತೆಂಚ್ಯಾ ವಾಂಗ್ಡಾ ಝಗ್ಡೊ ಕರ್ತಾ. ತೆ ತೆಕಾ ಹಾರ್‍ವುತಾ ಅನಿ ಜಿವಾನಿಚ್ ಮಾರುನ್ ಟಾಕ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 11:7
20 ತಿಳಿವುಗಳ ಹೋಲಿಕೆ  

ಇದಲ್ಲದೆ ಅದಕ್ಕೆ ಪರಿಶುದ್ಧರ ಮೇಲೆ ಯುದ್ಧಮಾಡಿ, ಅವರನ್ನು ಜಯಿಸುವುದಕ್ಕೆ ಬಲವು ಕೊಡಲಾಯಿತು ಮತ್ತು ಸಕಲ ಕುಲ, ಪ್ರಜೆ, ಭಾಷೆ, ರಾಷ್ಟ್ರಗಳ ಮೇಲೆ ಅದಕ್ಕೆ ಅಧಿಕಾರವು ಸಹ ಕೊಡಲಾಯಿತು.


ಅವನು ಮಹೋನ್ನತ ದೇವರಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ, ಪರಿಶುದ್ಧರನ್ನು ಬಾಧಿಸಿ, ಕಾಲ ನಿಯಮಗಳನ್ನು ಬದಲಾಯಿಸುವುದಕ್ಕೆ ಪ್ರಯತ್ನಿಸುವನು. ಪರಿಶುದ್ಧರು ಒಂದುಕಾಲ, ಎರಡುಕಾಲ, ಅರ್ಧಕಾಲದ ತನಕ ಅವರು ಅವನ ಕೈವಶವಾಗಿರುವರು.


ಮಾಡಬೇಕೆಂದು ನೀವು ನನಗೆ ಕೊಟ್ಟ ಕೆಲಸವನ್ನು ನಾನು ನೆರವೇರಿಸಿ ಭೂಮಿಯ ಮೇಲೆ ನಾನು ನಿಮ್ಮನ್ನು ಮಹಿಮೆಪಡಿಸಿದ್ದೇನೆ.


ಅದಕ್ಕೆ ಯೇಸು ಅವರಿಗೆ, “ಇಗೋ, ‘ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಓಡಿಸುತ್ತೇನೆ ಸ್ವಸ್ಥಮಾಡುತ್ತೇನೆ, ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ,’ ಎಂದು ನೀವು ಹೋಗಿ ಆ ನರಿಗೆ ಹೇಳಿರಿ.


ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಅದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು ಆದರೆ ಘಟಸರ್ಪದಂತೆ ಮಾತನಾಡಿತು.


ನನ್ನ ಇಬ್ಬರು ಸಾಕ್ಷಿಗಳಿಗೆ ಗೋಣಿತಟ್ಟುಗಳನ್ನು ಹೊದ್ದುಕೊಂಡು, ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವಂತೆ ಮಾಡುವೆನು,”


ಆದರೂ ನನ್ನ ಪ್ರಾಣ ನನಗೆ ಅಮೂಲ್ಯವೆಂದು ನಾನು ಎಣಿಸುವುದಿಲ್ಲ. ಕರ್ತ ಯೇಸು ನನಗೆ ಕೊಟ್ಟ, ದೇವರ ಕೃಪೆಯ ಸುವಾರ್ತೆಗೆ ಸಾಕ್ಷಿ ಕೊಡುವ ಸೇವೆಯ ಓಟವನ್ನು ಓಡಿ ಮುಗಿಸುವುದೇ ನನ್ನ ಬಾಳಿನ ಒಂದೇ ಗುರಿಯಾಗಿದೆ.


ನಾನು ಒಳ್ಳೆಯ ಹೋರಾಟವನ್ನು ಮಾಡಿದ್ದೇನೆ. ನಾನು ಓಟವನ್ನು ಮುಗಿಸಿದ್ದೇನೆ. ನಾನು ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ.


ಯೇಸು ಆ ಹುಳಿರಸವನ್ನು ತೆಗೆದುಕೊಂಡ ಮೇಲೆ, “ತೀರಿತು” ಎಂದು ಹೇಳಿ ತಲೆಬಾಗಿ ತಮ್ಮ ಆತ್ಮವನ್ನು ಒಪ್ಪಿಸಿಕೊಟ್ಟರು.


ಅವು ತಮ್ಮನ್ನು ಪಾತಾಳಕ್ಕೆ ಹೋಗುವಂತೆ ಅಪ್ಪಣೆ ಕೊಡಬಾರದೆಂದು ಯೇಸುವನ್ನು ಬೇಡಿಕೊಂಡವು.


ಆಗ ಘಟಸರ್ಪನು ಸ್ತ್ರೀಯ ಮೇಲೆ ಬಹುಕೋಪಗೊಂಡು, ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಎಂದರೆ, ದೇವರ ಆಜ್ಞೆಗಳನ್ನು ಕೈಗೊಂಡು ನಡೆದು, ಯೇಸುವಿನ ಸಾಕ್ಷಿಯನ್ನು ಹೊಂದಿದವರ ಮೇಲೆ ಯುದ್ಧಮಾಡುವುದಕ್ಕೆ ಹೊರಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು