ಪ್ರಕಟನೆ 11:8 - ಕನ್ನಡ ಸಮಕಾಲಿಕ ಅನುವಾದ8 ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಗಳು ಸಾಂಕೇತಿಕವಾಗಿ ಸೊದೋಮ್ ಹಾಗೂ ಈಜಿಪ್ಟ್ ಎಂದೂ ಹೆಸರುಗಳಿರುವುದು. ಇವರ ಒಡೆಯ ಆಗಿರುವವರನ್ನು ಸಹ ಅಲ್ಲಿಯೇ ಶಿಲುಬೆಗೆ ಹಾಕಲಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಸಾಂಕೇತಿಕವಾಗಿ ಸೊದೋಮ್ ಎಂದು, ಐಗುಪ್ತ ಎಂದೂ ಹೆಸರುಗಳುಂಟು. ಇವರ ಒಡೆಯನು ಸಹ ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಈ ಸಾಕ್ಷಿಗಳ ಶವಗಳು ಆ ಮಹಾನಗರದ ಬೀದಿಪಾಲಾಗುವುವು. ಆ ನಗರವನ್ನು ಸೊದೋಮ್ ಇಲ್ಲವೆ ಈಜಿಪ್ಟ್ ಎಂದು ಸೂಚ್ಯವಾಗಿ ಕರೆಯಲಾಗಿದೆ. ಈ ಸಾಕ್ಷಿಗಳ ಪ್ರಭುವನ್ನು ಸಹ ಇಲ್ಲಿಯೇ ಶಿಲುಬೆಗೇರಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಗೂಢಾರ್ಥವಾಗಿ ಸೊದೋಮ್ ಎಂತಲೂ ಐಗುಪ್ತ ಎಂತಲೂ ಹೆಸರುಗಳುಂಟು; ಇವರ ಒಡೆಯನು ಸಹ ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಈ ಸಾಕ್ಷಿಗಳ ಎರಡು ಶವಗಳು ಮಹಾನಗರದ ಬೀದಿಯಲ್ಲಿ ಬಿದ್ದಿರುತ್ತವೆ. ಈ ನಗರಕ್ಕೆ ಸೊದೋಮ್ ಮತ್ತು ಈಜಿಪ್ಟ್ ಎಂದು ಹೆಸರಾಗುತ್ತದೆ. ಆ ನಗರದ ಹೆಸರುಗಳಿಗೆ ವಿಶೇಷ ಅರ್ಥವಿದೆ. ಪ್ರಭುವು ಈ ನಗರದಲ್ಲಿಯೇ ಶಿಲುಬೆಗೇರಿಸಲ್ಪಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಅನಿ ತೆಂಚಿ ಮಡಿ ಮೊಟ್ಯಾ ಶಾರಾಚ್ಯಾ ವನಿಯಾತ್ನಿ ಪಡಲ್ಲಿ ರಾತ್ಯಾತ್ ಥೈ ಧನಿಯಾಕ್ ಖುರ್ಸಾರ್ ಮಾರಲ್ಲೆ ಹೊತ್ತೆ. ತ್ಯಾ ಶಾರಾಚಿ ವಳಕ್ ದಿತಲ್ಲೆ ನಾಂವ್ ಸೊದೊಮ್ ನಾತರ್ ಇಜಿಪ್ತ್. ಅಧ್ಯಾಯವನ್ನು ನೋಡಿ |