ಪ್ರಕಟನೆ 12:11 - ಕನ್ನಡ ಸಮಕಾಲಿಕ ಅನುವಾದ11 ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಕುರಿಮರಿಯಾಗಿರುವವರ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಯಜ್ಞದ ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಜಯಿಸಿದರು ಸೋದರರು ಆ ನಿಂದಕನನ್ನು ಯಜ್ಞದ ಕುರಿಮರಿಯ ರಕ್ತದಿಂದ ಸತ್ಯಕ್ಕೆ ಸಾಕ್ಷಿಯನ್ನಿತ್ತುದರಿಂದ ಜೀವದಾಶೆಯನು ತೊರೆದುದರಿಂದ ಮರಣದ ಭಯವನು ಬಿಸುಟುದರಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಮರಣಕ್ಕೆ ಹಿಂತೆಗೆಯದೆ ಯಜ್ಞದ ಕುರಿಯಾದಾತನ ರಕ್ತದ ಬಲದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಜಯಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಮ್ಮ ಸಹೋದರರು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಸೋಲಿಸಿದರು. ಅವರು ತಮ್ಮ ಜೀವಗಳನ್ನು ಪ್ರೀತಿಸಲಿಲ್ಲ. ಅವರು ಮರಣಕ್ಕೆ ಭಯಪಡಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಅಮ್ಚ್ಯಾ ಭಾವ್ ಅನಿ ಭೆನಿಯಾನಿ ಅಪ್ನಾಚಿ ಪರ್ವಾ ಕರಿನಸ್ತಾನಾ, ಬೊಕ್ಡಾಚ್ಯಾ ರಗ್ತಾಚ್ಯಾ ಅನಿ ತೆನಿ ಪರ್ಗಟ್ ಕರಲ್ಲ್ಯಾ ಖರ್‍ಯಾಚ್ಯಾ ಬಳಾನ್ ತೆಕಾ ಹಾರ್ವುನ್ ಜಿಕ್ಲ್ಯಾನಾತ್, ಅನಿ ತೆನಿ ತೆಂಚೊ ಜಿವ್ ಸೈತ್ ದಿವ್ಕ್ ತಯಾರ್ ಹೊತ್ತೆ. ಅಧ್ಯಾಯವನ್ನು ನೋಡಿ |
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲಾಯಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನ ಗೊಂಡವರ ಆತ್ಮಗಳನ್ನೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸದೆ ತಮ್ಮ ಹಣೆಯ ಮೇಲೆ ಇಲ್ಲವೆ ಕೈಯ ಮೇಲೆ ಅದರ ಗುರುತುಹಾಕಿಸಿಕೊಳ್ಳದವರನ್ನೂ ನೋಡಿದೆನು. ಅವರು ಪುನಃ ಜೀವಿತರಾಗಿ ಎದ್ದು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷ ಆಳಿದರು.