Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 12:14 - ಕನ್ನಡ ಸಮಕಾಲಿಕ ಅನುವಾದ

14 ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲಾದವು. ಅಲ್ಲಿ ಆಕೆಯು ಒಂದುಕಾಲ, ಎರಡುಕಾಲ ಮತ್ತು ಅರ್ಧಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ಆ ಸ್ತ್ರೀಯು ಮರುಭೂಮಿಯಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು. ಅಲ್ಲಿ ಆಕೆಯು ಒಂದು ಕಾಲ, ಎರಡು ಕಾಲ, ಅರ್ಧ ಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಆ ಮಹಿಳೆ ಅರಣ್ಯದಲ್ಲಿರುವ ತನ್ನ ಸ್ಥಳಕ್ಕೆ ಹಾರಿಹೋಗುವಂತೆ ದೊಡ್ಡ ಗರುಡಪಕ್ಷಿಗಿರುವಂಥ ಎರಡು ರೆಕ್ಕೆಗಳನ್ನು ಆಕೆಗೆ ಕೊಡಲಾಯಿತು. ಅಲ್ಲಿ ಘಟಸರ್ಪದ ಕಣ್ಣಿಗೆ ಬೀಳದೆ ಮೂರುವರೆ ವರ್ಷಗಳ ಕಾಲ ಪೋಷಣೆ ಹೊಂದುವಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವದಕ್ಕಾಗಿ ಆಕೆಗೆ ದೊಡ್ಡ ಗರುಡಪಕ್ಷಿಯ ಎರಡು ರೆಕ್ಕೆಗಳು ಕೊಡಲ್ಪಟ್ಟವು. ಅಲ್ಲಿ ಒಂದು ಕಾಲ, ಎರಡು ಕಾಲ, ಅರ್ಧಕಾಲ ಸರ್ಪನ ಮುಖಕ್ಕೆ ಮರೆಯಾಗಿ ಪೋಷಣೆ ಹೊಂದುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಆ ಸ್ತ್ರೀಗೆ ಮಹಾಗರುಡನ ಎರಡು ರೆಕ್ಕೆಗಳನ್ನು ಕೊಡಲ್ಪಟ್ಟದ್ದರಿಂದ, ತನಗಾಗಿ ಮರುಳುಗಾಡಿನಲ್ಲಿ ಸಿದ್ಧಪಡಿಸಿದ ಸ್ಥಳಕ್ಕೆ ಹಾರಿ ಹೋಗಲು ಆಕೆಗೆ ಸಾಧ್ಯವಾಯಿತು. ಅಲ್ಲಿ ಅವಳು ಮೂರುವರೆ ವರ್ಷಗಳ ಕಾಲ ಪೋಷಣೆ ಹೊಂದುತ್ತಾ ಸರ್ಪಕ್ಕೆ ಕಾಣದಂತೆ ಮರೆಯಾಗಿರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಭಯಾನಕ್ ಸಾಪಾಕ್ನಾ ಚುಕ್ವುನ್ ಘೆವ್ನ್ ಡಂಗ್ಳಿತ್ ಅಪ್ನಾಚಿ ಸಾಡೆ ತಿನ್ ವರ್ಸಾ ಕಾಳ್ಜಿ ಘೆತಲ್ಯಾ ಜಾಗ್ಯಾಕ್ ಹುಡುನ್ ಜಾವ್ಕ್ ತಿಕಾ ದೊನ್ ಗರುಡಾಚೆ ರಕೊಟೆ ದಿಲ್ಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 12:14
10 ತಿಳಿವುಗಳ ಹೋಲಿಕೆ  

‘ನಾನು ಈಜಿಪ್ಟಿನವರಿಗೆ ಮಾಡಿದ್ದನ್ನೂ, ಹದ್ದು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಮೇಲೆ ಹೊತ್ತು ಬರುವಂತೆ ನಿಮ್ಮನ್ನು ಈ ಸ್ಥಳಕ್ಕೆ ಬರಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.


ಆದರೆ ಯೆಹೋವ ದೇವರನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು. ಅವರು ಹದ್ದುಗಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಅವರು ಓಡಿ ದಣಿಯರು. ನಡೆದು ಬಳಲರು.


ಆ ಸ್ತ್ರೀಯು ಅರಣ್ಯಕ್ಕೆ ಓಡಿ ಹೋದಳು. ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದರು.


ನದಿಯ ನೀರಿನ ಮೇಲೆ ನಿಂತು ನಾರುಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತರಾಗಿರುವವರ ಮೇಲೆ ಆಣೆಯಿಟ್ಟು, “ಅದು ಒಂದುಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು; ಕೊನೆಗೆ ಪರಿಶುದ್ಧರ ಬಲವನ್ನು ಮುರಿದ ಮೇಲೆ ಈ ಕಾರ್ಯಗಳೆಲ್ಲ ಮುಕ್ತಾಯವಾಗುವುವು,” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.


ಅವನು ಮಹೋನ್ನತ ದೇವರಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ, ಪರಿಶುದ್ಧರನ್ನು ಬಾಧಿಸಿ, ಕಾಲ ನಿಯಮಗಳನ್ನು ಬದಲಾಯಿಸುವುದಕ್ಕೆ ಪ್ರಯತ್ನಿಸುವನು. ಪರಿಶುದ್ಧರು ಒಂದುಕಾಲ, ಎರಡುಕಾಲ, ಅರ್ಧಕಾಲದ ತನಕ ಅವರು ಅವನ ಕೈವಶವಾಗಿರುವರು.


“ಓ, ಪಾರಿವಾಳದಂತೆ ನನಗೆ ರೆಕ್ಕೆಗಳು ಇರುತ್ತಿದ್ದರೆ, ಹಾರಿಹೋಗಿ ವಿಶ್ರಾಂತಿಯನ್ನು ತೆಗೆದುಕೊಳ್ಳುತ್ತಿದ್ದೆ.


ಅನಂತರ ಅವನು ನನ್ನನ್ನು ಆತ್ಮನಲ್ಲಿ ಅರಣ್ಯಕ್ಕೆ ಒಯ್ದನು. ಅಲ್ಲಿ ಒಬ್ಬ ಸ್ತ್ರೀಯು, ಹತ್ತು ಕೊಂಬುಗಳೂ ಏಳು ತಲೆಗಳೂ ಇದ್ದು, ದೇವದೂಷಣೆಯ ಹೆಸರುಗಳಿಂದ ತುಂಬಿರುವ ಕಡುಗೆಂಪು ಬಣ್ಣದ ಮೃಗದ ಮೇಲೆ ಕುಳಿತಿರುವುದನ್ನು ಕಂಡೆನು.


ಅವನು ನನಗೆ, “ಎರಡು ಸಾವಿರದ ಮುನ್ನೂರು ಸಾಯಂಕಾಲ ಹಾಗೂ ಪ್ರಾತಃಕಾಲದವರೆಗೂ ನಡೆಯುವುವು. ಅನಂತರ ಪರಿಶುದ್ಧ ಸ್ಥಳವು ಪುನಃ ನ್ಯಾಯಸ್ಥಾಪನೆಯಾಗುವುದು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು