Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 12:9 - ಕನ್ನಡ ಸಮಕಾಲಿಕ ಅನುವಾದ

9 ಭೂಲೋಕದವರನ್ನೆಲ್ಲಾ ವಂಚಿಸುತ್ತಿದ್ದ ಆ ಮಹಾ ಘಟಸರ್ಪನು ಎಂದರೆ ಪಿಶಾಚನೆಂತಲೂ ಸೈತಾನನೆಂತಲೂ ಕರೆಯಲಾದ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರನ್ನೂ ಅವನೊಂದಿಗೆ ತಳ್ಳಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸಮಸ್ತ ಜಗತ್ತನ್ನೂ ವಂಚಿಸುತ್ತಿದ್ದ ಆ ಮಹಾಘಟಸರ್ಪವನ್ನು ಭೂಮಿಗೆ ತಳ್ಳಲಾಯಿತು. ಈ ಪುರಾತನ ಸರ್ಪಕ್ಕೆ ‘ಪಿಶಾಚಿ’ ಎಂತಲೂ ‘ಸೈತಾನ’ ಎಂತಲೂ ಹೆಸರು. ಅದರ ದೂತರನ್ನು ಅದರೊಡನೆ ತಳ್ಳಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಭೂಲೋಕದವರನ್ನೆಲ್ಲಾ ಮರುಳುಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾತನ ಸರ್ಪವು ದೊಬ್ಬಲ್ಪಟ್ಟು ಭೂವಿುಗೆ ಬಿದ್ದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ಘಟಸರ್ಪವನ್ನು ಪರಲೋಕದಿಂದ (ಆ ಘಟಸರ್ಪಕ್ಕೆ ಸೈತಾನನೆಂತಲೂ ಪಿಶಾಚನೆಂತಲೂ ಹೆಸರಿದೆ. ಅದು ಲೋಕವನ್ನೆಲ್ಲಾ ತಪ್ಪು ಮಾರ್ಗಕ್ಕೆ ಎಳೆಯುತ್ತಿತ್ತು.) ಅದರ ದೂತರೊಂದಿಗೆ ಭೂಮಿಯ ಮೇಲೆ ಎಸೆಯಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತ್ಯಾ ಭಯಾನಕ್ ಸಾಪಾಕ್ ಭಾಯ್ರ್ ಕಾಡುನ್ ಟಾಕುನ್ ಹೊತಾ, ಅದ್ಲ್ಯಾ ಕಾಲಾತ್ಲೊ ಸಾಪ್ ತೊ, ತೆಚೆ ನಾಂವ್ ಗಿರೊ ನಾಹೊಲ್ಯಾರ್ ಸೈತಾನ್. ತೆನಿ ಸಗ್ಳ್ಯಾ ಜಗಾಕ್ ಪಸ್ವುಲ್ಯಾನಾಯ್ ತೆಕಾ ಅನಿ ತ್ಯೆಚ್ಯಾ ಸಗ್ಳ್ಯಾ ದುತಾಕ್ನಿ ಜಿಮ್ನಿ ವರ್ತಿ ಟಾಕುನ್ ಹೊಲ್ಲೆ ಹಾಯ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 12:9
68 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ, “ಸೈತಾನನು ಮಿಂಚಿನ ಹಾಗೆ ಆಕಾಶದಿಂದ ಬೀಳುವುದನ್ನು ನಾನು ಕಂಡೆನು.


ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಇಹಲೋಕದ ಅಧಿಪತಿಯನ್ನು ಈಗ ಹೊರಗೆ ಹಾಕಲಾಗುವುದು.


ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲಾಯಿತು. ಅಲ್ಲಿ ಮೃಗವೂ ಸುಳ್ಳು ಪ್ರವಾದಿ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.


ನಾವು ದೇವರ ಮಕ್ಕಳೆಂದೂ ಲೋಕವೆಲ್ಲವು ಕೆಡುಕನ ನಿಯಂತ್ರಣದಲ್ಲಿ ಇದೆ ಎಂದೂ ನಮಗೆ ಗೊತ್ತಿದೆ.


ಈ ಲೋಕದ ದೇವರು ನಂಬದವರ ಮನಸ್ಸನ್ನು ಕುರುಡುಮಾಡಿರುತ್ತಾನೆ. ಆದ್ದರಿಂದ ದೇವರ ಸ್ವರೂಪವಾಗಿರುವ ಕ್ರಿಸ್ತ ಯೇಸುವಿನ ಸುವಾರ್ತೆಯ ಮಹಿಮೆಯ ಬೆಳಕನ್ನು ಅವರು ಕಾಣಲಾರರು.


ಮುಂಜಾನೆಯ ನಕ್ಷತ್ರವೇ, ಉದಯ ಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಬಿದ್ದೆ?


ಯೆಹೋವ ದೇವರು ಸೃಷ್ಟಿಸಿದ ಅಡವಿಯ ಎಲ್ಲಾ ಕಾಡುಮೃಗಗಳಿಗಿಂತ ಸರ್ಪವು ಬಹು ಯುಕ್ತಿಯುಳ್ಳದ್ದಾಗಿತ್ತು. ಅದು ಸ್ತ್ರೀಗೆ, “ನೀವು ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ?” ಎಂದು ಕೇಳಿತು.


ಪರಲೋಕದಲ್ಲಿ ಯುದ್ಧನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪನ ಮೇಲೆ ಯುದ್ಧಮಾಡಿದರು. ಘಟಸರ್ಪನೂ ಅವನ ದೂತರೂ ಯುದ್ಧಮಾಡಿ ಸೋತುಹೋದರು.


ನೀವು ನಿಮ್ಮ ತಂದೆಯಾದ ಪಿಶಾಚನಿಗೆ ಸೇರಿದವರಾಗಿದ್ದೀರಿ. ನಿಮ್ಮ ತಂದೆಯ ಆಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ಸುಳ್ಳಾಡುವಾಗ ತನ್ನ ಸ್ವಭಾವಾನುಸಾರವಾಗಿ ಆಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿನ ತಂದೆಯೂ ಆಗಿದ್ದಾನೆ.


ತೋಳವೂ ಕುರಿಮರಿಯೂ ಒಂದಾಗಿ ಮೇಯುವುವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವುದು; ಹಾವಿಗೆ ಮಣ್ಣೇ ಆಹಾರವಾಗುವುದು; ಅವು ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾವ ಕೇಡೂ ಮಾಡುವುದಿಲ್ಲ, ನಾಶವೂ ಮಾಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಅವನು ಹೊರಗೆ ಬಂದು ಭೂಮಿಯ ನಾಲ್ಕುದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ರಾಷ್ಟ್ರಗಳನ್ನು ಮೋಸಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು. ಅವರ ಸಂಖ್ಯೆಯು ಸಮುದ್ರತೀರದ ಮರಳಿನಷ್ಟಿರುವುದು.


ಪರಲೋಕದಲ್ಲಿ ಮತ್ತೊಂದು ಸೂಚನೆಯು ಕಾಣಿಸಿತು. ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. ಅದರ ತಲೆಯ ಮೇಲೆ ಏಳು ಮುಕುಟಗಳಿದ್ದವು.


ಐದನೆಯ ದೇವದೂತನು ತನ್ನ ತುತೂರಿಯನ್ನು ಊದಲು; ಆಕಾಶದಿಂದ ಒಂದು ನಕ್ಷತ್ರವು ಭೂಮಿಗೆ ಬಿದ್ದದ್ದನ್ನು ಕಂಡೆನು. ಅದಕ್ಕೆ ಪಾತಾಳ ಸುರಂಗದ ಬೀಗದ ಕೈ ಕೊಡಲಾಗಿತ್ತು.


ಥುವತೈರದಲ್ಲಿರುವ ಉಳಿದವರಿಗೆ ನಾನು ಹೇಳುವುದೇನಂದರೆ: ಅವಳ ಬೋಧನೆಯನ್ನು ನೀವು ಅವಲಂಬಿಸಲಿಲ್ಲ. ಸೈತಾನನ ಆಳವಾದ ರಹಸ್ಯ ಬೋಧನೆಗಳು ಎಂದು ಹೇಳುವ ಬೋಧನೆಯನ್ನು ನೀವು ಅವಲಂಬಿಸಲಿಲ್ಲ.


ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು, ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ. ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನನ್ನು ಕೊಲ್ಲಲಾದ ದಿನಗಳಲ್ಲಿಯೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಅಲ್ಲಗಳೆಯಲಿಲ್ಲ.


ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ಇದರಲ್ಲಿ ಆಶ್ಚರ್ಯವೇನೂ ಇಲ್ಲ, ಸೈತಾನನೂ ಬೆಳಕಿನ ದೇವದೂತನಂತೆ ಕಾಣಿಸಿಕೊಳ್ಳಬಲ್ಲನು.


ಸೈತಾನನು ನಮ್ಮನ್ನು ವಂಚಿಸಲು ಅವಕಾಶ ಕೊಡಬಾರದು. ಅವನ ಕುತಂತ್ರಗಳನ್ನು ನಾವು ಅರಿತವರಲ್ಲವೇ?


ಅಂಥಾ ಜನರು ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಸೇವೆ ಮಾಡುವವರಾಗಿರದೆ ತಮ್ಮ ಹೊಟ್ಟೆಯ ಸೇವೆ ಮಾಡುವವರಾಗಿರುತ್ತಾರೆ. ನಯವಾದ ಮತ್ತು ಮುಖಸ್ತುತಿಯ ಮಾತುಗಳಿಂದ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


ನೀನು ಅವರ ಕಣ್ಣುಗಳನ್ನು ತೆರೆದು, ಅವರನ್ನು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಸಿ ಪಾಪಕ್ಷಮಾಪಣೆಯನ್ನು ಪಡೆಯುವಂತೆ ಮಾಡಿ, ನನ್ನಲ್ಲಿ ವಿಶ್ವಾಸವಿದ್ದು ಶುದ್ಧೀಕರಣ ಹೊಂದಿದವರ ಮಧ್ಯದಲ್ಲಿ ಹಕ್ಕುಬಾಧ್ಯತೆಯನ್ನು ಪಡೆಯುವಂತೆ ಮಾಡಬೇಕೆಂದು ನಿನ್ನನ್ನು ಕಳುಹಿಸುತ್ತಿದ್ದೇನೆ,’ ಎಂದರು.


“ಸೀಮೋನನೇ, ಸೀಮೋನನೇ, ಇಗೋ, ಸೈತಾನನು ನಿಮ್ಮೆಲ್ಲರನ್ನೂ ಗೋಧಿಯಂತೆ ತೂರಬೇಕೆಂದು ಅಪ್ಪಣೆ ಕೇಳಿದ್ದಾನೆ.


ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿಬಿದ್ದು, ಹೇಗೆ ಮೋಸ ಹೋದಳೋ, ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತ ಯೇಸುವಿನ ಮೇಲಿರಬೇಕಾದ ಯಥಾರ್ಥತೆಯನ್ನೂ ಶುದ್ಧ ಭಕ್ತಿಯನ್ನೂ ಬಿಟ್ಟುಹೋದೀತೆಂಬ ಭಯ ನನಗುಂಟು.


ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಎಂದು ಕರೆಯಲಾಗುವ ಯೂದನಲ್ಲಿ, ಸೈತಾನನು ಪ್ರವೇಶಿಸಿದನು.


ವಾಕ್ಯವನ್ನು ಕೇಳಿದವರು ನಂಬಿ ರಕ್ಷಣೆ ಹೊಂದಿಕೊಳ್ಳದಂತೆ, ಪಿಶಾಚನು ಬಂದು ಅವರ ಹೃದಯದೊಳಗಿಂದ, ಆ ವಾಕ್ಯವನ್ನು ತೆಗೆದುಬಿಡುತ್ತಾನೆ, ಇವರೇ ಆ ಬೀಜಗಳು ಬಿದ್ದ ಪಕ್ಕದ ದಾರಿಯಾಗಿದ್ದಾರೆ.


“ನಾನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಯೇಸು ಅವನಿಗೆ, “ಸೈತಾನನೇ, ತೊಲಗು. ಏಕೆಂದರೆ, ‘ನಿನ್ನ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.


ಅನಂತರ ಸೈತಾನನು ಯೇಸುವನ್ನು ಬಹಳ ಎತ್ತರವಾದ ಪರ್ವತಕ್ಕೆ ಕರೆದುಕೊಂಡು ಹೋಗಿ, ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ಮಹಿಮೆಯನ್ನೂ ಅವರಿಗೆ ತೋರಿಸಿ,


ಆಮೇಲೆ ಸೈತಾನನು ಯೇಸುವನ್ನು ಪವಿತ್ರ ನಗರಕ್ಕೆ ಕರೆದುಕೊಂಡು ಹೋಗಿ ದೇವಾಲಯದ ಅತಿ ಎತ್ತರವಾದ ಶಿಖರದ ಮೇಲೆ ನಿಲ್ಲಿಸಿ,


ಆಮೇಲೆ ಸೈತಾನನಿಂದ ಶೋಧಿತರಾಗಲೆಂದು ಪವಿತ್ರಾತ್ಮರು ಯೇಸುವನ್ನು ಅರಣ್ಯಕ್ಕೆ ನಡೆಸಿದರು.


ಆ ದಿನದಲ್ಲಿ ಯೆಹೋವ ದೇವರು, ತಮ್ಮ ಬಲವಾದ ಭೀಕರ ಖಡ್ಗದಿಂದ ವೇಗವಾಗಿ ಓಡುವ ಲೆವಿಯಾತಾನ ಸರ್ಪವನ್ನೂ, ಡೊಂಕಾಗಿ ಹರಿಯುವ ಲೆವಿಯಾತಾನ ಸರ್ಪವನ್ನೂ ದಂಡಿಸಿ, ಸಮುದ್ರದಲ್ಲಿರುವ ಘಟಸರ್ಪವನ್ನೂ ಕೊಂದುಹಾಕುವರು.


ಯೆಹೋವ ದೇವರು ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಅದಕ್ಕೆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು. ನಾನು ತಿಂದೆನು,” ಎಂದು ಉತ್ತರಕೊಟ್ಟಳು.


ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು.


ಅವು ಸೂಚಕಕಾರ್ಯಗಳನ್ನು ನಡೆಸುವ ದೆವ್ವಗಳ ಆತ್ಮಗಳಾಗಿದ್ದು, ಭೂಲೋಕದ ರಾಜರುಗಳನ್ನು ಸರ್ವಶಕ್ತರಾದ ದೇವರ ಮಹಾದಿನದ ಯುದ್ಧಕ್ಕಾಗಿ ಕೂಡಿಸುವುದಕ್ಕಾಗಿ ಹೊರಟವು.


ಆ ಮೊದಲನೆಯ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವನ್ನು ಕೊಡಲಾಗಿದ್ದರಿಂದ ಭೂನಿವಾಸಿಗಳನ್ನು ಮೋಸಗೊಳಿಸುತ್ತದೆ. ಭೂಮಿಯ ಮೇಲೆ ವಾಸಿಸುವವರು, ಕತ್ತಿಯಿಂದ ಗಾಯಹೊಂದಿ, ಸಾಯದೆ ಬದುಕಿದ ಮೃಗದ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಹೇಳುತ್ತದೆ.


ಈ ಉಪದ್ರವಗಳಿಂದ ಸಾಯದೆ ಉಳಿದ ಮನುಷ್ಯರು ಇನ್ನೂ ತಮ್ಮ ದುಷ್ಟಕೃತ್ಯಗಳನ್ನು ಬಿಟ್ಟು ಪಶ್ಚಾತ್ತಾಪ ಪಡಲಿಲ್ಲ. ಅವರು ದೆವ್ವಗಳನ್ನೂ, ನೋಡಲು, ಕೇಳಲು, ನಡೆಯಲು ಆಗದ ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳ ವಿಗ್ರಹಗಳನ್ನು ಆರಾಧಿಸುವುದನ್ನೂ ನಿಲ್ಲಿಸಲಿಲ್ಲ.


ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದಿಂದ ಕೆಲವರು ಬಂದು ನಿನ್ನ ಪಾದಕ್ಕೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳಿಯುವಂತೆಯೂ ಮಾಡುವೆನು.


ನಾನು ನಿನ್ನ ಸಂಕಟವನ್ನೂ ನಿನ್ನ ದಾರಿದ್ರ್ಯವನ್ನೂ ಬಲ್ಲೆನು. ಆದರೂ ನೀನು ಸಿರಿವಂತನೇ! ಮಾತ್ರವಲ್ಲದೇ ಅವರು ಯೆಹೂದ್ಯರಲ್ಲದಿದ್ದರೂ ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನೂ ಬಲ್ಲೆನು. ಅವರು ಸೈತಾನನ ಸಭಾಮಂದಿರದವರಾಗಿದ್ದಾರೆ.


ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು, ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ, ಅವನು ಸೈತಾನನನ್ನು ದೂಷಿಸುವುದಕ್ಕೆ ಧೈರ್ಯಗೊಳ್ಳದೆ, “ಕರ್ತದೇವರು ನಿನ್ನನ್ನು ಗದರಿಸಲಿ!” ಎಂದನು.


ಮಕ್ಕಳು ರಕ್ತಮಾಂಸಧಾರಿಗಳು ಆಗಿರುವುದರಿಂದ ಯೇಸು ತಮ್ಮ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ, ಸೈತಾನನನ್ನು ನಾಶಮಾಡುವುದಕ್ಕೂ


ಆದರೆ ದುಷ್ಟರೂ ಇತರರಂತೆ ನಟಿಸುವ ವೇಷಧಾರಿಗಳೂ ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ಹೆಚ್ಚಾದ ಕೆಟ್ಟತನಕ್ಕೆ ಸಾಗುವರು.


ಆದಾಮನು ವಂಚನೆಗೊಳಗಾಗಲಿಲ್ಲ, ಸ್ತ್ರೀಯು ವಂಚನೆಗೊಳಗಾಗಿ ಅಪರಾಧಿಯಾದಳು.


ನಿಮ್ಮನ್ನು ಯಾರೂ ಯಾವ ವಿಧದಲ್ಲಿಯೂ ವಂಚಿಸದಿರಲಿ. ಏಕೆಂದರೆ ವಿಶ್ವಾಸದಿಂದ ಬಿದ್ದುಹೋಗುವಿಕೆಯು ಸಂಭವಿಸಿ, ನಾಶಕ್ಕೆ ನೇಮಕವಾಗಿರುವ ನಿಯಮ ಮೀರುವ ಮನುಷ್ಯನು ಬರುವುದಕ್ಕೆ ಮುಂಚೆ ಕರ್ತ ಯೇಸುವಿನ ದಿನವು ಬರುವುದಿಲ್ಲ!


ಆಗ, ನಾವು ಚಿಕ್ಕಮಕ್ಕಳಂತೆ ಇರುವುದಿಲ್ಲ: ಮನುಷ್ಯರ ವಿವಿಧ ಬೋಧನೆಗಳಿಂದ ಗಾಳಿಯಿಂದ ತೂರಾಡಿಕೊಳ್ಳುವಂತಾಗುವುದಿಲ್ಲ. ಮನುಷ್ಯರ ಕುಯುಕ್ತಿಗೆ, ತಂತ್ರಕ್ಕೆ, ಒಳಸಂಚಿಗೆ ಒಳಗಾಗುವುದಿಲ್ಲ. ಅವರ ಪ್ರತಿಯೊಂದು ಬೋಧನೆಯ ಗಾಳಿಯಿಂದಲೂ ತೂರಾಡಿಕೊಂಡು ಅತ್ತಿತ್ತ ಅಲೆದಾಡುವ ಚಿಕ್ಕಮಕ್ಕಳಂತೆ ಇರಬಾರದು.


ಬಹು ವಿಶೇಷವಾದ ಪ್ರಕಟನೆಗಳ ಬಗ್ಗೆ ನಾನು ಗರ್ವಪಡದಂತೆ, ನನ್ನ ಶರೀರದಲ್ಲಿ ಒಂದು ಮುಳ್ಳನ್ನು ಕೊಡಲಾಗಿತ್ತು. ಅದು ನನ್ನನ್ನು ಕಾಡಿಸಲು ಕಳುಹಿಸಲಾದ ಸೈತಾನನ ದೂತನೇ ಆಗಿತ್ತು.


ಆಗ ಸಮಾಧಾನದ ದೇವರು ಬೇಗನೆ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ಜಜ್ಜಿಬಿಡುವನು. ನಮ್ಮ ಕರ್ತ ಆಗಿರುವ ಯೇಸುವಿನ ಕೃಪೆಯು ನಿಮ್ಮೊಂದಿಗಿರಲಿ.


ಆದರೆ ಪೇತ್ರನು, “ಅನನೀಯಾ, ಪವಿತ್ರಾತ್ಮ ದೇವರಿಗೆ ಸುಳ್ಳು ಹೇಳುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿಸಿದ್ದು ಏಕೆ? ಆಸ್ತಿಯನ್ನು ಮಾರಿ ಬಂದ ಹಣದಲ್ಲಿ ಒಂದು ಭಾಗವನ್ನು ಇಟ್ಟುಕೊಂಡದ್ದೇಕೆ?


ಇಹಲೋಕಾಧಿಪತಿಗೆ ನ್ಯಾಯತೀರ್ಪಾದ ಕಾರಣದಿಂದ ನ್ಯಾಯತೀರ್ಪಿನ ವಿಷಯವಾಗಿಯೂ ಮನವರಿಕೆ ಮಾಡುವರು.


ಇನ್ನು ಮೇಲೆ ನಾನು ನಿಮ್ಮೊಂದಿಗೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ ಇಹಲೋಕದ ಅಧಿಪತಿಯು ಬರಲಿದ್ದಾನೆ. ನನ್ನಲ್ಲಿ ಅವನಿಗೆ ಸೇರಿದ್ದು ಒಂದೂ ಇರುವುದಿಲ್ಲ.


ಅಬ್ರಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರ್ಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನದಿಂದ ಸಬ್ಬತ್ ದಿನದಲ್ಲಿ ಬಿಡಿಸಬಾರದೇ?” ಎಂದರು.


ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಅದನ್ನು ಬಿತ್ತಿದ ವೈರಿಯು ಸೈತಾನನೇ. ಸುಗ್ಗಿಯ ಕಾಲವು ಲೋಕಾಂತ್ಯವಾಗಿದೆ. ಕೊಯ್ಯುವವರು ದೇವದೂತರೇ.


ಸೈತಾನನು ಇಸ್ರಾಯೇಲಿಗೆ ವಿರೋಧವಾಗಿ ಎದ್ದು, ಇಸ್ರಾಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದನು.


ಅವನು ಮಹಾಧ್ವನಿಯಿಂದ: “ ‘ಬಿದ್ದಳು! ಬಾಬಿಲೋನ್ ಮಹಾನಗರಿಯು ಬಿದ್ದಳು!’ ಆಕೆಯು ದೆವ್ವಗಳಿಗೆ ವಾಸಸ್ಥಾನವೂ ಎಲ್ಲಾ ದುರಾತ್ಮಗಳಿಗೂ ಅಶುದ್ಧವಾದ ಹಾಗೂ ಅಸಹ್ಯವಾದ ಪ್ರತಿಯೊಂದು ಪ್ರಾಣಿಪಕ್ಷಿಗಳಿಗೂ ನಿವಾಸವಾಗಿದ್ದಾಳೆ.


ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಹಿಂಸಾಚಾರವು ತುಂಬಿ ನೀನು ಪಾಪಿಯಾದೆ; ಆದ್ದರಿಂದ ನಿನ್ನನ್ನು ಅಪವಿತ್ರನೆಂದು ದೇವರ ಪರ್ವತದೊಳಗಿನಿಂದ ನಾನು ತಳ್ಳಿಬಿಟ್ಟೆನು. ಓ ರಕ್ಷಕ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.


ದೀಪದ ಬೆಳಕು ನಿನ್ನಲ್ಲಿ ಎಂದೂ ಪ್ರಕಾಶಿಸದು. ವಧೂವರರ ಸ್ವರವು ಮತ್ತೆ ನಿನ್ನಲ್ಲಿ ಎಂದೂ ಕೇಳಿಬರದು. ಏಕೆಂದರೆ ನಿನ್ನ ವರ್ತಕರು ಭೂಮಿಯ ಮಹಾ ಪುರುಷರಾಗಿದ್ದು, ನಿನ್ನ ಮಾಂತ್ರಿಕ ಶಕ್ತಿಯ ದೆಸೆಯಿಂದ ಎಲ್ಲಾ ದೇಶಗಳವರು ವಂಚಿತರಾದರು.


ದುಷ್ಟನು ನನ್ನ ವೈರಿಯ ಮೇಲೆ ನೇಮಕವಾಗಲಿ; ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ.


ಅವರಿಗೆ ಸಾಕಷ್ಟು ಸಾಮರ್ಥ್ಯವಿಲ್ಲದ್ದರಿಂದ, ಪರಲೋಕದೊಳಗೆ ಅವರಿಗಿರುವ ಸ್ಥಾನವನ್ನು ಕಳೆದುಕೊಂಡರು.


ಆದ್ದರಿಂದ ಪರಲೋಕವೇ, ಅದರಲ್ಲಿ ವಾಸಮಾಡುವವರೇ ಹರ್ಷಗೊಳ್ಳಿರಿ. ಭೂಮಿಯೇ, ಸಮುದ್ರವೇ, ನಿಮಗೆ ದುರ್ಗತಿ! ಎನ್ನುತ್ತೇನೆ. ಏಕೆಂದರೆ, ಪಿಶಾಚನು ತನಗಿರುವ ಕಾಲವು ಕೊಂಚವೆಂದು ತಿಳಿದು, ಮಹಾ ರೋಷವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ,” ಎಂಬುದಾಗಿ ಹೇಳಿತು.


“ಅದಕ್ಕದು, ‘ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳನ್ನಾಡುವ ಆತ್ಮವಾಗಿರುವೆನು,’ ಎಂದಿತು. “ಅದಕ್ಕೆ ಯೆಹೋವ ದೇವರು, ‘ನೀನು ಅವನನ್ನು ಮರುಳುಗೊಳಿಸುವೆ ಮತ್ತು ಜಯಿಸುವೆ, ಹೊರಟುಹೋಗಿ ಹಾಗೆ ಮಾಡು,’ ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು