Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 13:1 - ಕನ್ನಡ ಸಮಕಾಲಿಕ ಅನುವಾದ

1 ಘಟಸರ್ಪವು ಸಮುದ್ರತೀರದ ಮರಳಿನ ಮೇಲೆ ನಿಂತನು. ಸಮುದ್ರದೊಳಗೆ ಒಂದು ಮೃಗವು ಏರಿಬರುವುದನ್ನು ಕಂಡೆನು. ಅದಕ್ಕೆ ಹತ್ತು ಕೊಂಬುಗಳೂ ಏಳು ತಲೆಗಳೂ ಕೊಂಬುಗಳ ಮೇಲೆ ಹತ್ತು ಮುಕುಟಗಳೂ ತಲೆಗಳ ಮೇಲೆ ದೇವದೂಷಣೆಯ ನಾಮಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಮುದ್ರದಿಂದ ಒಂದು ಮೃಗವು ಏರಿಬರುವುದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ, ಹತ್ತು ಕೊಂಬುಗಳೂ, ಕೊಂಬುಗಳ ಮೇಲೆ ಹತ್ತು ಕಿರೀಟಗಳೂ, ಹಣೆಗಳ ಮೇಲೆ ದೇವದೂಷಣೆಯ ನಾಮಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಾನು ಸಮುದ್ರದ ತೀರದಲ್ಲಿ ನಿಂತಿದ್ದೆ. ಆಗ ನನಗೆ ಈ ದೃಶ್ಯ ಕಾಣಿಸಿತು: ಒಂದು ಮೃಗ ಸಮುದ್ರದಿಂದ ಮೇಲೆ ಏರಿಬಂದಿತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. ಪ್ರತಿಯೊಂದು ಕೊಂಬಿನ ಮೇಲೂ ಒಂದೊಂದು ಮುಕುಟವಿತ್ತು, ತಲೆಗಳ ಮೇಲೆ ದೇವದೂಷಣೆ ಮಾಡುವ ಹೆಸರುಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಮುದ್ರದಿಂದ ಮೃಗವು ಏರಿಬರುವದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಕೊಂಬುಗಳ ಮೇಲೆ ಹತ್ತು ಮಕುಟಗಳೂ ತಲೆಗಳ ಮೇಲೆ ದೇವದೂಷಣನಾಮಗಳೂ ಇದ್ದವು. ನಾನು ಕಂಡ ಮೃಗವು ಚಿರತೆಯಂತಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಂತರ ಸಮುದ್ರದಿಂದ ಒಂದು ಮೃಗವು ಹೊರಗೆ ಬರುತ್ತಿರುವುದನ್ನು ನಾನು ನೋಡಿದೆನು. ಅದಕ್ಕೆ ಹತ್ತು ಕೊಂಬುಗಳೂ ಏಳು ತಲೆಗಳೂ ಇದ್ದವು. ಅದರ ಪ್ರತಿಯೊಂದು ಕೊಂಬಿನ ಮೇಲೆ ಒಂದೊಂದು ಕಿರೀಟವಿತ್ತು. ಪ್ರತಿಯೊಂದು ತಲೆಯ ಮೇಲೂ ದೇವದೂಷಣೆ ನಾಮಗಳನ್ನು ಬರೆಯಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತನ್ನಾ ಸಮುಂದರಾತ್ನಾ ಎಕ್ ಭಯಾನಕ್ ಜನಾವರ್ ಭಾಯ್ರ್ ಯೆತಲೆ ಮಿಯಾ ಬಗಟ್ಲೊ. ತೆಕಾ ಧಾ ಶಿಂಗಾ ಅನಿ ಸಾತ್ ಟಕ್ಲಿ ಹೊತ್ತಿ ; ತ್ಯೆಚ್ಯಾ ಹರಿಎಕ್ ಶಿಂಗಾ ವರ್ತಿ ಎಕೆಕ್ ಮುಕುಟ್ ಹೊತ್ತೆ, ಅನಿ ತ್ಯೆಚ್ಯಾ ಹರಿಎಕ್ ಟಕ್ಲ್ಯಾ ವರ್ತಿ ಎಕೆಕ್ ನಾವ್ ಹೊತ್ತೆ ತಿ ನಾವಾ ದೆವಾಕ್ ಅವ್ಮಾನ್ ಕರಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 13:1
21 ತಿಳಿವುಗಳ ಹೋಲಿಕೆ  

ಪರಲೋಕದಲ್ಲಿ ಮತ್ತೊಂದು ಸೂಚನೆಯು ಕಾಣಿಸಿತು. ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. ಅದರ ತಲೆಯ ಮೇಲೆ ಏಳು ಮುಕುಟಗಳಿದ್ದವು.


ಅನಂತರ ಅವನು ನನ್ನನ್ನು ಆತ್ಮನಲ್ಲಿ ಅರಣ್ಯಕ್ಕೆ ಒಯ್ದನು. ಅಲ್ಲಿ ಒಬ್ಬ ಸ್ತ್ರೀಯು, ಹತ್ತು ಕೊಂಬುಗಳೂ ಏಳು ತಲೆಗಳೂ ಇದ್ದು, ದೇವದೂಷಣೆಯ ಹೆಸರುಗಳಿಂದ ತುಂಬಿರುವ ಕಡುಗೆಂಪು ಬಣ್ಣದ ಮೃಗದ ಮೇಲೆ ಕುಳಿತಿರುವುದನ್ನು ಕಂಡೆನು.


ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ, ಪಾತಾಳದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ, ಇವರನ್ನು ಜಯಿಸಿ ಕೊಲ್ಲುವುದು.


ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು. ತನ್ನನ್ನು ತಾನೇ ಹೆಚ್ಚಿಸಿಕೊಂಡು, ತನ್ನನ್ನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನನ್ನಾಗಿ ಮಾಡಿಕೊಂಡು, ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ, ರೋಷವು ತೀರುವವರೆಗೂ ವೃದ್ಧಿಯಾಗಿರುವನು. ಹೀಗೆ ನಿಶ್ಚಯವಾದದ್ದು ನೆರವೇರಲೇಬೇಕು.


ನೀನು ಕಂಡ ಆ ಮೃಗ ಮತ್ತು ಹತ್ತು ಕೊಂಬುಗಳು ಆ ಜಾರಸ್ತ್ರೀಯನ್ನು ದ್ವೇಷಿಸಿ, ಆಕೆಯನ್ನು ಗತಿಯಿಲ್ಲದವಳನ್ನಾಗಿಯೂ ಆಕೆಯನ್ನು ಬಟ್ಟೆ ಇಲ್ಲದವಳನ್ನಾಗಿಯೂ ಆಕೆಯ ಮಾಂಸವನ್ನು ತಿಂದು, ಆಕೆಯನ್ನು ಬೆಂಕಿಯಲ್ಲಿ ಸುಟ್ಟುಬಿಡುವವು.


ನೀವು ನನಗೆ ಭಯಪಡುವುದಿಲ್ಲವೋ?” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ಸಮ್ಮುಖದಲ್ಲಿ ನಡುಗುವುದಿಲ್ಲವೋ? ನಾನು ಮರಳನ್ನು ನಿತ್ಯ ನೇಮವಾಗಿ ಸಮುದ್ರಕ್ಕೆ, ಅದು ದಾಟಕೂಡದ ಹಾಗೆ ಮೇರೆಯಾಗಿಟ್ಟಿದ್ದೇನೆ. ಅದರ ತೆರೆಗಳು ಎದ್ದರೂ ದಡ ಮೀರಲಾರವು; ಘೋಷಿಸಿದರೂ ಅದನ್ನು ದಾಟಲಾರವು.


ನನಗೆ ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಒಂದು ಕಾಣಿಸಿತು. ಆಗ ಮೃಗದ ಮೇಲೆಯೂ ಅದರ ವಿಗ್ರಹದ ಮೇಲೆಯೂ ಅದರ ಹೆಸರಿನ ಸಂಖ್ಯೆಯ ಮೇಲೆಯೂ ಜಯಹೊಂದಿದವರು ದೇವರ ಕಿನ್ನರಿಗಳನ್ನು ಕೈಯಲ್ಲಿ ಹಿಡಿದುಕೊಂಡು, ಗಾಜಿನ ಸಮುದ್ರದ ಮೇಲೆ ನಿಂತುಕೊಂಡು,


ಆಕೆಯ ಹಣೆಯ ಮೇಲೆ: “ಮಹಾ ಬಾಬಿಲೋನ್, ಜಾರ ಸ್ತ್ರೀಯರಿಗೂ ಭೂಮಿಯ ಎಲ್ಲಾ ಅಸಹ್ಯವಾದವುಗಳಿಗೂ ತಾಯಿ!” ಎಂದು ನಿಗೂಢ ಹೆಸರು ಬರೆದಿತ್ತು.


ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಅದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು ಆದರೆ ಘಟಸರ್ಪದಂತೆ ಮಾತನಾಡಿತು.


ಆ ಮೊದಲನೆಯ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವನ್ನು ಕೊಡಲಾಗಿದ್ದರಿಂದ ಭೂನಿವಾಸಿಗಳನ್ನು ಮೋಸಗೊಳಿಸುತ್ತದೆ. ಭೂಮಿಯ ಮೇಲೆ ವಾಸಿಸುವವರು, ಕತ್ತಿಯಿಂದ ಗಾಯಹೊಂದಿ, ಸಾಯದೆ ಬದುಕಿದ ಮೃಗದ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಹೇಳುತ್ತದೆ.


ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಕೊಡಲಾಗಿದ್ದರಿಂದ, ಆ ವಿಗ್ರಹವು ಮಾತನಾಡುವಂತೆಯೂ ತನ್ನನ್ನು ಆರಾಧನೆ ಮಾಡದವರನ್ನು ಕೊಲ್ಲುವಂತೆಯೂ ಮಾಡುತ್ತದೆ.


ಆಗ ಕಪ್ಪೆಗಳಂತೆ ಕಾಣುವ ಮೂರು ಅಶುದ್ಧಾತ್ಮಗಳು ಘಟಸರ್ಪನ ಬಾಯೊಳಗಿಂದಲೂ ಮತ್ತು ಸುಳ್ಳು ಪ್ರವಾದಿಯ ಬಾಯೊಳಗಿಂದಲೂ ಮೃಗದ ಬಾಯೊಳಗಿಂದಲೂ ಬರುವುದನ್ನು ಕಂಡೆನು.


ತರುವಾಯ ಆ ಮೊದಲನೆಯ ಮೃಗವೂ ಭೂರಾಜರೂ ಅವರ ಸೈನ್ಯಗಳವರೂ ಆ ಕುದುರೆಯ ಮೇಲೆ ಕುಳಿತಿದ್ದವರ ಮೇಲೆಯೂ ಅವರ ಸೈನ್ಯದ ಮೇಲೆಯೂ ಯುದ್ಧಮಾಡುವುದಕ್ಕಾಗಿ ಕೂಡಿ ಬಂದಿರುವುದನ್ನು ನಾನು ಕಂಡೆನು.


ಪಾದಗಳನ್ನೂ, ಕಾಲಿನ ಬೆರಳುಗಳನ್ನೂ ಅರ್ಧ ಮಣ್ಣಿನಿಂದಲೂ, ಅರ್ಧ ಕಬ್ಬಿಣದಿಂದಲೂ ಉಂಟಾದವೆಂದು ನೀನು ನೋಡಿದೆಯಲ್ಲಾ? ಅದೇ ರೀತಿ ಆ ರಾಜ್ಯವು ವಿಭಾಗವಾಗಿರುವುದು. ಆದರೆ ಅದರ ಬಲವು ನೀನು ಜೇಡಿಮಣ್ಣಿನ ಸಂಗಡ ಜೊತೆಗೂಡಿದ ಕಬ್ಬಿಣವನ್ನು ನೋಡಿದ ಹಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು