Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 13:16 - ಕನ್ನಡ ಸಮಕಾಲಿಕ ಅನುವಾದ

16 ಅದು ಚಿಕ್ಕವರು, ದೊಡ್ಡವರು, ಐಶ್ವರ್ಯವಂತರು, ಬಡವರು, ಸ್ವತಂತ್ರರು, ಗುಲಾಮರು, ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ, ಹಣೆಯ ಮೇಲಾಗಲಿ ಗುರುತು ಹೊಂದಬೇಕೆಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಈ ಎರಡನೆಯ ಮೃಗವು, ದೊಡ್ಡವರು, ಚಿಕ್ಕವರು, ಐಶ್ವರ್ಯವಂತರು, ಬಡವರು, ಸ್ವತಂತ್ರರು, ದಾಸರು ಎಲ್ಲರೂ ತಮ್ಮತಮ್ಮ ಬಲಗೈಯ ಮೇಲಾಗಲಿ, ಹಣೆಯ ಮೇಲಾಗಲಿ ಗುರುತನ್ನು ಹೊಂದಬೇಕೆಂದು ಒತ್ತಾಯ ಮಾಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಹಿರಿಯ ಕಿರಿಯ, ಬಡವ ಬಲ್ಲಿದ, ದಾಸ ದಣಿ ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ, ಹಣೆಯ ಮೇಲಾಗಲಿ ಗುರುತಿನ ಹಚ್ಚೆ ಚುಚ್ಚಿಸಿಕೊಳ್ಳಬೇಕೆಂದು ಆ ಎರಡನೆಯ ಮೃಗ ಆಜ್ಞಾಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಈ ಎರಡನೆಯ ಮೃಗವು - ದೊಡ್ಡವರು ಚಿಕ್ಕವರು ಐಶ್ಚರ್ಯವಂತರು ಬಡವರು ಸ್ವತಂತ್ರರು ದಾಸರು ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ ಹಣೆಯ ಮೇಲಾಗಲಿ ಗುರುತು ಹೊಂದಬೇಕೆಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಎರಡನೆಯ ಮೃಗವು ಸಹ ಎಲ್ಲರನ್ನು ಅಂದರೆ ಚಿಕ್ಕವರನ್ನು, ದೊಡ್ಡವರನ್ನು, ಶ್ರೀಮಂತರನ್ನು, ಬಡವರನ್ನು, ಗುಲಾಮರನ್ನು ಮತ್ತು ಸ್ವತಂತ್ರರನ್ನು, ತಮ್ಮ ಬಲಗೈಯ ಮೇಲಾಗಲಿ ಅಥವಾ ತಮ್ಮ ಹಣೆಗಳ ಮೇಲಾಗಲಿ ಗುರುತು ಹಾಕಿಕೊಳ್ಳಬೇಕೆಂದು ಒತ್ತಾಯಪಡಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತ್ಯಾ ಭಯಾನಕ್ ಸಾಪಾ ಸಗ್ಳ್ಯಾ ಲೊಕಾಕ್ನಿ ಬಾರಿಕ್ಲ್ಯಾಕ್ನಿ ಅನಿ ಮೊಟ್ಯಾಕ್ನಿ, ಸಾವ್ಕಾರಾಕ್ನಿ ಅನಿ ಗರಿಬಾಕ್ನಿ, ಗುಲಾಮಾಕ್ನಿ ಅನಿ ಸ್ವತಂತ್ರ್ ಹೊತ್ತ್ಯಾಕ್ನಿ, ತೆಂಚ್ಯಾ- ತೆಂಚ್ಯಾ ಉಜ್ವ್ಯಾ ಹಾತಿ ವರ್ತಿ ನಾಹೊಲ್ಯಾರ್ ಕಪಾಳಾ ವರ್ತಿ ಎಕ್ ವಳಕ್ ಕರುನ್ ಘೆವ್ಚಿ ಮನುನ್ ಜಬರ್ದಸ್ತಿ ಕರ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 13:16
26 ತಿಳಿವುಗಳ ಹೋಲಿಕೆ  

ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲಾಯಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನ ಗೊಂಡವರ ಆತ್ಮಗಳನ್ನೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸದೆ ತಮ್ಮ ಹಣೆಯ ಮೇಲೆ ಇಲ್ಲವೆ ಕೈಯ ಮೇಲೆ ಅದರ ಗುರುತುಹಾಕಿಸಿಕೊಳ್ಳದವರನ್ನೂ ನೋಡಿದೆನು. ಅವರು ಪುನಃ ಜೀವಿತರಾಗಿ ಎದ್ದು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷ ಆಳಿದರು.


ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು.


“ನಾವು ನಮ್ಮ ದೇವರ ದಾಸರ ಹಣೆಗಳ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ಹಾನಿಪಡಿಸಬೇಡ!” ಎಂದು ಹೇಳಿದನು.


“ಯೆರೂಸಲೇಮಿನ ಪಟ್ಟಣದ ಮಧ್ಯೆ ಹಾದು ಹೋಗಿ, ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು,” ಎಂದರು.


ರಾಜರು, ಸಹಸ್ರಾಧಿಪತಿಗಳು, ಪರಾಕ್ರಮಶಾಲಿಗಳು, ಅಶ್ವಗಳು, ಅಶ್ವಾರೂಢರು, ಸ್ವತಂತ್ರರು, ದಾಸರು, ದೊಡ್ಡವರು, ಚಿಕ್ಕವರು, ಇವರೆಲ್ಲರ ಮಾಂಸವನ್ನು ತಿನ್ನುವುದಕ್ಕೆ ಬನ್ನಿರಿ!” ಎಂದು ಹೇಳಿದನು.


ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಬೇಕು. ಅವುಗಳನ್ನು ನಿಮ್ಮ ಹಣೆಗೂ ಕಟ್ಟಿಕೊಳ್ಳಬೇಕು.


ಈ ನನ್ನ ವಾಕ್ಯಗಳನ್ನು ನಿಮ್ಮ ಹೃದಯದಲ್ಲಿಯೂ, ಪ್ರಾಣಗಳಲ್ಲಿಯೂ ಇಟ್ಟುಕೊಳ್ಳಿರಿ. ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಿರಿ, ಅವು ನಿಮ್ಮ ಹಣೆಗೆ ಕಟ್ಟಿರಲಿ.


ಏಕೆಂದರೆ ಯೆಹೋವ ದೇವರು ನಿಮ್ಮನ್ನು ತಮ್ಮ ಭುಜಬಲದಿಂದ ಈಜಿಪ್ಟಿನಿಂದ ಹೊರಗೆ ಬರಮಾಡಿದ್ದಾರೆ. ಆದ್ದರಿಂದ ದೇವರ ನಿಯಮವು ನಿಮ್ಮ ಬಾಯಲ್ಲಿ ಇರುವಂತೆ, ಈ ಆಚರಣೆಯು ನಿಮ್ಮ ಕೈಯಲ್ಲಿ ಗುರುತಾಗಿಯೂ ನಿಮ್ಮ ಹಣೆಯಲ್ಲಿ ಜ್ಞಾಪಕಾರ್ಥವಾಗಿಯೂ ಇರಬೇಕು.


ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಸ್ವರವು: “ದೇವರ ಎಲ್ಲಾ ದಾಸರೇ, ದೇವರಿಗೆ ಭಯಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಸ್ತುತಿಸಿರಿ!” ಎಂದು ಹೇಳಿತು.


ಇದಲ್ಲದೆ ಸತ್ತವರಾದ ಹಿರಿಯರೂ ಕಿರಿಯರೂ ಸಿಂಹಾಸನದ ಎದುರಿಗೆ ನಿಂತಿರುವುದನ್ನೂ ಕಂಡೆನು. ಆಗ ಪುಸ್ತಕಗಳನ್ನು ತೆರೆಯಲಾಯಿತು. ನಿತ್ಯಜೀವ ಪುಸ್ತಕವೆಂಬ ಇನ್ನೊಂದು ಪುಸ್ತಕವನ್ನು ತೆರೆಯಲಾಯಿತು. ಆ ಪುಸ್ತಕಗಳಲ್ಲಿ ಬರೆದಿದ್ದರ ಪ್ರಕಾರ, ಅವರವರ ಕ್ರಿಯೆಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.


ಅನಂತರ ಭೂರಾಜರುಗಳು, ಮಹಾಪುರುಷರು, ಸಹಸ್ರಾಧಿಪತಿಗಳು, ಐಶ್ವರ್ಯವಂತರು, ಬಲಿಷ್ಠರು, ದಾಸರು ಹಾಗೂ ಸ್ವತಂತ್ರರು, ಗವಿ ಮತ್ತು ಬೆಟ್ಟಗಳ ಬಂಡೆಗಳಲ್ಲಿ ತಮ್ಮನ್ನು ಮರೆಮಾಡಿಕೊಂಡು,


ಆದರೆ ನಾನು ಇಂದಿನವರೆಗೂ ದೇವರಿಂದ ಸಹಾಯವನ್ನು ಪಡೆದಿರುತ್ತೇನೆ. ಹೀಗೆ ನಾನು ಇಲ್ಲಿ ನಿಂತುಕೊಂಡು ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷಿ ಕೊಡುತ್ತಿದ್ದೇನೆ. ಪ್ರವಾದಿಗಳೂ ಮೋಶೆಯೂ ಮುಂದೆ ಏನು ಸಂಭವಿಸುತ್ತದೆಯೆಂದು ಹೇಳಿದ್ದಕ್ಕಿಂತ ಹೆಚ್ಚಾಗಿ ನಾನು ಏನನ್ನೂ ಹೇಳಲಿಲ್ಲ.


ಯೆಹೋವ ದೇವರಿಗೆ ಭಯ ಪಡುವವರಾದ ಹಿರಿಯರನ್ನೂ ಕಿರಿಯರನ್ನೂ ಬೇಧವಿಲ್ಲದೇ ಆಶೀರ್ವದಿಸುವರು.


ದೇವರು ಅಧಿಪತಿಗಳಿಗೆ ಮುಖದಾಕ್ಷಿಣ್ಯ ತೋರಿಸುವರೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ದೇವರು ಲಕ್ಷಿಸುವರೋ? ಏಕೆಂದರೆ ಅವರೆಲ್ಲರೂ ದೇವರ ಸೃಷ್ಟಿಯಾಗಿದ್ದಾರೆ.


ನನಗೆ ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಒಂದು ಕಾಣಿಸಿತು. ಆಗ ಮೃಗದ ಮೇಲೆಯೂ ಅದರ ವಿಗ್ರಹದ ಮೇಲೆಯೂ ಅದರ ಹೆಸರಿನ ಸಂಖ್ಯೆಯ ಮೇಲೆಯೂ ಜಯಹೊಂದಿದವರು ದೇವರ ಕಿನ್ನರಿಗಳನ್ನು ಕೈಯಲ್ಲಿ ಹಿಡಿದುಕೊಂಡು, ಗಾಜಿನ ಸಮುದ್ರದ ಮೇಲೆ ನಿಂತುಕೊಂಡು,


ರಾಷ್ಟ್ರಗಳು ಕೋಪಗೊಂಡವು, ನಿಮ್ಮ ರೋಷವು ಈಗ ಬಂದಿದೆ. ಸತ್ತವರು ತೀರ್ಪು ಹೊಂದುವ ಸಮಯ ಬಂದಿದೆ. ನೀವು ನಿಮ್ಮ ಸೇವಕರಾದ ಪ್ರವಾದಿಗಳಿಗೂ ದೇವಜನರಿಗೂ ನಿಮ್ಮ ನಾಮಕ್ಕೆ ಭಯಪಡುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲವನ್ನು ಕೊಟ್ಟು, ಲೋಕ ನಾಶಕರನ್ನು ದಂಡಿಸುವಿರಿ.”


ಯೆಹೂದ್ಯರು ಯೆಹೂದ್ಯರಲ್ಲದವರು, ಸುನ್ನತಿ ಹೊಂದಿದವರು, ಸುನ್ನತಿ ಹೊಂದದವರು, ನಾಗರಿಕ, ಅನಾಗರಿಕ, ಆಳು, ಸ್ವತಂತ್ರರು ಎಂಬ ಭೇದವಿಲ್ಲ. ಆದರೆ ಕ್ರಿಸ್ತ ಯೇಸುವೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾರೆ.


ದಾಸನಾಗಲಿ, ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತ ಯೇಸುವಿನಿಂದ ಹೊಂದುವನೆಂದು ನೀವು ತಿಳಿದಿದ್ದೀರಿ.


ಇನ್ನು ಮೇಲೆ ಯಾರೂ ನನಗೆ ತೊಂದರೆ ಕೊಡಬಾರದು. ನಾನು ನನ್ನ ದೇಹದಲ್ಲಿ ಕರ್ತ ಆಗಿರುವ ಯೇಸುವಿನ ಗುರುತುಗಳನ್ನು ಪಡೆದಿದ್ದೇನೆ.


ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ, ಯೆಹೂದ್ಯರು ಯೆಹೂದ್ಯರಲ್ಲದವರು ಎಂದೂ ದಾಸರು ಸ್ವತಂತ್ರರು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.


ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ಒಂದೇ ದೇಹವಾಗುವಂತೆ, ನಾವೆಲ್ಲರೂ ಒಬ್ಬರೇ ಆತ್ಮದಿಂದ ಸ್ನಾನ ಮಾಡಿಸಿಕೊಂಡೆವು. ನಮ್ಮೆಲ್ಲರಿಗೂ ಒಬ್ಬ ಆತ್ಮವನ್ನು ಪಾನವಾಗಿ ಕೊಡಲಾಗಿದೆ.


ಸಾಮಾನ್ಯರೇ, ಉನ್ನತರೇ, ಐಶ್ವರ್ಯವಂತರೇ, ಬಡವರೇ ಎಲ್ಲರೂ ಕಿವಿಗೊಡಿರಿ.


ಯಾವನಾದರೂ ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಹುಡುಕದೆ ಹೋದರೆ; ಹಿರಿಯನಾದರೂ, ಕಿರಿಯನಾದರೂ, ಪುರುಷನಾದರೂ, ಸ್ತ್ರೀಯಾದರೂ ಸಾಯಬೇಕೆಂದು ಒಡಂಬಡಿಕೆ ಮಾಡಿಕೊಂಡರು.


ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ, ಈ ಸುಳ್ಳು ಬೋಧಕರು ಸಹ ಸತ್ಯವನ್ನು ವಿರೋಧಿಸುತ್ತಾರೆ. ಇದಲ್ಲದೆ ಇವರು ಬುದ್ಧಿಗೆಟ್ಟವರೂ ವಿಶ್ವಾಸದ ವಿಷಯದಲ್ಲಿ ಭ್ರಷ್ಠರೂ ಆಗಿ, ತಿರಸ್ಕಾರ ಹೊಂದಿರುತ್ತಾರೆ.


ಆಗ ಒಬ್ಬನು ಅವನಿಗೆ, ‘ನಿನ್ನ ಕೈಗಳಲ್ಲಿರುವ ಈ ಗಾಯಗಳು ಏನು?’ ಎಂದು ಕೇಳಿದರೆ, ಅವನು, ‘ನನ್ನ ಸ್ನೇಹಿತರ ಮನೆಯಲ್ಲಿ ನನಗುಂಟಾದ ಗಾಯಗಳೇ,’ ಅನ್ನುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು