Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 13:8 - ಕನ್ನಡ ಸಮಕಾಲಿಕ ಅನುವಾದ

8 ಜಗದುತ್ಪತ್ತಿಗೆ ಮೊದಲೇ ಕೊಯ್ಯಲಾದ ಕುರಿಮರಿಯವರ ಜೀವಗ್ರಂಥದಲ್ಲಿ ಯಾರ‍್ಯಾರ ಹೆಸರುಗಳು ಬರೆದಿರುವುದಿಲ್ಲವೋ, ಆ ಭೂನಿವಾಸಿಗಳೆಲ್ಲರೂ ಆ ಮೃಗವನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಭೂನಿವಾಸಿಗಳೆಲ್ಲರೂ ಅಂದರೆ, ಜಗತ್ತು ಸೃಷ್ಟಿ ಆಗುವ ಮೊದಲೇ ಯಾರಯಾರ ಹೆಸರುಗಳು ವಧೆಯಾದ ಯಜ್ಞದ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ, ಅಂಥವರೆಲ್ಲರೂ ಆ ಮೃಗವನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ನಮಸ್ಕಾರ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಲೋಕದಲ್ಲಿ ವಾಸಿಸುವ ಜನರೆಲ್ಲರೂ ಆ ಮೃಗವನ್ನು ಆರಾಧಿಸುತ್ತಾರೆ. ಲೋಕವು ಆರಂಭಗೊಂಡಂದಿನಿಂದಲೂ ಕೊಲ್ಲಲ್ಪಟ್ಟ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿಲ್ಲವೋ ಅವರೇ ಈ ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಜಿವಾನಿ ಮಾರಲ್ಲ್ಯಾ ಬೊಕ್ಡಾಕ್ ಸಮಂದ್ ಪಡಲ್ಲ್ಯಾ ಜಿವಾಚ್ಯಾ ಪುಸ್ತಕಾತ್ ಜಗ್ ರಚುಚ್ಯಾ ಅದ್ದಿ ಕೊನಾಚಿ ನಾವಾ ಲಿವಲ್ಲಿ ನಾತ್, ತೆನಿ ಸಗ್ಳಿ ಜಿಮ್ನಿ ವೈಲಿ ಲೊಕಾ ತ್ಯಾ ಭಯಾನಕ್ ಜನಾವರಾಕ್ ಆರಾದನ್ ಕರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 13:8
25 ತಿಳಿವುಗಳ ಹೋಲಿಕೆ  

ನಾವು ಪ್ರೀತಿಯಲ್ಲಿದ್ದು ಅವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಅವರು ಲೋಕದ ಅಸ್ತಿವಾರಕ್ಕೆ ಮುಂಚೆ ನಮ್ಮನ್ನು ಕ್ರಿಸ್ತನಲ್ಲಿ ಆರಿಸಿಕೊಂಡರು.


“ಆಗ ನಾನು ನನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ಬನ್ನಿರಿ, ಭೂಲೋಕಕ್ಕೆ ಅಸ್ತಿವಾರ ಹಾಕಿದ ದಿನದಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಆಸ್ತಿಯನ್ನಾಗಿ ಹೊಂದಿರಿ.


ನೀನು ಕಂಡ ಮೃಗವು ಒಮ್ಮೆ ಇತ್ತು, ಈಗ ಇಲ್ಲ, ಪಾತಾಳದೊಳಗಿನಿಂದ ಮೇಲೆ ಬಂದು ವಿನಾಶಕ್ಕೆ ಹೊರಡಲಿದೆ. ಲೋಕದ ಸೃಷ್ಟಿಯಾದ ದಿನದಿಂದ ಯಾರ ಯಾರ ಹೆಸರುಗಳು ಜೀವಗ್ರಂಥದಲ್ಲಿ ಬರೆದಿರುವುದಿಲ್ಲವೋ, ಆ ಭೂನಿವಾಸಿಗಳು ಮೃಗವನ್ನು ನೋಡಿ ಆ ಮೃಗವು ಹಿಂದೆ ಇತ್ತು, ಈಗ ಇಲ್ಲ, ಇನ್ನು ಮೇಲೆ ಬರಲಿದೆ ಎಂದು ಆಶ್ಚರ್ಯಗೊಳ್ಳುವರು.


ಜಯಹೊಂದುವವರಿಗೆ ಹೀಗೆ ಬಿಳಿಯ ವಸ್ತ್ರಗಳನ್ನು ಹೊದಿಸಲಾಗುವುದು. ಅವರ ಹೆಸರನ್ನು ಜೀವಬಾಧ್ಯರ ಪಟ್ಟಿಯಿಂದ ನಾನು ಅಳಿಸಿಬಿಡದೆ, ಅವರ ಹೆಸರನ್ನು ನನ್ನ ತಂದೆಯ ಮುಂದೆಯೂ ಅವರ ದೂತರ ಮುಂದೆಯೂ ಅರಿಕೆ ಮಾಡುವೆನು.


ಸುಳ್ಳಾಡದ ದೇವರು, ಕಾಲಾರಂಭಕ್ಕೆ ಮುಂಚೆಯೇ ನಿತ್ಯಜೀವದ ನಿರೀಕ್ಷೆಯನ್ನು ವಾಗ್ದಾನಮಾಡಿದ್ದಾರೆ.


ಅಶುದ್ಧವಾದದ್ದು ಅದರಲ್ಲಿ ಸೇರುವುದಿಲ್ಲ. ಅಸಹ್ಯವಾದದ್ದನ್ನೂ ವಂಚಕವಾದದ್ದನ್ನೂ ನಡೆಸುವವನು ಅದರಲ್ಲಿ ಪ್ರವೇಶಿಸಲಾರನು. ಕುರಿಮರಿಯ ಜೀವ ಪುಸ್ತಕದಲ್ಲಿ ಯಾರ ಯಾರ ಹೆಸರುಗಳು ಬರೆದಿವೆಯೋ ಅವರು ಮಾತ್ರ ಸೇರುವರು.


ಅವರು, ಮಹಾಧ್ವನಿಯಿಂದ: “ವಧಿತರಾದ ಕುರಿಮರಿ ಆಗಿರುವವರು ಶಕ್ತಿ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಗೌರವ, ಮಹಿಮೆ, ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯರು!” ಎಂದು ಹೇಳಿದರು.


ಮರುದಿನ ಯೇಸು ತನ್ನ ಕಡೆಗೆ ಬರುತ್ತಿರುವುದನ್ನು ಯೋಹಾನನು ಕಂಡು, “ಇಗೋ, ಲೋಕದ ಪಾಪವನ್ನು ತೆಗೆದುಹಾಕುವ ದೇವರ ಕುರಿಮರಿ,


“ಆ ಕಾಲದಲ್ಲಿ ನಿನ್ನ ಜನರನ್ನು ಕಾಪಾಡುವುದಕ್ಕಾಗಿ ಮಹಾರಾಜಕುಮಾರನಾದ ಮೀಕಾಯೇಲನು ಏಳುವನು. ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನವರೆಗೂ ಸಂಭವಿಸದಂತಹ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಎಂದರೆ ಜೀವ ಪುಸ್ತಕದಲ್ಲಿ ಯಾರ ಹೆಸರು ಬರೆಯಲಾಗಿದೆಯೋ, ಅವರೆಲ್ಲರೂ ಬಿಡುಗಡೆಯಾಗುವರು.


ಹೀಗಿದ್ದರೂ, ದೆವ್ವಗಳು ನಿಮಗೆ ಅಧೀನವಾಗಿವೆ ಎಂದು ಸಂತೋಷ ಪಡಬೇಡಿರಿ, ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಲಿಖಿತವಾಗಿವೆ ಎಂದು ಸಂತೋಷಿಸಿರಿ,” ಎಂದರು.


ಜೀವಗ್ರಂಥದಲ್ಲಿ ಹೆಸರು ಬರೆದಿರುವ ಕ್ಲೇಮೆನ್ಸ್ ಮುಂತಾದ ನನ್ನ ಜೊತೆ ಕೆಲಸದವರೊಡನೆ ನನ್ನೊಂದಿಗೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟ ಆ ಸ್ತ್ರೀಯರಿಗೆ ನೀನೂ ಸಹಾಯಕನಾಗಿರಬೇಕೆಂದು ನಿಜ ಜೊತೆಗಾರನೇ, ನಿನ್ನನ್ನೂ ಕೇಳಿಕೊಳ್ಳುತ್ತೇನೆ.


ಆದರೂ ಈಗ ನೀವು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀವು ಬರೆದ ಗ್ರಂಥದಿಂದ ನನ್ನ ಹೆಸರನ್ನು ಅಳಿಸಿಬಿಡಿ,” ಎಂದು ಬೇಡಿಕೊಂಡನು.


ಹೀಗಿರುವಲ್ಲಿ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಹಾಗೂ ಯೆರೂಸಲೇಮಿನಲ್ಲಿ ವಾಸಿಸುವವರೆಂದೂ ದಾಖಲೆಗೊಂಡ ಪ್ರತಿಯೊಬ್ಬರೂ ಪವಿತ್ರರು ಎಂದು ಕರೆಯಲಾಗುವರು.


ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾರಾದರೂ ನನ್ನ ಸ್ವರವನ್ನು ಕೇಳಿ, ಬಾಗಿಲನ್ನು ತೆರೆದರೆ, ನಾನು ಪ್ರವೇಶ ಮಾಡಿ, ಆ ವ್ಯಕ್ತಿಯ ಸಂಗಡ ಊಟಮಾಡುವೆನು. ಅವರೂ ನನ್ನ ಸಂಗಡ ಊಟಮಾಡುವರು.


ನೀನು ನನ್ನ ವಾಕ್ಯವನ್ನು ಸಹನೆಯಿಂದ ಕಾಪಾಡಿಕೊಂಡಿದ್ದರಿಂದ, ಭೂನಿವಾಸಿಗಳನ್ನು ಪರೀಕ್ಷಿಸಲು ಇಡೀ ಲೋಕದಲ್ಲೆಲ್ಲಾ ಬರಲಿರುವ ಶೋಧನೆಯ ಸಮಯದಲ್ಲಿ ನಾನು ಸಹ ನಿನ್ನನ್ನು ಸುರಕ್ಷಿತವಾಗಿಡುವೆನು.


ಆ ಸರ್ಪನು ಪ್ರವಾಹದಿಂದ ಸ್ತ್ರೀಯನ್ನು ಸೆಳೆದುಕೊಂಡು ಹೋಗಬೇಕೆಂದು ಆಕೆಯ ಹಿಂದೆ ತನ್ನ ಬಾಯೊಳಗಿಂದ ನೀರನ್ನು ನದಿಯಂತೆ ಬಿಟ್ಟನು.


ಇಸಾಕನು ತನ್ನ ತಂದೆ ಅಬ್ರಹಾಮನಿಗೆ, “ಅಪ್ಪಾ,” ಎಂದನು. ಆಗ ಅಬ್ರಹಾಮನು, “ಏನು ಮಗನೇ?” ಎಂದನು. ಅದಕ್ಕೆ ಅವನು, “ಇಗೋ, ಬೆಂಕಿಯೂ, ಕಟ್ಟಿಗೆಯೂ ಇವೆ, ಆದರೆ ದಹನಬಲಿಗೋಸ್ಕರ ಕುರಿಮರಿಯು ಎಲ್ಲಿ?” ಎಂದನು.


ಜೀವಪುಸ್ತಕದೊಳಗಿಂದ ಅವರ ಹೆಸರು ಅಳಿದು ಹೋಗಲಿ. ನೀತಿವಂತರ ಸಂಗಡ ಅವರ ಹೆಸರು ಬರೆಯದೆ ಇರಲಿ.


ಇದಲ್ಲದೆ ಆಕಾಶದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗಡೆಯೂ ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಹೀಗೆ ಹೇಳುವುದನ್ನು ಕೇಳಿದೆನು: “ಸಿಂಹಾಸನದ ಮೇಲೆ ಕುಳಿತಿರುವವರಿಗೂ ಕುರಿಮರಿ ಆಗಿರುವವರಿಗೂ ಸ್ತೋತ್ರ, ಗೌರವ, ಮಹಿಮೆ, ಶಕ್ತಿ, ಯುಗಯುಗಾಂತರಗಳಲ್ಲಿಯೂ ಇರಲಿ!”


ಏಳು ಮುದ್ರೆಗಳಲ್ಲಿ ಒಂದನ್ನು ಯಜ್ಞದ ಕುರಿಮರಿ ಆಗಿರುವವರು ತೆರೆಯುವುದನ್ನು ನಾನು ಕಂಡೆನು. ಆ ಜೀವಿಗಳಲ್ಲೊಂದು ಗುಡುಗಿನಂತಿದ್ದ ಶಬ್ದದಲ್ಲಿ, “ಬಾ!” ಎಂದು ಹೇಳುವುದನ್ನು ಕೇಳಿದೆನು.


ಇದು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಎದುರಿನಲ್ಲಿ ಚಲಾಯಿಸಿತು. ಇದು ಮರಣಕರವಾದ ಗಾಯದಿಂದ ವಾಸಿಯಾದ ಮೊದಲನೆಯ ಮೃಗವನ್ನು ಭೂಲೋಕವೂ ಭೂನಿವಾಸಿಗಳೂ ಆರಾಧಿಸುವಂತೆ ಮಾಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು