Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 14:11 - ಕನ್ನಡ ಸಮಕಾಲಿಕ ಅನುವಾದ

11 ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ. ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಿಗಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರು ಹಗಲಿರುಳೂ ವಿಶ್ರಾಂತಿ ಪಡುವುದಿಲ್ಲಾ!” ಎಂದು ಮಹಾಶಬ್ದದಿಂದ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ, ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರಾಗಲಿ ಹಗಲೂ ರಾತ್ರಿ ವಿಶ್ರಾಂತಿಯಿಲ್ಲದೆ ಇರುವರು” ಎಂದು ಮಹಾಶಬ್ದದಿಂದ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅಂಥವರ ನರಳಾಟದ ಹೊಗೆ ಸತತ ಮೇಲೇರುತ್ತಿರುತ್ತದೆ. ಮೃಗಕ್ಕೂ ಅದರ ವಿಗ್ರಹಕ್ಕೂ ಪೂಜೆಸಲ್ಲಿಸುವವರು ಮತ್ತು ಅದರ ಹೆಸರನ್ನು ಸೂಚಿಸುವ ಹಚ್ಚೆಯನ್ನು ಚುಚ್ಚಿಸಿಕೊಂಡವರು ಹಗಲಿರುಳೂ ಬಿಡುವಿಲ್ಲದೆ ಸಂಕಟಪಡುವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ; ಮೃಗಕ್ಕೆ ಮತ್ತು ಅದರ ವಿಗ್ರಹಕ್ಕೆ ನಮಸ್ಕಾರಮಾಡುವವರೂ ಅದರ ಹೆಸರನ್ನು ಸೂಚಿಸುವ ಗುರುತನ್ನು ಹಾಕಿಸಿಕೊಂಡಿರುವವರೆಲ್ಲರೂ ಹಗಲಿರುಳು ಉಪಶಮನವಿಲ್ಲದೆ ಯಾತನೆಪಡುವರು ಎಂದು ಮಹಾ ಶಬ್ದದಿಂದ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವರ ಯಾತನೆಯೆಂಬ ಹೊಗೆಯು ಸದಾ ಏಳುತ್ತಲೇ ಇರುವುದು. ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವ ಮತ್ತು ಅದರ ಹೆಸರನ್ನು ಗುರುತು ಹಾಕಿಸಿಕೊಳ್ಳುವ ಜನರಿಗೆ ಹಗಲಲ್ಲೂ ರಾತ್ರಿಯಲ್ಲೂ ವಿಶ್ರಾಂತಿಯೆಂಬುದೇ ಇರುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತೆಂಚ್ಯಾ ತರಾಸಾಚೊ ಡುಕೊಟ್ ಸದಾ ಸರ್ವತಾಕ್ ಜಾಸ್ತಿ ಹೊವ್ನ್ ವೈರ್ ಜಾತಾ. ಜನಾವರಾಚೆ ನಾಹೊಲ್ಯಾರ್ ತ್ಯೆಚ್ಯಾ ಮುರ್ತಿಕ್ ಆರಾಧನ್‍ ಕರ್ತಲೆ ರ್‍ಹಾಂವ್ದಿತ್. ನಾಹೊಲ್ಯಾರ್ ಕೊನಾಚ್ಯಾ ವರ್ತಿ ತೆಚಿ ವಳಕ್ ಹೊತ್ತೆ ರಾಂವ್ದಿತ್, ದಿಸ್ ಅನಿ ರಾತ್ ಮನಿನಸ್ತಾನಾ ಉಲ್ಲೆಬಿ ಆರಾಮ್ ಘೆವ್ಕ್ ಗಾವಿನಸ್ತಾನಾ ತರಾಸ್ ಸೊಸ್ತ್ಯಾತ್”. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 14:11
30 ತಿಳಿವುಗಳ ಹೋಲಿಕೆ  

ಎಂದೂ ದ್ವಿತೀಯ ಬಾರಿ: “ಹಲ್ಲೆಲೂಯಾ! ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿಹೋಗುತ್ತದೆ!” ಎಂದು ಘೋಷಿಸಿದರು.


ಅದು ರಾತ್ರಿಯಲ್ಲಾದರೂ ಇಲ್ಲವೆ ಹಗಲಿನಲ್ಲಾದರೂ ಆರುವುದಿಲ್ಲ. ಅದರ ಹೊಗೆಯು ನಿರಂತರವಾಗಿ ಏಳುತ್ತಿರುವುದು. ಅದು ತಲತಲಾಂತರಕ್ಕೂ ಹಾಳಾಗಿ ಬಿದ್ದಿರುವುದು, ಅದನ್ನು ಎಂದೆಂದಿಗೂ ಯಾರೂ ಹಾದು ಹೋಗರು.


ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲಾಯಿತು. ಅಲ್ಲಿ ಮೃಗವೂ ಸುಳ್ಳು ಪ್ರವಾದಿ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.


“ಹೀಗೆ ಇವರು ನಿತ್ಯವಾದ ಶಿಕ್ಷೆಗೆ ಒಳಗಾಗುವರು. ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು,” ಎಂದು ಹೇಳುವೆನು.


“ನಾನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಆಕೆಯ ದಹನದ ಹೊಗೆಯನ್ನು ನೋಡಿ, ‘ಈ ಮಹಾಪಟ್ಟಣಕ್ಕೆ ಸಮಾನವಾದದ್ದು ಯಾವುದು?’ ಎಂದು ಕೂಗುವರು.


ಅವರ ಹಿಂದೆ ಮೂರನೆಯವನಾದ ಒಬ್ಬ ದೇವದೂತನು ಬಂದು, “ಯಾವುದಾದರೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ, ಕೈಯ ಮೇಲಾಗಲಿ ಗುರುತು ಹಾಕಿಸಿಕೊಂಡರೆ,


ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯದಿಂದ ಕಪಟಿಗಳು ಆಶ್ಚರ್ಯಕ್ಕೊಳಗಾಗಿ ಹೀಗೆ ಎಂದುಕೊಳ್ಳುವರು, “ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ವಾಸಿಸಬಲ್ಲರು?”


ಅವನು ಸೊದೋಮ್ ಗೊಮೋರಗಳ ಕಡೆಗೂ ಮೈದಾನದ ಎಲ್ಲಾ ಪ್ರದೇಶಗಳ ಕಡೆಗೂ ನೋಡಿದನು. ಆ ಪ್ರದೇಶದಿಂದ ಹೊಗೆಯು ಕುಲುಮೆಯ ಹೊಗೆಯಂತೆ ಏರುತ್ತಿತ್ತು.


ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”


“ಆಮೆನ್! ಸ್ತೋತ್ರ, ಮಹಿಮೆ, ಜ್ಞಾನ, ಕೃತಜ್ಞತೆ, ಗೌರವ, ಶಕ್ತಿ, ಬಲ ನಮ್ಮ ದೇವರಿಗೆ ಯುಗಯುಗಾಂತರಕ್ಕೂ ಉಂಟಾಗಲಿ. ಆಮೆನ್!” ಎಂದು ಹೇಳುತ್ತಿದ್ದರು.


ತಂದೆ ದೇವರು ತಮ್ಮ ಪುತ್ರ ಆಗಿರುವವರ ವಿಷಯದಲ್ಲಿ ಹೀಗೆ ಹೇಳಿದ್ದಾರೆ: “ದೇವರೇ, ನಿಮ್ಮ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿಮ್ಮ ರಾಜದಂಡವಾಗಿದೆ.


ಅರಸರಾಗಿರುವ ನನ್ನ ದೇವರೇ, ನಿಮ್ಮನ್ನು ಘನಪಡಿಸುವೆನು; ನಿಮ್ಮ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು.


ಯೆಹೋವ ದೇವರು ಯುಗಯುಗಾಂತರಗಳಿಗೂ ಅರಸರಾಗಿದ್ದಾರೆ; ರಾಷ್ಟ್ರಗಳು ಅವರ ದೇಶದೊಳಗಿಂದ ಹೊರಹಾಕಲಾಯಿತು.


“ಯೆಹೋವ ದೇವರು ಯುಗಯುಗಾಂತರಗಳವರೆಗೆ ಆಳುವರು.”


ಇನ್ನು ರಾತ್ರಿ ಇರುವುದಿಲ್ಲ. ದೀಪದ ಬೆಳಕೂ ಸೂರ್ಯನ ಬೆಳಕೂ ಅವಶ್ಯವಿಲ್ಲ. ಕರ್ತದೇವರೇ ಅವರಿಗೆ ಬೆಳಕನ್ನು ಕೊಡುವರು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.


ಇದು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಎದುರಿನಲ್ಲಿ ಚಲಾಯಿಸಿತು. ಇದು ಮರಣಕರವಾದ ಗಾಯದಿಂದ ವಾಸಿಯಾದ ಮೊದಲನೆಯ ಮೃಗವನ್ನು ಭೂಲೋಕವೂ ಭೂನಿವಾಸಿಗಳೂ ಆರಾಧಿಸುವಂತೆ ಮಾಡಿತು.


“ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.


ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನು, ರಕ್ತ, ಬೆಂಕಿ, ಹಬೆಯನ್ನು ತೋರಿಸುವೆನು.


ಆದರೆ ದುಷ್ಟರು ಸುಮ್ಮನಿರಲಾರದಂಥ, ಅದರ ನೀರುಗಳು ಕೆಸರನ್ನೂ, ಮೈಲಿಗೆಯನ್ನೂ ಕಾರುವಂಥ ಅಲ್ಲಕಲ್ಲೋಲವಾಗಿರುವ ಸಮುದ್ರದ ಹಾಗಿದ್ದಾರೆ.


ಆ ಜನಾಂಗಗಳಲ್ಲಿ ನಿಮಗೆ ವಿಶ್ರಾಂತಿ ದೊರೆಯುವುದಿಲ್ಲ. ಸ್ವಲ್ಪ ಹೊತ್ತು ಅಂಗಾಲಿಡುವುದಕ್ಕೂ ನಿಮಗೆ ಸ್ಥಳಸಿಕ್ಕುವುದಿಲ್ಲ. ಅಲ್ಲಿ ಯೆಹೋವ ದೇವರು ನಿಮಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಂದುವ ಪ್ರಾಣವನ್ನೂ ಕೊಡುವರು.


ಏಕೆಂದರೆ ಅದು ಯೆಹೋವ ದೇವರು ಮುಯ್ಯಿ ತೀರಿಸುವ ದಿನವಾಗಿದೆ, ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ.


ಯಾರು ಅಡ್ಡಬೀಳದೆ, ನಮಸ್ಕರಿಸದೆ ಇರುವರೋ ಅಂಥವರನ್ನು ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಕುಲುಮೆಯಲ್ಲಿ ಹಾಕಲಾಗುವುದು. ಇದು ರಾಜಾಜ್ಞೆ,” ಎಂದನು.


ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಕೊಡಲಾಗಿದ್ದರಿಂದ, ಆ ವಿಗ್ರಹವು ಮಾತನಾಡುವಂತೆಯೂ ತನ್ನನ್ನು ಆರಾಧನೆ ಮಾಡದವರನ್ನು ಕೊಲ್ಲುವಂತೆಯೂ ಮಾಡುತ್ತದೆ.


ಆ ಗುರುತಾಗಲಿ, ಮೃಗದ ಹೆಸರಾಗಲಿ, ಅದರ ಹೆಸರಿನ ಸಂಖ್ಯೆಯಾಗಲಿ ಇಲ್ಲದವನು ಕ್ರಯ ವಿಕ್ರಯಗಳನ್ನು ಮಾಡದಂತೆಯೂ ಅದು ಮಾಡುವುದು.


“ಆಕೆಯೊಂದಿಗೆ ಜಾರತ್ವ ಮಾಡಿರುವ ಭೂರಾಜರು, ಆಕೆಯ ದಹನದಿಂದ ಏರುವ ಹೊಗೆಯನ್ನು ಕಂಡಾಗೆಲ್ಲಾ ಆಕೆಗಾಗಿ ಅಳುತ್ತಾ ಗೋಳಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು