Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 14:17 - ಕನ್ನಡ ಸಮಕಾಲಿಕ ಅನುವಾದ

17 ಮತ್ತೊಬ್ಬ ದೂತನು ಪರಲೋಕದಲ್ಲಿರುವ ದೇವಾಲಯದೊಳಗಿಂದ ಬಂದನು. ಅವನ ಬಳಿಯೂ ಹರಿತವಾದ ಕುಡುಗೋಲು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮತ್ತೊಬ್ಬ ದೇವದೂತನು ಪರಲೋಕದಲ್ಲಿರುವ ದೇವಾಲಯದೊಳಗಿನಿಂದ ಬಂದನು. ಅವನ ಬಳಿಯೂ ಹರಿತವಾದ ಕುಡುಗೋಲು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಮಗದೊಬ್ಬ ದೇವದೂತನು ಸ್ವರ್ಗದ ದೇವಮಂದಿರದಿಂದ ಹೊರಗೆ ಬಂದನು. ಆತನ ಕೈಯಲ್ಲೂ ಹರಿತವಾದ ಕುಡುಗೋಲು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮತ್ತೊಬ್ಬ ದೂತನು ಪರಲೋಕದಲ್ಲಿರುವ ದೇವಾಲಯದೊಳಗಿಂದ ಬಂದನು. ಅವನಲ್ಲಿ ಸಹ ಹದವಾದ ಕುಡುಗೋಲು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಂತರ ಮತ್ತೊಬ್ಬ ದೇವದೂತನು ಪರಲೋಕದ ಆಲಯದಿಂದ ಹೊರಗೆ ಬಂದನು. ಆ ದೇವದೂತನಲ್ಲಿಯೂ ಹರಿತವಾದ ಒಂದು ಕುಡುಗೋಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಮಾನಾ ಸರ್ಗಾತ್ ಗುಡಿತ್‍ ಅನಿ ಎಕ್‍ ದೆವ್‍ದುತಾ ಭಾಯ್ರ್ ಯೆಲೊ, ತ್ಯೆಚ್ಯಾ ಹಾತಿತ್‍ಬಿ ಎಕ್ ಧಾರ್‍ಲೊ ಇಳೊ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 14:17
7 ತಿಳಿವುಗಳ ಹೋಲಿಕೆ  

ಆಗ ದೇವಾಲಯದಿಂದ ಬಂದ ಗಟ್ಟಿಯಾದ ಧ್ವನಿಯು, ಏಳು ದೇವದೂತರಿಗೂ, “ಹೋಗಿರಿ, ಏಳು ಬೋಗುಣಿಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿದುಬಿಡಿರಿ!” ಎಂದು ಹೇಳುವುದನ್ನು ನಾನು ಕೇಳಿದೆನು.


ತರುವಾಯ ಬೆಂಕಿಗೆ ಅಧಿಕಾರಿಯಾದ ಇನ್ನೊಬ್ಬ ದೂತನು ಬಲಿಪೀಠದ ಬಳಿಯಿಂದ ಬಂದು, ಆ ಹರಿತವಾದ ಕುಡುಗೋಲಿನವನಿಗೆ, “ನಿನ್ನ ಹರಿತವಾದ ಕುಡುಗೋಲನ್ನು ಹಾಕಿ, ಭೂಮಿಯ ದ್ರಾಕ್ಷಿಯ ಗೊಂಚಲುಗಳನ್ನು ಕೊಯ್ಯಿ. ಅದರ ಹಣ್ಣುಗಳು ಪೂರ್ತಿಯಾಗಿ ಮಾಗಿವೆ!” ಎಂದು ಮಹಾಧ್ವನಿಯಿಂದ ಕೂಗಿದನು.


ಆಗ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ ಮಿಂಚುಗಳೂ ಸಪ್ಪಳಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆಲಿಕಲ್ಲಿನ ಮಳೆಯೂ ಉಂಟಾದವು.


ಮೇಘದ ಮೇಲೆ ಕುಳಿತಿದ್ದವರು ತಮ್ಮ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದರು. ಆಗ ಭೂಮಿಯ ಪೈರು ಕೊಯ್ಯಲಾಯಿತು.


ಏಳನೆಯ ದೂತನು ತನ್ನ ಬೋಗುಣಿಯಲ್ಲಿರುವುದನ್ನು ವಾಯುಮಂಡಲದ ಮೇಲೆ ಸುರಿಯಲು, ಆ ದೇವಾಲಯದೊಳಗಿನ ಸಿಂಹಾಸನದಿಂದ ಬಂದ ಮಹಾಧ್ವನಿಯು, “ಸಂಭವಿಸಿದ್ದಾಯಿತು” ಎಂದು ಹೇಳುವುದನ್ನು ಕೇಳಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು