1 ಆಗ ದೇವಾಲಯದಿಂದ ಬಂದ ಗಟ್ಟಿಯಾದ ಧ್ವನಿಯು, ಏಳು ದೇವದೂತರಿಗೂ, “ಹೋಗಿರಿ, ಏಳು ಬೋಗುಣಿಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿದುಬಿಡಿರಿ!” ಎಂದು ಹೇಳುವುದನ್ನು ನಾನು ಕೇಳಿದೆನು.
1 ಆಗ ಆಲಯದೊಳಗಿಂದ ಬಂದ ಮಹಾಧ್ವನಿಯನ್ನು ನಾನು ಕೇಳಿದೆನು. ಅದು ಆ ಏಳು ಮಂದಿ ದೇವದೂತರಿಗೆ, “ನೀವು ಹೋಗಿ ಆ ಏಳು ಬಟ್ಟಲುಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿಯಿರಿ” ಎಂದು ಹೇಳಿತು.
1 ಅನಂತರ ದೇವಾಲಯದೊಳಗಿಂದ ಬಂದ ಮಹಾಶಬ್ದವನ್ನು ಕೇಳಿದೆ. ಅದು ಆ ಏಳು ದೇವದೂತರಿಗೆ, “ನೀವು ಹೋಗಿ ಏಳು ಪಾತ್ರೆಗಳಲ್ಲಿ ತುಂಬಿರುವ ದೇವರ ರೋಷವನ್ನು ಭೂಮಿಯ ಮೇಲೆ ಸುರಿಯಿರಿ,” ಎಂದು ಆಜ್ಞಾಪಿಸಿತು.
1 ಆಗ ಪವಿತ್ರಸ್ಥಾನದಿಂದ ಬಂದ ಮಹಾ ಶಬ್ದವನ್ನು ಕೇಳಿದೆನು. ಅದು ಆ ಏಳು ಮಂದಿ ದೇವದೂತರಿಗೆ - ನೀವು ಹೋಗಿ ಆ ಏಳು ಪಾತ್ರೆಗಳಲ್ಲಿರುವ ದೇವರ ರೌದ್ರವನ್ನು ಭೂವಿುಯ ಮೇಲೆ ಹೊಯ್ಯಿರಿ ಎಂದು ಹೇಳಿತು.
ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ: ನಾನು ಬೇಟೆ ಹಿಡಿಯಲಿಕ್ಕೆ ಏಳುವ ದಿವಸದವರೆಗೂ ನನಗೆ ಕಾದುಕೊಳ್ಳಿರಿ.” ಏಕೆಂದರೆ ಜನಾಂಗಗಳನ್ನು ಕೂಡಿಸುವುದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವುದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ನನ್ನ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವುದಕ್ಕೂ ತೀರ್ಮಾನಿಸಿಕೊಂಡಿದ್ದೇನೆ. ಏಕೆಂದರೆ ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸಲಾಗುವುದು.
ನಿಮ್ಮನ್ನು ತಿಳಿಯದವರ ಮೇಲೆಯೂ, ನಿಮ್ಮ ಹೆಸರನ್ನು ಅರಿಯದ ದೇಶಗಳ ಮೇಲೆಯೂ, ನಿಮ್ಮ ಕೋಪವನ್ನು ಸುರಿದುಬಿಡಿರಿ. ಏಕೆಂದರೆ, ಅವರು ಯಾಕೋಬ್ಯರನ್ನು ನುಂಗಿಬಿಟ್ಟಿದ್ದಾರೆ. ಹೌದು, ಅವರನ್ನು ನುಂಗಿದ್ದಲ್ಲದೆ, ಅವರ ಸ್ವದೇಶವನ್ನು ಸಹ ನಾಶಮಾಡಿದ್ದಾರೆ.
ಯೆಹೋವ ದೇವರು ನಾರುಮಡಿಯನ್ನು ಧರಿಸಿಕೊಂಡಿದ್ದ ಮನುಷ್ಯನಿಗೆ, “ನೀನು ಕೆರೂಬಿಗಳ ಕೆಳಗೆ ಇರುವ ಸುಡುವ ಕಲ್ಲಿದ್ದಲನ್ನು ನಿನ್ನ ಕೈತುಂಬ ತೆಗೆದುಕೊಂಡು ಅದನ್ನು ಪಟ್ಟಣದ ಮೇಲೆ ಎರಚು,” ಎಂದರು. ಹಾಗೆಯೇ ನಾನು ನೋಡುತ್ತಿದ್ದಂತೆಯೇ ಅವನು ಒಳಗೆ ಪ್ರವೇಶಿಸಿದನು.
ತರುವಾಯ ಬೆಂಕಿಗೆ ಅಧಿಕಾರಿಯಾದ ಇನ್ನೊಬ್ಬ ದೂತನು ಬಲಿಪೀಠದ ಬಳಿಯಿಂದ ಬಂದು, ಆ ಹರಿತವಾದ ಕುಡುಗೋಲಿನವನಿಗೆ, “ನಿನ್ನ ಹರಿತವಾದ ಕುಡುಗೋಲನ್ನು ಹಾಕಿ, ಭೂಮಿಯ ದ್ರಾಕ್ಷಿಯ ಗೊಂಚಲುಗಳನ್ನು ಕೊಯ್ಯಿ. ಅದರ ಹಣ್ಣುಗಳು ಪೂರ್ತಿಯಾಗಿ ಮಾಗಿವೆ!” ಎಂದು ಮಹಾಧ್ವನಿಯಿಂದ ಕೂಗಿದನು.
ಆಗ ಮತ್ತೊಬ್ಬ ದೂತನು ದೇವಾಲಯದೊಳಗಿಂದ ಬಂದು ಮೇಘದ ಮೇಲೆ ಕುಳಿತಿದ್ದವರಿಗೆ, “ಭೂಮಿಯ ಪೈರು ಮಾಗಿದೆ. ಕೊಯ್ಯುವ ಕಾಲ ಬಂದಿರುವುದರಿಂದ, ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ!” ಎಂದು ಮಹಾಧ್ವನಿಯಿಂದ ಕೂಗಿದನು.
ಈಗ ನೀನು ಹೋಗಿ ಅಮಾಲೇಕ್ಯರನ್ನು ಹೊಡೆದು, ಅವರಿಗೆ ಉಂಟಾದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿಬಿಟ್ಟು, ಅವರನ್ನು ಕನಿಕರಿಸದೆ ಪುರುಷರನ್ನೂ, ಸ್ತ್ರೀಯರನ್ನೂ, ಚಿಕ್ಕವರನ್ನೂ, ಹಸುಗೂಸುಗಳನ್ನೂ, ದನಗಳನ್ನೂ, ಕುರಿಗಳನ್ನೂ, ಒಂಟೆಗಳನ್ನೂ, ಕತ್ತೆಗಳನ್ನೂ ಕೊಂದುಹಾಕು,’ ” ಎಂಬದು.
ಆದ್ದರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ. ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ. ಅವರ ದುರ್ನಡತೆಯ ಹೊಣೆಯನ್ನು ಅವರ ತಲೆಗಳ ಮೇಲೆ ಹೊರಿಸಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”
ಆಗ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ ಮಿಂಚುಗಳೂ ಸಪ್ಪಳಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆಲಿಕಲ್ಲಿನ ಮಳೆಯೂ ಉಂಟಾದವು.