Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:21 - ಕನ್ನಡ ಸಮಕಾಲಿಕ ಅನುವಾದ

21 ಆಕಾಶದಿಂದ ಒಂದೊಂದು ಸುಮಾರು ನಲವತ್ತೈದು ಕಿಲೋಗ್ರಾಂ ತೂಕದ ಬಹುದೊಡ್ಡ ಆಲಿಕಲ್ಲುಗಳು ಮನುಷ್ಯರ ಮೇಲೆ ಬಿದ್ದವು. ಆಲಿಕಲ್ಲಿನ ಉಪದ್ರವವು ಬಹು ಹೆಚ್ಚಾಗಿದ್ದರಿಂದಲೂ ಮನುಷ್ಯರು ದೇವರನ್ನು ದೂಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮತ್ತು ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಅಲಿಕಲ್ಲು ಸುಮಾರು ನಲ್ವತ್ತು ಕಿಲೊಗ್ರಾಮಿನಷ್ಟು ತೂಕವಾಗಿತ್ತು. ಆ ಆಲಿಕಲ್ಲಿನ ಮಳೆಯ ಉಪದ್ರವವು ಬಹಳ ವಿಪರೀತವಾದ್ದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು ದೇವರನ್ನು ದೂಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಕಾಶದಿಂದ ಮನುಷ್ಯರ ಮೇಲೆ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಆಲಿಕಲ್ಲಿನ ತೂಕ ಸುಮಾರು ಐವತ್ತು ಕಿಲೊಗ್ರಾಮಿನಷ್ಟು ಇತ್ತು. ಆ ಆಲಿಕಲ್ಲಿನ ವಿಪತ್ತು ಅಧಿಕವಾದುದರಿಂದಲೂ ಭಯಂಕರವಾದುದರಿಂದಲೂ ಜನರು ದೇವರನ್ನು ದೂಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮತ್ತು ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆನೇಕಲ್ಲಿನ ಮಳೆ ಸುರಿಯಿತು; ಒಂದೊಂದು ಕಲ್ಲು ಹೆಚ್ಚುಕಡಿಮೆ ನಾಲ್ಕುಮಣ ತೂಕವಾಗಿತ್ತು. ಆ ಆನೇಕಲ್ಲಿನ ಮಳೆಯ ಕಾಟವು ಬಹಳ ಹೆಚ್ಚಾಗಿದ್ದದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು ದೇವರನ್ನು ದೂಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲುಗಳು ಬಿದ್ದವು. ಆ ಆಲಿಕಲ್ಲುಗಳು ನೂರು ಪೌಂಡುಗಳಷ್ಟು ಭಾರವಾಗಿದ್ದವು. ಈ ಉಪದ್ರವದ ಕಾಟದಿಂದ ಜನರು ದೇವರನ್ನು ದೂಷಿಸಿದರು. ಈ ಉಪದ್ರವವು ಬಹಳ ಭೀಕರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಮೊಟ್ಯಾ-ಮೊಟ್ಯಾ ಘಾರ್‍ಬಿಯಾಂಚೊ ಪವ್ಸ್ ಮಳ್ಬಾ ವೈನಾ ಲೊಕಾಂಚ್ಯಾ ವರ್ತಿ ಪಡ್ಲೊ. ತ್ಯಾ ಎಕೆಕ್ ಘಾರ್‍ಬಿಯಾ ಜಗೊಳ್ -ಜಗೊಳ್ ಪನ್ನಾಸ್ ಕಿಲೊ ವಜ್ಜ್ಯಾ ಹೊತ್ತ್ಯಾ, ಹ್ಯಾ ಘಾರ್‍ಬಿಯಾಂಚ್ಯಾ ತರಾಸಾಸಾಟಿ ಲೊಕಾನಿ ದೆವಾಕ್ ಸರಾಪ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್ ಹಿ ಫಿಡಾ ಭಯಾನಕ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:21
15 ತಿಳಿವುಗಳ ಹೋಲಿಕೆ  

ಆಗ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ ಮಿಂಚುಗಳೂ ಸಪ್ಪಳಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆಲಿಕಲ್ಲಿನ ಮಳೆಯೂ ಉಂಟಾದವು.


ಮನುಷ್ಯರು ಬಲವಾದ ಕಾವಿನಿಂದ ಕಂದಿ ಹೋದಾಗ್ಯೂ, ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದರು. ಆದರೆ ಅವರು ದೇವರಿಗೆ ಮಹಿಮೆಯನ್ನು ಸಲ್ಲಿಸುವ ಹಾಗೆ ಪಶ್ಚಾತ್ತಾಪ ಪಡಲಿಲ್ಲ.


ತಮ್ಮ ನೋವುಗಳಿಗಾಗಿಯೂ ಹುಣ್ಣುಗಳಿಗಾಗಿಯೂ ಪರಲೋಕದ ದೇವರನ್ನು ದೂಷಿಸಿದರು. ಆದರೆ ಅವರು, ತಮ್ಮ ಕೃತ್ಯಗಳಿಗಾಗಿ ಪಶ್ಚಾತ್ತಾಪ ಪಡಲಿಲ್ಲ.


ಮೊದಲನೆಯ ದೇವದೂತನು ತನ್ನ ತುತೂರಿಯನ್ನು ಊದಲು, ರಕ್ತದೊಂದಿಗೆ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿದವು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟುಹೋಯಿತು. ಮರಗಳಲ್ಲಿ ಮೂರನೆಯ ಒಂದು ಭಾಗ ಭಸ್ಮವಾಯಿತು ಮತ್ತು ಹಸಿರು ಹುಲ್ಲೆಲ್ಲಾ ಸುಟ್ಟುಹೋಯಿತು.


ಅವರು ಬೇತ್ ಹೋರೋನಿನಿಂದ ಇಳಿದು ಅಜೇಕದವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ, ಅವರ ಮೇಲೆ ಯೆಹೋವ ದೇವರು ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಇಸ್ರಾಯೇಲರ ಖಡ್ಗದ ದಾಳಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು.


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದನ್ನು ನನ್ನ ರೋಷದಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ, ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳು ಸುರಿಯುವುವು.


ಆದ್ದರಿಂದ ಸುಣ್ಣ ಹಚ್ಚುತ್ತಿರುವವನಿಗೆ ಅದು ಬೀಳುವುದೆಂದು ಹೇಳು. ಅಲ್ಲಿ ವಿಪರೀತ ಮಳೆ ಬರುವುದು ಮತ್ತು ದೊಡ್ಡ ಕಲ್ಮಳೆಯು ಬೀಳುವುದು. ಬಿರುಗಾಳಿಯು ಅದನ್ನು ಸೀಳಿಬಿಡುವುದು.


ಅವರು ಘೋರಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯುವರು. ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜನನ್ನೂ, ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.


ಆಗ ಯೆಹೋವ ದೇವರು ತನ್ನ ಗಂಭೀರವಾದ ಧ್ವನಿಯನ್ನು ಕೇಳ ಮಾಡಿ, ತೀವ್ರ ಕೋಪ, ದಹಿಸುವ ಅಗ್ನಿ ಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ, ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.


ಹಾಗಾದರೆ ನಾಳೆ ಇಷ್ಟು ಹೊತ್ತಿಗೆ ಮಹಾ ಕಠಿಣವಾದ ಆಲಿಕಲ್ಲಿನ ಮಳೆಯನ್ನು ಬೀಳುವಂತೆ ಮಾಡುವೆನು. ಅಂಥದ್ದು ಈಜಿಪ್ಟಿನಲ್ಲಿ, ಅದರ ರಾಜ್ಯವು ಸ್ಥಾಪಿತವಾದಂದಿನಿಂದ ಇಲ್ಲಿಯವರೆಗೂ ಆಗಿಲ್ಲ.


ಆಗ ಯೆಹೋವ ದೇವರು ಮೋಶೆಗೆ, “ಆಕಾಶದ ಕಡೆಗೆ ನಿನ್ನ ಕೈಚಾಚು. ಈಜಿಪ್ಟ್ ದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಮತ್ತು ಈಜಿಪ್ಟ್ ದೇಶದಲ್ಲಿ ಇರುವ ಎಲ್ಲಾ ಹೊಲದ ಬೆಳೆಯ ಮೇಲೆಯೂ ಆಲಿಕಲ್ಲಿನ ಮಳೆ ಸುರಿಯುವುದು,” ಎಂದು ಪ್ರಕಟಪಡಿಸಿದರು.


“ಯೋಬನೇ, ನೀನು ಹಿಮದ ಉಗ್ರಾಣಗಳಲ್ಲಿ ಪ್ರವೇಶಿಸಿರುವೆಯಾ? ಕಲ್ಮಳೆಯ ಉಗ್ರಾಣಗಳನ್ನು ನೋಡಿರುವೆಯಾ?


ಅವುಗಳನ್ನು ನಾನು ಇಕ್ಕಟ್ಟಿನ ಕಾಲಕ್ಕಾಗಿ ಇಟ್ಟಿರುವೆನು; ಯುದ್ಧಕದನಗಳ ದಿನಗಳಿಗಾಗಿಯೂ ಕಾದಿಟ್ಟಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು