Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:7 - ಕನ್ನಡ ಸಮಕಾಲಿಕ ಅನುವಾದ

7 ಆಗ ಬಲಿಪೀಠವು ಹೀಗೆ ಮಾತನಾಡುವುದನ್ನು ಕೇಳಿದೆನು: “ಕರ್ತಾ, ಸರ್ವಶಕ್ತರಾದ ದೇವರೇ, ನಿಮ್ಮ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಮೇಲೆ ಯಜ್ಞವೇದಿಯು ಮಾತನಾಡುತ್ತಾ, “ದೇವರಾದ ಕರ್ತನೇ ಸರ್ವಶಕ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ” ಎಂದು ಹೇಳುವುದನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅನಂತರ ಬಲಿಪೀಠದಿಂದ ಹೀಗೆ ಕೇಳಿ ಬಂತು : “ಹೌದು ಪ್ರಭುವೇ, ಸರ್ವಶಕ್ತನೇ, ನೀನಿತ್ತ ತೀರ್ಪು ಸತ್ಯ ಹಾಗೂ ನ್ಯಾಯಬದ್ಧವಾದುದೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಮೇಲೆ ಯಜ್ಞವೇದಿಯು ಮಾತಾಡುತ್ತಾ - ದೇವರಾದ ಕರ್ತನೇ, ಸರ್ವಶಕ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ ನಿಜ ಎಂದು ಹೇಳುವದನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯಜ್ಞವೇದಿಕೆಯಿಂದ ಹೀಗೆ ಹೇಳುವುದನ್ನೂ ನಾನು ಕೇಳಿಸಿಕೊಂಡೆನು: “ಹೌದು, ದೇವರಾದ ಪ್ರಭುವೇ, ಸರ್ವಶಕ್ತನೇ, ನಿನ್ನ ತೀರ್ಪುಗಳೆಲ್ಲಾ ಸತ್ಯವಾಗಿವೆ ಮತ್ತು ನ್ಯಾಯವಾಗಿವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಮಾನಾ ಆಲ್ತಾರಿಕ್ನಾ ಮಿಯಾ ಎಕ್ ಅವಾಜ್ ಆಯಿಕ್ಲೊ, ತೊ, “ಸರ್ವೆಸ್ವರಾ ಸಗ್ಳ್ಯಾನಿಕಿ ದೆವಾ! ತಿಯಾ ಕರಲ್ಲ್ಯಾ ನಿರ್ನಯಾತ್ನಿ ನ್ಯಾಯ್ ಅನಿ ಖರೆ ಹಾಯ್!” ಮನುಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:7
11 ತಿಳಿವುಗಳ ಹೋಲಿಕೆ  

ಏಕೆಂದರೆ ದೇವರ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ. ಏಕೆಂದರೆ ತನ್ನ ಅನೈತಿಕತೆಯಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ದೇವರು ನ್ಯಾಯತೀರಿಸಿ, ಆಕೆಯು ದೇವರ ದಾಸರನ್ನು ಹಿಂಸಿಸಿ, ಚೆಲ್ಲಿಸಿದ ರಕ್ತಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾರೆ.”


ಕುರಿಮರಿ ಆಗಿರುವವರು ಐದನೆಯ ಮುದ್ರೆಯನ್ನು ಒಡೆದಾಗ, ದೇವರ ವಾಕ್ಯದ ನಿಮಿತ್ತವಾಗಿಯೂ ತಮಗಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತರಾದವರ ಆತ್ಮಗಳು ಬಲಿಪೀಠದ ಕೆಳಗಿರುವುದನ್ನು ಕಂಡೆನು.


ಆಗ ಸೆರಾಫಿಯರಲ್ಲಿ ಒಬ್ಬನು ಬಲಿಪೀಠದಿಂದ ತಾನು ಉರಿಯುವ ಕೆಂಡವನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಹಾರಿ ಬಂದು,


ತರುವಾಯ ಬೆಂಕಿಗೆ ಅಧಿಕಾರಿಯಾದ ಇನ್ನೊಬ್ಬ ದೂತನು ಬಲಿಪೀಠದ ಬಳಿಯಿಂದ ಬಂದು, ಆ ಹರಿತವಾದ ಕುಡುಗೋಲಿನವನಿಗೆ, “ನಿನ್ನ ಹರಿತವಾದ ಕುಡುಗೋಲನ್ನು ಹಾಕಿ, ಭೂಮಿಯ ದ್ರಾಕ್ಷಿಯ ಗೊಂಚಲುಗಳನ್ನು ಕೊಯ್ಯಿ. ಅದರ ಹಣ್ಣುಗಳು ಪೂರ್ತಿಯಾಗಿ ಮಾಗಿವೆ!” ಎಂದು ಮಹಾಧ್ವನಿಯಿಂದ ಕೂಗಿದನು.


ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರೆಸದೆ ಹಾಕಿದ ಅವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಕುರಿಮರಿಯಾಗಿರುವವರ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.


“ಸೆರೆಹಿಡಿಯುವವನು ತಾನೇ ಸೆರೆಯಾಗಿ ಹೋಗುವನು. ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗುವನು.” ಇದರಲ್ಲಿ ದೇವಜನರ ಸೈರಣೆಯೂ ನಂಬಿಕೆಯೂ ಇವೆ.


ಒಬ್ಬ ಕೆರೂಬಿಯನು ಕೆರೂಬಿಯರ ಮಧ್ಯದೊಳಗಿಂದ ತನ್ನ ಕೈಯನ್ನು ಬೆಂಕಿಗೆ ಚಾಚಿ, ಸ್ವಲ್ಪ ತೆಗೆದುಕೊಂಡು ನಾರುಮಡಿಯನ್ನು ಧರಿಸಿಕೊಂಡಿದ್ದವನ ಕೈಗೆ ಇಟ್ಟನು. ಇವನು ಅದನ್ನು ತೆಗೆದುಕೊಂಡು ಹೊರಗೆ ಹೋದನು.


ಯೆಹೋವ ದೇವರು ನಾರುಮಡಿಯನ್ನು ಧರಿಸಿಕೊಂಡಿದ್ದ ಮನುಷ್ಯನಿಗೆ, “ನೀನು ಕೆರೂಬಿಗಳ ಕೆಳಗೆ ಇರುವ ಸುಡುವ ಕಲ್ಲಿದ್ದಲನ್ನು ನಿನ್ನ ಕೈತುಂಬ ತೆಗೆದುಕೊಂಡು ಅದನ್ನು ಪಟ್ಟಣದ ಮೇಲೆ ಎರಚು,” ಎಂದರು. ಹಾಗೆಯೇ ನಾನು ನೋಡುತ್ತಿದ್ದಂತೆಯೇ ಅವನು ಒಳಗೆ ಪ್ರವೇಶಿಸಿದನು.


“ನಾನೇ ಆದಿಯೂ ಅಂತ್ಯವೂ ಗತಕಾಲ, ವರ್ತಮಾನ, ಭವಿಷ್ಯತ್ಕಾಲಗಳಲ್ಲಿರುವವನೂ ಮತ್ತು ಸರ್ವಶಕ್ತನೂ ಆಗಿದ್ದೇನೆ,” ಎಂದು ಕರ್ತದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು