Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:9 - ಕನ್ನಡ ಸಮಕಾಲಿಕ ಅನುವಾದ

9 ಮನುಷ್ಯರು ಬಲವಾದ ಕಾವಿನಿಂದ ಕಂದಿ ಹೋದಾಗ್ಯೂ, ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದರು. ಆದರೆ ಅವರು ದೇವರಿಗೆ ಮಹಿಮೆಯನ್ನು ಸಲ್ಲಿಸುವ ಹಾಗೆ ಪಶ್ಚಾತ್ತಾಪ ಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮನುಷ್ಯರು ಬಲವಾದ ಬಿಸಿಲಿನಿಂದ ಸುಟ್ಟುಹೋದಾಗ್ಯೂ ಅವರು ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದಲ್ಲದೆ, ಅವರು ಪಶ್ಚಾತ್ತಾಪಪಡಲಿಲ್ಲ ಆತನಿಗೆ ಮಹಿಮೆಯನ್ನು ಸಲ್ಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮನುಷ್ಯರು ಆ ಕಡು ಕಾವಿನಲ್ಲಿ ಬೆಂದು ನರಳಿದರು. ಈ ಮಾರಕ ವ್ಯಾಧಿಗಳ ಮೇಲೆ ಅಧಿಕಾರ ಇದ್ದ ದೇವರನ್ನೂ ದೂಷಿಸಿದರು. ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ಅವರು ದೇವರಿಗೆ ಅಭಿಮುಖರಾಗಲಿಲ್ಲ; ಅವರ ಮಹಿಮೆಯನ್ನು ಸ್ತುತಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರಮಾಡಿಕೊಳ್ಳದೆ ಈ ಉಪದ್ರವಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಜನರು ಕುಡುಬಿಸಿಲಿನಿಂದ ಕಂದಿಹೋಗಿ ದೇವರ ಹೆಸರನ್ನು ಶಪಿಸಿದರು. ಈ ಉಪದ್ರವಗಳನ್ನು ದೇವರೊಬ್ಬನೇ ನಿಯಂತ್ರಿಸ ಬಲ್ಲವನಾಗಿದ್ದಾನೆ. ಆದರೆ ಜನರು ತಮ್ಮ ಹೃದಯಗಳನ್ನೂ ಜೀವಿತಗಳನ್ನೂ ಪರಿವರ್ತಿಸಿಕೊಳ್ಳಲಿಲ್ಲ. ದೇವರನ್ನು ಮಹಿಮೆಪಡಿಸಲು ಒಪ್ಪಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತ್ಯಾ ಮೊಟ್ಯಾ ಝಳಾಕ್ ಜಳುಲಾಲ್ಯಾರ್‍ಬಿ ಹ್ಯಾ ತರಾಸಾಂಚ್ಯಾ ವರ್ತಿ ಅದಿಕಾರ್ ಹೊತ್ತ್ಯಾ ದೆವಾಕ್ ತ್ಯಾ ಲೊಕಾನಿ ಸರಾಪ್ಲ್ಯಾನಿ. ತೆನಿ ಅಪ್ನಾಚ್ಯಾ ಪಾಪಾಚ್ಯಾ ಜಿವನಾತ್ನಾ ಭಾಯ್ರ್ ಯೆವ್ನ್ ದೆವಾಚ್ಯಾ ಮೊಟೆಪಾನಾಚಿ ಸುತ್ತಿ ಕರುಕ್‍ನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:9
20 ತಿಳಿವುಗಳ ಹೋಲಿಕೆ  

ಆಕಾಶದಿಂದ ಒಂದೊಂದು ಸುಮಾರು ನಲವತ್ತೈದು ಕಿಲೋಗ್ರಾಂ ತೂಕದ ಬಹುದೊಡ್ಡ ಆಲಿಕಲ್ಲುಗಳು ಮನುಷ್ಯರ ಮೇಲೆ ಬಿದ್ದವು. ಆಲಿಕಲ್ಲಿನ ಉಪದ್ರವವು ಬಹು ಹೆಚ್ಚಾಗಿದ್ದರಿಂದಲೂ ಮನುಷ್ಯರು ದೇವರನ್ನು ದೂಷಿಸಿದರು.


ಅದೇ ಗಳಿಗೆಯಲ್ಲಿ, ಮಹಾ ಭೂಕಂಪ ಉಂಟಾಗಿ ಆ ಪಟ್ಟಣದ ಹತ್ತರಲ್ಲೊಂದು ಭಾಗವು ಬಿದ್ದುಹೋಯಿತು. ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಸತ್ತುಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರಿಗೆ ಮಹಿಮೆಯನ್ನು ಸಲ್ಲಿಸಿದರು.


ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು. ಆದರೆ ದೇವರ ಕಡೆಗೆ ತಿರುಗಿಕೊಂಡು ತನ್ನ ವ್ಯಭಿಚಾರವನ್ನು ಬಿಟ್ಟುಬಿಡಲು ಅವಳಿಗೆ ಮನಸ್ಸಿಲ್ಲ.


ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ! ನೀವು ದೇವರ ಕಡೆಗೆ ತಿರುಗಿಕೊಳ್ಳದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ,” ಎಂದರು.


ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ! ನೀವು ದೇವರ ಕಡೆಗೆ ತಿರುಗಿಕೊಳ್ಳದೆ ಹೋದರೆ, ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ.


ಓ ಯೆಹೋವ ದೇವರೇ, ನಿಮ್ಮ ಕಣ್ಣುಗಳು ಸತ್ಯದ ಮೇಲೆ ಇವೆಯಲ್ಲವೋ? ಅವರನ್ನು ಹೊಡೆದಿರಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ತುಳಿದಿರಿ, ಆದರೆ ತಿದ್ದುಕೊಳ್ಳಲು ಒಪ್ಪಲಿಲ್ಲ. ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ. ಅವರು ಪಶ್ಚಾತ್ತಾಪಕ್ಕೆ ನಿರಾಕರಿಸಿದ್ದಾರೆ.


ಅವನು, “ನೀವು ದೇವರಿಗೆ ಭಯಪಟ್ಟು ಅವರಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಅವರು ನ್ಯಾಯತೀರ್ಪು ಮಾಡುವ ಸಮಯ ಬಂದಿದೆ. ಭೂಪರಲೋಕಗಳನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟುಮಾಡಿದ ದೇವರನ್ನೇ ಆರಾಧಿಸಿರಿ!” ಎಂದು ಮಹಾಧ್ವನಿಯಿಂದ ಹೇಳಿದನು.


ಈ ಉಪದ್ರವಗಳಿಂದ ಸಾಯದೆ ಉಳಿದ ಮನುಷ್ಯರು ಇನ್ನೂ ತಮ್ಮ ದುಷ್ಟಕೃತ್ಯಗಳನ್ನು ಬಿಟ್ಟು ಪಶ್ಚಾತ್ತಾಪ ಪಡಲಿಲ್ಲ. ಅವರು ದೆವ್ವಗಳನ್ನೂ, ನೋಡಲು, ಕೇಳಲು, ನಡೆಯಲು ಆಗದ ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳ ವಿಗ್ರಹಗಳನ್ನು ಆರಾಧಿಸುವುದನ್ನೂ ನಿಲ್ಲಿಸಲಿಲ್ಲ.


ನಾನು ತಿರುಗಿ ಬಂದಾಗ, ಹಿಂದೆ ನಿಮ್ಮಲ್ಲಿ ಅಶುದ್ಧತ್ವ, ಲೈಂಗಿಕ ಅನೈತಿಕತೆ, ಪೋಕರಿತನ ಮುಂತಾದ ಪಾಪಗಳನ್ನು ಮಾಡಿ ಪಶ್ಚಾತ್ತಾಪ ಪಡದಿರುವ ಅನೇಕರ ವಿಷಯವಾಗಿ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ತಗ್ಗಿಸಿಬಿಡುವನು ಎಂದು ದುಃಖಪಡಬೇಕಾಗಿರುವುದರಿಂದ ನಾನು ಭಯಪಡುತ್ತೇನೆ.


“ ‘ನಿನ್ನ ಅಶುದ್ಧತ್ವವು ದುಷ್ಕರ್ಮವುಳ್ಳದ್ದು. ನಾನು ನಿನ್ನನ್ನು ಪರಿಶುದ್ಧಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರದಿಂದ ಇನ್ನು ಶುದ್ಧವಾಗುವುದಿಲ್ಲ.


ಅವರು ಘೋರಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯುವರು. ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜನನ್ನೂ, ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.


ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಏಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ? ತಲೆಯೆಲ್ಲಾ ಗಾಯವಾಗಿದೆ, ಹೃದಯವೆಲ್ಲಾ ಬಾಧಿತವಾಗಿದೆ.


ಇದಲ್ಲದೆ ಈ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಇನ್ನೂ ಅಧಿಕವಾಗಿ ಯೆಹೋವ ದೇವರಿಗೆ ಅಪನಂಬಿಗಸ್ತನಾದನು.


ಎಲೀಷನು ಅವರೊಡನೆ ಮಾತನಾಡುತ್ತಿರುವಾಗಲೇ ಆ ದೂತನೂ ಅವನ ಹಿಂದಿನಿಂದ ಅರಸನೂ ಅಲ್ಲಿಗೆ ಬಂದರು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಯೆಹೋವ ದೇವರಿಂದಲೇ ಬಂದದ್ದು. ಇನ್ನು ಮುಂದೆ ನಾನೇಕೆ ಅವರನ್ನು ನಂಬಿ ನಿರೀಕ್ಷಿಸಿಕೊಂಡಿರಬೇಕು?” ಎಂದನು.


ಆಗ ಯೆಹೋಶುವನು ಆಕಾನನಿಗೆ, “ನನ್ನ ಮಗನೇ, ನೀನು ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಘನಪಡಿಸಿ, ಅವರಿಗೆ ಸ್ತೋತ್ರ ಸಲ್ಲಿಸು. ಏನು ಮಾಡಿದೆಯೋ ಅದನ್ನು ನನಗೆ ತಿಳಿಸು, ನನಗೆ ಮರೆಮಾಡಬೇಡ,” ಎಂದನು.


ಬಹು ದಿನಗಳ ಮೇಲೆ ಯೆಹೋವ ದೇವರು ನನಗೆ, “ಹೊರಡು, ಯೂಫ್ರೇಟೀಸ್ ನದಿಗೆ ಅಲ್ಲಿ ಬಚ್ಚಿಡಬೇಕೆಂದು ನಾನು ಅಪ್ಪಣೆಕೊಟ್ಟ ನಡುಕಟ್ಟನ್ನು ಅಲ್ಲಿಂದ ತೆಗೆ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು