Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 17:1 - ಕನ್ನಡ ಸಮಕಾಲಿಕ ಅನುವಾದ

1 ಏಳು ಬೋಗುಣಿಗಳನ್ನು ಹಿಡಿದಿದ್ದ ಏಳು ದೂತರಲ್ಲೊಬ್ಬನು ನನಗೆ, “ಬಾ, ಬಹಳ ನೀರುಗಳ ಮೇಲೆ ಕುಳಿತಿರುವ ಮಹಾಜಾರಸ್ತ್ರೀಗಾಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು, “ಬಾ, ಬಹಳ ನೀರುಗಳ ಮೇಲೆ ಕುಳಿತ್ತಿರುವ ಮಹಾ ಜಾರಸ್ತ್ರೀಗೆ ಆಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಏಳು ಪಾತ್ರೆಗಳನ್ನು ಹಿಡಿದಿದ್ದ ಏಳುಮಂದಿದೇವದೂತರುಗಳಲ್ಲಿ ಒಬ್ಬನು ಬಂದನು. ಆತ ನನಗೆ, “ಇಲ್ಲಿಗೆ ಬಾ, ಜಲರಾಶಿಗಳ ಮೇಲೆ ನಿಂತಿರುವ ಕುಖ್ಯಾತ ವೇಶ್ಯೆಗೆ ಬರುವ ದಂಡನೆಯನ್ನು ನಿನಗೆ ತೋರಿಸುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತಾಡಿ - ಬಾ, ಬಹಳ ನೀರುಗಳ ಮೇಲೆ ವಾಸಿಸಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಿನಗೆ ತೋರಿಸುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿದನು. ಏಳು ಪಾತ್ರೆಗಳನ್ನು ಹೊಂದಿದ್ದವರಲ್ಲಿ ಇವನೂ ಒಬ್ಬನಾಗಿದ್ದನು. ಆ ದೇವದೂತನು, “ಬಾ, ಪ್ರಸಿದ್ಧಳಾದ ವೇಶ್ಯಾಸ್ತ್ರೀಗೆ ನೀಡುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ. ಬಹಳ ನೀರುಗಳ ಮೇಲೆ ಕುಳಿತುಕೊಂಡಿರುವವಳು ಅವಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತನ್ನಾ ಸಾತ್ ಕಟೊರೆ ಧರಲ್ಲ್ಯಾ ಸಾತ್ ದೆವ್‍ದುತಾನಿತ್ಲೊ ಎಕ್ಲೊ ಮಾಜ್ಯಾಕ್ಡೆ ಯೆಲೊ, ಅನಿ “ಯೆ, ಮಿಯಾ ತುಕಾ ಎಕ್ ಸಗ್ಳ್ಯಾಕ್ಡೆ ಗೊತ್ತ್ ಹೊತ್ತ್ಯಾ ವೆಭಿಚಾರ್ ಕರ್ತಲ್ಯಾ ಬಾಯ್ಕೊಮನ್ಸಿಕ್ ಶಿಕ್ಷಾ ದಿತಲೆ ದಾಕ್ವುತಾ, ತೆ ಶಾರ್ ಸುಮಾರ್ ನ್ಹಯಾಂಚ್ಯಾ ಜಗ್ಗೊಳ್ ಭಾಂದಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 17:1
20 ತಿಳಿವುಗಳ ಹೋಲಿಕೆ  

ಏಕೆಂದರೆ ದೇವರ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ. ಏಕೆಂದರೆ ತನ್ನ ಅನೈತಿಕತೆಯಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ದೇವರು ನ್ಯಾಯತೀರಿಸಿ, ಆಕೆಯು ದೇವರ ದಾಸರನ್ನು ಹಿಂಸಿಸಿ, ಚೆಲ್ಲಿಸಿದ ರಕ್ತಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾರೆ.”


ಅನೇಕ ನೀರುಗಳ ಬಳಿಯಲ್ಲಿ ವಾಸವಾಗಿರುವವಳೇ, ಬಹಳ ದ್ರವ್ಯಗಳುಳ್ಳವಳೇ, ನಿನ್ನ ಅಂತ್ಯವೂ, ನಿನ್ನ ನಾಶನದ ಕಾಲವು ಬಂತು.


ಮಹಾ ಪಟ್ಟಣವು ಮೂರು ಭಾಗಗಳಾಗಿ ಹೋಯಿತು ಮತ್ತು ರಾಷ್ಟ್ರಗಳ ನಗರಗಳು ಬಿದ್ದವು. ಇದಲ್ಲದೆ ಮಹಾ ಬಾಬಿಲೋನಿಗೆ ರೋಷವೆಂಬ ದ್ರಾಕ್ಷಾರಸದ ಬಟ್ಟಲನ್ನು ಕೊಡುವಂತೆ ದೇವರಿಗೆ ಅದು ಜ್ಞಾಪಕಕ್ಕೆ ಬಂತು.


ಅಂತಿಮ ಏಳು ಉಪದ್ರವಗಳಿಂದ ತುಂಬಿದ ಏಳು ಬೋಗುಣಿಗಳನ್ನು ಹಿಡಿದಿದ್ದ ಏಳುಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ, “ಬಾ, ಯಜ್ಞದ ಕುರಿಮರಿಯಾದವವರಿಗೆ ಹೆಂಡತಿಯಾಗತಕ್ಕ ವಧುವನ್ನು ನಿನಗೆ ತೋರಿಸುವೆನು!” ಎಂದು ಹೇಳಿ,


“ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು, ನಿನ್ನ ಬಂಧನಗಳನ್ನು ಹರಿದುಬಿಟ್ಟೆನು. ಆದರೆ, ‘ನಾನು ಸೇವೆಮಾಡುವುದಿಲ್ಲ!’ ಎಂದು ನೀನು ಹೇಳಿದೆ. ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೂ ನೀನು ವೇಶ್ಯೆಯಾಗಿ ನಡೆದಿದ್ದೀ.


ನಂಬಿಗಸ್ತಿಕೆಯ ಪಟ್ಟಣವು ವ್ಯಭಿಚಾರದ ಪಟ್ಟಣವಾಗಿದೆಯಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆಯಾಗಿತ್ತು. ಆದರೆ ಈಗ ಕೊಲೆಗಾರರಿಂದ ತುಂಬಿದೆ.


ನಾನು ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ಕಂಡೆನು. ಏಳುಮಂದಿ ದೂತರಲ್ಲಿ ಕಡೆಯ ಏಳು ಉಪದ್ರವಗಳಿದ್ದವು. ಏಕೆಂದರೆ, ಅವುಗಳಲ್ಲಿ ದೇವರ ಕೋಪವು ಸಂಪೂರ್ಣವಾಗುವುದು.


“ಆದರೆ ನೀವು ಮಾಟಗಾತಿಯ ಮಕ್ಕಳೇ, ವೇಶ್ಯೆ ಮತ್ತು ವ್ಯಭಿಚಾರಿಗಳ ಸಂತಾನದವರೇ, ಇಲ್ಲಿಗೆ ಬನ್ನಿರಿ.


ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಹೆಬ್ಬಾಗಿಲುಗಳನ್ನೂ ಅದರ ಗೋಡೆಯನ್ನೂ ಅಳತೆ ಮಾಡುವುದಕ್ಕಾಗಿ ತನ್ನ ಕೈಯಲ್ಲಿ ಚಿನ್ನದ ಅಳತೆಗೋಲನ್ನು ಹಿಡಿದಿದ್ದನು.


ಇವುಗಳಾದ ಮೇಲೆ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿದ್ದ ಒಂದು ದ್ವಾರವು ಕಾಣಿಸಿತು. ನನ್ನೊಂದಿಗೆ ತುತೂರಿಯ ಧ್ವನಿಯಂತೆ ಮಾತನಾಡಿದ, ನಾನು ಮೊದಲು ಕೇಳಿದ ಧ್ವನಿಯಿಂದ, “ಬಾ, ಮುಂದೆ ಸಂಭವಿಸಲಿಕ್ಕೆ ಇರುವವುಗಳನ್ನು ನಿನಗೆ ತೋರಿಸುವೆನು,” ಎಂದು ಹೇಳಿತು.


ಅವರು ಒಬ್ಬರಿಗೊಬ್ಬರು, “ಅವರು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ, ಪವಿತ್ರ ವೇದವನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ಬೆಂಕಿಯಂತೆ ದಹಿಸಿತಲ್ಲವೇ?” ಎಂದುಕೊಂಡರು.


ಮೋಶೆ ಮತ್ತು ಎಲೀಯನು ಎಂಬ ಇಬ್ಬರು ಪುರುಷರು ಯೇಸುವಿನೊಂದಿಗೆ ಮಾತನಾಡುತ್ತಿದ್ದರು.


ಅದನ್ನು ಜಲಪ್ರವಾಹಗಳು ಬೆಳೆಸಿದವು, ಆಳವಾದ ಬುಗ್ಗೆಗಳು ಅದನ್ನು ಎತ್ತರಕ್ಕೆ ಬೆಳೆಸಿದವು. ಅವುಗಳ ತೊರೆಗಳು ಅದರ ಬುಡದ ಸುತ್ತಲೂ ಹರಿದು ತಮ್ಮ ಕಾಲುವೆಗಳನ್ನು ಹೊಲದ ಎಲ್ಲಾ ಮರಗಳಿಗೆ ಕಳುಹಿಸಿದವು.


ಇದು ಕ್ರಿಸ್ತ ಯೇಸುವಿನ ಪ್ರಕಟನೆ. ಶೀಘ್ರವೇ ಸಂಭವಿಸಲಿಕ್ಕಿರುವ ಸಂಗತಿಗಳನ್ನು ತಮ್ಮ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟನೆಯನ್ನು ಹೊಂದಿದರು. ಇದಲ್ಲದೆ ದೇವರು ತಮ್ಮ ದೇವದೂತನನ್ನು ಕಳುಹಿಸಿ, ಅವನ ಮುಖಾಂತರ ಆ ಸಂಗತಿಗಳನ್ನು ತಮ್ಮ ದಾಸನಾದ ಯೋಹಾನನಿಗೆ ತಿಳಿಸಿದರು.


ಇದಾದನಂತರ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೂತನು ಪರಲೋಕದಿಂದ ಕೆಳಗೆ ಇಳಿದು ಬರುವುದನ್ನು ಕಂಡೆನು. ಅವನ ತೇಜಸ್ಸಿನಿಂದ ಭೂಮಿಯು ಬೆಳಗಿತು.


ಇದಲ್ಲದೆ ಅವನು ನನಗೆ, “ಕುರಿಮರಿ ಆಗಿರುವವರ ವಿವಾಹದ ಔತಣಕ್ಕೆ ಕರೆಯಲಾದವರು ಧನ್ಯರು ಮತ್ತು ಅವರು ಹೀಗೆ ಹೇಳಿದರು, ದೇವರ ಈ ಮಾತುಗಳು ಸತ್ಯವಾಗಿವೆ!” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು