Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 17:15 - ಕನ್ನಡ ಸಮಕಾಲಿಕ ಅನುವಾದ

15 ಅನಂತರ ದೂತನು ನನಗೆ, “ಜಾರಸ್ತ್ರೀ ಕೂತಿದ್ದ ಕಡೆ ನೀನು ಕಂಡ ನೀರುಗಳು, ಪ್ರಜೆಗಳನ್ನೂ ಸಮೂಹಗಳನ್ನೂ ರಾಷ್ಟ್ರಗಳನ್ನೂ ಭಾಷೆಗಳನ್ನೂ ಸೂಚಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇನ್ನೂ ಆ ದೇವದೂತನು ನನಗೆ ಹೇಳಿದ್ದೇನಂದರೆ, “ಆ ಜಾರಸ್ತ್ರೀ ಕುಳಿತ್ತಿದ್ದ ನೀರನ್ನು ನೀನು ನೋಡಿದೆಯಲ್ಲ, ಅವು ಜನಾಂಗಳನ್ನು, ಜನ ಸಮೂಹಗಳನ್ನು, ರಾಷ್ಟ್ರಗಳನ್ನು, ಭಾಷೆಗಳನ್ನು ಸೂಚಿಸುತ್ತದೆ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆ ದೇವದೂತನು ಮುಂದುವರೆದು ಹೀಗೆ ನುಡಿದನು : “ಜಲರಾಶಿಗಳ ಮೇಲೆ ನಿಂತಿದ್ದ ಆ ವೇಶ್ಯೆಯನ್ನು ನೋಡಿದೆಯಲ್ಲಾ ! ಆ ಜಲರಾಶಿಯು ಜನಾಂಗಗಳನ್ನೂ ಜನಸಮೂಹವನ್ನೂ ರಾಷ್ಟ್ರಗಳನ್ನೂ ಭಾಷೆಗಳನ್ನೂ ಸೂಚಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇನ್ನೂ ಆ ದೇವದೂತನು ನನಗೆ ಹೇಳಿದ್ದು - ಆ ಜಾರಸ್ತ್ರೀಯು ವಾಸಿಸಿರುವ ನೀರುಗಳನ್ನು ಕಂಡಿಯಲ್ಲ? ಅವು ಪ್ರಜೆ ಸಮೂಹ ಜನ ಭಾಷೆಗಳನ್ನು ಸೂಚಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಂತರ ದೇವದೂತನು ನನಗೆ ಹೀಗೆ ಹೇಳಿದನು: “ಆ ವೇಶ್ಯೆಯು ಕುಳಿತುಕೊಳ್ಳುವ ನೀರುಗಳನ್ನು ನೀನು ನೋಡಿದೆ. ಈ ನೀರುಗಳು ಈ ಲೋಕದ ಅನೇಕ ಜನರನ್ನೂ ವಿವಿಧ ಜನಾಂಗಗಳನ್ನೂ ಪ್ರಜೆಗಳನ್ನೂ ಭಾಷೆಗಳನ್ನೂ ಸೂಚಿಸು ತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ದೆವಾಚ್ಯಾ ದುತಾನ್ ಅಸೆಬಿ ಮಾಕಾ ಸಾಂಗಟ್ಲ್ಯಾನ್, “ತಿ ವ್ಯೆಭಿಚಾರ್ ಕರ್ತಲಿ ಬಾಯ್ಕೊಮನುಸ್ ಬಸಲ್ಲೆ ತಿಯಾ ಬಗ್ತಲೆ ಪಾನಿ ಕಾಯ್ ಮಟ್ಲ್ಯಾರ್, ದೆಶಾ, ಘರಾನ್ಯಾಚೆ ಕುಳಿಯಾ ಅನಿ ಬಾಶಾಂಚಿ ಲೊಕಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 17:15
14 ತಿಳಿವುಗಳ ಹೋಲಿಕೆ  

ಏಳು ಬೋಗುಣಿಗಳನ್ನು ಹಿಡಿದಿದ್ದ ಏಳು ದೂತರಲ್ಲೊಬ್ಬನು ನನಗೆ, “ಬಾ, ಬಹಳ ನೀರುಗಳ ಮೇಲೆ ಕುಳಿತಿರುವ ಮಹಾಜಾರಸ್ತ್ರೀಗಾಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.


ಏಕೆಂದರೆ ಯೆಹೋವ ದೇವರು ಬಾಬಿಲೋನನ್ನು ಸೂರೆಮಾಡಿದ್ದಾರೆ; ಅವಳೊಳಗಿಂದ ಮಹಾ ಶಬ್ದವನ್ನು ತೆಗೆದುಹಾಕಿದ್ದಾರೆ; ಅವಳ ತೆರೆಗಳು ನೀರಿನ ಹಾಗೆ ಘೋಷಿಸುವಾಗ, ಅವುಗಳ ಶಬ್ದದ ಧ್ವನಿಯು ಹೊರಟಿತು.


ಅನೇಕ ನೀರುಗಳ ಬಳಿಯಲ್ಲಿ ವಾಸವಾಗಿರುವವಳೇ, ಬಹಳ ದ್ರವ್ಯಗಳುಳ್ಳವಳೇ, ನಿನ್ನ ಅಂತ್ಯವೂ, ನಿನ್ನ ನಾಶನದ ಕಾಲವು ಬಂತು.


ಆಗ ಸಕಲ ಪ್ರಜೆ, ಕುಲ, ಭಾಷೆ, ಜನಾಂಗಗಳಿಗೆ ಸೇರಿದವರು, ಇವರ ಶವಗಳನ್ನು ಸಮಾಧಿಯಲ್ಲಿಡಲು ಅನುಮತಿಸದೆ, ಮೂರುವರೆ ದಿನಗಳವರೆಗೂ ನೋಡುತ್ತಾ ಇರುವರು.


ಆಗ ನನಗೆ, “ನೀನು ಅನೇಕ ಪ್ರಜೆ, ರಾಷ್ಟ್ರ, ಜನಾಂಗ, ಭಾಷೆ ಮತ್ತು ಅರಸರ ಮುಂದೆ ಪುನಃ ಪ್ರವಾದಿಸಬೇಕು,” ಎಂದು ಹೇಳಲಾಯಿತು.


ಸಮುದ್ರವೇ ಬಾಬಿಲೋನಿನ ಮೇಲೆ ನುಗ್ಗಿಬಿಟ್ಟಿದೆ, ಲೆಕ್ಕವಿಲ್ಲದೆ ತೆರೆಗಳು ಆ ರಾಜ್ಯವನ್ನು ಮುಚ್ಚಿಬಿಟ್ಟಿವೆ.


ಸಮುದ್ರಗಳ ಘೋಷವನ್ನೂ, ಅವುಗಳ ತೆರೆಗಳ ಘೋಷವನ್ನೂ, ಪ್ರಜೆಗಳ ಕೋಲಾಹಲವನ್ನೂ ಶಮನಗೊಳಿಸುವವರು ನೀವೇ.


ಮರಣದ ಪಾಶಗಳು ನನ್ನನ್ನು ಸುತ್ತಿಕೊಂಡವು; ವಿನಾಶಪ್ರವಾಹಗಳು ನನ್ನ ಮೇಲೆ ಹರಿದವು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪ್ರವಾಹಗಳು ಉತ್ತರದಿಂದ ಬರುತ್ತವೆ, ಅದು ತುಂಬಿ ತುಳುಕುವ ಪ್ರಳಯವಾಗುವುದು; ದೇಶವನ್ನೂ ಅದರಲ್ಲಿರುವ ಸಮಸ್ತ ಪಟ್ಟಣವನ್ನೂ, ಅದರ ನಿವಾಸಿಗಳನ್ನೂ ಆಕ್ರಮಿಸುವುವು; ಆಗ ಮನುಷ್ಯರು ಕೂಗುವರು; ದೇಶದ ನಿವಾಸಿಗಳೆಲ್ಲರು ಗೋಳಾಡುವರು.


ಅದನ್ನು ಜಲಪ್ರವಾಹಗಳು ಬೆಳೆಸಿದವು, ಆಳವಾದ ಬುಗ್ಗೆಗಳು ಅದನ್ನು ಎತ್ತರಕ್ಕೆ ಬೆಳೆಸಿದವು. ಅವುಗಳ ತೊರೆಗಳು ಅದರ ಬುಡದ ಸುತ್ತಲೂ ಹರಿದು ತಮ್ಮ ಕಾಲುವೆಗಳನ್ನು ಹೊಲದ ಎಲ್ಲಾ ಮರಗಳಿಗೆ ಕಳುಹಿಸಿದವು.


ಅವರು ಹೊಸಹಾಡನ್ನು ಹಾಡುತ್ತಾ, “ನೀವು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ನೀವು ವಧಿತರಾಗಿ, ನಿಮ್ಮ ರಕ್ತದಿಂದ ಸಕಲ ಕುಲ, ಭಾಷೆ, ಪ್ರಜೆ, ರಾಷ್ಟ್ರಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿರುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು