ಪ್ರಕಟನೆ 17:16 - ಕನ್ನಡ ಸಮಕಾಲಿಕ ಅನುವಾದ16 ನೀನು ಕಂಡ ಆ ಮೃಗ ಮತ್ತು ಹತ್ತು ಕೊಂಬುಗಳು ಆ ಜಾರಸ್ತ್ರೀಯನ್ನು ದ್ವೇಷಿಸಿ, ಆಕೆಯನ್ನು ಗತಿಯಿಲ್ಲದವಳನ್ನಾಗಿಯೂ ಆಕೆಯನ್ನು ಬಟ್ಟೆ ಇಲ್ಲದವಳನ್ನಾಗಿಯೂ ಆಕೆಯ ಮಾಂಸವನ್ನು ತಿಂದು, ಆಕೆಯನ್ನು ಬೆಂಕಿಯಲ್ಲಿ ಸುಟ್ಟುಬಿಡುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇದಲ್ಲದೆ ನೀನು ನೋಡಿದ ಹತ್ತು ಕೊಂಬುಗಳು ಮತ್ತು ಮೃಗವನ್ನು ಕಂಡೆಯಲ್ಲ? ಅವುಗಳು ಜಾರಸ್ತ್ರೀಯನ್ನು ದ್ವೇಷಿಸಿ, ಅವಳನ್ನು ಗತಿಯಿಲ್ಲದವಳನ್ನಾಗಿಯೂ ಬಟ್ಟೆ ಇಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನೀನು ಕಂಡ ಮೃಗವೂ ಅದರ ಹತ್ತು ಕೊಂಬುಗಳೂ ಆ ವೇಶ್ಯೆಯನ್ನು ದ್ವೇಷಿಸುವವರನ್ನು ಸೂಚಿಸುತ್ತದೆ. ಅವರು ಅವಳನ್ನು ನಿರ್ಗತಿಕಳನ್ನಾಗಿ ಮಾಡುವರು, ಬೆತ್ತಲೆಯಾಗಿಸುವರು; ಅವಳ ಮಾಂಸವನ್ನು ಕಿತ್ತು ತಿನ್ನುವರು; ಅವಳನ್ನೇ ಬೆಂಕಿಯಲ್ಲಿ ಸುಟ್ಟುಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇದಲ್ಲದೆ ಹತ್ತು ಕೊಂಬುಗಳನ್ನೂ ಮೃಗವನ್ನೂ ಕಂಡಿಯಲ್ಲ? ಇವುಗಳಿಂದ ಸೂಚಿತರಾದವರು ಆ ಜಾರಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನೀನು ನೋಡಿದ ಆ ಮೃಗ ಮತ್ತು ಅದರ ಹತ್ತು ಕೊಂಬುಗಳು (ರಾಜರುಗಳು) ಆ ವೇಶ್ಯೆಯನ್ನು ದ್ವೇಷಿಸುತ್ತವೆ. ಅವಳಲ್ಲಿರುವುದನ್ನೆಲ್ಲ ಅವರು ಕಿತ್ತುಕೊಂಡು, ಅವಳನ್ನು ನಗ್ನಾವಸ್ಥೆಯಲ್ಲಿ ಬಿಡುತ್ತಾರೆ. ಅವರು ಅವಳ ದೇಹವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತಿಯಾ ಬಗಟಲ್ಲಿ ಧಾ ಶಿಂಗಾ ಅನಿ ತೆ ಭಯಾನಕ್ ಜನಾವರ್ ತ್ಯಾ ವ್ಯೆಭಿಚಾರ್ ಕರ್ತಲಿಚೊ ದ್ವೆಸ್ ಕರ್‍ತ್ಯಾತ್; ತೆನಿ ತಿಚೆಕ್ಡೆ ಹೊತ್ತೆ ಸಗ್ಳೆ ಕಾಡುನ್ ಘೆವ್ನ್ ತಿಕಾ ನಾಗ್ಡೆಚ್ ಸೊಡ್ತ್ಯಾತ್, ತೆನಿ ತಿಚೆ ಮಾಸ್ ಖಾತ್ಯಾತ್ ಅನಿ ತಿಕಾ ಆಗಿನ್ ನಾಸ್ ಕರುನ್ ಟಾಕ್ತ್ಯಾತ್. ಅಧ್ಯಾಯವನ್ನು ನೋಡಿ |