Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 17:17 - ಕನ್ನಡ ಸಮಕಾಲಿಕ ಅನುವಾದ

17 ಏಕೆಂದರೆ, ದೇವರು ತಮ್ಮ ಮನಸ್ಸಿನಲ್ಲಿರುವುದನ್ನು ನಡೆಸುವಂತೆಯೂ ಅವುಗಳ ರಾಜ್ಯವನ್ನು ಮೃಗಕ್ಕೆ ಕೊಡಲು ಒಮ್ಮನಸ್ಸಾಗಿರುವಂತೆಯೂ ಮಾಡಿ, ದೇವರು ತಮ್ಮ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಇದನ್ನು ಅವುಗಳ ಹೃದಯದಲ್ಲಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಏಕೆಂದರೆ ದೇವರು ತನ್ನ ವಾಕ್ಯವನ್ನು ನೆರವೇರಿಸುವುದಕ್ಕಾಗಿಯೂ, ನೆರವೇರಿಸುವಂತೆಯೂ ತನ್ನ ಚಿತ್ತವನ್ನು ಅವರು ಒಂದೇ ಅಭಿಪ್ರಾಯವುಳ್ಳವರಾಗಿ ತಮ್ಮ ಅಧಿಕಾರವನ್ನು ಮೃಗಕ್ಕೆ ಕೊಡುವುದಕ್ಕೂ ಇದನ್ನು ಅವುಗಳ ಹೃದಯಗಳಲ್ಲಿ ಇರಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹೀಗೆ ದೈವಸಂಕಲ್ಪವು ನೆರವೇರಬೇಕೆಂದು ದೇವರೇ ಆ ಜನರನ್ನು ಪ್ರೇರೇಪಿಸುವರು. ಇದೇ ಪ್ರೇರಣೆಯಿಂದಾಗಿ ದೇವರ ವಾಕ್ಯ ನೆರವೇರುವವರೆಗೆ ಅವರು ಒಮ್ಮನಸ್ಸಿನಿಂದ ರಾಜ್ಯಾಧಿಕಾರವನ್ನು ಆ ಮೃಗಕ್ಕೆ ಒಪ್ಪಿಸಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯಾಕಂದರೆ ಅವರು ದೇವರ ಅಭಿಪ್ರಾಯವನ್ನು ನೆರವೇರಿಸುವದಕ್ಕೂ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವದಕ್ಕೂ ದೇವರು ತನ್ನ ವಚನವು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ತನ್ನ ಕಾರ್ಯವನ್ನು ಮಾಡಬೇಕೆಂಬ ಬಯಕೆಯನ್ನು ದೇವರು ಆ ಹತ್ತು ರಾಜರುಗಳಲ್ಲಿ ಉಂಟುಮಾಡಿದ್ದರಿಂದ ಅವರು ಆಳಲು ತಮಗಿದ್ದ ಅಧಿಕಾರವನ್ನು ಮೃಗಕ್ಕೆ ಕೊಡಲು ಸಮ್ಮತಿಸಿದರು. ದೇವರು ಹೇಳಿದ್ದೆಲ್ಲ ಸಂಪೂರ್ಣವಾಗಿ ನೆರವೇರುವ ತನಕ ಅವರು ಆಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಕಶ್ಯಾಕ್ ಮಟ್ಲ್ಯಾರ್ ದೆವಾನ್ ಅಪ್ನಾಚ್ಯಾ ಗೊಸ್ಟಿಯಾ ಖರ್‍ಯಾ ಹೊಯ್‍ ಪತರ್ ಅಪ್ನಾಚೊ ಉದ್ದೆಸ್ ಪುರಾ ಹೊವ್‍ಸಾಟ್ನಿ ಸಗ್ಳೆ ಜಾನಾ ಎಕ್ ಹೊವ್ನ್ ಅಪ್ನಾಚೊ ಅದಿಕಾರ್ ಅನಿ ಬಳ್ ತ್ಯಾ ಭಯಾನಕ್ ಜನಾವರಾಕ್ ದಿ ಸರ್ಕೆ ತೆಂಚ್ಯಾ ಮನಾತ್ನಿ ಘಾಲುನ್ ಥವ್ಲ್ಯಾನ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 17:17
28 ತಿಳಿವುಗಳ ಹೋಲಿಕೆ  

ಆದರೆ ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಬೇಕೆಂದಿರುವ ದಿನಗಳಲ್ಲಿ ದೇವರು ತನ್ನ ಸೇವಕರಾದ ಪ್ರವಾದಿಗಳಿಗೆ ಪ್ರಕಟಿಸಿದಂತೆಯೇ, ದೇವರ ರಹಸ್ಯವು ನೆರವೇರುವುದು.”


ನಿಮ್ಮ ವಿಷಯವಾಗಿ ನನಗಿರುವ ಹಿತಚಿಂತನೆಯನ್ನು ತೀತನ ಹೃದಯದಲ್ಲಿಯೂ ಹುಟ್ಟಿಸಿದ್ದಕ್ಕಾಗಿ ದೇವರಿಗೆ ಕೃತಜ್ಞತೆ ಸಲ್ಲಿಸುತ್ತೇವೆ.


ಸಾಯಂಕಾಲ ಊಟದ ಸಮಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಯೋಚನೆಯನ್ನು, ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಹಾಕಿದ್ದನು.


ಅವರಿಗೆ ಒಳ್ಳೆಯದನ್ನು ಮಾಡುವ ಹಾಗೆ ನಾನು ತಿರುಗಿಸಿಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ. ಅವರು ನನ್ನನ್ನು ಬಿಡದ ಹಾಗೆ ಭಯವನ್ನು ಅವರ ಹೃದಯದಲ್ಲಿ ಇಡುತ್ತೇನೆ.


ಅರಸನ ಹೃದಯವು ಯೆಹೋವ ದೇವರ ಕೈಯಲ್ಲಿ ನೀರಿನ ಕಾಲುವೆಗಳಂತೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.


ಆಗ ಎಜ್ರನು, “ನಮ್ಮ ತಂದೆಗಳ ದೇವರಾಗಿರುವ ಯೆಹೋವ ದೇವರು ಸ್ತುತಿಹೊಂದಲಿ! ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯಕ್ಕೆ ಮಹಿಮೆಯನ್ನು ತರುವಂತೆ, ಅರಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟಿದ್ದಾರೆ.


ಅವರು ಏಕ ಮನಸ್ಸುಳ್ಳವರಾಗಿ, ಮೃಗಕ್ಕೆ ತಮ್ಮ ಬಲ ಮತ್ತು ಅಧಿಕಾರವನ್ನು ಕೊಡುವರು.


“ನಾನು ನಿಮ್ಮೆಲ್ಲರನ್ನು ಕುರಿತು ಮಾತನಾಡುತ್ತಿಲ್ಲ. ನಾನು ಆರಿಸಿಕೊಂಡವರನ್ನು ನಾನು ಬಲ್ಲೆನು. ಆದರೆ ‘ನನ್ನ ಸಂಗಡ ರೊಟ್ಟಿಯನ್ನು ತಿಂದವನೇ, ನನಗೆ ದ್ರೋಹ ಬಗೆದನು,’ ಎಂಬ ಪವಿತ್ರ ವಾಕ್ಯವು ನೆರವೇರಬೇಕಾಗಿದೆ.


ನೇಮಕವಾದ ಪ್ರಕಾರ ಮನುಷ್ಯಪುತ್ರನಾದ ನಾನು ಹೊರಟುಹೋಗುತ್ತೇನೆ; ಆದರೆ ನನಗೆ ದ್ರೋಹಬಗೆಯುವವನಿಗೋ ಎಷ್ಟೋ ಕಷ್ಟ!” ಎಂದು ಹೇಳಿದರು.


ತಮ್ಮ ಜನರನ್ನು ದ್ವೇಷಿಸುವಂತೆಯೂ, ತಮ್ಮ ಸೇವಕರನ್ನು ಕುಯುಕ್ತಿಯಿಂದ ನಡೆಸುವಂತೆಯೂ ದೇವರು ಅವರ ಹೃದಯವನ್ನು ಮಾರ್ಪಡಿಸಿದನು.


ನಾನು ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ಕಂಡೆನು. ಏಳುಮಂದಿ ದೂತರಲ್ಲಿ ಕಡೆಯ ಏಳು ಉಪದ್ರವಗಳಿದ್ದವು. ಏಕೆಂದರೆ, ಅವುಗಳಲ್ಲಿ ದೇವರ ಕೋಪವು ಸಂಪೂರ್ಣವಾಗುವುದು.


ಇದಾದ ಮೇಲೆ ಯೇಸು ಈಗ ಎಲ್ಲವೂ ಪೂರ್ತಿಯಾಗಿದೆಯೆಂದು ತಿಳಿದು, ಪವಿತ್ರ ವೇದದ ವಾಕ್ಯವು ನೆರವೇರುವಂತೆ, “ನನಗೆ ನೀರಡಿಕೆಯಾಗಿದೆ” ಎಂದರು.


ಆದ್ದರಿಂದ ಅವರು, “ನಾವು ಅದನ್ನು ಹರಿಯುವುದು ಬೇಡ. ಆದರೆ ಅದು ಯಾರಿಗಾಗುವುದೋ ಎಂದು ನೋಡುವುದಕ್ಕಾಗಿ ಚೀಟು ಹಾಕಿಕೊಳ್ಳೋಣ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಹೀಗೆ, “ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿಕೊಂಡರು. ನನ್ನ ಒಳ ಅಂಗಿಗಾಗಿ ಚೀಟುಹಾಕಿದರು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರುವಂತೆ, ಸೈನಿಕರು ಚೀಟುಹಾಕಿ ಪಾಲುಮಾಡಿಕೊಂಡರು.


ದೇವರ ವಾಕ್ಯವನ್ನು ಪಡೆದವರು ದೇವರುಗಳೇ ಎಂದು ಆತನು ಕರೆದಿರುವುದಾದರೆ, ಪವಿತ್ರ ವೇದವು ಸುಳ್ಳಾಗಲಾರದು.


ಏಕೆಂದರೆ, ‘ಆತನು ಪಾತಕರಲ್ಲಿ ಒಬ್ಬನಂತೆ ಎಣಿಸಿಕೊಂಡನು,’ ಎಂಬುದಾಗಿ ಪವಿತ್ರ ವೇದದಲ್ಲಿ ಬರೆದಿರುವುದೆಲ್ಲವೂ ನೆರವೇರಬೇಕು ಎಂದು ನಾನು ನಿಮಗೆ ಹೇಳುತ್ತೇನೆ. ಹೌದು, ನನ್ನ ವಿಷಯವಾಗಿ ಬರೆದದ್ದು ನೆರವೇರಲಿದೆ,” ಎಂದರು.


ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಎಂದು ಕರೆಯಲಾಗುವ ಯೂದನಲ್ಲಿ, ಸೈತಾನನು ಪ್ರವೇಶಿಸಿದನು.


ನದಿಯ ನೀರಿನ ಮೇಲೆ ನಿಂತು ನಾರುಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತರಾಗಿರುವವರ ಮೇಲೆ ಆಣೆಯಿಟ್ಟು, “ಅದು ಒಂದುಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು; ಕೊನೆಗೆ ಪರಿಶುದ್ಧರ ಬಲವನ್ನು ಮುರಿದ ಮೇಲೆ ಈ ಕಾರ್ಯಗಳೆಲ್ಲ ಮುಕ್ತಾಯವಾಗುವುವು,” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.


ಆದರೆ ಇಸ್ರಾಯೇಲರು ಶಾಶ್ವತವಾದ ರಕ್ಷಣೆಯೊಂದಿಗೆ ಯೆಹೋವ ದೇವರಲ್ಲಿ ಸಂರಕ್ಷಣೆ ಹೊಂದುವರು. ನೀವು ಯುಗಯುಗಾಂತರಕ್ಕೂ ಎಂದಿಗೂ ನಾಚಿಕೆಪಡುವುದಿಲ್ಲ, ಅವಮಾನ ಹೊಂದುವುದಿಲ್ಲ.


ಮನುಷ್ಯನ ಹೃದಯದಲ್ಲಿ ಅನೇಕ ಯೋಜನೆಗಳಿವೆ; ಆದರೂ ಯೆಹೋವ ದೇವರ ಸಂಕಲ್ಪವೇ ಈಡೇರುವುದು.


ಆಗ ಅವರಲ್ಲಿ ಪ್ರತಿಯೊಬ್ಬನಿಗೆ ಬಿಳೀ ನಿಲುವಂಗಿಯು ಕೊಡಲಾಗಿತ್ತು. ಇನ್ನು ಸ್ವಲ್ಪಕಾಲ ಅವರಂತೆಯೇ ವಧಿಸಲಾಗಬೇಕಾಗಿರುವ ಅವರ ಜೊತೆ ಸೇವಕರ ಮತ್ತು ಸಹೋದರರ ಸಂಖ್ಯೆ ಪೂರ್ಣಗೊಳ್ಳುವ ತನಕ ಕಾದಿರಬೇಕೆಂದು ಅವರಿಗೆ ಹೇಳಲಾಯಿತು.


ಇದಲ್ಲದೆ ಅವನು ನನಗೆ, “ಕುರಿಮರಿ ಆಗಿರುವವರ ವಿವಾಹದ ಔತಣಕ್ಕೆ ಕರೆಯಲಾದವರು ಧನ್ಯರು ಮತ್ತು ಅವರು ಹೀಗೆ ಹೇಳಿದರು, ದೇವರ ಈ ಮಾತುಗಳು ಸತ್ಯವಾಗಿವೆ!” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು