Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 17:3 - ಕನ್ನಡ ಸಮಕಾಲಿಕ ಅನುವಾದ

3 ಅನಂತರ ಅವನು ನನ್ನನ್ನು ಆತ್ಮನಲ್ಲಿ ಅರಣ್ಯಕ್ಕೆ ಒಯ್ದನು. ಅಲ್ಲಿ ಒಬ್ಬ ಸ್ತ್ರೀಯು, ಹತ್ತು ಕೊಂಬುಗಳೂ ಏಳು ತಲೆಗಳೂ ಇದ್ದು, ದೇವದೂಷಣೆಯ ಹೆಸರುಗಳಿಂದ ತುಂಬಿರುವ ಕಡುಗೆಂಪು ಬಣ್ಣದ ಮೃಗದ ಮೇಲೆ ಕುಳಿತಿರುವುದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಅವನು ದೇವರಾತ್ಮವಶನಾದ ನನ್ನನ್ನು ಎತ್ತಿಕೊಂಡು ಮರುಭೂಮಿಗೆ ಹೋದನು. ಅಲ್ಲಿ ನಾನು ಕಡುಗೆಂಪು ಬಣ್ಣದ ಮೃಗದ ಮೇಲೆ ಕುಳಿತಿದ್ದ ಒಬ್ಬ ಸ್ತ್ರೀಯನ್ನು ಕಂಡೆನು. ಆ ಮೃಗದ ಮೈಮೇಲೆಲ್ಲಾ ದೂಷಣೆಗಳಿಂದ ಕೂಡಿದ್ದ ಹೆಸರುಗಳು ತುಂಬಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಾನು ದೇವರಾತ್ಮ ವಶನಾದೆ. ಆಗ ದೇವದೂತನು ನನ್ನನ್ನು ಅಡವಿಗೆ ಕೊಂಡೊಯ್ದನು. ಅಲ್ಲಿ, ಒಂದು ಕಡುಗೆಂಪಾದ ಮೃಗದ ಮೇಲೆ ಕುಳಿತಿದ್ದ ಸ್ತ್ರೀಯೊಬ್ಬಳನ್ನು ಕಂಡೆ. ಆ ಮೃಗದ ಮೈಮೇಲೆಲ್ಲಾ ದೇವದೂಷಣೆಯ ಮಾತುಗಳೇ ತುಂಬಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಅವನು ದೇವರಾತ್ಮವಶನಾದ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು. ಅಲ್ಲಿ ನಾನು ರಕ್ತವರ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ಕಂಡೆನು; ಆ ಮೃಗದ ಮೈಮೇಲೆಲ್ಲಾ ದೇವದೂಷಣೆಯ ಹೆಸರುಗಳು ತುಂಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಬಳಿಕ ದೇವದೂತನು ಪವಿತ್ರಾತ್ಮವಶನಾದ ನನ್ನನ್ನು ಎತ್ತಿಕೊಂಡು ಮರಳುಗಾಡಿಗೆ ಹೋದನು. ಅಲ್ಲಿ ಒಬ್ಬ ಸ್ತ್ರೀಯು ಕೆಂಪು ಮೃಗದ ಮೇಲೆ ಕುಳಿತಿರುವುದನ್ನು ನಾನು ನೋಡಿದೆನು. ಆ ಮೃಗದ ಮೈಮೇಲೆಲ್ಲಾ ದೇವದೂಷಣೆಯ ಹೆಸರುಗಳು ಬರೆದಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಪವಿತ್ರ್ ಆತ್ಮ್ಯಾನುಚ್ ಮಾಕಾ ಚಾಲ್ವುನ್ ನ್ಹೆಲ್ಯಾನ್ ಅನಿ ದೆವಾಚ್ಯಾ ದುತಾನ್ ಮಾಕಾ ಡಂಗ್ಳಿತ್ ಉಕ್ಲುನ್ ನ್ಹೆಲ್ಯಾನ್, ಥೈ ಎಕ್ ತಾಂಬ್ಡ್ಯಾ ಭಯಾನಕ್ ಜನಾವಾರಾಚ್ಯಾ ವರ್ತಿ ಬಸಲ್ಲಿ ಬಾಯ್ಕೊಮನುಸ್ ಹೊತ್ತಿ, ತ್ಯಾ ಭಯಾನಕ್ ಜನಾವಾರಾಚ್ಯಾ ವರ್ತಿ ದೆವಾಕ್ ಅವ್ಮಾನ್ ಕರ್ತಲಿ ನಾವಾ ಲಿವಲ್ಲಿ ಹೊತ್ತಿ; ತ್ಯಾ ಭಯಾನಕ್ ಜನಾವಾರಾಚಿ ಸಾತ್ ಟಕ್ಲಿ ಅನಿ ಧಾ ಶಿಂಗಾ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 17:3
26 ತಿಳಿವುಗಳ ಹೋಲಿಕೆ  

ಪರಲೋಕದಲ್ಲಿ ಮತ್ತೊಂದು ಸೂಚನೆಯು ಕಾಣಿಸಿತು. ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. ಅದರ ತಲೆಯ ಮೇಲೆ ಏಳು ಮುಕುಟಗಳಿದ್ದವು.


ನೀನು ಕಂಡ ಆ ಸ್ತ್ರೀಯು ಭೂರಾಜರನ್ನು ಆಳುವ ಮಹಾನಗರಿಯೇ,” ಎಂದು ಹೇಳಿದನು.


ಆ ಸ್ತ್ರೀಯು ಅರಣ್ಯಕ್ಕೆ ಓಡಿ ಹೋದಳು. ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದರು.


ಆ ಸ್ತ್ರೀಯು ನೇರಳೆ ಮತ್ತು ಕಡುಗೆಂಪು ಬಣ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ, ಅಮೂಲ್ಯವಾದ ಹರಳು, ಮುತ್ತುಗಳಿಂದ ಅಲಂಕರಿಸಿಕೊಂಡಿದ್ದಳು. ಆಕೆಯು ತನ್ನ ಕೈಯಲ್ಲಿ ಅಸಹ್ಯವಾದ ವಸ್ತುಗಳಿಂದಲೂ ಮತ್ತು ತನ್ನ ಅಶುದ್ಧ ಅನೈತಿಕತೆಯಿಂದಲೂ ತುಂಬಿದ ಚಿನ್ನದ ಬಟ್ಟಲನ್ನು ಹಿಡಿದುಕೊಂಡಿದ್ದಳು.


ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲಾದವು. ಅಲ್ಲಿ ಆಕೆಯು ಒಂದುಕಾಲ, ಎರಡುಕಾಲ ಮತ್ತು ಅರ್ಧಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು.


ಅವನು ಮಹೋನ್ನತ ದೇವರಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ, ಪರಿಶುದ್ಧರನ್ನು ಬಾಧಿಸಿ, ಕಾಲ ನಿಯಮಗಳನ್ನು ಬದಲಾಯಿಸುವುದಕ್ಕೆ ಪ್ರಯತ್ನಿಸುವನು. ಪರಿಶುದ್ಧರು ಒಂದುಕಾಲ, ಎರಡುಕಾಲ, ಅರ್ಧಕಾಲದ ತನಕ ಅವರು ಅವನ ಕೈವಶವಾಗಿರುವರು.


ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ, ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ, ತನ್ನಲ್ಲಿಯೇ ಕಣ್ಣುಳ್ಳದ್ದಾಗಿ ಬಡಾಯಿ ಮಾತನಾಡಿದ ಬಾಯುಳ್ಳದ್ದಾಗಿ, ಮಿಕ್ಕ ಕೊಂಬುಗಳಿಗಿಂತ ಭಯಂಕರವಾಗಿ ಕಾಣಿಸುತ್ತಾ ಇದ್ದ ಆ ಕೊಂಬಿನ ವಿಷಯವಾಗಿ ಸತ್ಯಾರ್ಥವನ್ನು ತಿಳಿಯಬೇಕೆಂದಿದ್ದೇನೆ.


“ಆ ಕೊಂಬುಗಳ ಬಗ್ಗೆ ನಾನು ಆಲೋಚಿಸುತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿದೆ. ಇದರ ಮುಂದೆ ಮೊದಲಿನ ಕೊಂಬುಗಳಲ್ಲಿ ಮೂರನ್ನು ಬೇರುಸಹಿತ ಕೀಳಲಾಯಿತು. ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ, ಬಡಾಯಿ ಕೊಚ್ಚುವ ಬಾಯಿಯೂ ಇದ್ದವು.


ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಪರಿಶುದ್ಧ ಪಟ್ಟಣವಾದ ಯೆರೂಸಲೇಮು ಪರಲೋಕದೊಳಗಿಂದ ದೇವರ ಕಡೆಯಿಂದ ಇಳಿದು ಬರುವುದನ್ನು ನನಗೆ ತೋರಿಸಿದನು.


ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿದನು. ಆಗ ದೇವರಾತ್ಮರು ದೇವದರ್ಶನದಲ್ಲಿ ಯೆರೂಸಲೇಮಿನ ಉತ್ತರದ ಕಡೆಗೆ ಎದುರಾಗಿರುವ ಒಳ ಅಂಗಳದ ಕಡೆಗೆ, ರೋಷಗೊಳಿಸುವ ವಿಗ್ರಹವು ಇದ್ದಲ್ಲಿಗೆ ನನ್ನನ್ನು ಎತ್ತಿಕೊಂಡು ಹೋದರು.


ಅನಂತರ ದೇವರಾತ್ಮರು, ದೇವರ ಆತ್ಮರಿಂದಾದ ದರ್ಶನದಲ್ಲಿ ನನ್ನನ್ನು ಬಾಬಿಲೋನಿಯರ ದೇಶಕ್ಕೆ ಸೆರೆಯವರ ಬಳಿಗೆ ಎತ್ತಿಕೊಂಡು ಹೋದರು. ಆಗ ನಾನು ನೋಡಿದ ದರ್ಶನವು ನನ್ನಿಂದ ಮೇಲೆ ಹೋಯಿತು.


ದೇವರೆಣಿಸಿಕೊಳ್ಳುವ ಎಲ್ಲವನ್ನೂ ಆರಾಧಿಸಲಾಗುವ ಪ್ರತಿಯೊಂದನ್ನೂ ಅವನು ವಿರೋಧಿಸಿ ನಿಲ್ಲುವನು. ದೇವರಿಗೆ ಸಂಬಂಧಿಸಿದ ಇವೆಲ್ಲವುಗಳ ಮೇಲೆ ತನ್ನನ್ನು ಹೆಚ್ಚಿಸಿಕೊಳ್ಳುವನು. ತಾನೇ ದೇವರೆಂದು ಘೋಷಿಸಿ ದೇವರ ಆಲಯದಲ್ಲಿ ಕೂತುಕೊಳ್ಳುವನು.


ಆಮೇಲೆ ದೇವರಾತ್ಮರು ನನ್ನನ್ನು ಎತ್ತಿಕೊಂಡು ಹೋದರು. ಮಹಿಮೆಯಿಂದ ಕೂಡಿದ ಯೆಹೋವ ದೇವರ ಮಹಿಮೆಯು ಅವರ ವಾಸಸ್ಥಾನದಲ್ಲಿ ಸ್ತೋತ್ರವಾಗಲಿ ಎಂಬ ಮಹಾಶಬ್ದವು ನನ್ನ ಹಿಂದೆ ಕೇಳಿಸಿತು.


ತನ್ನ ಪ್ರಿಯನನ್ನು ಒರಗಿಕೊಂಡು ಅಡವಿಯಿಂದ ಬರುವ ಇವಳು ಯಾರು? ಸೇಬುಗಿಡದ ಕೆಳಗೆ ನಿನ್ನನ್ನು ಪ್ರೇರಿಸಿದೆನು. ಅದು ನಿನ್ನ ತಾಯಿ ನಿನ್ನನ್ನು ಗರ್ಭಧರಿಸಿದ ಸ್ಥಳ. ಅಲ್ಲಿ ನಿನ್ನ ತಾಯಿ ಪ್ರಸವವೇದನೆಯಿಂದ ನಿನ್ನನ್ನು ಹಡೆದಳು.


ನಾನು ಕರ್ತ ಯೇಸುವಿನ ದಿನದಲ್ಲಿ ಆತ್ಮಭರಿತನಾಗಿರಲು ನನ್ನ ಹಿಂದೆ ತುತೂರಿಯ ಶಬ್ದದಂತಿರುವ ಮಹಾಧ್ವನಿಯನ್ನು ಕೇಳಿದೆನು.


ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು. ತನ್ನನ್ನು ತಾನೇ ಹೆಚ್ಚಿಸಿಕೊಂಡು, ತನ್ನನ್ನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನನ್ನಾಗಿ ಮಾಡಿಕೊಂಡು, ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ, ರೋಷವು ತೀರುವವರೆಗೂ ವೃದ್ಧಿಯಾಗಿರುವನು. ಹೀಗೆ ನಿಶ್ಚಯವಾದದ್ದು ನೆರವೇರಲೇಬೇಕು.


ಇದಲ್ಲದೆ ಅವರು ಅವನಿಗೆ, “ಇಗೋ, ನಿನ್ನ ಸೇವಕರ ಸಂಗಡ ಐವತ್ತು ಮಂದಿ ಬಲಿಷ್ಠರಾದವರಿದ್ದಾರೆ. ಅವರು ಹೋಗಿ ನಿನ್ನ ಯಜಮಾನನನ್ನು ಹುಡುಕಲು ಅಪ್ಪಣೆ ಆಗಲಿ. ಒಂದು ವೇಳೆ ಯೆಹೋವ ದೇವರ ಆತ್ಮರು ಅವನನ್ನು ಎತ್ತಿಕೊಂಡು ಹೋಗಿ ಬೆಟ್ಟದ ಮೇಲಾದರೂ, ತಗ್ಗಿನಲ್ಲಾದರೂ ಇಟ್ಟಿರಬಹುದು,” ಎಂದರು. ಅದಕ್ಕೆ ಅವನು, “ಕಳುಹಿಸಬೇಡಿರಿ,” ಎಂದನು.


ನಾನು ನಿನ್ನನ್ನು ಬಿಟ್ಟು ಹೋಗುವಾಗ, ಯೆಹೋವ ದೇವರ ಆತ್ಮರು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯುವರು. ನಾನು ಬಂದು ಅಹಾಬನಿಗೆ ತಿಳಿಸಿದಾಗ, ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕುವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕಂದಿನಿಂದ ಯೆಹೋವ ದೇವರನ್ನು ಆರಾಧಿಸುತ್ತೇನೆ.


ಕೂಡಲೇ ನಾನು ಆತ್ಮವಶನಾದೆನು. ಆಗ ನನ್ನೆದುರಿನಲ್ಲಿ ಪರಲೋಕದಲ್ಲಿ ಒಂದು ಸಿಂಹಾಸನವಿತ್ತು. ಸಿಂಹಾಸನದ ಮೇಲೆ ಒಬ್ಬರು ಕುಳಿತಿದ್ದರು.


ಅವರು ನೀರಿನಿಂದ ಹೊರಗೆ ಬಂದಾಗ, ತಕ್ಷಣವೇ ಕರ್ತದೇವರ ಆತ್ಮರು ಫಿಲಿಪ್ಪನನ್ನು ತೆಗೆದುಕೊಂಡು ಹೋದರು. ಆಮೇಲೆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಕಂಚುಕಿಯು ಸಂತೋಷಪಡುತ್ತಾ ತನ್ನ ಮಾರ್ಗದಲ್ಲಿ ಹೊರಟುಹೋದನು.


ಅವರು ಯೇಸುವಿನ ಬಟ್ಟೆಗಳನ್ನು ತೆಗೆದುಹಾಕಿ ಕಡುಗೆಂಪು ನಿಲುವಂಗಿಯನ್ನು ಅವರಿಗೆ ತೊಡಿಸಿದರು.


ಅವರ ಸರಕುಗಳಾದ ಚಿನ್ನ, ಬೆಳ್ಳಿ, ಬೆಲೆಬಾಳುವ ಕಲ್ಲು ಹಾಗೂ ಮುತ್ತುಗಳು, ನಯವಾದ ನಾರುಮಡಿ, ಕಡುಗೆಂಪು ವಸ್ತ್ರ, ರೇಷ್ಮೆ, ಊದಾವರ್ಣದ ವಸ್ತ್ರ, ಅಗಿಲು ಮರ ಮತ್ತು ದಂತ ಪಾತ್ರೆಗಳು, ಬೆಲೆಬಾಳುವ ಮರ, ತಾಮ್ರ, ಕಬ್ಬಿಣ ಮತ್ತು ಚಂದ್ರಕಾಂತ ಶಿಲೆ,


“ ‘ಅಯ್ಯೋ! ಅಯ್ಯೋ! ಶೋಕಭರಿತ ಮಹಾನಗರಿಯೇ, ನೀನು ನೇರಳೆ, ಕಡುಗೆಂಪು ನಾರುಮಡಿಯನ್ನು ಧರಿಸಿ, ಚಿನ್ನ, ಬೆಲೆಬಾಳುವ ಕಲ್ಲು ಮತ್ತು ಮುತ್ತುಗಳಿಂದ ಬೆಳಗುತ್ತಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು