ಪ್ರಕಟನೆ 17:4 - ಕನ್ನಡ ಸಮಕಾಲಿಕ ಅನುವಾದ4 ಆ ಸ್ತ್ರೀಯು ನೇರಳೆ ಮತ್ತು ಕಡುಗೆಂಪು ಬಣ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ, ಅಮೂಲ್ಯವಾದ ಹರಳು, ಮುತ್ತುಗಳಿಂದ ಅಲಂಕರಿಸಿಕೊಂಡಿದ್ದಳು. ಆಕೆಯು ತನ್ನ ಕೈಯಲ್ಲಿ ಅಸಹ್ಯವಾದ ವಸ್ತುಗಳಿಂದಲೂ ಮತ್ತು ತನ್ನ ಅಶುದ್ಧ ಅನೈತಿಕತೆಯಿಂದಲೂ ತುಂಬಿದ ಚಿನ್ನದ ಬಟ್ಟಲನ್ನು ಹಿಡಿದುಕೊಂಡಿದ್ದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆ ಸ್ತ್ರೀಯು ಧೂಮ್ರವರ್ಣದ ವಸ್ತ್ರಗಳನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ, ರತ್ನ, ಮುತ್ತುಗಳಿಂದ ಅಲಂಕರಿಸಿಕೊಂಡಿದ್ದಳು. ಆಕೆಯು ತನ್ನ ಕೈಯಲ್ಲಿ ಅಸಹ್ಯವಾದವುಗಳಿಂದಲೂ ಮತ್ತು ತನ್ನ ಅಶುದ್ಧ ಜಾರತ್ವಗಳಿಂದಲೂ ತುಂಬಿದ ಚಿನ್ನದ ಬಟ್ಟಲನ್ನು ಹಿಡಿದುಕೊಂಡಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆ ಸ್ತ್ರೀ ಕೆನ್ನೀಲಿಯ ಹಾಗೂ ಕಡುಗೆಂಪಾದ ಬಟ್ಟೆಯನ್ನು ಧರಿಸಿದ್ದಳು; ಚಿನ್ನ, ಮುತ್ತು, ರತ್ನಾಭರಣಗಳಿಂದ ಅಲಂಕೃತಳಾಗಿದ್ದಳು. ಕೈಯಲ್ಲಿ ಚಿನ್ನದ ಪಾತ್ರೆಯನ್ನೂ ಹಿಡಿದಿದ್ದಳು. ಅವಳ ಹಾದರದ ಅಸಹ್ಯಗಳಿಂದಲೂ ಕಳಂಕಗಳಿಂದಲೂ ಅದು ತುಂಬಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. ಆ ಸ್ತ್ರೀಯು ಧೂಮ್ರವರ್ಣದ ವಸ್ತ್ರಗಳನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ರತ್ನ ಮುತ್ತು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅಸಹ್ಯವಾದವುಗಳಿಂದ ಅಂದರೆ ಅವಳ ಜಾರತ್ವ ಸಂಬಂಧವಾದ ಅಶುದ್ಧ ವಸ್ತುಗಳಿಂದ ತುಂಬಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆ ಸ್ತ್ರೀಯು ಧೂಮ್ರ ವರ್ಣದ ಮತ್ತು ಕೆಂಪು ಬಣ್ಣದ ಬಟ್ಟೆಗಳನ್ನು ಧರಿಸಿದ್ದಳು. ಅವಳು ತಾನು ತೊಟ್ಟಿದ್ದ ಚಿನ್ನ, ರತ್ನ, ಮುತ್ತು, ಮುಂತಾದವುಗಳಿಂದ ಪ್ರಕಾಶಿಸುತ್ತಿದ್ದಳು. ಅವಳು ತನ್ನ ಕೈಯಲ್ಲಿ ಚಿನ್ನದ ಬಟ್ಟಲನ್ನು ಹಿಡಿದಿದ್ದಳು. ಆ ಬಟ್ಟಲು ಅಸಹ್ಯವಾದವುಗಳಿಂದ ಮತ್ತು ಅವಳ ಲೈಂಗಿಕ ಪಾಪಗಳ ಅಶುದ್ಧತೆಯಿಂದ ತುಂಬಿಹೋಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತ್ಯಾ ಬಾಯ್ಕೊಮಸ್ಸಿನ್ ಜಾಂಬ್ಳೆ ಕಪ್ಡೆ ನೆಸಲ್ಲಿನ್ ಅನಿ ಸೊನಾಚ್ಯಾ ಅನಿ ಲೈ ಕಿಮ್ತಿಚ್ಯಾ ಫೊಡ್ಯಾನಿ ಅನಿ ಮೊತಿಯಾನಿ ಶಿಂಗಾರ್ ಕರುನ್ ಘೆಟಲ್ಲಿನ್. ತೆನಿ ಅಪ್ನಾಚ್ಯಾ ಹಾತಾತ್ನಿ ಪೊಜ್ಡ್ಯಾನಿ ಅನಿ ವ್ಯೆಬಿಚಾರಾಚ್ಯಾ ಕಾಮಾಚ್ಯಾ ಬುರ್ಶ್ಯಾ ಸಾಮಾನಾನಿ ಭರಲ್ಲೆ ಸೊನಾಚೆ ಆಯ್ದಾನ್ ಧರಲ್ಲಿನ್. ಅಧ್ಯಾಯವನ್ನು ನೋಡಿ |
ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡುವವನ ಹಾಗಿದ್ದಾನೆ. ಕುರಿಮರಿಯನ್ನು ಬಲಿ ಕೊಡುವವನು, ನಾಯಿಯ ಕುತ್ತಿಗೆಯನ್ನು ಕಡಿಯುವವನ ಹಾಗಿದ್ದಾನೆ. ಕಾಣಿಕೆಯನ್ನು ಅರ್ಪಿಸುವವನು, ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಹಾಕುವವನು, ವಿಗ್ರಹವನ್ನು ಪೂಜಿಸುವವನ ಹಾಗಿದ್ದಾನೆ. ಹೀಗೆ, ಅವರು ಸ್ವಂತ ಮಾರ್ಗಗಳನ್ನು ಆಯ್ದುಕೊಂಡಿದ್ದಾರೆ. ಅವರ ಪ್ರಾಣವು ಅವರ ಅಸಹ್ಯಗಳಲ್ಲಿ ಹರ್ಷಿಸುತ್ತವೆ.