Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 17:6 - ಕನ್ನಡ ಸಮಕಾಲಿಕ ಅನುವಾದ

6 ಆ ಸ್ತ್ರೀಯು ಪರಿಶುದ್ಧರ ರಕ್ತವನ್ನೂ ಮತ್ತು ಯೇಸುವಿನ ಸಾಕ್ಷಿಗಳಾಗಿದ್ದವರ ರಕ್ತವನ್ನೂ ಕುಡಿದಿರುವುದನ್ನು ನಾನು ಕಂಡೆನು. ಆಕೆಯನ್ನು ನಾನು ಕಂಡಾಗ, ಬಹು ಆಶ್ಚರ್ಯಗೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ಸ್ತ್ರೀಯು ನೀತಿವಂತರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿನೀಡಿ ಹತರಾದವರ ರಕ್ತವನ್ನು ಕುಡಿದು ಮತ್ತಳಾಗಿರುವುದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದೇವಜನರ ರಕ್ತವನ್ನು ಮತ್ತು ಕ್ರಿಸ್ತೇಸುವಿಗೋಸ್ಕರ ಹುತಾತ್ಮರಾದವರ ರಕ್ತವನ್ನು ಹೀರಿ ಮತ್ತಳಾಗಿದ್ದಳು ಅವಳು. ಇದನ್ನು ಕಂಡು ನನಗೆ ದಿಗ್ಭ್ರಮೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆ ಸ್ತ್ರೀಯು ದೇವಜನರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿ ಕೊಟ್ಟು ಹತರಾದವರ ರಕ್ತವನ್ನೂ ಕುಡಿದು ಮತ್ತಳಾಗಿರುವದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ಸ್ತ್ರೀಯು ಕುಡಿದು ಮತ್ತಳಾಗಿರುವುದನ್ನು ನಾನು ನೋಡಿದೆನು. ಅವಳು ದೇವರ ಪರಿಶುದ್ಧ ಜನರ ರಕ್ತವನ್ನು ಕುಡಿದು ಮತ್ತಳಾಗಿದ್ದಳು. ಯೇಸುವಿನಲ್ಲಿ ತಮಗಿರುವ ನಂಬಿಕೆಯ ಕುರಿತಾಗಿ ತಿಳಿಸಿದ ಜನರ ರಕ್ತವನ್ನು ಅವಳು ಕುಡಿದು ಮತ್ತಳಾಗಿದ್ದಳು. ಆ ಸ್ತ್ರೀಯನ್ನು ನಾನು ನೋಡಿದಾಗ ನನಗೆ ತುಂಬಾ ಆಶ್ಚರ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅನಿ ತಿ ಬಾಯ್ಕೊಮನುಸ್ ದೆವಾಚ್ಯಾ ಲೊಕಾಂಚೆ ಅನಿ ಜೆಜುಸಾಟ್ನಿ ಮನುನ್ ಅಪ್ನಾಚೊ ಜಿವ್ ದಿವ್ನ್ ಮರಲ್ಲ್ಯಾ ಲೊಕಾಂಚೆ ರಗಾತ್ ಫಿವ್ನ್ ನಿಶೆತ್ ಹೊತ್ತೆ ಮಿಯಾ ಬಗಟ್ಲೊ. ತಿಕಾ ಬಗಟಲ್ಲ್ಯಾ ತನ್ನಾ ಮಾಕಾ ತರ್ ಲೈ ಅಜಾಪ್ ದಿಸ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 17:6
12 ತಿಳಿವುಗಳ ಹೋಲಿಕೆ  

ಅವರು ನಿಮ್ಮ ಭಕ್ತರ ಮತ್ತು ನಿಮ್ಮ ಪ್ರವಾದಿಗಳ ರಕ್ತವನ್ನು ಸುರಿಸಿದ್ದಾರೆ. ನೀವು ಅವರಿಗೆ ಕುಡಿಯುವುದಕ್ಕೆ ರಕ್ತವನ್ನೇ ಕೊಟ್ಟಿರುವಿರಿ. ಅವರು ಅದಕ್ಕೆ ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.


ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಕೊಡಲಾಗಿದ್ದರಿಂದ, ಆ ವಿಗ್ರಹವು ಮಾತನಾಡುವಂತೆಯೂ ತನ್ನನ್ನು ಆರಾಧನೆ ಮಾಡದವರನ್ನು ಕೊಲ್ಲುವಂತೆಯೂ ಮಾಡುತ್ತದೆ.


ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು, ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ. ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನನ್ನು ಕೊಲ್ಲಲಾದ ದಿನಗಳಲ್ಲಿಯೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಅಲ್ಲಗಳೆಯಲಿಲ್ಲ.


ಇದಲ್ಲದೆ ಅದಕ್ಕೆ ಪರಿಶುದ್ಧರ ಮೇಲೆ ಯುದ್ಧಮಾಡಿ, ಅವರನ್ನು ಜಯಿಸುವುದಕ್ಕೆ ಬಲವು ಕೊಡಲಾಯಿತು ಮತ್ತು ಸಕಲ ಕುಲ, ಪ್ರಜೆ, ಭಾಷೆ, ರಾಷ್ಟ್ರಗಳ ಮೇಲೆ ಅದಕ್ಕೆ ಅಧಿಕಾರವು ಸಹ ಕೊಡಲಾಯಿತು.


ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಕುರಿಮರಿಯಾಗಿರುವವರ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.


ನಿಮ್ಮ ಸಾಕ್ಷಿಯಾದ ಸ್ತೆಫನನ ರಕ್ತ ಸುರಿಸಿದಾಗ ಅದಕ್ಕೆ ನಾನೂ ಸಮ್ಮತಿ ಕೊಟ್ಟು ಅವನನ್ನು ಕೊಲ್ಲುವವರ ಬಟ್ಟೆಗಳನ್ನು ಕಾಯುತ್ತಾ ನಿಂತಿದ್ದೆನು,’ ಎಂದೆನು.


ಅವನು ಮಹೋನ್ನತ ದೇವರಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ, ಪರಿಶುದ್ಧರನ್ನು ಬಾಧಿಸಿ, ಕಾಲ ನಿಯಮಗಳನ್ನು ಬದಲಾಯಿಸುವುದಕ್ಕೆ ಪ್ರಯತ್ನಿಸುವನು. ಪರಿಶುದ್ಧರು ಒಂದುಕಾಲ, ಎರಡುಕಾಲ, ಅರ್ಧಕಾಲದ ತನಕ ಅವರು ಅವನ ಕೈವಶವಾಗಿರುವರು.


ನೀನು ಕೆಟ್ಟದ್ದನ್ನು ನೋಡದ ಹಾಗೆ ಶುದ್ಧ ಕಣ್ಣುಗಳುಳ್ಳವರು. ನೀವು ಅನ್ಯಾಯವನ್ನು ದೃಷ್ಟಿಸಲಾರಿರಿ, ವಂಚಿಸುವವರನ್ನು ಏಕೆ ಸಹಿಸಿಕೊಳ್ಳುತ್ತೀರಿ? ದುಷ್ಟನು ತನಗಿಂತ ನೀತಿವಂತನನ್ನು ನುಂಗಿ ಬಿಡುವ ವೇಳೆಯಲ್ಲಿ ಏಕೆ ಸುಮ್ಮನಿರುತ್ತೀರಿ?


ನಾನು ನೋಡಲಾಗಿ ಆ ಕೊಂಬು ಪರಿಶುದ್ಧರ ಸಂಗಡ ಯುದ್ಧ ಮಾಡಿತು ಮತ್ತು ಅವರಿಗೆ ವಿರೋಧವಾಗಿ ಜಯಗಳಿಸಿತು.


“ಪ್ರತಿಯೊಬ್ಬನು ಉತ್ತಮ ದ್ರಾಕ್ಷಾರಸವನ್ನು ಮೊದಲು ತಂದಿಟ್ಟು ಜನರು ತುಂಬಾ ಕುಡಿದ ಮೇಲೆ ಸಾಧಾರಣವಾದದ್ದನ್ನು ಕೊಡುತ್ತಾರೆ, ನೀನಾದರೋ ಉತ್ತಮ ದ್ರಾಕ್ಷಾರಸವನ್ನು ಇನ್ನೂ ಇಟ್ಟುಕೊಂಡಿರುವೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು