ಪ್ರಕಟನೆ 17:7 - ಕನ್ನಡ ಸಮಕಾಲಿಕ ಅನುವಾದ7 ಆಗ ದೂತನು ನನಗೆ: “ನೀನೇಕೆ ಆಶ್ಚರ್ಯಪಟ್ಟೆ? ನಾನು ನಿನಗೆ ಆ ಸ್ತ್ರೀಯ ವಿಷಯವಾಗಿಯೂ ಅವಳು ಹೊತ್ತುಕೊಂಡಿದ್ದ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದ ಮೃಗದ ವಿಷಯವಾಗಿಯೂ ಇರುವ ಗೂಡಾರ್ಥವನ್ನು ನಿನಗೆ ತಿಳಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದರೆ ಆ ದೇವದೂತನು ನನ್ನನ್ನು ಕುರಿತು ಹೇಳಿದ್ದೇನಂದರೆ “ನೀನು ಆಶ್ಚರ್ಯ ಪಡುತ್ತಿರುವುದೇತಕ್ಕೆ? ಆ ಸ್ತ್ರೀಯ ವಿಷಯವಾಗಿಯೂ, ಅವಳ ವಾಹನವಾಗಿದ್ದ ಮೃಗದ ವಿಷಯವಾಗಿಯೂ, ಏಳು ತಲೆಗಳೂ ಹತ್ತು ಕೊಂಬುಗಳುಳ್ಳ ಮೃಗ ಇರುವ ಗೂಢಾರ್ಥವನ್ನು ನಾನು ನಿನಗೆ ವಿವರಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆ ದೇವದೂತನು ನನಗೆ ಹೀಗೆ ಹೇಳಿದನು : “ನೀನು ದಿಗ್ಭ್ರಮೆಗೊಂಡಿರುವುದೇಕೆ? ಆ ಸ್ತ್ರೀಯ ಹಾಗೂ ಅವಳ ವಾಹನವಾಗಿರುವ ಏಳು ತಲೆ, ಹತ್ತು ಕೊಂಬುಗಳುಳ್ಳ ಮೃಗದ ನಿಗೂಢತೆಯನ್ನು ನಾನು ನಿನಗೆ ವಿವರಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಗ ಆ ದೇವದೂತನು ನನಗೆ ಹೇಳಿದ್ದು - ನೀನೇಕೆ ಆಶ್ಚರ್ಯಪಟ್ಟಿ? ಆ ಸ್ತ್ರೀಯಿಂದಲೂ ಅವಳ ವಾಹನವಾಗಿದ್ದು ಏಳು ತಲೆಗಳೂ ಹತ್ತು ಕೊಂಬುಗಳೂ ಉಳ್ಳ ಮೃಗದಿಂದಲೂ ಸೂಚಿತವಾದ ಗೂಢಾರ್ಥವನ್ನು ನಾನು ನಿನಗೆ ವಿವರಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆಗ ದೇವದೂತನು ನನಗೆ, “ನೀನೇಕೆ ಆಶ್ಚರ್ಯಗೊಂಡೆ? ಈ ಸ್ತ್ರೀಯ ಗೂಢಾರ್ಥವನ್ನು ಮತ್ತು ಈಕೆ ಸವಾರಿ ಮಾಡುತ್ತಿರುವ ಏಳು ತಲೆಗಳನ್ನು ಮತ್ತು ಹತ್ತು ಕೊಂಬುಗಳನ್ನು ಹೊಂದಿರುವ ಮೃಗದ ಗೂಢಾರ್ಥವನ್ನು ನಾನು ನಿನಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 “ತುಕಾ ಕಶ್ಯಾಕ್ ಅಜಾಪ್ ದಿಸುಕ್ ಲಾಗ್ಲಾ!” ಮನುನ್ ದೆವಾಚ್ಯಾ ದುತಾನ್ ಮಾಕಾ ಇಚಾರ್‍ಲ್ಯಾನ್.ಮಿಯಾ ತುಕಾ ತ್ಯಾ ಬಾಯ್ಕೊಮಾನ್ಸೆಚೊ ಅನಿ ತಿಕಾ ವಾವುನ್ ಘೆವ್ನ್ ಅಸಲ್ಲ್ಯಾ ತ್ಯಾ ಭಯಾನಕ್ ಜನಾವಾರಾಚೊ ಅರ್ಥ್ ತುಕಾ ಸಾಂಗ್ತಾ ತೆಕಾ ಸಾತ್ ಟಕ್ಲಿ ಅನಿ ಧಾ ಶಿಂಗಾ ಹೊತ್ತಿ. ಅಧ್ಯಾಯವನ್ನು ನೋಡಿ |