ಪ್ರಕಟನೆ 17:8 - ಕನ್ನಡ ಸಮಕಾಲಿಕ ಅನುವಾದ8 ನೀನು ಕಂಡ ಮೃಗವು ಒಮ್ಮೆ ಇತ್ತು, ಈಗ ಇಲ್ಲ, ಪಾತಾಳದೊಳಗಿನಿಂದ ಮೇಲೆ ಬಂದು ವಿನಾಶಕ್ಕೆ ಹೊರಡಲಿದೆ. ಲೋಕದ ಸೃಷ್ಟಿಯಾದ ದಿನದಿಂದ ಯಾರ ಯಾರ ಹೆಸರುಗಳು ಜೀವಗ್ರಂಥದಲ್ಲಿ ಬರೆದಿರುವುದಿಲ್ಲವೋ, ಆ ಭೂನಿವಾಸಿಗಳು ಮೃಗವನ್ನು ನೋಡಿ ಆ ಮೃಗವು ಹಿಂದೆ ಇತ್ತು, ಈಗ ಇಲ್ಲ, ಇನ್ನು ಮೇಲೆ ಬರಲಿದೆ ಎಂದು ಆಶ್ಚರ್ಯಗೊಳ್ಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು ಅಧೋಲೋಕದೊಳಗಿನಿಂದ ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನೀನು ಕಂಡ ಈ ಮೃಗ ಒಮ್ಮೆ ಇತ್ತು. ಆದರೆ ಈಗ ಇಲ್ಲ. ಅದು ಪಾತಾಳಕೂಪದಿಂದ ಬಂದು ವಿನಾಶದತ್ತ ತೆರಳುತ್ತದೆ. ಭೂನಿವಾಸಿಗಳಲ್ಲಿ ಲೋಕಾದಿಯಿಂದ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳನ್ನು ಬರೆದಿಲ್ಲವೋ ಅಂಥವರು ಅದನ್ನು ಕಂಡು ದಿಗ್ಭ್ರಮೆಗೊಳ್ಳುವರು. ಏಕೆಂದರೆ, ಈ ಮೃಗ ಒಮ್ಮೆ ಇತ್ತು, ಆದರೆ ಈಗ ಇಲ್ಲ. ಆದರೆ ಅದು ಮತ್ತೊಮ್ಮೆ ಬರಲಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನೀನು ಕಂಡ ಈ ಮೃಗವು ಮೊದಲು ಇತ್ತು, ಈಗ ಇಲ್ಲ, ಮತ್ತು ಅಧೋಲೋಕದಿಂದ ಏರಿಬಂದು ನಾಶಕ್ಕೆ ಹೋಗುವದು. ಭೂನಿವಾಸಿಗಳೊಳಗೆ ಯಾರಾರ ಹೆಸರುಗಳು ಲೋಕಾದಿಯಿಂದ ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿರುವದಿಲ್ಲವೋ ಅವರು ಈ ಮೃಗವನ್ನು ನೋಡಿ ಇದು ಮೊದಲು ಇತ್ತು, ಈಗ ಇಲ್ಲ, ಇನ್ನು ಮೇಲೆ ಬರುವದು ಎಂದು ತಿಳಿದು ಆಶ್ಚರ್ಯಪಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನೀನು ನೋಡಿದ ಆ ಮೃಗವು ಒಂದು ಕಾಲದಲ್ಲಿ ಜೀವಿಸಿತ್ತು. ಆದರೆ ಈಗ ಆ ಮೃಗವು ಜೀವಂತವಾಗಿಲ್ಲ. ಆದರೆ ಆ ಮೃಗವು ತಳವಿಲ್ಲದ ಕೂಪದಿಂದ ಜೀವಂತವಾಗಿ ಮೇಲೆದ್ದುಬಂದು ನಾಶವಾಗು ವುದು. ಲೋಕದಲ್ಲಿ ಜೀವಿಸುತ್ತಿರುವ ಜನರು ಆ ಮೃಗವನ್ನು ನೋಡಿ, ಅದು ಒಂದು ಕಾಲದಲ್ಲಿ ಜೀವಂತವಾಗಿತ್ತು, ಈಗ ಇಲ್ಲ, ಆದರೆ ಮತ್ತೆ ಬರುವುದು ಎಂಬುದನ್ನು ತಿಳಿದು ಅವರು ಆಶ್ಚರ್ಯಪಡುವರು. ಲೋಕವು ಸೃಷ್ಟಿಯಾದಂದಿನಿಂದ ಜೀವಬಾಧ್ಯರ ಪುಸ್ತಕದಲ್ಲಿ ಈ ಜನರ ಹೆಸರುಗಳನ್ನು ಬರೆದೇ ಇಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತೆ ಭಯಾನಕ್ ಜನಾವರಾಚ್ಯಾ ಅದ್ದಿ ಎಗ್ದಾ ಝಿತ್ತೆ ಹೊತ್ತೆ, ಖರೆ ಅತ್ತಾ ತೆ ಜಾಸ್ತಿ ಎಳ್ ಝಿತ್ತೆ ರ್‍ಹಾಯ್ನಾ; ತೆ ಪಾತಾಳಾತ್ನಾ ವರ್ತಿ ಯೆತಲ್ಯಾತ್ ಹಾಯ್, ಅನಿ ತೆ ನಾಸಾಕ್ ಜಾವ್ನ್ ಪಾವ್ತಾ. ಜಗ್ ರಚುಚ್ಯಾ ಅದ್ದಿ ಜಿವನಾಚ್ಯಾ ಪುಸ್ತಕಾತ್ ನಾವ್ ಲಿವಲ್ಲೆ ನಸಲ್ಲಿ ಜಿಮ್ನಿ ವೈಲಿ ಸಗ್ಳಿ ಲೊಕಾ ಹ್ಯಾ ಭಯಾನಕ್ ಜನಾವರ್ ಬಗುನ್ ಅಜಾಪ್ ಹೊತ್ಯಾತ್. ತೆ ಎಗ್ದಾ ಝಿತ್ತೆ ಹೊತ್ತೆ, ಅತ್ತಾ ತೆ ಅನಿ ಲೈ ಎಳ್ ಝಿತ್ತೆ ರ್‍ಹಾಯ್ನಾ. ಖರೆ ತೆ ಅನಿ ಪರ್ತುನ್ ದಿಸ್ತಾ. ಅಧ್ಯಾಯವನ್ನು ನೋಡಿ |