Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 19:17 - ಕನ್ನಡ ಸಮಕಾಲಿಕ ಅನುವಾದ

17 ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವುದನ್ನು ಕಂಡೆನು. ಅವನು ಮಹಾಧ್ವನಿಯಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ, “ಬನ್ನಿರಿ, ದೇವರು ಏರ್ಪಡಿಸುವ ಮಹಾಭೋಜನಕ್ಕೆ ಕೂಡಿಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆ ಮೇಲೆ ಒಬ್ಬ ದೇವದೂತನು ಸೂರ್ಯನಲ್ಲಿ ನಿಂತಿರುವುದನ್ನು ಕಂಡೆನು. ಅವನು ಮಹಾ ಸ್ವರದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ, “ಬನ್ನಿರಿ, ದೇವರು ಮಾಡಿಸುವ ಮಹಾ ಔತಣಕ್ಕೆ ಸೇರಿ ಬನ್ನಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅನಂತರ ದೇವದೂತನೊಬ್ಬ ಸೂರ್ಯನ ಮೇಲೆ ನಿಂತಿರುವುದನ್ನು ಕಂಡೆ. ಆತನು ಗಟ್ಟಿಯಾದ ಧ್ವನಿಯಿಂದ ಮಧ್ಯಾಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಹೀಗೆ ಹೇಳಿದನು: “ದೇವರ ದೊಡ್ಡ ಔತಣಕ್ಕೆ ಕೂಡಿಬನ್ನಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಮೇಲೆ ಒಬ್ಬ ದೇವದೂತನು ಸೂರ್ಯನಲ್ಲಿ ನಿಂತಿರುವದನ್ನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ - ಬನ್ನಿರಿ, ದೇವರು ಮಾಡಿಸುವ ಮಹಾಭೋಜನಕ್ಕೆ ಕೂಡಿಬನ್ನಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಂತರ ಒಬ್ಬ ದೇವದೂತನು ಸೂರ್ಯನ ಮೇಲೆ ನಿಂತಿರುವುದನ್ನು ನಾನು ನೋಡಿದೆನು. ಆ ದೇವದೂತನು ಆಕಾಶದಲ್ಲಿ ಹಾರುತ್ತಿರುವ ಹಕ್ಕಿಗಳಿಗೆಲ್ಲ ಹೀಗೆ ಹೇಳುತ್ತಿದ್ದನು: “ದೇವರ ಮಹಾಭೋಜನಕ್ಕೆ ಒಟ್ಟುಗೂಡಿ ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಮಾನಾ ಮಿಯಾ ದಿಸಾಚ್ಯಾ ವರ್ತಿ ಇಬೆ ಹೊತ್ತ್ಯಾ ಎಕ್ ದೆವ್‍ದುತಾಕ್ ಬಗಟ್ಲೊ. ತೆನಿ ಮಳ್ಬಾ ವರ್ತಿ ಹುಡ್ತಲ್ಯಾ ಸಗ್ಳ್ಯಾ ಫಾಂಕ್ರಾಕ್ನಿ ಮೊಟ್ಯಾ ಅವಾಜಾನ್, “ಯೆವಾ ಅನಿ ದೆವಾಚ್ಯಾ ಮೊಟ್ಯಾ ಲಗ್ನಾಚ್ಯಾ ಜೆವಾನಾಕ್ ಗೊಳಾ ಹೊವಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 19:17
10 ತಿಳಿವುಗಳ ಹೋಲಿಕೆ  

ಉಳಿದವರು ಆ ಕುದುರೆಯ ಮೇಲೆ ಕುಳಿತಿದ್ದವನ ಬಾಯಿಂದ ಬಂದ ಕತ್ತಿಯಿಂದ ಹತರಾದರು ಮತ್ತು ಪಕ್ಷಿಗಳೆಲ್ಲಾ ಅವರ ಮಾಂಸದಿಂದ ಹೊಟ್ಟೆ ತುಂಬಿಸಿಕೊಂಡವು.


ನಾನು ನೋಡಲಾಗಿ, ಆಕಾಶದ ಮಧ್ಯದಲ್ಲಿ ಹಾರುತ್ತಿರುವ ಒಂದು ಗರುಡ ಪಕ್ಷಿ ಮಹಾಧ್ವನಿಯಿಂದ: ಇನ್ನೂ ಊದಲಿರುವ ಮೂವರು ದೂತರ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿಗಳಿಗೆ, “ಅಯ್ಯೋ! ಅಯ್ಯೋ! ಅಯ್ಯೋ!” ಎಂದಿತು.


ನನ್ನ ಸೊತ್ತು ನನಗೆ ಚಿತ್ರವರ್ಣದ ಪಕ್ಷಿಯಾಯಿತು. ಸುತ್ತಲಾಗಿ ಹದ್ದುಗಳು ಅದಕ್ಕೆ ವಿರೋಧವಾಗಿವೆ. ಬನ್ನಿ, ಕಾಡುಮೃಗಗಳನ್ನೆಲ್ಲಾ ಕೂಡಿಸಿರಿ, ನುಂಗುವುದಕ್ಕೆ ಅವುಗಳನ್ನು ತನ್ನಿರಿ.


ಅರಣ್ಯದ ಸಕಲ ಮೃಗಗಳೇ, ಕಾಡಿನ ಎಲ್ಲಾ ಮೃಗಗಳೇ, ನುಂಗಿಬಿಡುವುದಕ್ಕೆ ಬನ್ನಿರಿ.


ಮತ್ತೊಬ್ಬ ದೇವದೂತನು ಆಕಾಶದ ಮಧ್ಯದಲ್ಲಿ ಹಾರುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ರಾಷ್ಟ್ರ, ಹಿನ್ನಲೆ, ಭಾಷೆ ಹಾಗೂ ಪ್ರಜೆಗಳವರಿಗೂ ಸಾರಿ ಹೇಳುವುದಕ್ಕೆ ನಿತ್ಯ ಸುವಾರ್ತೆಯು ಅವನಲ್ಲಿತ್ತು.


ದಾವೀದನಿಗೆ, “ನೀನು ನನ್ನ ಬಳಿಗೆ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು,” ಎಂದನು.


ಆದಾಗ್ಯೂ ನಾನು ಅರೀಯೇಲಿಗೆ ಇಕ್ಕಟ್ಟನ್ನು ಉಂಟುಮಾಡುವೆನು. ಅಲ್ಲಿ ಕಷ್ಟವೂ, ದುಃಖವೂ ಇರುವುದು. ಅವಳು ನನಗೆ ಬಲಿಪೀಠದ ಒಲೆಯಂತೆ ಇರುತ್ತಾಳೆ.


ಕೆಳಗೆ ಬಿದ್ದ ಮರದ ಮೇಲೆ ಆಕಾಶದ ಪಕ್ಷಿಗಳೆಲ್ಲಾ ಕೂತುಕೊಳ್ಳುವುವು. ಎಲ್ಲಾ ಕಾಡುಮೃಗಗಳು ಅದರ ರೆಂಬೆಗಳ ಬಳಿಯಲ್ಲಿರುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು