Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 19:20 - ಕನ್ನಡ ಸಮಕಾಲಿಕ ಅನುವಾದ

20 ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ನಮಸ್ಕರಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲ್ಪಟ್ಟರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತ್ಯಾ ಭಯಾನಕ್ ಜನಾವರಾಚೆ ಅನಿ ತೆಚ್ಯಾ ವಾಂಗ್ಡಾ ಹೊತ್ತ್ಯಾ ಝುಟ್ಯಾ ಪ್ರವಾದ್ಯಾಕ್ ಧರುನ್ ಘೆವ್ನ್ ಹೊಲೆ, ತ್ಯಾ ಭಯಾನಕ್ ಜನಾವರಾಚೆ ಅನಿ ತ್ಯೆಚ್ಯಾ ಮುರ್ತಿಚೆ ಆರಾದನ್ ಕರ್ತಲ್ಯಾಕ್ನಿ ವಿಚಿತ್ರ್ ಕಾಮಾ ಕರುನ್ ದಾಕ್ವುನ್ ಪಸ್ವಲ್ಲೊ ಪ್ರವಾದಿ ಹ್ಯೊಚ್ ತೊ. ತ್ಯಾ ಭಯಾನಕ್ ಜನಾವರಾ ಅನಿ ತ್ಯಾ ಝುಟ್ಯಾ ಪ್ರವಾದ್ಯಾಕ್ ದೊಗ್ಯಾಕ್ನಿಬಿ ಝಿತ್ತೆಚ್ ಗಂದಕಾಚ್ಯಾ ಆಗಿಚ್ಯಾ ಸಮುಂದರಾತ್ ಟಾಕುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 19:20
30 ತಿಳಿವುಗಳ ಹೋಲಿಕೆ  

ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲಾಯಿತು. ಅಲ್ಲಿ ಮೃಗವೂ ಸುಳ್ಳು ಪ್ರವಾದಿ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.


ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.


ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರೆಸದೆ ಹಾಕಿದ ಅವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಕುರಿಮರಿಯಾಗಿರುವವರ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.


ಪೂರ್ವದಿಂದ ತೋಫೆತ್ ಸಿದ್ಧವಾಗಿದೆ. ಹೌದು, ಅದು ಆಳವಾಗಿಯೂ, ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಚಿತೆಯೊಳಗೆ ಬೆಂಕಿಯೂ, ಬಹಳ ಕಟ್ಟಿಗೆಯೂ ತುಂಬಿರುವುದು. ಯೆಹೋವ ದೇವರ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.


“ನೀನು ಕಂಡ ಆ ಹತ್ತು ಕೊಂಬುಗಳು ಇನ್ನೂ ರಾಜ್ಯವನ್ನು ಹೊಂದದಿರುವ ಹತ್ತು ರಾಜರುಗಳಾಗಿದ್ದಾರೆ. ಆದರೆ ಅವು ರಾಜರಂತೆ ಒಂದು ಗಳಿಗೆಯವರೆಗೆ ಮೃಗದೊಂದಿಗೆ ಅಧಿಕಾರ ಹೊಂದುವವು.


ಯೆಹೋವ ದೇವರು ತಮ್ಮ ದೈವಿಕ ಕೋಪದಲ್ಲಿ ಕೆಡವಿ ಹಾಕಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಂತೆ ಆ ದೇಶವೆಲ್ಲಾ ಗಂಧಕವೂ, ಉಪ್ಪೂ ಉರಿಯುತ್ತಾ, ವ್ಯವಸಾಯವಾದರೂ ಹುಲ್ಲಾದರೂ ಬೆಳೆಯದೆ ಇರುವುದು.


ಆಗ ಯೆಹೋವ ದೇವರು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ, ಬೆಂಕಿಯನ್ನೂ ಆಕಾಶದಿಂದ ಸುರಿಸಿದರು.


ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳನ್ನು ಪ್ರೀತಿಸಿ ಅನುಸರಿಸುವರೆಲ್ಲರೂ ಹೊರಗಿರುವರು.


ಅವನ ಶಕ್ತಿಯು ಬಲವಾಗಿರುವುದು. ಆದರೆ ಅದು ಸ್ವಂತ ಶಕ್ತಿಯಲ್ಲ. ಅವನು ಆಶ್ಚರ್ಯದ ರೀತಿಯಲ್ಲಿ ನಾಶಮಾಡಿ ಅಭಿವೃದ್ಧಿಯಾಗುವನು. ಅವನು ತನ್ನ ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲವಾದ, ಪರಿಶುದ್ಧ ಜನರನ್ನು ನಾಶಮಾಡುವನು.


ನಾನು ಅವನೊಂದಿಗೆ ವ್ಯಾಜ್ಯಮಾಡುತ್ತಾ ಅವನನ್ನು ವ್ಯಾಧಿಗೂ ಸಾವಿಗೂ ಗುರಿಮಾಡುವೆನು. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.


ಎದೋಮಿನ ಪ್ರವಾಹಗಳು ಇಳಿಜಾರಾಗಿ ಮಾರ್ಪಡುವುವು. ಅದರ ಧೂಳು ಗಂಧಕವಾಗುವುದು, ದೇಶವು ಉರಿಯುವ ಡಾಂಬರಿನಂತೆ ಇರುವುದು.


ಅವರು ದುಷ್ಟರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಸುರಿಸಲಿ; ಇವೇ ದುಷ್ಟರ ಪಾಲಾಗಿರಲಿ.


ತರುವಾಯ ಆ ಮೊದಲನೆಯ ಮೃಗವೂ ಭೂರಾಜರೂ ಅವರ ಸೈನ್ಯಗಳವರೂ ಆ ಕುದುರೆಯ ಮೇಲೆ ಕುಳಿತಿದ್ದವರ ಮೇಲೆಯೂ ಅವರ ಸೈನ್ಯದ ಮೇಲೆಯೂ ಯುದ್ಧಮಾಡುವುದಕ್ಕಾಗಿ ಕೂಡಿ ಬಂದಿರುವುದನ್ನು ನಾನು ಕಂಡೆನು.


ಅವನು ತನ್ನ ರಾಜ ಗುಡಾರಗಳನ್ನು ಸಮುದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು. ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.


ಬೆಂಕಿಯು ಅವನ ಮನೆಯನ್ನು ಸುಡುವುದು; ಅವನ ಮನೆಯ ಮೇಲೆ ಗಂಧಕವನ್ನು ಎರಚಲಾಗುವುದು.


“ನಿಮಗೆ ನೀಡಲಾದ ಸಂಜೆ ಮತ್ತು ಮುಂಜಾನೆಗಳ ದರ್ಶನವು ಸತ್ಯವಾದದ್ದು. ಆದರೆ ಆ ದರ್ಶನವು ಗುಟ್ಟಾಗಿರಲಿ. ಏಕೆಂದರೆ ಅದು ಬಹು ದೂರದ ಭವಿಷ್ಯಕ್ಕೆ ಸಂಬಂಧಿಸಿದ್ದು.”


“ಕುರಿಯ ವೇಷಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆ. ಏಕೆಂದರೆ ಅವರು ಒಳಗೆ ಕ್ರೂರವಾದ ತೋಳಗಳಾಗಿದ್ದಾರೆ.


ನಾನು ನನ್ನ ದರ್ಶನದಲ್ಲಿ ಕುದುರೆಗಳನ್ನೂ ಸವಾರರನ್ನೂ ಕಂಡೆನು. ಅವರ ಕವಚಗಳು ಬೆಂಕಿಯ ಕೆಂಪು, ನೀಲಮಣಿ ಹಾಗೂ ಹಳದಿ ಬಣ್ಣದಂತೆಯೂ ಇದ್ದವು. ಕುದುರೆಗಳ ತಲೆಗಳು ಸಿಂಹದ ತಲೆಗಳಂತಿದ್ದವು. ಅವುಗಳ ಬಾಯೊಳಗಿಂದ ಬೆಂಕಿ, ಹೊಗೆ ಮತ್ತು ಗಂಧಕ ಹೊರಬಂದವು.


ಆಯಿ ಎಂಬ ಪಟ್ಟಣದ ಅರಸನನ್ನು ಜೀವಸಹಿತ ಹಿಡಿದು ಯೆಹೋಶುವನ ಬಳಿಗೆ ತಂದರು.


ಹಿಂಡಿನಲ್ಲಿ ಶ್ರೇಷ್ಠವಾದದ್ದನ್ನು ತೆಗೆದುಕೊಂಡು ಎಲುಬಿನ ರಾಶಿಯನ್ನೂ ಅದರ ಕೆಳಗೆ ಇಟ್ಟು ಅದನ್ನು ಚೆನ್ನಾಗಿ ಕುದಿಸು; ಆ ಎಲುಬುಗಳೂ ಅದರಲ್ಲಿ ಚೆನ್ನಾಗಿ ಬೇಯಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು