Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 19:6 - ಕನ್ನಡ ಸಮಕಾಲಿಕ ಅನುವಾದ

6 ತರುವಾಯ ಜನರ ದೊಡ್ಡ ಗುಂಪಿನ ಶಬ್ದವನ್ನು ಕೇಳಿದೆನು. ಅದು ಹೀಗೆ ಹೇಳಿತು: “ಹಲ್ಲೆಲೂಯಾ! ಸರ್ವಶಕ್ತ ಆಗಿರುವ ನಮ್ಮ ಕರ್ತದೇವರು ಆಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ತರುವಾಯ ಬಹುದೊಡ್ಡ ಜನರ ಸಮೂಹದ ಶಬ್ದವು ಜಲಪ್ರವಾಹದ ಘೋಷದಂತೆಯೂ ಭಯಂಕರವಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಸ್ವರವನ್ನು ಕೇಳಿದೆನು. ಅದು, “ಹಲ್ಲೆಲೂಯಾ, ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು ಆಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ತರುವಾಯ ನನಗೆ ಮತ್ತೊಂದು ಧ್ವನಿ ಕೇಳಿಸಿತು. ಅದು ದೊಡ್ಡ, ಜನಸಮೂಹದ ಆರ್ಭಟದಂತೆಯೂ ಭೋರ್ಗರೆಯುವ ಜಲಪ್ರವಾಹದ ಮೊರೆತದಂತೆಯೂ ಭಾರಿ ಗುಡುಗಿನ ಗರ್ಜನೆಯಂತೆಯೂ ಇತ್ತು. ಅದು ಇಂತೆಂದಿತು : “ಅಲ್ಲೆಲೂಯ ! ಸರ್ವಶಕ್ತ ನಮ್ಮ ಪ್ರಭು ದೇವ ರಾಜ್ಯವಾಳುತಿಹನಾತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಜಲಪ್ರವಾಹಘೋಷದಂತೆಯೂ ಗಟ್ಟಿಯಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ಕೇಳಿದೆನು. ಅದು - ಹಲ್ಲೆಲೂಯಾ; ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು ಆಳುತ್ತಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಂತರ ಅನೇಕಾನೇಕ ಜನರ ಮಹಾಶಬ್ದದಂತಿದ್ದ ಧ್ವನಿಯೊಂದು ನನಗೆ ಕೇಳಿಸಿತು. ಅದು ಪ್ರವಾಹದ ನೀರಿನ ಘೋಷದಂತೆಯೂ ಗಟ್ಟಿಯಾದ ಗುಡುಗಿನ ಶಬ್ದದಂತೆಯೂ ಇತ್ತು. ಆ ಜನರು ಹೀಗೆ ಹೇಳುತ್ತಿದ್ದರು: “ಹಲ್ಲೆಲೂಯಾ! ನಮ್ಮ ದೇವರಾದ ಪ್ರಭುವು ಆಳಲಾರಂಭಿಸಿದ್ದಾನೆ. ಆತನು ಸರ್ವಶಕ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತನ್ನಾ ಲೊಕಾಂಚ್ಯಾ ತಾಂಡ್ಯಾ ಸರ್ಕೊ ಪಾನಿಯಾಚ್ಯಾ ದಬ್‍ದಬ್ಯಾಚ್ಯಾ ಸರ್ಕೊ ಅವಾಜ್, ಮೊಟ್ಯಾ ಗುಡ್ಗುಡ್ಯಾಚ್ಯಾ ಸರ್ಕೊ ಆವಾಜ್ ಮಿಯಾ ಆಯಿಕ್ಲೊ. ತೆನಿ, “ದೆವಾಕ್ ಹೊಗ್ಳಾಪ್! ಕಶ್ಯಾಕ್ ಮಟ್ಲ್ಯಾರ್ ಸರ್ವೆಸ್ವರ್ ಅಮ್ಚೊ ಸಗ್ಳ್ಯಾನಿಕಿ ಮೊಟೊ ದೆವ್, ರಾಜಾ ತೊ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 19:6
25 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಆಳಿಕೆ ಮಾಡುತ್ತಾರೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋಷಪಡಲಿ.


ಇದಲ್ಲದೆ ಪರಲೋಕದಿಂದ ಜಲ ಪ್ರವಾಹದಂತೆಯೂ ಮಹಾ ಗುಡುಗಿನ ಶಬ್ದದಂತೆಯೂ ಇದ್ದ ಶಬ್ದವನ್ನು ಕೇಳಿದೆನು. ನಾನು ಕೇಳಿದ ಆ ಶಬ್ದವು ಕಿನ್ನರಿಗಳನ್ನು ನುಡಿಸುತ್ತಿರುವ ಕಿನ್ನರರ ಶಬ್ದದಂತಿತ್ತು.


ಇವುಗಳಾದ ಮೇಲೆ ಪರಲೋಕದಲ್ಲಿ ದೊಡ್ಡ ಸಮೂಹದ ಮಹಾಸ್ವರವನ್ನು ಕೇಳಿದೆನು. ಅವರು: “ಹಲ್ಲೆಲೂಯಾ! ರಕ್ಷಣೆಯೂ ಮಹಿಮೆಯೂ ಶಕ್ತಿಯೂ ನಮ್ಮ ದೇವರದಾಗಿವೆ!


ಯೆಹೋವ ದೇವರು ಆಳಿಕೆ ಮಾಡುತ್ತಾರೆ. ರಾಷ್ಟ್ರಗಳು ನಡುಗಲಿ. ಅವರು ಕೆರೂಬಿಗಳ ಮಧ್ಯದಲ್ಲಿ ಕೂತಿದ್ದಾರೆ. ಭೂಮಿಯು ಕದಲಲಿ.


ಯೆಹೋವ ದೇವರು ಆಳಿಕೆ ಮಾಡುತ್ತಿದ್ದಾರೆ. ಘನತೆಯನ್ನು ಹೊದ್ದುಕೊಂಡಿದ್ದಾರೆ. ಬಲದಿಂದ ತಮ್ಮ ನಡುವನ್ನು ಕಟ್ಟಿಕೊಂಡಿದ್ದಾರೆ. ಆದುದರಿಂದ ಲೋಕವು ಸಹ ಸ್ಥಿರವಾಗಿದೆ, ಕದಲುವುದಿಲ್ಲ.


ಏಳು ಮುದ್ರೆಗಳಲ್ಲಿ ಒಂದನ್ನು ಯಜ್ಞದ ಕುರಿಮರಿ ಆಗಿರುವವರು ತೆರೆಯುವುದನ್ನು ನಾನು ಕಂಡೆನು. ಆ ಜೀವಿಗಳಲ್ಲೊಂದು ಗುಡುಗಿನಂತಿದ್ದ ಶಬ್ದದಲ್ಲಿ, “ಬಾ!” ಎಂದು ಹೇಳುವುದನ್ನು ಕೇಳಿದೆನು.


ಅವರ ಪಾದಗಳು ಕುಲುಮೆಯಲ್ಲಿ ಹೊಳೆಯುವ ತಾಮ್ರದಂತೆಯೂ ಅವರ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.


ಅವು ಚಲಿಸುವಾಗ, ನಾನು ಅವುಗಳ ರೆಕ್ಕೆಗಳ ಶಬ್ದವನ್ನು ಕೇಳಿದೆನು. ಅದು ಜಲಪ್ರವಾಹದ ಶಬ್ದದಂತೆಯೂ, ಸರ್ವಶಕ್ತರ ಧ್ವನಿಯ ಹಾಗೆಯೂ, ಸೈನ್ಯದ ಶಬ್ದದ ಹಾಗೆಯೂ ಇತ್ತು. ಅವು ನಿಲ್ಲುವಾಗ ಅವುಗಳ ರೆಕ್ಕೆಗಳನ್ನು ಕೆಳಗೆ ಇಳಿಸುತ್ತಿದ್ದವು.


ಪಟ್ಟಣದಲ್ಲಿ ನಾನು ಆಲಯವನ್ನೇ ಕಾಣಲಿಲ್ಲ. ಏಕೆಂದರೆ ಕರ್ತ ಆಗಿರುವ ಸರ್ವಶಕ್ತ ದೇವರೂ, ಕುರಿಮರಿಯಾಗಿರುವವರೂ ಆಲಯವಾಗಿದ್ದಾರೆ.


ಆಗ ಪರಲೋಕದಲ್ಲಿ ಮಹಾಧ್ವನಿಯನ್ನು ಕೇಳಿದೆನು. ಅದು, “ರಕ್ಷಣೆಯೂ ಶಕ್ತಿಯೂ ರಾಜ್ಯವೂ ಈಗ ನಮ್ಮ ದೇವರದಾದವು. ದೇವರ ಕ್ರಿಸ್ತ ಆಗಿರುವವರ ಅಧಿಕಾರವು ಈಗ ಸ್ಥಾಪಿತವಾಯಿತು. ಹಗಲಿರುಳು ನಮ್ಮ ಸಹೋದರರ ಮೇಲೆ, ನಮ್ಮ ದೇವರ ಮುಂದೆ ದೂರು ಹೇಳುವ ದೂರುಗಾರನನ್ನು ತಳ್ಳಲಾಗಿದೆ.


ಆಗ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು ಬಲಿಪೀಠದ ಬೆಂಕಿಯಿಂದ ಅದನ್ನು ತುಂಬಿಸಿ, ಭೂಮಿಯ ಮೇಲೆ ಎಸೆದನು. ಆಗ ಗುಡುಗುಗಳೂ ಸಪ್ಪಳವೂ ಮಿಂಚುಗಳೂ ಮತ್ತು ಭೂಕಂಪವೂ ಉಂಟಾದವು.


ಸಿಂಹಾಸನದೊಳಗಿಂದ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಹರಡಿದವು. ಸಿಂಹಾಸನದ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಬೆಳಗುತ್ತಿದ್ದವು.


ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವಮಾರ್ಗವಾಗಿ ಬಂದಿತು ಮತ್ತು ಅವರ ಧ್ವನಿಯು ಹರಿಯುವ ನೀರಿನ ಘರ್ಜನೆಯಂತಿತ್ತು; ಭೂಮಿಯು ಅವರ ಮಹಿಮೆಯಿಂದ ಪ್ರಕಾಶಿಸುತ್ತಿತ್ತು.


ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಒಳ್ಳೆಯ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವವನ ಪಾದಗಳು ಪರ್ವತಗಳ ಮೇಲೆ ಎಷ್ಟೊಂದು ಅಂದವಾಗಿವೆ!


ನೀತಿವಂತರೇ, ಯೆಹೋವ ದೇವರಲ್ಲಿ ಸಂತೋಷಿಸಿರಿ; ದೇವರ ಪರಿಶುದ್ಧ ನಾಮವನ್ನು ಕೊಂಡಾಡಿರಿ.


ನಿಮ್ಮ ಗುಡುಗಿನ ಶಬ್ದವು ಸುಂಟರಗಾಳಿಯಲ್ಲಿ ಕೇಳುತ್ತಿತ್ತು. ಮಿಂಚುಗಳು ಜಗತ್ತನ್ನು ಬೆಳಗಿಸಿದವು. ಭೂಮಿಯು ನಡುಗಿ ಕದಲಿತು.


ದೇವರಾದ ನನಗಿರುವ ಭುಜಬಲ ನಿನಗಿದೆಯೋ? ನನ್ನ ಧ್ವನಿಯ ಹಾಗೆ ನೀನು ಗುಡುಗಬಲ್ಲೆಯೋ?


ಆಗ ಭೂಮಿ ಆಕಾಶಗಳೂ, ಅಲ್ಲಿನ ಸಮಸ್ತವೂ ಬಾಬಿಲೋನಿನ ನಾಶವನ್ನು ನೋಡಿ ಜಯಘೋಷ ಮಾಡುವುವು. ಹಾಳುಮಾಡುವರು, ಉತ್ತರದಿಂದ ಬಂದು ಹಾಳುಮಾಡುವರು,” ಎಂದು ಯೆಹೋವ ದೇವರು ಹೇಳುತ್ತಾರೆ.


ಏಕೆಂದರೆ, ದೇವರು ಭೂಮಿಗೆಲ್ಲಾ ಮಹಾರಾಜರು. ದೇವರನ್ನು ಸ್ತೋತ್ರದ ಕೀರ್ತನೆಯಿಂದ ಕೀರ್ತಿಸಿರಿ.


ಏಕೆಂದರೆ ಮಹೋನ್ನತರಾದ ಯೆಹೋವ ದೇವರು ಭಯಭಕ್ತಿಗೆ ಪಾತ್ರರೂ ಭೂಮಿಯ ಮೇಲೆಲ್ಲಾ ಮಹಾರಾಜರೂ ಆಗಿದ್ದಾರೆ.


ನಮ್ಮನ್ನು ಶೋಧನೆಗೆ ಸೇರಿಸದೆ, ಕೇಡಿನಿಂದ ತಪ್ಪಿಸಿರಿ. ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮದೇ. ಆಮೆನ್.’


“ನಾನೇ ಆದಿಯೂ ಅಂತ್ಯವೂ ಗತಕಾಲ, ವರ್ತಮಾನ, ಭವಿಷ್ಯತ್ಕಾಲಗಳಲ್ಲಿರುವವನೂ ಮತ್ತು ಸರ್ವಶಕ್ತನೂ ಆಗಿದ್ದೇನೆ,” ಎಂದು ಕರ್ತದೇವರು ಹೇಳುತ್ತಾರೆ.


ಆಗ ಇಪ್ಪತ್ನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ ಅಡ್ಡಬಿದ್ದು, ಸಿಂಹಾಸನದ ಮೇಲೆ ಕುಳಿತಿರುವ ದೇವರನ್ನು ಆರಾಧಿಸಿ: “ಆಮೆನ್, ಹಲ್ಲೆಲೂಯಾ!” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು