Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:13 - ಕನ್ನಡ ಸಮಕಾಲಿಕ ಅನುವಾದ

13 ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು, ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ. ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನನ್ನು ಕೊಲ್ಲಲಾದ ದಿನಗಳಲ್ಲಿಯೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಅಲ್ಲಗಳೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು. ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರುವಿ. ಸೈತಾನನ ನಿವಾಸವಾದ ನಿನ್ನ ಪಟ್ಟಣದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ನಿರಾಕರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಿನ್ನ ನಿವಾಸಸ್ಥಳವನ್ನು ನಾನು ಬಲ್ಲೆ. ಅದು ಸೈತಾನನ ಅಧಿಕಾರಸ್ಥಾನ. ಆದರೂ ನೀನು ನನ್ನ ನಾಮವನ್ನೇ ದೃಢವಾಗಿ ಆಶ್ರಯಿಸಿರುವೆ. ಸೈತಾನನ ಬಿಡಾರವಾದ ನಿನ್ನ ಆ ನಗರದಲ್ಲಿಯೇ ನನ್ನ ನಂಬಿಕಸ್ಥನೂ ಸಾಕ್ಷಿಯೂ ಆದ ಅಂತಿಪನನ್ನು ಕೊಂದುಹಾಕಿದರು. ಆ ದಿವಸಗಳಲ್ಲೂ ನೀನು ನನ್ನಲ್ಲಿಟ್ಟಿರುವ ವಿಶ್ವಾಸವನ್ನು ನಿರಾಕರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹದವಾದ ಇಬ್ಬಾಯಿಕತ್ತಿಯನ್ನು ಹಿಡಿದಾತನು ಹೇಳುವದೇನಂದರೆ - ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು; ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ; ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನೂ ಸಾಕ್ಷಿಯೂ ಆದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿಯಾದರೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಮರೆಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ನೀನು ಎಲ್ಲಿ ವಾಸಮಾಡುತ್ತಿರುವೆ ಎಂಬುದು ನನಗೆ ತಿಳಿದಿದೆ. ಸೈತಾನನ ಸಿಂಹಾಸನ ವಿರುವ ಕಡೆಯಲ್ಲಿ ನೀನು ವಾಸಿಸುತ್ತಿರುವೆ. ಆದರೆ ನೀನು ನನಗೆ ನಂಬಿಗಸ್ತನಾಗಿರುವೆ. ಅಂತಿಪನ ಕಾಲದಲ್ಲಿಯೂ ನೀನು ನನ್ನಲ್ಲಿಟ್ಟಿರುವ ನಂಬಿಕೆಯನ್ನು ತಿಳಿಸಲು ನಿರಾಕರಿಸಲಿಲ್ಲ. ನಿನ್ನ ಪಟ್ಟಣದಲ್ಲಿ ಕೊಲ್ಲಲ್ಪಟ್ಟ ಅಂತಿಪನು ನನ್ನ ನಂಬಿಗಸ್ತ ಸಾಕ್ಷಿಯಾಗಿದ್ದನು. ನಿನ್ನ ನಗರ ಸೈತಾನನು ವಾಸಿಸುವ ನಗರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತುಮಿ ಖೈ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ ಮನುನ್ ಮಾಕಾ ಗೊತ್ತ್ ಹಾಯ್. ಥೈ ಸೈತಾನಾಚೆ ಸಿವಾಸನ್ ಹಾಯ್. ತಿಯಾ ಕನ್ನಾಬಿ ಮಾಕಾ ವಿಶ್ವಾಸಾನ್ ರ್‍ಹಾಲೆಯ್. ತ್ಯಾ ಸೈತಾನ್ ರ್‍ಹಾತಲ್ಯಾ ಜಾಗ್ಯಾರ್ ಅಂತಿಪಸ್ ಮನ್ತಲ್ಯಾಕ್ ಮಾಜಿ ಎಕ್ ಸಾಕ್ಷಿ ಹೊವ್ನ್ ಜಿವಾನಿ ಮಾರ್‍ಲ್ಯಾನಿ ಜಾಲ್ಯಾರ್‍ಬಿ ತುಮಿ ತ್ಯಾ ಎಳಾರ್ ತುಮ್ಚೊ ಮೊಟೊ ವಿಶ್ವಾಸ್ ಮಾಜೆ ವೈನಾ ಕಳ್ದುನ್ ಘೆವ್ಕನ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:13
27 ತಿಳಿವುಗಳ ಹೋಲಿಕೆ  

ಯಾವನಾದರೂ ಸ್ವಂತದವರನ್ನು ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆದವನೂ ಅವಿಶ್ವಾಸಿಗಿಂತ ನೀಚನೂ ಆಗಿದ್ದಾನೆ.


ನಾನು ಬೇಗ ಬರುತ್ತೇನೆ. ನಿನ್ನ ಕಿರೀಟವನ್ನು ಯಾರೂ ಅಪಹರಿಸದಂತೆ ನಿನಗಿರುವುದನ್ನು ಹಿಡಿದುಕೊಂಡಿರು.


ನಾವು ಸಹಿಸಿಕೊಳ್ಳುವವರಾಗಿದ್ದರೆ ಕ್ರಿಸ್ತ ಯೇಸುವಿನ ಜೊತೆಯಲ್ಲಿ ನಾವು ಸಹ ಆಳುವೆವು. ಅವರನ್ನು ನಿರಾಕರಿಸಿದರೆ ಅವರು ಸಹ ನಮ್ಮನ್ನು ನಿರಾಕರಿಸುವರು.


ನಿಮ್ಮ ಸಾಕ್ಷಿಯಾದ ಸ್ತೆಫನನ ರಕ್ತ ಸುರಿಸಿದಾಗ ಅದಕ್ಕೆ ನಾನೂ ಸಮ್ಮತಿ ಕೊಟ್ಟು ಅವನನ್ನು ಕೊಲ್ಲುವವರ ಬಟ್ಟೆಗಳನ್ನು ಕಾಯುತ್ತಾ ನಿಂತಿದ್ದೆನು,’ ಎಂದೆನು.


ಇದಕ್ಕಾಗಿಯೇ ದೇವರ ಆಜ್ಞೆಗಳನ್ನೂ ಯೇಸುವಿನಲ್ಲಿ ನಂಬಿಕೆಯನ್ನೂ ಕಾಪಾಡುವ ದೇವಜನರ ತಾಳ್ಮೆಯ ಸಹಿಷ್ಣುತೆ ಇದರಲ್ಲಿದೆ.


ಆದ್ದರಿಂದ ನೀನು ಹೊಂದಿದ ಉಪದೇಶವನ್ನೂ ಕೇಳಿದ ರೀತಿಯನ್ನೂ ಜ್ಞಾಪಿಸಿಕೊಂಡು, ಅದನ್ನು ಕೈಕೊಳ್ಳುವವನಾಗಿ ಪಶ್ಚಾತ್ತಾಪಪಡು, ನೀನು ಎಚ್ಚರವಾಗಿರದಿದ್ದರೆ, ಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಎಂದು ನಿನಗೆ ಯಾವ ರೀತಿಯಲ್ಲಿಯೂ ತಿಳಿಯದು.


ನಾನು ನಿನ್ನ ಕ್ರಿಯೆಗಳನ್ನು ಬಲ್ಲೆನು. ಪ್ರಯಾಸ, ಸಹನೆಯನ್ನು ಬಲ್ಲೆನು. ನೀನು ದುಷ್ಟರನ್ನು ಸಹಿಸಲಾರೆ. ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ, ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ.


ನಾವು ನಮ್ಮ ನಿರೀಕ್ಷೆಯ ಅರಿಕೆಯನ್ನು ಚಂಚಲರಾಗದೆ ಬಿಗಿಯಾಗಿ ಹಿಡಿಯೋಣ. ಏಕೆಂದರೆ ವಾಗ್ದಾನ ಮಾಡಿದವರು ನಂಬಿಗಸ್ತರು.


ನೀನು ನನ್ನಿಂದ ಕೇಳಿದ ಸ್ವಸ್ಥವಾಕ್ಯಗಳನ್ನು ಕ್ರಿಸ್ತ ಯೇಸುವಿನಲ್ಲಿರುವ ವಿಶ್ವಾಸ ಹಾಗೂ ಪ್ರೀತಿಯೊಂದಿಗೆ ಒಂದು ಮಾದರಿಯಾಗಿ ಹಿಡಿದುಕೋ.


“ಆಗ ಜನರು ನಿಮ್ಮನ್ನು ಹಿಂಸೆಪಡಿಸುವುದಕ್ಕಾಗಿ ಒಪ್ಪಿಸಿ ನಿಮ್ಮನ್ನು ಕೊಲ್ಲುವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗದವರು ನಿಮ್ಮನ್ನು ದ್ವೇಷಮಾಡುವರು.


ನೀವು ಕರೆಸಿಕೊಳ್ಳುವ ಆ ಯೋಗ್ಯವಾದ ನಾಮವನ್ನು ದೂಷಿಸುವವರು ಅವರಲ್ಲವೇ?


ಕ್ರಿಸ್ತ ಯೇಸುವಾದರೋ ಮಗನಾಗಿ ದೇವರ ಮನೆಯ ಮೇಲೆ ನಂಬಿಗಸ್ತರಾಗಿದ್ದಾರೆ. ಆದುದರಿಂದ ನಾವು ನಮ್ಮ ಧೈರ್ಯವನ್ನೂ ನಾವು ಹೊಗಳಿಕೊಳ್ಳುವ ನಿರೀಕ್ಷೆಯನ್ನೂ ಕಡೆಯತನಕ ದೃಢವಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.


ಎಲ್ಲವನ್ನು ಪರಿಶೋಧಿಸಿ ಒಳ್ಳೆಯದನ್ನೇ ಬಿಗಿಯಾಗಿ ಹಿಡಿದುಕೊಳ್ಳಿರಿ.


ಇಲ್ಲಿ ನಿಮ್ಮ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸಲು ಮುಖ್ಯಯಾಜಕನಿಂದ ಅಧಿಕಾರದ ಪತ್ರ ಪಡೆದು ಬಂದಿದ್ದಾನೆ,” ಎಂದು ಉತ್ತರಕೊಟ್ಟನು.


ಇದಲ್ಲದೆ ನನ್ನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು.


ಒಂದು ಸ್ಥಳದಲ್ಲಿ ನಿಮಗೆ ಹಿಂಸೆಯಾದರೆ ಇನ್ನೊಂದು ಸ್ಥಳಕ್ಕೆ ಓಡಿಹೋಗಿರಿ. ಮನುಷ್ಯಪುತ್ರನು ಬರುವಷ್ಟರಲ್ಲಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.


ಯೇಸು ಅವನಿಗೆ, “ಸೈತಾನನೇ, ತೊಲಗು. ಏಕೆಂದರೆ, ‘ನಿನ್ನ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.


ನಂಬಿಗಸ್ತ ಸಾಕ್ಷಿಯೂ ಸತ್ತವರೊಳಗಿಂದ ಪ್ರಥಮವಾಗಿ ಜೀವಂತವಾಗಿ ಎದ್ದು ಬಂದವರೂ ಭೂರಾಜರಿಗೆ ಒಡೆಯರೂ ಆಗಿರುವ ಕ್ರಿಸ್ತ ಯೇಸುವಿನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ಅವರೇ ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವರೂ ಆಗಿದ್ದಾರೆ.


ನನ್ನ ಇಬ್ಬರು ಸಾಕ್ಷಿಗಳಿಗೆ ಗೋಣಿತಟ್ಟುಗಳನ್ನು ಹೊದ್ದುಕೊಂಡು, ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವಂತೆ ಮಾಡುವೆನು,”


ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಕುರಿಮರಿಯಾಗಿರುವವರ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.


ನಾನು ಕಂಡ ಮೃಗವು ಚಿರತೆಯಂತಿತ್ತು. ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ತನ್ನ ಶಕ್ತಿಯನ್ನೂ ಸಿಂಹಾಸನವನ್ನೂ ಮಹಾ ಅಧಿಕಾರವನ್ನೂ ಕೊಟ್ಟನು.


ಆ ಸ್ತ್ರೀಯು ಪರಿಶುದ್ಧರ ರಕ್ತವನ್ನೂ ಮತ್ತು ಯೇಸುವಿನ ಸಾಕ್ಷಿಗಳಾಗಿದ್ದವರ ರಕ್ತವನ್ನೂ ಕುಡಿದಿರುವುದನ್ನು ನಾನು ಕಂಡೆನು. ಆಕೆಯನ್ನು ನಾನು ಕಂಡಾಗ, ಬಹು ಆಶ್ಚರ್ಯಗೊಂಡೆನು.


ಅವರು ಕುರಿಮರಿಯಾದವರ ಮೇಲೆ ಯುದ್ಧಮಾಡುವರು. ಆದರೆ ಕುರಿಮರಿಯಾದವರು ಕರ್ತರ ಕರ್ತರೂ ರಾಜಾಧಿರಾಜರೂ ಆಗಿರುವುದರಿಂದ ಅವರನ್ನು ಜಯಿಸುವರು. ಅವರೊಂದಿಗಿದ್ದವರು ದೇವರಿಂದ ಕರೆಹೊಂದಿದವರೂ ಆಯ್ದುಕೊಂಡವರೂ ನಂಬಿಗಸ್ತರೂ ಆಗಿರುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು