ಪ್ರಕಟನೆ 2:20 - ಕನ್ನಡ ಸಮಕಾಲಿಕ ಅನುವಾದ20 ಆದರೆ ನಿನ್ನ ಮೇಲೆ ಒಂದು ತಪ್ಪು ಹೊರಿಸಬೇಕಾಗುತ್ತದೆ. ಅದೇನೆಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ವ್ಯಭಿಚಾರ ಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಿನ್ನ ವಿರುದ್ಧ ನನಗೆ ಅಪಾದನೆ ಒಂದಿದೆ. ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು, ಜಾರತ್ವಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಅನುಮತಿಯನ್ನು ಕೊಟ್ಟಿರುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆದರೂ ನಿನಗೆ ವಿರುದ್ಧವಾದ ಆಪಾದನೆ ಒಂದಿದೆ: ಈಜೆಬೆಲ್ ಎಂಬ ಸ್ತ್ರೀ ತಾನು ಪ್ರವಾದಿನಿಯೆಂದು ಹೇಳಿಕೊಂಡು ಮೆರೆಯುತ್ತಿದ್ದಾಳೆ. ಲೈಂಗಿಕ ಅನೈತಿಕತೆಯಲ್ಲಿ ತೊಡಗಬಹುದೆಂದೂ ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥವನ್ನು ತಿನ್ನಬಹುದೆಂದೂ ಬೋಧಿಸುತ್ತಾ ನನ್ನ ಸೇವಕರನ್ನು ಅಡ್ಡದಾರಿಗೆ ಎಳೆಯುತ್ತಿದ್ದಾಳೆ. ಆದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆದರೆ ನಿನ್ನ ಮೇಲೆ ಒಂದು ತಪ್ಪುಹೊರಿಸಬೇಕಾಗುತ್ತದೆ; ಅದೇನಂದರೆ ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ಜಾರತ್ವಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ಸೇರಿಸುತ್ತಿರುವಲ್ಲಿ ನೀನು ಅವಳನ್ನು ತಡೆಯದೆ ಬಿಟ್ಟಿರುವದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದರೆ ನಿನ್ನ ವಿರುದ್ಧವಾಗಿ ಇವುಗಳನ್ನು ಹೇಳಬೇಕಾಗಿದೆ. ಯೆಜೆಬೇಲ್ ಎಂಬ ಸ್ತ್ರೀಯು ತನ್ನ ಇಷ್ಟದಂತೆ ಮಾಡಲು ಅವಕಾಶಕೊಟ್ಟಿರುವೆ. ಆಕೆಯು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ತನ್ನ ಬೋಧನೆಗಳಿಂದ ನನ್ನ ಸೇವಕರನ್ನು ನನ್ನಿಂದ ದೂರ ಸೆಳೆಯುತ್ತಿದ್ದಾಳೆ. ಲೈಂಗಿಕ ಪಾಪಗಳನ್ನು ಮಾಡುವಂತೆಯೂ ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವಂತೆಯೂ ಆಕೆಯು ನನ್ನ ಜನರನ್ನು ಪ್ರೇರೇಪಿಸುತ್ತಿದ್ದಾಳೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಖರೆ ಎಕ್ ವಿಶಯ್ ಮಿಯಾ ತುಜ್ಯಾ ವಿಶಯಾತ್ ಸಾಂಗ್ತಲೆ ಹಾಯ್. ಜೆಜೆಬೆಲ್ ಮನ್ತಲ್ಯಾ ಬಾಯ್ಕೊಮನ್ಸಿಕ್ ತುಮಿ ಸೊಸುನ್ ಘೆವ್ನ್ ಹಾಸಿ. ತಿ ಅಪ್ನಾಕುಚ್ ದೆವಾಕ್ನಾ ಧಾಡುನ್ ದಿಲ್ಲಿ ಪ್ರವಾದಿನ್ ಮನುನ್ ಘೆತಾ. ಅಪ್ನಾಚ್ಯಾ ಶಿಕಾಪಾಂಚ್ಯಾ ವೈನಾ ತಿ ಮಾಜ್ಯಾ ಸೆವಕಾಕ್ನಿ ಆಂಗಾಚ್ಯಾ ಸಮಂದಾಚ್ಯಾ ವಿಶಯಾತ್ ಚುಕ್ ವಾಟೆಕ್ ನ್ಹೆತಾ ಅನಿ ಮುರ್ತಿಯಾಕ್ನಿ ಭೆಟ್ವಲ್ಲೆ ತೆನಿ ಖಾಯ್ ಸರ್ಕೆ ಕರ್ತಾ. ಅಧ್ಯಾಯವನ್ನು ನೋಡಿ |